ಮಣಿಪಾಲದ ವ್ಯಾಲಿ ವ್ಯೂ ನಲ್ಲಿ ಹಿಂದೂ ಎಕನಾಮಿಕ್ ಫೋರಮ್ ರಾಷ್ಟ್ರೀಯ ಮಟ್ಟದ ಸಮ್ಮೇಳನವು ಮೇ 28, 2023 ರ ಭಾನುವಾರದಂದು ಜರುಗಿತ್ತು. ಈ ಸಮ್ಮೇಳನದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಯಶ್ ಪಾಲ್ ಸುವರ್ಣ ಭಾಗವಹಿಸಿ, ಸಭೆಯನ್ನುದ್ದೇಶಿಸಿ ಮಾಡನಾಡಿ ಶುಭಹಾರೈಸಿದರು. ಸಮ್ಮೇಳನದಲ್ಲಿ 200 ಕ್ಕೂ ಅಧಿಕ ವ್ಯಾಪಾರೋದ್ಯಮಿಗಳು ಭಾಗವಹಿಸಿದ್ದು, ಹಿಂದೂ
ವಿಶ್ವಹಿಂದೂ ಪರಿಷತ್, ಭಜರಂಗದಳ ಕಾಪು ಪ್ರಖಂಡವತಿಯಿಂದ ಪಡುಬಿದ್ರಿಯ ಎರಡು ಚಿತ್ರಮಂದಿರಗಳಲ್ಲಿ ” ಕೇರಳ ಸ್ಟೋರಿ ” ಚಲನಚಿತ್ರ ವೀಕ್ಷಿಸಲು ಯುವತಿಯರಿಗೆ ಉಚಿತ ಅವಕಾಶ ಮಾಡಿಕೊಟ್ಟಿದ್ದು, ಇನ್ನೂರಕ್ಕೂ ಅಧಿಕ ಯುವತಿಯರು ಹಾಗೂ ಮಹಿಳೆಯರು ಚಿತ್ರ ವೀಕ್ಷಣೆ ಮಾಡಿದ್ದಾರೆ. ಚಿತ್ರ ವೀಕ್ಷಣೆ ಮಾಡಿದ ಯುವತಿಯರು ಪ್ರತಿಕ್ರಿಯಿಸಿ ಮುಂದಿನ ದಿನದಲ್ಲಿ ನಮ್ಮ ಜೀವನದಲ್ಲೂ ಇಂಥಹ ಘಟನೆಗಳು ನಡೆಯ ಬಾರದು ಎಂದಾದರೆ ನಾವು ಹೆಚ್ಚಿನ ಜಾಗ್ರತೆ ವಹಿಸಬೇಕಾಗಿದೆ ಎಂದರು.
ಬೈಂದೂರು ಶಾಸಕರಾದ ಗುರುರಾಜ್ ಗಂಟೆಹೊಳೆ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಶಕ್ತಿ ಕೇಂದ್ರ ಕಾರ್ಯಕರ್ತರ ಸಭೆ ಮರವಂತೆ ಸಾಧನ ಸಭಾಭವನದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಮರವಂತೆ ಎನ್ನುವುದು ಬಿಜೆಪಿಯ ಭದ್ರಕೋಟೆ ಹಾಗೂ ನನ್ನನ್ನು ಅತಿ ಹೆಚ್ಚು ಮತದಿಂದ ಗೆಲ್ಲಿಸುವಲ್ಲಿ ಮರವಂತೆ ಕಾರ್ಯಕರ್ತರು ಶ್ರಮಿಸಿದ್ದಾರೆ.. ಈ ಕಾರಣದಿಂದ ಅತಿ ಹೆಚ್ಚು ಮತದಿಂದ ಗೆಲ್ಲಲು ಸಾಧ್ಯವಾಯಿತು ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ
ರಾಷ್ಟ್ರೀಯ ಪೈಲೆಟ್ ದಿನವನ್ನು ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ನೇತೃತ್ವದಲ್ಲಿ ಉಡುಪಿ ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಮೇ 26 ರಂದು ಆಚರಿಸಲಾಯಿತು.ಈ ಸಂದರ್ಭದಲ್ಲಿ ಇ.ಎಮ್.ಆರ್.ಐ ಗ್ರೀನ್ ಹೆಲ್ತ್ ಸರ್ವೀಸ್‌ನ ಅಧಿಕಾರಿಗಳಾದ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಅಧಿಕಾರಿಗಳು, ವಾಹನ ಉಸ್ತುವಾರಿ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಚಾಲಕರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕದಿಂದ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ ಮಣಿಪಾಲದಲ್ಲಿ ಮೇ 26 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಸರ್ಕಾರಿ ಕೆಲಸದಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತ, ಕನ್ನಡ ನಾಡು ನುಡಿ ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿದ 91 ವರ್ಷದ ಹಿರಿಯರಾದ ವಿಠಲ ರಾವ್ ಗಂಭೀರ್ ಅವರನ್ನು ಅವರ ಸ್ವಗೃಹ ಮಣಿಪಾಲದಲ್ಲಿ ಗೌರವಿಸಲಾಯಿತು. ಎಂಟು ವಿವಿಧ ವಾದ್ಯಗಳನ್ನು ನುಡಿಸಬಲ್ಲ
ಉಡುಪಿ : ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ನೇತ್ರವಿಜ್ಞಾನ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯಗಳಿಗೆ ಉಪಕೇಂದ್ರ ಮಟ್ಟದಲ್ಲಿ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರವು ಮೇ 26 ರಂದು ಮಣಿಪಾಲ ಕೆ.ಎಂ.ಸಿ. ಯ ಇಂಟರಾಕ್ಟ್ ಕೆ.ಎಮ್.ಸಿ
ಸರಕಾರಿ ಸೇವೆಯಲ್ಲಿದ್ದಾಗ ಕರ್ತವ್ಯ ಮತ್ತು ಜವಾಬ್ದಾರಿಗಳು ಸಹಜ. ಅದರ ಜೊತೆಗೆ ತಾವಿರುವ ಇಲಾಖೆಯಿಂದ ಯಾವ ರೀತಿಯ ಹೊಸ ಮಾರ್ಪಡುಗಳ ಮೂಲಕ ಜನರಿಗೆ ಇನ್ನಷ್ಟು ಸೇವೆ ನೀಡಲು ಸಾಧ್ಯ ಎನ್ನುವ ಚಿಂತನೆ ಮತ್ತು ಕ್ರಿಯಾತ್ಮಕ ಯೋಜನೆಗಳ ಮೂಲಕ ಬೈಂದೂರಿನ ಅಭಿವೃದ್ಧಿಗೆ ಅಧಿಕಾರಿಗಳು ಸಹಕರಿಸಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಬೈಂದೂರು ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಮಾತನಾಡಿದ್ದರು. ಈ
ಉಡುಪಿ ಜಿಲ್ಲೆಯ ಕೊಡವೂರು ವಾರ್ಡಿನಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ಮೇ 26, 2023 ರಂದು ನಡೆಯಿತು. ಶಿಬಿರದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಒಟ್ಟು 26 ಜನರು ಕಣ್ಣಿನ ಪರೀಕ್ಷೆಯನ್ನು ನಡೆಸಿ, 13 ಜನರಿಗೆ ಶಸ್ತ್ರ ಚಿಕಿತ್ಸೆ ಹಾಗೂ 7 ಜನರಿಗೆ ಕನ್ನಡಕ ವಿತರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು
ಇಂದು ಉಡುಪಿ ಜಿಲ್ಲೆಯ ಮಲ್ಪೆಯ ಬಾಲಕರ ಶ್ರೀ ರಾಮ ಭಜನಾ ಮಂದಿರದಲ್ಲಿ ಯಕ್ಷಗಾನ ಕಲಾರಂಗ ಆಯೋಜಿಸಿದ ತಾಳಮದ್ದಲೆ ಸಪ್ತಾಹದ ಆರನೇ ದಿನದ ತಾಳಮದ್ದಲೆ ಕಚದೇವಯಾನಿ ಸುಂದರವಾಗಿ ಪ್ರಸ್ತುತಗೊಂಡಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ವತಿಯಿಂದ ಸಂಸ್ಥೆಯ ಅಧ್ಯಕ್ಷರನ್ನು ಗೌರವಿಸಲಾಯಿತು.
ಉಡುಪಿ : ಶ್ವಾನ ಅಂದ್ರೆ ಎಲ್ರಿಗೂ ಇಷ್ಟ. ಅದರ ನಿಷ್ಠೆ ಮತ್ತು ಪ್ರೀತಿಯೂ ಪ್ರಶ್ನಾತೀತ. ಉಡುಪಿ ನಗರದ ಆಸುಪಾಸಿನಲ್ಲಿ ನಡೆದ ಶ್ವಾನನಿಷ್ಠೆಯ ಪ್ರಸಂಗವೊಂದು, ಶ್ವಾನ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ತನ್ನನ್ನು ಆರೈಕೆ ಮಾಡುವ ಮನೆ ಕೆಲಸದಾಕೆಯ ಜೊತೆಯಲ್ಲಿ ಈ ಶ್ವಾನ ಕೂಡ ಬಸ್ಸನ್ನೇರಿದೆ. ಈ ಮಹಿಳೆ ಮನೆಯೊಂದರಲ್ಲಿ ಮನೆ ಕೆಲಸ ಮಾಡುತ್ತಾರೆ. ಮನೆ ಕೆಲಸದ ಮಹಿಳೆಯ ಜೊತೆಯಲ್ಲಿ ಮಾಲೀಕರ ಮನೆಯ ಶ್ವಾನವೂ ಬಂದಿದೆ.ಆಕೆ ಬಸ್ ಹತ್ತುವಾಗ ಶ್ವಾನವೂ ಹತ್ತಿದೆ. ಬಸ್




























