ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಗಾಯಗೊಂಡ ಘಟನೆ ಕಟಪಾಡಿ ಬಳಿ ನಡೆದಿದೆ. ತೆಂಕ ಎರ್ಮಾಳು ನಿವಾಸಿಗಳಾದ ದೀರಜ್ ಹಾಗೂ ಅವರ ಪತ್ನಿ ಪವಿತ್ರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರನ್ನು ಅದರ ಚಾಲಕ ಅತೀ ವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿಕೊಂಡು ಪರಿಣಾಮ
ಉಡುಪಿ ಜಿಲ್ಲೆಯ ಬಿಜೆಪಿ ಎಸ್‍ಸಿ ಮತ್ತು ಎಸ್.ಟಿ. ಮೋರ್ಚಾದ ವತಿಯಿಂದ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂಪಾಯಿ ಹಣವನ್ನು ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಉಡುಪಿಯ ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಪ್ರತಿಭಟನೆಯಲ್ಲಿ ಬಿಜೆಪಿಯ ಪ್ರಮುಖರು
ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಆಶ್ರಯದಲ್ಲಿ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಹಾಗೂ ಉಡುಪಿ, ತಾಳಿಪಾಡಿ, ಶಿವಳ್ಳಿ, ಬ್ರಹ್ಮಾವರ, ಪಡುಪಣಂಬೂರು, ಮಂಗಳೂರು, ಬಸ್ರೂರು ಮತ್ತು ಮಿಜಾರು ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘಗಳ ಜಂಟಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉಡುಪಿಯ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ನಡೆಯಿತು. ಮೂರು ದಿನದ ಕೈಮಗ್ಗ ಸೀರೆಗಳ ಉತ್ಸವಕ್ಕೆ ಉಡುಪಿ ಶಾಸಕ ಯಶ್‍ಪಾಲ್ ಸುವರ್ಣ ಚಾಲನೆ ನೀಡಿದರು.ಉದ್ಯಮಿ
ಉಡುಪಿಯ ಮಲ್ಪೆ ಬೀಚ್‌ನ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಇದೇ ವೇಳೆ ಇನ್ನೋರ್ವ ಬಾಲಕಿಯನ್ನು ರಕ್ಷಿಸಲಾಗಿದೆ. ಮೃತರನ್ನು ಮಡಿಕೇರಿ ನಿವಾಸಿ ಮಾನ್ಯ(16) ಎಂದು ಗುರುತಿಸಲಾಗಿದೆ. ಈಕೆಯೊಂದಿಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಆಕೆಯ ಗೆಳತಿ ಯಶಸ್ವಿನಿ(16) ಎಂಬವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರೂ ಮೂರು ದಿನಗಳ ಹಿಂದೆ ಮನೆ ಬಿಟ್ಟು ಮಂಗಳೂರು ಕಡೆಗೆ
ಬ್ರಹ್ಮಾವರದಲ್ಲಿ ನೂತನ ತಾಲೂಕು ಕೇಂದ್ರವಾದ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವನ್ನು ಆಗಸ್ಟ್ 5ರಂದು ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಉದ್ಘಾಟಿಸಲಿದ್ದಾರೆ. ಬಳಿಕ ಭಂಟರ ಭವನದಲ್ಲಿ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಐ ಅರುಣ್ ಅಧ್ಯಕ್ಷತೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ. ರಾಷ್ಟ್ರೀಯ ಹೆದ್ದಾರಿ 66 ಬಳಿಯ ಹಳೆ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡವನ್ನು ನ್ಯಾಯಾಲಯವಾಗಿ ಪರಿವರ್ರ್ತಿಸಲು
ಉಡುಪಿ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಶರಣ್ ಪಂಪ್‍ವೆಲ್ ಮತ್ತು ದಿನೇಶ್ ಮೆಂಡನ್ ಮೇಲೆ ಪೊಲೀಸರು ಸುಮೊಟೊ ಕೇಸ್ ದಾಖಲು ಮಾಡಿರುವುದು ಖಂಡನೀಯ ಎಂದು ಬಜರಂಗದಳದ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್ ಖಂಡಿಸಿದ್ದಾರೆ. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಖಂಡನೆ ವ್ಯಕ್ತಪಡಿಸಿದರು. ಹಿಂದೂ ಸಮಾಜದ ಮೇಲೆ ಆಗುತ್ತಿರುವ
ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ
ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ತ್, ಬಜರಂಗ ದಳ ಉಡುಪಿ ಜಿಲ್ಲಾ ಘಟಕದಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದರು. ಬಳಿಕ ಬಹಿರಂಗ ಸಭೆ ನಡೆಯಿತು. ಕಲ್ಸಂಕದಿಂದ ಜೋಡುಕಟ್ಟೆ ತನಕ 700ಕ್ಕೂ ಅಧಿಕ ಪೊಲೀಸರು, 25ಕ್ಕೂಅಧಿಕ ವಾಹನಗಳನ್ನು ಬಿಗಿ ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿತ್ತು. ಉಡುಪಿ ಕಾಲೇಜಿನ ವಿಡಿಯೊ ಪ್ರಕರಣದಲ್ಲಿ ನಿಷೇಧಿತ ಪಿಎಫ್‍ಐ, ಸಿಎಫ್‍ಐ
ರಸ್ತೆ ದಾಟುತ್ತಿದ್ದ ನಾಗರ ಹಾವೊಂದು ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್ನೊಳಗೆ ಹೋಗಿ ಅವಾಂತರ ಸೃಷ್ಟಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆ ಬಳಿ ನಡೆದಿದೆ. ಉಡುಪಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ನಾಗರ ಹಾವೊಂದನ್ನು ವಾಹನದ ಅಡಿಗೆ ಬೀಳದಂತೆ ರಕ್ಷಿಸುವ ನಿಟ್ಟಿನಲ್ಲಿ ದಾಮೋದರ್ ಪಾಂಗಳ ಮತ್ತು ಸ್ಥಳೀಯರು ಅವರು ಹಾವನ್ನು ರಕ್ಷಣೆ ಮಾಡಿ, ಸುರಕ್ಷಿತ ಪ್ರದೇಶಕ್ಕೆ ತೆರಳಲು ದಾರಿ ಮಾಡಿಕೊಟ್ಟಿದ್ದರು. ಈ ವೇಳೆ
ಕಾರ್ಕಳದ ಅನಂತ ಪದ್ಮನಾಭ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಇಂದು ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಕಾರ್ಕಳ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸಿ ತ್ವರಿತ ಗತಿಯಲ್ಲಿ ಬೆಂಕಿ ನಂದಿಸಿದ್ದಾರೆ. ಯಾವುದೇ ಅಗತ್ಯತೆ ಉಳ್ಳ ದಾಖಲೆಗಳು ಹಾಗೂ ಸೂತ್ತುಗಳು ಹಾನಿಯಾಗಿಲ್ಲ. ಗ್ರಾಹಕರು ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದು ಬ್ಯಾಂಕ್ ಪ್ರಬಂಧಕರು ತಿಳಿಸಿದ್ದಾರೆ.




























