Home Posts tagged #udupi (Page 38)

ಉಡುಪಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವಕ: ವಾರಗಳ ಬಳಿಕ ನಾಯಿಯ ಸಹಾಯದಿಂದ ಮರಳಿ ಮನೆಗೆ

ಮನೆಯಿಂದ ಹೊರಗೆ ತೆರಳಿದ ಯುವಕನೋರ್ವ ವಾರಗಳ ಬಳಿಕ ನಾಯಿಯ ಸಹಾಯದಿಂದ ಮನೆಗೆ ಮರಳಿದ ಘಟನೆ ಉಡುಪಿಯ ಅಮವಾಸೆ ಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಮಟ್ಟಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ನಿವಾಸಿ ಶೀನ ನಾಯ್ಕ ಅವರ ಮಗ ವಿವೇಕಾನಂದ (28) ನಾಪತ್ತೆಯಾಗಿದ್ದ ಯುವಕ. ವಿವೇಕಾನಂದ ಸೆಪ್ಟೆಂಬರ್ 16 ರಂದು ಮನೆಯಿಂದಲೇ ನಾಪತ್ತೆಯಾಗಿದ್ದ. ಮನೆಯಿಂದ

ಕಾರ್ಕಳ: ಮಹಿಳೆಯರಿಗೆ ಮೀಸಲಾತಿ ನೀಡಿದ ಮೊದಲ ರಾಜ್ಯ ಕರ್ನಾಟಕ: ಡಾ. ಎಂ. ವೀರಪ್ಪ ಮೊಯಿಲಿ

ಕಾರ್ಕಳ: ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ ಕರ್ನಾಟಕ ಮೊದಲ ರಾಜ್ಯವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ಹೇಳಿದರು. ಅವರು ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದರು. 1993 ರಲ್ಲಿಯೆ ಮಹಿಳೆಯರಿಗೆ ಮೀಸಲಾತಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ನಲ್ಲಿ 50% ಮೀಸಲಾತಿ ಯನ್ನು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿತ್ತು. ಅಂದಿನ

ಉಡುಪಿ: ಅಮಾವಸೆಬೈಲಿನಲ್ಲಿ ನಾಪತ್ತೆಯಾಗಿದ್ದ ಯುವಕ ಕಾಡಲ್ಲಿ ಪತ್ತೆ

ಕಳೆದ ಎಂಟು‌ದಿನಗಳ ಹಿಂದೆ ಮನೆಯಿಂದ ಹೊರಹೋಗಿ ನಾಪತ್ತೆಯಾಗಿದ್ದ ಯುವಕ ಇಂದು ತೊಂಬಟ್ಟು ಸಮೀಪದ  ಕಬ್ಬಿನಾಲೆ ಕಾಡಂಚಿನಲ್ಲಿ ಪತ್ತೆಯಾಗಿದ್ದಾನೆ. ಇರ್ಕಿಗದ್ದೆಯ ಶೀನಪ್ಪ ನಾಯ್ಕ್  ಎನ್ನುವವರ ಪುತ್ರ ಇಪ್ಪತ್ತೆಂಟು ವರ್ಷದ ವಿವೇಕನಂದ ಮನೆಯಿಂದ ಹೊರ ಹೋಗಿದ್ದ ,ಆ ಬಳಿಕ ನಾಪತ್ತೆಯಾಗಿದ್ದ ,ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಬ್ಬಿನಾಲೆ ಸಮೀಪ ಯುವಕ  ಪತ್ತೆಯಾಗಿದ್ದು ಕಳೆದ ಎಂಟು ದಿನಗಳಿಂದ ನೀರು  ಆಹಾರವಿಲ್ಲದೇ ಕಾಡಲ್ಲಿಯೇ ಅಲೆದಾಡಿದ್ದ

ಉಡುಪಿ: ಸೆ.22ರಂದು ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆಯಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪಡುಕುತ್ಯಾರಿನಲ್ಲಿ ಚಾತುರ್ಮಾಸ್ಯ ವ್ರತಾನುಷ್ಠರಾಗಿರುವ ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಲು ಸೆ. 22ರಂದು 2 ಗಂಟೆಗೆ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಗಮಿಸಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮಹಾಸಂಸ್ಥಾನಕ್ಕೆ ಪ್ರಥಮಬಾರಿ ಆಗಮಿಸಲಿರುವ ಸಚಿವರನ್ನು, ಮಹಾ ಸಂಸ್ಥಾನದ ಸಹ

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ನಿಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸುವಂತೆ ನ್ಯಾಯಾಲಯದ ತೀರ್ಪಿನಂತೆ ಹಣ ಮರುಪಾವತಿ ಮಾಡಲು ವಿಫಲನಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸೆಪ್ಟೆಂಬರ್ 20 ರಂದು ಹಾಜರು ಪಡಿಸಿದ

ಪಡುಬಿದ್ರಿ: ಆನ್‍ಲೈನ್ ವಂಚನೆಯಿಂದ ಮೂರು ಲಕ್ಷ ಕಳೆದುಕೊಂಡ ಎರ್ಮಾಳು ನಿವಾಸಿ

ಬ್ಯಾಂಕ್ ಮ್ಯಾನೇಜರ್ ಎಂಬುದಾಗಿ ಕನ್ನಡ ಬಾಷೆಯಲ್ಲಿ ಪರಿಚಯಿಸಿ ಕೆವೈಸಿ ಲಿಂಕ್ ಆಗಿಲ್ಲ ಒಟಿಪಿ ನೀಡಿ ಎಂದು ಹೇಳಿ, ಒಟಿಪಿ ನೀಡುತ್ತಿದಂತೆ ಮೂರು ಬಾರಿ ಖಾತೆಯಿಂದ ಹಣ ಡ್ರಾ ಆಗಿದ್ದು ಮೂರು ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ತೆಂಕ ಎರ್ಮಾಳಿನಲ್ಲಿ ನಡೆದಿದೆ. ಎರ್ಮಾಳು ತೆಂಕ ಕಿನಾರ ಶಾಲೆಯ ಬಳಿಯ ನಿವಾಸಿ ಶಂಕರ್ ಎಂಬವರೇ ಹಣ ಕಳೆದುಕೊಂಡವರು. ಮೀನುಗಾರಿಕೆ ನಡೆಸಿ ಜೀವನ ನಡೆಸುತ್ತಿದ್ದ ಇವರು ರಾತ್ರಿ ಹಗಲೆನ್ನದೆ, ಬಿಸಿಲು ಮಳೆಗೆ ಮೀನುಗಾರಿಕೆ ನಡೆಸಿ ಕೂಡಿಟ್ಟ ಹಣ

ಗಣೇಶ ಚತುರ್ಥಿಯ ಪ್ರಯುಕ್ತ ಉಡುಪಿಯ ಮಧುರಂ ರೆಸ್ಟೋರೆಂಟ್‌ನಲ್ಲಿ ಗಣೇಶ ವಿವಿಧ ಬಗೆಯ ಮೋದಕಗಳ ತಯಾರಿ

ಎಲ್ಲೆಡೆ ಗಣೇಶೋತ್ಸವದ ಸಂಭ್ರಮ ಸಡಗರದಿಂದ ನಡೆಯುತ್ತಿದ್ದರೆ ಉಡುಪಿಯ ವೈಟ್ ಲೊಟಸ್‌ನ ಮಧುರಂ ರೆಸ್ಟೋರೆಂಟ್‌ನಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಗ್ರಾಹಕರಿಗಾಗಿ ವಿವಿಧ ಬಗೆಯ ಮೋದಕ ಮತ್ತು ಸಿಹಿ ತಿಂಡಿಗಳನ್ನು ತಯಾರಿಸಲಾಗಿತ್ತು. ಸಿಹಿತಿಂಡಿಗಳಿಗೆ ಹೆಸರುವಾಸಿಯಾಗಿರುವ ವೈಟ್ ಲೋಟಸ್‌ನ ಮಧುರಂ ಪ್ರತಿ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬದ ಪ್ರಯುಕ್ತ ಹಲವಾರು ಬಗೆಯ ಗಣೇಶನ ಪ್ರಿಯವಾದ ಸಿಹಿತಿಂಡಿಗಳನ್ನು ಮಾಡಿ ಗ್ರಾಹಕರನ್ನು ಆಕರ್ಷಿಸುತ್ತಿದೆ.

ಉಡುಪಿ: ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಕಂಟೇನರ್ ಲಾರಿಯಲ್ಲಿ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಲ್ಪೆಯ ತೊಟ್ಟಂನಲ್ಲಿ ನಡೆದಿದೆ.ಮೃತರನ್ನು ಒರಿಸ್ಸಾ ಮೂಲದ ಬಾಬುಲ್ಲ (38) ಹಾಗೂ ಭಾಸ್ಕರ್ (40) ಎಂದು ಗುರುತಿಸಲಾಗಿದೆ. ತೊಟ್ಟಂನಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಮನೆಗೆ ಗ್ರಾನೈಟ್ ತರಲಾಗಿತ್ತು.ಕಂಟೇನರ್ ಲಾರಿಯಲ್ಲಿದ್ದ ಗ್ರಾನೈಟ್ ಇಳಿಸುವಾಗ ಆಕಸ್ಮಿಕವಾಗಿ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬ್ರಹ್ಮಾವರ: ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ಪ್ರಸನ್ನ ಆಚಾರ್ಯ-ಚಿಕಿತ್ಸೆಗೆ ಬೇಕಾಗಿದೆ ದಾನಿಗಳ ನೆರವು

ಬ್ರಹ್ಮಾವರ : ಉಡುಪಿಯ ಅಂಬಾಗಿಲಿನ ಪ್ರಸನ್ನ ಆಚಾರ್ಯ ಅವರು ಕಳೆದ 3 ವರ್ಷದಿಂದ ಮೂತ್ರ ಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ತೀರಾ ಸಂಕಷ್ಟದ ಜೀವನವನ್ನು ನಡೆಸುತ್ತಿದ್ದಾರೆ. ಅಲ್ಯೂಮಿನಿಯಂ ಫ್ಯಾಭ್ರಿಕೇಶನ್ ಕೆಲಸ ಮಾಡಿಕೊಂಡಿದ್ದ ಪ್ರಸನ್ನ ಆಚಾರ್ಯ ಅವರು ಆರೋಗ್ಯ ಸಮಸ್ಯೆಯಿಂದಾಗಿ ಕೆಲಸ ಮಾಡಲಾಗದೆ ದಯಾನೀಯ ಸ್ಥಿತಿಯಲ್ಲಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂತ್ರಪಿಂಡದ ಬದಲಾವಣೆಗೆ 8 ಲಕ್ಷ ರೂಪಾಯಿ ವೆಚ್ಚ ತಗಲುವುದಾಗಿ ವೈದ್ಯರು

ಹಿಂದೂ ಭಾಷಣಕಾರ್ತಿ ಚೈತ್ರ ಕುಂದಾಪುರ ಅರೆಸ್ಟ್

ಉಡುಪಿ:ಉದ್ಯಮಿಗೆ ಎಂಎಲ್‍ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸುಮಾರುಬಹುಕೋಟಿ ರೂಪಾಯಿ ವಂಚನೆ ನಡೆಸಿರು ಹಿಂದೂ ಭಾಷಣಕಾರ್ತಿ ಚೈತ್ರ ಕುಂದಾಪುರ ಸಿಸಿಬಿ ಉಡುಪಿ ಪೊಲೀಸರು ಶ್ರೀ ಕೃಷ್ಣ ಮಠದ ಬಳಿ ಮಿಂಚಿನ ಕಾರ್ಯಚರಣೆ ನಡೆಸಿ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವಂಚನೆ ಅರೋಪದಲ್ಲಿ ತಲೆಮರೆಸಿಕೊಂಡಿದ್ದ ಶ್ರೀಕಾಂತ್ ನಾಯಕ್ ಪೆಲತ್ತೂರು ಮತ್ತು ಚೈತ್ರ ಕುಂದಾಪುರನನ್ನು ವಶಕ್ಕೆ ಪಡೆದಿದ್ದಾರೆ. ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಉಡುಪಿ ಜಿಲ್ಲೆಯ,