Home Posts tagged #udupi (Page 71)

ಸಮಾಜಸೇವಕ ವಾಸುದೇವ ಆರ್. ಕೋಟ್ಯಾನ್ ನಿಧನ

ಭಾರತ್ ಕೋಅಪರೇಟಿವ್ ಬ್ಯಾಂಕ್ ಮುಂಬಯಿಯ ಮಾಜಿ ಅಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ಹೆಜಮಾಡಿ, ಬಿಲ್ಲವರ ಸಂಘ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹೆಜಮಾಡಿ ಇದರ ಗೌರವಾಧ್ಯಕ್ಷರಾಗಿ, ಮಾರ್ಗದರ್ಶಕರಾಗಿ, ಸಂಘದ ಹಾಗೂ ಗಡಿಯ ಸಮಗ್ರ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡುಪಾಗಿಸಿಕೊಂಡ ವಾಸುದೇವ ಆರ್. ಕೋಟ್ಯಾನ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರ

ಕೆಳಮಟ್ಟದ ರಾಜಕಾರಣ ಯಾರೂ ಮಾಡಬಾರದು : ಗೋಪಾಲ ಪೂಜಾರಿ

ಕುಂದಾಪುರ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಮಂಜೂರು ಮಾಡಿದ ಕೆಲವು ಯೋಜನೆಗಳನ್ನು ಇಂದು ಮುಖ್ಯಮಂತ್ರಿಗಳ ಮೂಲಕ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾಡಳಿತ ಜನತೆಗೆ ತಪ್ಪು ಮಾಹಿತಿ ಕೊಡುವುದನ್ನು ಮೊದಲು ನಿಲ್ಲಿಸಬೇಕು. ಇಂತಹ ಕೆಳಮಟ್ಟದ ರಾಜಕಾರಣ ಹಿಂದೆ ಯಾವೊಬ್ಬ ಜನಪ್ರತಿನಿಧಿಯೂ ಮಾಡಿಲ್ಲ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ

ಮುಖ್ಯಮಂತ್ರಿ ಆಗಮನ ಹಿನ್ನಲೆ ಕಾಪುವಿನಲ್ಲಿ ವ್ಯಾಪಾರಿಗಳಿಗೆ ಸಮಸ್ಯೆ ಇಲ್ಲ : ಎಸ್. ಅಂಗಾರ

ಕಾಪುವಿನಲ್ಲಿ ನಡೆಯಲಿರುವ ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳು ಬರುವವರಿದ್ದು, ಕಾರ್ಯಕ್ರಮ ಕಾಪುವಿನಲ್ಲಿ ನಡೆಯುತ್ತಿದ್ದರೂ ವ್ಯಾಪಾರಿಗಳಿಗೆ ಯಾವುದೇ ಸಮಸ್ಯೆಯಾಗದು ಎಂಬುದಾಗಿ ಉಸ್ತುವಾರಿ ಸಚಿವ ಅಂಗಾರ ಹೇಳಿದರು.ಅವರು ಕಾಪುವಿನ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಇದು ಪಕ್ಷದ ಕಾರ್ಯಕ್ರಮ ಆಗಿದ್ದು ಪೇಟೆ ಒಳಭಾಗದಲ್ಲಿ ನಡೆಯುತ್ತಿದ್ದರೂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು

ಕಿನ್ನಿಗೋಳಿ : ಮಹಿಳೆಗೆ ಕಾರು ಡಿಕ್ಕಿ,ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಕಾರು ಮಹಿಳೆಗೆ ಡಿಕ್ಕಿಯಾಗಿ, ಮಹಿಳೆ ಸಹಿತ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಜಯಂತಿ ಶೆಟ್ಟಿ (50) ಗಾಯಗೊಂಡ ಮಹಿಳೆ. ಉಳಿದಂತೆ ಕಾರಿನಲ್ಲಿದ್ದ ಚಾಲಕ ತೋಡಾರ್ ಗಳಾದ ನಿವಾಸಿ ಚಾಲಕ ಕೆ ಹೆಚ್ ಅಬ್ದುಲ್ ಖಾದರ್ (65), ರಿದಾ (16), ರಶ್ಮಿ (18), ಕೌಸರ್ (46), ಎಂದು

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯ ವಿಶೇಷ ಸಭೆ

ಉಡುಪಿ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಉಚ್ಚಿಲದ ಏಸ್‌.ಡಿ.ಪಿ.ಐ. ಕಚೇರಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷರಾದ ಮಜೀದ್ ಮೈಸೂರು ಅವರು ವಹಿಸಿದ್ದರು. ಸಭೆಯಲ್ಲಿ ಮುಂಬರುವ ಚುನಾವಣೆಯನ್ನು ದೂರ ದೃಷ್ಟಿಯಲ್ಲಿ ಇಟ್ಟು ಕೊಂಡು ಪಕ್ಷವನ್ನು ಭೂತ್ ಮಟ್ಟದಿಂದ ಸಂಘಟಿಸುವ ಬಗ್ಗೆ ಚರ್ಚೆ ವಿಮರ್ಶೆಗಳು ನಡೆದವು. ಅದಕ್ಕಾಗಿ ಕಾರ್ಯಕರ್ತರು ಈಗಿಂದಲೇ ಕಾರ್ಯಪ್ರವೃತ್ತರಾಗಿ ಕೆಲಸಗಳನ್ನು ಮಾಡಬೇಕು ಎಂದು ರಾಜ್ಯಾಧ್ಯಕ್ಷರು ಕಿವಿಮಾತು ಹೇಳಿದರು. ಜಿಲ್ಲಾ

ವಿಶ್ವ ಪಾರ್ಶ್ವವಾಯು ದಿನದ ಪ್ರಯುಕ್ತ ಜಾಗೃತಿ: ಮಲ್ಪೆಯಲ್ಲಿ ಮರಳು ಕಲಾ ಶಿಲ್ಪ ಅನಾವರಣ

ವಿಶ್ವದಾದ್ಯಂತ ಪಾರ್ಶ್ವವಾಯು ಸಂಭವವನ್ನು ಕಡಿಮೆ ಮಾಡಲು ಪ್ರತಿ ವರ್ಷ ಅಕ್ಟೋಬರ್ 29 ರಂದು ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ  ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗವು ಮಲ್ಪೆ ಕಡಲ ತೀರದಲ್ಲಿ ಪಾರ್ಶ್ವವಾಯು ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಮರಳು ಕಲಾ ಶಿಲ್ಪವನ್ನು ಅನಾವರಣಗೊಳಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿತು.  ಕೆಎಂಸಿ ಮಣಿಪಾಲದ ಡೀನ್ ಡಾ ಶರತ್ ಕೆ

ಕಂಚಿನಡ್ಕದಲ್ಲಿ ಪ್ರಪ್ರಥಮ ಬಾರಿಗೆ ಸಾಮೂಹಿಕ ಗೋಪೂಜೆ, ಗೌರವಾರ್ಪಣೆ

ದೀಪಾವಳಿಯ ಪ್ರಯುಕ್ತ ಕಂಚಿನಡ್ಕದ ಹಿಂದೂ ಬಾಂಧವರ ನೇತೃತ್ವದಲ್ಲಿ ಸಾಮೂಹಿಕ ಗೋಪೂಜೆ,ಗೋಸಾಕುವ ಕುಟುಂಬಕ್ಕೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಭಾಜಪ ಉಪಾಧ್ಯಕ್ಷ ಶ್ರೀಪ್ರಕಾಶ್ ಶೆಟ್ಟಿಯವರು ಭಾರತಮಾತೆ ಪೂಜೆ ನಡೆಸಿ ಚಾಲನೆ ನೀಡಿದರು. ಮಾತೆಯರಿಂದ ಗೋಪೂಜೆ ನಡೆಸಿ ಪ್ರತಿ ಗೋಸಾಕುವ ಕುಟುಂಬಕ್ಕೆ ಗೌರವಪೂರ್ವಕವಾಗಿ ಸನ್ಮಾನಿಸಿ, ಗೋಆಹಾರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಭಾಜಪ ಅಧ್ಯಕ್ಷರಾದ ಶ್ರೀಕಾಂತ್

ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ‘ನನ್ನ ನಾಡು ನನ್ನ ಹಾಡು’ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕರಾವಳಿಯ ವಿವಿಧ ಭಾಗಗಳಲ್ಲಿ ಅತ್ಯುತ್ತಮವಾಗಿ ನಡೆದಿದೆ. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೋಟಿ ಕಂಠ ಗಾಯನ ‘ನನ್ನ ನಾಡು ನನ್ನ ಹಾಡು’ ಕಾರ್ಯಕ್ರಮ ಜರುಗಿತ್ತು. ಉಡುಪಿ ಅಪರ ಜಿಲ್ಲಾಧಿಕಾರಿಯಾದ ವೀಣಾ ಬಿ ಎಸ್,

ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್ ನಲ್ಲಿ ಕೋಟಿ ಕಂಠ ಗಾಯನ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕರಾವಳಿಯ ವಿವಿಧ ಭಾಗಗಳಲ್ಲಿ ಅತ್ಯುತ್ತಮವಾಗಿ ನಡೆಯಿತು. ಉಡುಪಿಯ ಪ್ರಖ್ಯಾತ ಆರೋಗ್ಯ ಸಂಸ್ಥೆ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್‍ನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವು ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ

ಕರಾವಳಿಯಾದ್ಯಂತ ದೀಪಾವಳಿ ಸಡಗರ : ಕೃಷ್ಣಮಠದಲ್ಲಿ ಬಲೀಂದ್ರ ಪೂಜೆ

ಶ್ರೀಕೃಷ್ಣಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಸೋಮವಾರ ರಾತ್ರಿ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು “ಬಲೀಂದ್ರ ಪೂಜೆ” ನಡೆಸಿದರು. ಬಳಿಕ ಪಂಚ ದೀಪ ಪ್ರಜ್ವಲನೆಯೊಂದಿಗೆ ವಾದ್ಯ ಮೇಳ ಸಹಿತ ಶ್ರೀಕೃಷ್ಣ ಮಠದ ಎಲ್ಲ ಪ್ರದೇಶ ಮತ್ತು ಪರ್ಯಾಯ ಕೃಷ್ಣಾಪುರ ಮಠಕ್ಕೂ