ಕುಂದಾಪುರ: ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್ ನ ಟಯರ್ ಸ್ಪೋಟಗೊಂಡ ಪರಿಣಾಮ ಆಂಬುಲೆನ್ಸ್ ರಸ್ತೆ ವಿಭಾಜಕವೇರಿ ಆವರಣಗೋಡೆಗೆ ಢಿಕ್ಕಿ ಹೊಡೆದ ಘಟನೆ ಬ್ರಹ್ಮಾವರ ತಾಲೂಕಿನ ಮಾಬುಕಳ ಸೇತುವೆಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಉತ್ತರಕನ್ನಡ ಮೂಲದ ಅನಾರೋಗ್ಯಪೀಡಿತ ಮಗುವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ
ನನಗೆ ರಾಜಕೀಯದಲ್ಲಿ ಪುನರ್ಜನ್ಮ ನೀಡಿದ ಮಹಾನ್ ನಾಯಕ ಅಗಲಿದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸಂತಾಪ ಸೂಚಿಸಿದ್ದಾರೆ. ಉಡುಪಿ, ದ.ಕ ಜಿಲ್ಲೆಗೆ ಆಸ್ಕರ್ ಫೆರ್ನಾಂಡಿಸ್ ಅವರ ಕೊಡುಗೆ ಅಪಾರ. ನಾನು ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದರು. ಜಿಲ್ಲೆಯಲ್ಲಿ ಸಾಕಷ್ಟು ನಾಯಕರನ್ನು ಹುಟ್ಟುಹಾಕುವ ಕೆಲಸ ಮಾಡಿದ್ದಾರೆ. ಅಜಾತಶತ್ರು ಆಸ್ಕರಣ್ಣನ ಅಗಲುವಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ
ಹಿರಿಯ ಕಾಂಗ್ರೆಸ್ ಮುಖಂಡ ಅಸ್ಕರ್ ಫೆರ್ನಾಂಡೀಸ್ ರವರಿಗೆ ಉಡುಪಿಯ. ಶೋಕಾ ಮಾತಾ ಚರ್ಚ್ ನಲ್ಲಿ ಬಲಿ ಪೂಜೆ ಹಾಗೂ ಶ್ರದ್ದಾಂಜಲಿಯನ್ನು ಸಲ್ಲಿಸಲಾಯಿತು. ಅಗಲಿದ ಅಸ್ಕರ್ ಫೆರ್ನಾಂಡೀಸ್‌ರ ಮೃತ ದೇಹವನ್ನು ಸಕಲ ಗೌರವಗಳೊಂದಿಗೆ ಉಡುಪಿಗೆ ಚರ್ಚ್‌ಗೆ ವಿಶೇಷ ವಾಹನದಲ್ಲಿ ತರಲಾಗಿತ್ತು. ಈ ಸಂಧರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್, ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ, ಶಾಸಕ ಯುಟಿ ಖಾದರ್ ಐವನ್ ಡಿಸೋಜಾ, ಜೆ ಅರ್
ಉಡುಪಿ: ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಮಂಗಳೂರಿನ ಎನಾಪೋಯ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರ ಇಂದು ಬೆಳಗ್ಗೆ 9:15 ಕ್ಕೆ ಉಡುಪಿ ಶೋಕ ಮಾತಾ ದೇವಾಲಯಕ್ಕೆ ಆಗಮಿಸಲಿದೆ ಎಂದು ಉಡುಪಿ ಧರ್ಮ ಪ್ರಾಂತ್ಯದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಕುಟುಂಬದ ಇಚ್ಛೆಯಂತೆ ಬೆಳಿಗ್ಗೆ 9:30 ಕ್ಕೆ ಪ್ರಾರ್ಥನಾ ವಿಧಿಗಳನ್ನು
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿನ್ನೆ ಸೋಮವಾರ ಮಧ್ಯಾಹ್ನ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಶವಾಗಾರದಿಂದ ಉಡುಪಿಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ. ಪಾರ್ಥಿವ ಶರೀರಕ್ಕೆ ಭಾರತದ ಧ್ವಜ ಹೊದಿಸಿ ಮಂಗಳೂರು ಪೊಲೀಸರು ಗೌರವ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಯು.ಟಿ.ಖಾದರ್, ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಆಸ್ಕರ್ ಪತ್ನಿ ಬ್ಲಾಸಂ,
ಉಡುಪಿ ಜಿಲ್ಲೆಯ ಕಾರ್ಕಾಳ ತಾಲೂಕಿನ ಕಕ್ಕುಂದೂರು ಗ್ರಾಮದಲ್ಲಿರುವ ಪ್ರಗತಿ ಕ್ರೈಸ್ತ ಪ್ರಾರ್ಥನಾಲಯದಲ್ಲಿ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ, ಬಿಜೆಪಿ ಬೆಂಬಲಿತ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಾರ್ಥನೆಯ ಸಮಯದಲ್ಲಿ ಸುಮಾರು 25 ಜನರು ಬಂದು ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು
ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಸೆಂಟರ್ ಫಾರ್ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್, ಮತ್ತು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವಿಧಿ ವಿಜ್ಞಾನ ವಿಭಾಗ, ಮಾಹೆ ಮಣಿಪಾಲದ ಸಹಯೋಗದೊಂದಿಗೆ, ಮಣಿಪಾಲದ ಡಾ ಟಿಎಂಎ ಪೈ ಹಾಲ್ ನಲ್ಲಿ “ಸಂರಕ್ಷಕರ ವಿರುದ್ಧ ಹಿಂಸೆ ” ಕುರಿತು ಮುಂದುವರಿದ ವೈದ್ಯಕೀಯ ಶಿಕ್ಷಣವನ್ನು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂರಕ್ಷಕರ ವಿರುದ್ಧ ಹಿಂಸೆ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಹಿಂಸಾಚಾರದ
ಕುಂದಾಪುರ : ರಾಷ್ಟ್ರೀಯ ಹೆದ್ದಾರಿಯಿಂದ ನಗರ ಪರಿಮಿತಿಯೊಳಗೆ ಕುಂದಾಪುರ ಪ್ರವೇಶಕ್ಕೆ ಅನುಮತಿ ಕೊಡಿ ಎಂದು ಸಂಸದರು, ಶಾಸಕರು ಬೇಡಿಕೆ ಇಟ್ಟಿದ್ದಾರೆ. ನಾವೇನು ನಿಮ್ಮ ಬಳಿ ಭಿಕ್ಷೆ ಕೇಳುತ್ತಿಲ್ಲ. ಪ್ರತೀ ಬಾರಿ ಸಭೆಗೆ ಒಬ್ಬೊಬ್ಬ ಅಧಿಕಾರಿಗಳು ಬಂದು ಸುಳ್ಳು ಭರವಸೆಗಳನ್ನು ಕೊಟ್ಟು ಹೋಗುತ್ತೀರಿ. ನಾವೇನು ನಿಮಗೆ ಆಟದ ಗೊಂಬೆಗಳ ಹಾಗೆ ಕಾಣುತ್ತಿದ್ದೇವಾ. ನಿಮ್ಮಲ್ಲಿ ಸಾಧ್ಯವಿಲ್ಲದಿದ್ದರೆ ಹೇಳಿಬಿಡಿ. ನಮ್ಮ ಊರಿನ ಬಗ್ಗೆ ನಮಗೆ ಕಾಳಜಿ ಇದೆ. ನೀವು ಕೇಸು ಹಾಕಿ
ಉಡುಪಿ : ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ, ಇದರ ದೈಹಿಕ ಶಿಕ್ಷಣ ವಿಭಾಗ, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ (ರಿ), ಲಯನ್ಸ್ ಮತ್ತು ಲಿಯೋ ಕ್ಲಬ್ ಮಲ್ಪೆ, ಉಡುಪಿ ಜಿಲ್ಲಾ ಅಮೆಚೂರ್ ಅತ್ಲೆಟಿಕ್ ಅಸೋಸಿಯೇಶನ್ ಇವರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಸಂಘಟಿಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀ ಹರಿಯಪ್ಪ ಕೋಟ್ಯಾನ್
ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ.ಶ್ರೀ ಕೃಷ್ಣ ಮಠದಲ್ಲಿ ಕೊವಿಡ್ ನಿಯಮಾವಳಿ ಅನುಸರಿಸಿ ಸರಳವಾಗಿ ಜನ್ಮಾಷ್ಟಮಿ ಅಚರಿಸಲಾಯಿತು. ಪರ್ಯಾಯ ಶ್ರೀಪಾದರಿಂದ ಶ್ರೀ ಕೃಷ್ಣ ದೇವರನ್ನು ವಿಶೇಷವಾಗಿ ಅಲಂಕರಿಸಿ, ತುಳಸಿ ಅರ್ಚನೆಯನ್ನು ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪರ್ಯಾಯ ಶ್ರೀ ಈಶ ಪ್ರಿಯರು, ಅದಮಾರು ಹಿರಿಯ ಶ್ರೀ ಗಳಾದ ವಿಶ್ವ ಪ್ರಿಯ ಶ್ರೀಪಾದರು, ಕೃಷ್ಣಪುರ ಮಠದ ವಿದ್ಯಾ ಸಾಗರ ಶ್ರೀಪಾದರು, ಕಾಣಿಯೂರು ಮಠದ ವಿಶ್ವ ವಲ್ಲಭ ಶ್ರೀ