ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ರವರ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ಮನೆಯಲ್ಲಿ ವರಹಮೂರ್ತಿ ಹಾಗೂ ವಾರ್ತಾಳಿ ದೈವಗಳ ಹರಕೆಯ ನೇಮೋತ್ಸವ ಬಹಳ ಅದ್ಧೂರಿಯಾಗಿ ಜರಗಿತು. ಕಾಪು ತಾಲೂಕಿನ ಪಡುಬಿದ್ರಿ ಯುಪಿಸಿಎಲ್ ಕಾಲೋನಿ ಪ್ರದೇಶದ ಲಕ್ಷ್ಮೀ ವೆಂಕಟೇಶ ನಿಲಯದಲ್ಲಿ ಕುಟುಂಬದ ಹಿರಿಯರು ಆರಾಧಿಸಿಕೊಂಡು ಬಂದಿರುವ ಇಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ
ಕಾರ್ಕಳ : ಬೈಲೂರಿನ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ವಿಧಾನಸಭೆ ಸಭಾಪತಿ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಇಂಧನ ಹಾಗು ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಸಾಥ್ ನೀಡಿದರು. ಕಾರ್ಕಳ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಕಾರ್ಕಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಗುರುದತ್, ಹೆಬ್ರಿ ಕಾರ್ಯನಿರ್ವಾಹಕ ಅಧಿಕಾರಿ ಕೆಜೆ ಶಶಿಧರ್ ಉಪಸ್ಥಿತರಿದ್ದರು
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಇದರ ನೇತೃತ್ವದಲ್ಲಿ ಎರ್ಮಾಳು ಇಂಸ್ಟೆಂಟ್ ಸೀ ರೆಸಾರ್ಟ್ ನಲ್ಲಿ ನಡೆದ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನಕ್ಕೆ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡುವುದು ವಿಜಯ ಸಂಕಲ್ಪ ಅಭಿಯಾನದ ಉದ್ದೇಶವಾಗಿದೆ. ಈಗಾಲೇ ಕಾಪು ಕ್ಷೇತ್ರಕ್ಕೆ 2900 ಕೋಟಿ ರೂಪಾಯಿ ಅನುದಾನ ತರಲಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಚುನಾವಣೆ ಎದುರಿಸೋಣ
ಭಾತ್ರತ್ವದ ಸಂದರ್ಭದಲ್ಲಿ ಏಸು ರಾಜ ಕ್ರಿಸ್ತನನ್ನು ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಬಂದು ವಿಶಾಲವಾದ ಮೈದಾನದಲ್ಲಿ ಏಸು ಕ್ರಿಸ್ತನ ದೇವರ ವಾಕ್ಯವನ್ನು ಕೇಳುತ್ತಾ ಅವರನ್ನು ಸ್ತುತಿಸುತ್ತ ಏಸು ಕ್ರಿಸ್ತನ ನಾಮದಲ್ಲಿ ಆಶೀರ್ವಾದ ಪಡೆದಿದ್ದೇವೆ. ಏಕತೆ, ಸಹೋದರತೆ, ಭಾತ್ರತ್ವ ಇರಬೇಕು ಎಂದು ಪ್ರವಚನ ನೀಡಿದಂತ ದಿವ್ಯ ಬಲಿ ಪೂಜೆಯನ್ನು ವಂದನೀಯ ಸ್ವಾಮಿ ಸಿರಿಲ್ ಲೋಬೋ ಉಡುಪಿ ಧರ್ಮಪ್ರಾಂತ್ಯದ ದಿವ್ಯ ಜ್ಯೋತಿ ಇದರ ನಿರ್ದೇಶಕರಾಗಿದ್ದವರು ಮುಂದಿನ ಐದು ದಿನಗಳ ಕಾಲ
ಕಾಂಚನ ಸಮೂಹ ಸಂಸ್ಥೆಯ ಉಡುಪಿಯ ಕಡಿಯಾಳಿ ಶೋರೂಮ್‍ನಲ್ಲಿ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆಗೊಂಡಿತು. ಉಡುಪಿಯ ಕಡಿಯಾಳಿ ಕಾಂಚನ ಸಮೂಹ ಸಂಸ್ಥೆಯ ಶೋರೂಂನಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಬಿಗ್‍ಬಾಸ್ ಸೀಸನ್ 9ರ ವಿಜೇತ, ನಟ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಅವರು ನೂತನ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ
ಕಳೆದ ರಾತ್ರಿ ಪಡುಬಿದ್ರಿ ಮುಖ್ಯ ಮಾರುಕಟ್ಟೆಯ ಸೂಪರ್ ಮಾರ್ಕೆಟ್ ಹಾಗೂ ಕಾರ್ಕಳ ರಸ್ತೆಯಲ್ಲಿರುವ ಬಟ್ಟೆಯಂಗಡಿಯಲ್ಲಿ ಕಳ್ಳತನ ನಡೆದಿದ್ದು ಸಹಸ್ರಾರು ರೂಪಾಯಿ ಬೆಲೆಬಾಳುವ ವಸ್ತುಗಳು ಹಾಗೂ ನಗದು ಕಳವಾಗಿದ್ದು ಕಳ್ಳ ಸಿಸಿ ಕ್ಯಾಮಾರದಲ್ಲಿ ಸೆರೆ ಸಿಕ್ಕಿದ್ದಾನೆ.ಮುಖ್ಯ ಮಾರುಕಟ್ಟೆಯಲ್ಲಿರುವ ಕೆ.ಎಸ್. ಬಜಾರ್‍ನ ಬೀಗ ಮುರಿದ ಕಳ್ಳ ಒಳ ಹೊಕ್ಕು ಒಂದು ಲ್ಯಾಪ್‍ಟಾಪ್ ಹಾಗೂ ಒಂದು ಬೊಬೈಲ್ ಕಳವು ನಡೆಸಿದ್ದಾನೆ. ಕಾರ್ಕಳ ರಸ್ತೆಯಲ್ಲಿರುವ ಬಟ್ಟೆಯಂಗಡಿಯ
ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ. ರಾ.ಹೆ. 66 ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಈ ಘಟನೆ ಸಂಭವಿಸಿದೆ. ಘಟನೆಯಿಂದಾಗಿ ಗೂಡಂಗಡಿಯ ಮುಂಭಾಗ ಸಂಪೂರ್ಣ ನಜ್ಹುಗುಜ್ಜಾಗಿದ್ದು ಗೂಡಂಗಡಿಯಲ್ಲಿದ್ದ ವ್ಯಕ್ತಿಯೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು
ಪಡುಬಿದ್ರಿಯ ಠಾಣಾ ವ್ಯಾಪ್ತಿಯ ರಾ.ಹೆದ್ದಾರಿಯಲ್ಲಿ ರಾತ್ರಿ ಹೊತ್ತು ಒಬ್ಬಂಟಿಗಳಾಗಿ ನಡೆದುಕೊಂಡು ಹೋಗುತ್ತಿದ್ದ ಆಂಧ್ರದ ನೆಲ್ಲೂರು ನಿವಾಸಿ ಹನು (29) ಎಂಬ ಯುವತಿಯನ್ನು ಸಮಾಜ ಸೇವಕ ವಿಶುಶೆಟ್ಟಿ ಅವರು ಸ್ಥಳೀಯ ಪೊಲೀಸರ ಸಹಾಯದಿಂದ ರಕ್ಷಿಸಿ ಚಿಕಿತ್ಸೆಗಾಗಿ ಉಡುಪಿಯ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾನು ನಡೆದುಕೊಂಡೇ ತನ್ನೂರನ್ನು ಸೇರುತ್ತೇನೆ ಎಂದು ಮೊಂಡು ಹಠ ಮಾಡಿದ ಯುವತಿಯನ್ನು ಉಡುಪಿಯ ಸಖಿ ಸೆಂಟರ್‍ಗೆ ದಾಖಲಿಸಲು ಅವರು
ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ಜನವರಿ 12ರ ಗುರುವಾರದಂದು ಭಾರತ ಸೇವಾದಳ ಉಡುಪಿ ಜಿಲ್ಲಾ ಸಮಿತಿಯ ನೇತ್ರತ್ವದಲ್ಲಿ, ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ರಜತೋತ್ಸವ ಸಮಿತಿಯ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲಾ 1096 ಸರಕಾರೀ, ಅನುದಾನಿತ ಮತ್ತು ಖಾಸಗಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸುಮಾರು 1,60,000 ಶಾಲಾ ಮಕ್ಕಳಿಂದ ಏಕಕಾಲದಲ್ಲಿ ಆಯಾಯ ಶಾಲೆಗಳ ಅಕ್ಕ ಪಕ್ಕದ ವಠಾರದಲ್ಲಿ “ಸ್ವಚ್ಛ
ಮಣಿಪಾಲ, 7ನೇ ಜನವರಿ 23:2023 ರ ಜನವರಿ 7 ಮತ್ತು 8 ರಂದು ಮಣಿಪಾಲದ ಫಾರ್ಚೂನ್ ಇನ್ ವ್ಯಾಲಿ ವ್ಯೂನಲ್ಲಿ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮಣಿಪಾಲ, ಜಾಗತಿಕ ಕ್ಯಾನ್ಸರ್ ಒಕ್ಕೂಟ ಮತ್ತು ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಗಳು ಜಂಟಿಯಾಗಿ ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದಲ್ಲಿ 200 ಕ್ಕೂ ಹೆಚ್ಚು ದೇಶ ವಿದೇಶಗಳ ಪ್ರತಿನಿಧಿಗಳು ಮತ್ತು ಸಂಪನ್ಮೂಲ ವ್ಯಕಿಗಳು ಭಾಗವಹಿಸಿದ್ದಾರೆ.



























