An event was conducted to celebrate Paediatric Bone Marrow Transplantation facility and press meet by Kasturba Medical College and Hospital, Manipal today under division of Paediatric haematology and Oncology of Manipal Comprehensive Cancer care Centre. Dr Sharath Kumar Rao, Dean, Kasturba
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಯಶಸ್ಸನ್ನು ಆಚರಿಸುವ ಕಾರ್ಯಕ್ರಮ ಮತ್ತು ಪತ್ರೀಕಾಘೋಷ್ಠಿಯನ್ನು ಇಂದು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶರತ್ ಕುಮಾರ್ ರಾವ್ ಅವರು ಮಕ್ಕಳ ಅಸ್ಥಿಮಜ್ಜೆ ಕಸಿ ಕ್ಲಿನಿಕ್ ನ ಮಾಹಿತಿ
ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಆಗಸ್ಟ್ 2 ರಿಂದ ಆಗಸ್ಟ್ 9 ರವರೆಗೆ, 122 ನೇ ಭಜನಾ ಸಪ್ತಾಹ ಮಹೋತ್ಸವವು, ನಾಗರ ಪಂಚಮಿಯಂದು ಶುಭಾರಂಭಗೊಂಡು, ದ್ವಾದಶಿ ಪರ್ಯಂತ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ಊರ ಪರವೂರ ಭಜನಾ ಮಂಡಳಿಗಳಿಂದ ಅಹೋರಾತ್ರಿ 7 ದಿನಗಳ ಕಾಲ, ನಿರಂತರ ಭಜನೆ ಈ ಮಹೋತ್ಸವದಲ್ಲಿ ನಡೆಯಲಿದೆ. ಈ ಪ್ರಯುಕ್ತ ನಡೆದ ದೀಪ ಸ್ಥಾಪನಾ ಕಾರ್ಯಕ್ರಮ ವೈಭವದಿಂದ ನೆರವೇರಿತು. ಈ ಶುಭ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು,
ಎರಡು ದಿನಗಳಿಂದ ಭಾರಿ ಮಳೆ ಹಿನ್ನೆಲೆ ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡದ ಅಂಚಿನಲ್ಲಿರುವ ಶಿರೂರು ಬೈಂದೂರು ಕಳುಹಿತ್ಲು ಕಲ್ಮಕ್ಕಿಯ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ ಯಾವುದೇ ಸಂಪರ್ಕವಿಲ್ಲದೆ ಜನ ಕಂಗೆಟ್ಟಿದ್ದಾರೆ ಭಾರೀ ಮಳೆಯಿಂದಾದ್ದು ರಾತ್ರಿ ಹಲವಾರು ಮನೆಗಳಿಗೆ ನೀರು ನುಗ್ಗಿದೆ ,ರಾಜ್ಯ ಹೆದ್ದಾರಿ ಸಂಪೂರ್ಣ , ಕೆಲವು ಶಾಲೆಯ ಎದುರುಗಡೆ ಮುಳುಗಡೆಯಾಗಿದೆ ಯಾವುದೇ ವಾಹನ ಸಂಚಾರ ಇಲ್ಲದೆ ಸ್ಥಗಿತಗೊಂಡಿದೆ. ಹಲವಾರು ಮನೆಗಳು ರಸ್ತೆ ಸಂಪರ್ಕವನ್ನೇ
ತಮ್ಮ ಸಮಸ್ಯೆಗಳನ್ನು ಬಗೆಹರಿಸದಿರುವ ಉಡುಪಿಯ ಸ್ವಿಗ್ಗಿ ಮೆನೇಜರ್ ವಿರುದ್ದ ಸ್ವಿಗ್ಗಿ ಬಾಯ್ಸ್ ಸಿಡಿದೆದ್ದಿದ್ದಾರೆ .ಉಡುಪಿ ಮಣಿಪಾಲದಲ್ಲಿ ಡೆಲಿವೆರಿ ಮಾಡುತ್ತಿದ್ದ ನೂರಾರು ಡೆಲಿವೆರಿ ಬಾಯ್ಸ್ ಡೆಲಿವೆರಿ ಸ್ಥಗಿತಗೊಳಿಸುವುದರ ಮೂಲಕ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೂರು ವರುಷಗಳಿಂದ ಡೆಲಿವೆರಿ ಬಾಯ್ಸ್ ಗಳು ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಒಬ್ಬ ಅಧಿಕಾರಿಯಿಲ್ಲ.ಉಡುಪಿಗೊಂದು ಕಚೇರಿಯಿಲ್ಲ .ಮೆನೇಜರ್
ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ. ಇಂದು ಬೆಳಗ್ಗೆ ಐದು ಮಂದಿ ಮೀನುಗಾರರು, ನಾಡದೋಣಿಯಲ್ಲಿ ಕಾಪುವಿನಿಂದ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಲ್ಲಿ ದೋಣಿಯ ಇಂಜಿನ್ ತಾಂತ್ರಿಕ ದೋಷ ಉಂಟಾಗಿ, ಕಾಪು ಲೈಟ್ ಹೌಸ್ ತಲುಪುತ್ತಿದ್ದಂತೆ, ಬಂಡೆಗೆ ಬಡಿದಿದೆ. ಈ ವೇಳೆ ದೋಣಿ ಮಗುಚಿ
ಪಡುಬಿದ್ರಿ ಗ್ರಾಮದ ಪಾದೆಬೆಟ್ಟುವಿನಲ್ಲಿ ಬಹಳಷ್ಟು ವರ್ಷಗಳಿಂದ ಅನಧಿಕೃತವಾಗಿ ದಲಿತ ಕಾಲೊನಿಯಲ್ಲಿ ಸುತ್ತಲೂ ವಾಸದ ಮನೆಗಳಿರುವ ಪ್ರದೇಶದಲ್ಲಿ ಗ್ಯಾಸ್ ಗೋಡಾನ್ ಕಾರ್ಯಚರಿಸುತ್ತಿದ್ದರೂ ಈ ಬಗ್ಗೆ ಗ್ರಾ.ಪಂ. ಸಹಿತ ಸಂಬಂಧಿಸಿದ ಇಲಾಖಾಧಿಕಾರಿಗಳು ತೆರವುಗೊಳಿಸಲು ನಿರ್ಲಕ್ಷ್ಯ ಧೋರಣೆ ತಾಳಿದು, ಅನಿವಾರ್ಯ ಸ್ಥಿತಿ ಒದಗಿ ಬಂದರೆ ನಾವೆಲ್ಲರೂ ಒಂದಾಗಿ ಅಪಾಯಕಾರಿ ಗೋಡನ್ ದ್ವಂಸಗೊಳಿಸುವುದಾಗಿ ದಲಿತ ಮುಖಂಡ ಸುಂದರ್ ಮಾಸ್ತರ್ ಎಚ್ಚರಿಸಿದ್ದಾರೆ. ಗೋಡಾನ್ ಪ್ರದೇಶದಿಂದ
ಉಡುಪಿ : ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಜುಲೈ 22 ರಿಂದ 31 ರವರೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ಬೆಳ್ಳಿಯ ಆಭರಣಗಳು ಮತ್ತು ಇತರೆ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ. ಇದರ ಅನಾವರಣ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಶ್ರೀಮತಿ ನಮಿತಾ ಸತೀಶ್ಚಂದ್ರ,ಕುಮಾರಿ ವರ್ಷ ಶೆಟ್ಟಿ ಹಾಗೂ
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಂಡ ಬಿದ್ದ ಪರಿಣಾಮ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇದೆ. ಇಂದು ಹೊಂಡ ತಪ್ಪಿಸಲು ಹೋಗಿ ಕಾರೊಂದು ಡಿವೈಡರ್ ಏರಿ ನಿಂತ ಘಟನೆ ಕಾಪುವಿನಲ್ಲಿ ನಡೆದಿದೆ. ಕಾರೊಂದು ರಸ್ತೆಯ ಹೊಂಡಕ್ಕೆ ಬಿದ್ದು, ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಕಾರು ಚಾಲಕಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲಿದ್ದ ಹೊಂಡದಲ್ಲಿ ನೀರು ತುಂಬಿ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ.
ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮಟ್ಟು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ. ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿ ಗೆ ಹಿಂತಿರುಗಿ ಬರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಮೃತರು ತಾಯಿಯನ್ನು ಅಗಲಿದ್ದಾರೆ






















