ಉಡುಪಿ: ರಾಜ್ಯ ಸರಕಾರದ ಸರ್ವಾಧಿಕಾರಿ ಧೋರಣೆ, ಸಂವಿಧಾನ ವಿರೋಧಿ ನೀತಿ, ಹದಗೆಟ್ಟ ಕಾನೂನು ಸುವ್ಯವಸ್ಥೆ, ರೈತರ ಆತ್ಮಹತ್ಯೆ, ಬೆಲೆ ಏರಿಕೆ ವಿರುದ್ಧ ಜಿಲ್ಲಾ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತು. ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದ ಬಳಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾದರು. ಈ ವೇಳೆ ಕಾಂಗ್ರೆಸ್ ಸರಕಾರದ ವಿರುದ್ಧ
ಬೈಂದೂರು ಭಾಗಕ್ಕೆ ಸರ್ಕಾರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಮನೆಗೆ ಸೇರಲಾಗುತ್ತಿಲ್ಲ. ಬಸ್ ಇಳಿದು ಕಾಡು ಪ್ರದೇಶದಲ್ಲಿ 2ರಿಂದ 3 ಕಿ.ಮೀ. ನಡೆದುಕೊಂಡು ಕಾಲುಸಂಕ ಹೊಳೆಗಳನ್ನೆಲ್ಲ ದಾಟಿ ಹೋಗುವಾಗ ರಾತ್ರಿ 8 ಗಂಟೆಯಾಗುತ್ತದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು. ವಿದ್ಯಾರ್ಥಿನಿ ಪ್ರತಿನಿಧಿಯಾಗಿ ಕವಿತಾ ಆಚಾರ್ಯ ಮಾತನಾಡಿ
ಕುಂದಾಪುರ; ಬೈಂದೂರಿನ ಬಾರ್‍ವೂಂದರ ಮುಂಭಾಗದಲ್ಲಿ ಕಂಠಪೂರ್ತಿ ಕುಡಿದು ಪುಡಿ ರೌಡಿಗಳ ತಂಡ ಅಟ್ಟಹಾಸ ಮೆರೆದಿರುವ ಘಟನೆ ಬೈಂದೂರಿನಲ್ಲಿ ನಡೆದಿದೆ. ವಾಹನ ಅಡ್ಡ ಬಂದ ಕಾರಣ ಆರಂಭವಾದ ವಾಗ್ವಾದ, ಪರಸ್ಪರ ಹಲ್ಲೆ ನಡೆಸಿದ್ದಾರೆ. ಟಾಟಾ ಏಸ್ ವಾಹನದಲ್ಲಿದ್ದ ರಮೇಶ್ ದೇವಾಡಿಗ ಹಾಗೂ ರವಿ ಪೂಜಾರಿ ಮೇಲೆ ಪುಡಿ ರೌಡಿಗಳಿಂದ ಹಲ್ಲೆ ನಡೆದಿದೆ ಪಾರ್ಕಿಂಗ್ ನಿಲ್ಲಿಸಿದ ವಾಹನದ ಗಾಜನ್ನು ಹೆಲ್ಮೆಟ್ ಮತ್ತು ಸೋಡಾ ಬಾಟಲಿಗಳಿಂದ ಜಖಂಗೊಳಿಸಿದ್ದಾರೆ. ಪ್ರಕರಣದ ದೃಶ್ಯಾವಳಿ
ಮಂಜೇಶ್ವರ : ಮಂಜೇಶ್ವರ ರೈಲ್ವೇ ನಿಲ್ದಾಣಕ್ಕೆ ಸಮೀಪವಿರುವ ಉದ್ಯಾವರ ರೈಲ್ವೇ ಕ್ರಾಸಿಂಗ್ ಗೇಟ್ ಮೂಲಕ ಹಾದು ಹೋಗುವ ಪ್ರಯಾಣಿಕರಿಗೆ ನಿರಂತರ ಅಡಚಣೆಯಾಗಿದೆ. ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಕಚೇರಿಗೆ ಹೋಗುವವರು ಹಾಗೂ ಜನ ಸಾಮಾನ್ಯರು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ. ಯಾವುದೇ ಮುನ್ಸೂಚನೆ ಕೂಡ ನೀಡದೆ ರೈಲ್ವೇ ಗೇಟ್‍ನ್ನು ಇಲ್ಲಿ ಬಂದ್ ಮಾಡುತ್ತಾರೆ ಎಂದು ಸ್ಥಳೀಯರು ಆರೋಪಿಸುತಿದ್ದಾರೆ. ಮಂಜೇಶ್ವರ ರಥಬೀದಿ ಅಥವಾ ಹೊಸಂಗಡಿ ಭಾಗದಿಂದ
ಗೃಹಜ್ಯೋತಿ ಯೋಜನೆಯ ನೋಂದಾಣಿಗೆ ಪಡುಬಿದ್ರಿ ಸೈಬರ್ ಒಂದರಲ್ಲಿ 100 ರೂಪಾಯಿ ಪಡೆಯುತ್ತಿರುವುದನ್ನು ಗ್ರಾಮಸ್ಥರು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ವಿರುದ್ಧ ಗ್ರಾ.ಪಂ.ಸದಸ್ಯರ ದೂರಿನನ್ವಯ ಕಾಪು ತಹಶಿಲ್ದಾರ್ ಅಂಥಹ ಸೈಬರ್‍ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಪಡುಬಿದ್ರಿ ಗ್ರಾ.ಪಂ. ಸದಸ್ಯೆ ಜ್ಯೋತಿ ಮೆನನ್ ಅವರು, “ಗೃಹಜ್ಯೋತಿ” ಯೋಜನೆಯನ್ನು ದುರುಪಯೋಗ ಮಾಡಿಕೊಂಡ
ಮಹಿಳೆಯರು ಯಾವಾಗಲೂ ಪುರುಷರಿಗಿಂತ ಕೆಳಗಿನವರು ಎಂಬ ಭಾವನೆಯನ್ನು ಹೋಗಲಾಡಿಸ ಬೇಕು ಮಾನವ ಹಕ್ಕು ಮತ್ತು ವ್ಯಯಕ್ತಿಕ ಹಕ್ಕುಗಳನ್ನು ಒದಗಿಸಬೇಕು ತಮ್ಮ ಜೀವನವನ್ನು ಸ್ವತಂತ್ರವಾಗಿ ಯಾವುದೇ ಭಯವಿಲ್ಲದೆ ಬದುಕುವಂತಾಗಲಿ ಎಂಬ ಉದ್ದೇಶವಿದೆ. ಜೀವನಕ್ಕೆ ಅವಶ್ಯಕವಾದ ಅವಕಾಶಗಳನ್ನು ಪಡೆದು ಕೊಳ್ಳಲು ಮಹಿಳೆಯರು ಯಾವುದೇ ಭಯವಿಲ್ಲದೆ ತಮ್ಮ ಹಕ್ಕು ಚಲಾಯಿಸಬೇಕು ಎಂದು ಉಡುಪಿ ರೋಟರಿ ಅಧ್ಯಕ್ಷೆ ದೀಪಾ ಭಂಡಾರಿ ಹೇಳಿದರು. ಅವರು ಪಡುಬಿದ್ರಿ ಸಹಕಾರಿ ಸಂಗಮದಲ್ಲಿ ನಡೆದ
ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿದಿದೆ. ಮೃತರನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಹೆಡ್ ಕಾನ್ ಸ್ಟೇಬಲ್, ಮಿಯ್ಯಾರು ಗ್ರಾಮದ ಕಾಜರಬೈಲು ನಿವಾಸಿ ಪ್ರಶಾಂತ್ ಮಿಯ್ಯಾರು (49) ಎಂದು ಗುರುತಿಸಲಾಗಿದೆ. ರಜೆಯಲ್ಲಿದ್ದ ಇವರು ಕಾರ್ಕಳದ ಮಿಯ್ಯಾರಿನ ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಈ ಘಟನೆ
ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿ ಹಲವು ಮಂದಿ ಗಾಯಗೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಕ್ರಿಕೆಟ್ ಬೆಟ್ಟಿಂಗ್ ವಿಚಾರವಾಗಿ ಎರಡು ತಂಡಗಳ ಮಧ್ಯೆ ಮಾರಕಾಯುಧಗಳಿಂದ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಸಂದೇಶ್ ಶೆಟ್ಟಿ ಹಾಗೂ ಸೂರಜ್ ಕ್ರಿಕೆಟ್ ಬೆಟ್ಟಿಂಗ್ ವಿಚಾರದಲ್ಲಿ ಪರಸ್ಪರ ರೋಷದಿಂದ ಬೈದಾಡಿಕೊಂಡ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಂದೇಶ್ ಶೆಟ್ಟಿ ಮತ್ತಿತರರು ಕಾರಿನಲ್ಲಿ ಬಂದು
ಬ್ರಹ್ಮಾವರದಲ್ಲಿ ಕಳೆದ ಕೆಲವು ದಿನದಿಂದ ಸುರಿಯುತ್ತಿರುವ ಭಾರೀ ಮಳೆಗೆ ಬ್ರಹ್ಮಾವರ ರಥ ಬೀದಿಯಲ್ಲಿರುವ ಶ್ರೀ ಆಂಜನೇಯ ದೇವಸ್ಥಾನದ ಬಳಿ ಇರುವ ಮನೆಯೊಂದು ಕುಸಿದು ಬಿದ್ದಿದೆ. ಗೋಪಾಲ ಪೂಜಾರಿ ಎನ್ನುವವರ ಮನೆಯು ಮಳೆಗೆ ಕುಸಿದು ಬಿದ್ದು ಸಂಪೂರ್ಣ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಬ್ರಹ್ಮಾವರ ತಾಲೂಕು ತಹಶೀಲ್ದಾರ್ ರಾಜಶೇಖರ ಮೂರ್ತಿ ಕಂದಾಯ ನೀರೀಕ್ಷಕ ಲಕ್ಷ್ಮೀ ಮೀನಾರಾಯಣ ಭಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆ ಕುಸಿತಗೊಂಡ ಸಂದರ್ಭದಲ್ಲಿ ಗೋಪಾಲ ಪೂಜಾರಿಯವರ
ಕಾಪು ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ. ಕಡಲು ಪ್ರಕ್ಷುಬ್ಧಗೊಂಡು, ಲೈಟ್‌ಹೌಸ್ ಬಳಿಯಲ್ಲಿ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದೆ. ಇದರಿಂದಾಗಿ ಲೈಟ್‌ಹೌಸ್ ಇರುವ ಬಂಡೆ ಮೇಲೆ ಪ್ರವೇಶಿಸುವುದೇ ಕಷ್ಟಕರವಾಗಿದೆ. ಇಷ್ಟಿದ್ದರೂ ಕೆಲವೊಂದು ಪ್ರವಾಸಿಗರು ಪ್ರಯಾಸಪಟ್ಟು ಮೆಟ್ಟಿಲಗಳನ್ನೇರಿ ಲೈಟ್ ಹೌಸ್ ಪಕ್ಕಕ್ಕೆ ಹೋಗಲು




























