ಮಂಗಳೂರು ಮತ್ತು ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಗಿರಿಜಾ ಹೆಲ್ತ್‍ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ವಿಶ್ವ ಔಷಧ ತಜ್ಞರ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿಯ ರಸಾಯನಶಾಸ್ತ್ರಜ್ಞ ಮತ್ತು ಔಷಧ ತಜ್ಞರ ಸಂಘದ ಅಧ್ಯಕ್ಷರಾದ ವಿ.ಜಿ. ಶೆಟ್ಟಿ ಅವರು 2012ರಿಂದ ವಿಶ್ವ ಔಷಧ ತಜ್ಞರ ದಿನವನ್ನಾಗಿ ಆಚರಿಸಲಾಗುತ್ತಿದೆ. ಉಡುಪಿಯ ಗಿರಿಜಾ ಹೆಲ್ತ್ ಕೇರ್
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಸ್ಕೀಂಮ್ ನೌಕರರ ಅಖಿಲ ಭಾರತ ಮುಷ್ಕರ ಭಾಗವಾಗಿ ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾಧಿಕಾರಿ ಕಛೇರಿ ಮಣಿಪಾಲದಲ್ಲಿ ಪ್ರತಿಭಟನೆ ನಡೆಸಿದರು. ಅಕ್ಷರ ದಾಸೋಹ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನ ರಾಜ್ಯ ಹಾಗೂ ಕೇಂದ್ರ ಸರಕಾರ ಈಡೇರಿಸುವಂತೆ ಪ್ರಧಾನ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಯವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ರಾದ
ಉಡುಪಿ ಮಂಗಳೂರು ಗಡಿಭಾಗ ಹೆಜಮಾಡಿ ಗ್ರಾಮಸಭೆಯಲ್ಲಿ ಶಾಂಭವಿ ಹೊಳೆಯಲ್ಲಿ ರಾಜರೋಷವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಮಟ್ಕಾದಂಧೆಯ ವಿರುದ್ಧ ಜನ ಆಕ್ರೋಶ ವ್ಯಕ್ತ ಪಡಿಸಿದ್ದು, ಸಭೆಯಲ್ಲಿದ್ದ ಅಧಿಕಾರಿಗಳಲ್ಲಿ ತಕ್ಷಣವೇ ಇದಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಮಾಜಿ ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ವಾಮನ್ ಕೋಟ್ಯಾನ್, ಅವಳಿ ಜಿಲ್ಲೆಗಳ ಗಡಿಭಾಗ ಇದಾಗಿದ್ದು ದ.ಕ. ಜಿಲ್ಲಾ ಪರವಾನಿಗೆ ಪಡೆದಿರುವ ಮಂದಿ ಉಡುಪಿ
ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಗೋವಿಗಾಗಿ ಮೇವು ಅಭಿಯಾನದ ಭಾಗವಾಗಿ ಇಂದು ಕೋಟತಟ್ಟು ಗ್ರಾಮಪಂಚಾಯತ್ ನ 5ನೇ ವಾರ್ಡ್ ನ ಸದಸ್ಯರಾದ ವಿದ್ಯಾ ಸಾಲ್ಯಾನ್, ರಾಬರ್ಟ್ ರೋಡ್ರಿಗಸ್ ,ಸಹೀರಾ ಬಾನು ಇವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತದ ಪರಿಕಲ್ಪನೆಯಡಿ ರಸ್ತೆಯ ಇಕ್ಕೆಡೆಗಳಲ್ಲಿ ಇರುವ ಹಸಿ ಹುಲ್ಲನ್ನು ಕಟಾವು ಮಾಡಿ ನೀಲಾವರ ಗೋಶಾಲೆಗೆ ನೀಡಲಾಯಿತು. ಈ ಸಂದರ್ಭದಲ್ಲಿ
ಕುಂದಾಪುರ: ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್ ನ ಟಯರ್ ಸ್ಪೋಟಗೊಂಡ ಪರಿಣಾಮ ಆಂಬುಲೆನ್ಸ್ ರಸ್ತೆ ವಿಭಾಜಕವೇರಿ ಆವರಣಗೋಡೆಗೆ ಢಿಕ್ಕಿ ಹೊಡೆದ ಘಟನೆ ಬ್ರಹ್ಮಾವರ ತಾಲೂಕಿನ ಮಾಬುಕಳ ಸೇತುವೆಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಉತ್ತರಕನ್ನಡ ಮೂಲದ ಅನಾರೋಗ್ಯಪೀಡಿತ ಮಗುವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದ ಆಂಬುಲೆನ್ಸ್‌ನ ಟಯರ್ ಏಕಾಏಕಿ ಸ್ಪೋಟಗೊಂಡಿದ್ದು ಚಾಲಕನ ನಿಯಂತ್ರಣ ತಪ್ಪಿ
ನನಗೆ ರಾಜಕೀಯದಲ್ಲಿ ಪುನರ್ಜನ್ಮ ನೀಡಿದ ಮಹಾನ್ ನಾಯಕ ಅಗಲಿದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸಂತಾಪ ಸೂಚಿಸಿದ್ದಾರೆ. ಉಡುಪಿ, ದ.ಕ ಜಿಲ್ಲೆಗೆ ಆಸ್ಕರ್ ಫೆರ್ನಾಂಡಿಸ್ ಅವರ ಕೊಡುಗೆ ಅಪಾರ. ನಾನು ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದರು. ಜಿಲ್ಲೆಯಲ್ಲಿ ಸಾಕಷ್ಟು ನಾಯಕರನ್ನು ಹುಟ್ಟುಹಾಕುವ ಕೆಲಸ ಮಾಡಿದ್ದಾರೆ. ಅಜಾತಶತ್ರು ಆಸ್ಕರಣ್ಣನ ಅಗಲುವಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ
ಹಿರಿಯ ಕಾಂಗ್ರೆಸ್ ಮುಖಂಡ ಅಸ್ಕರ್ ಫೆರ್ನಾಂಡೀಸ್ ರವರಿಗೆ ಉಡುಪಿಯ. ಶೋಕಾ ಮಾತಾ ಚರ್ಚ್ ನಲ್ಲಿ ಬಲಿ ಪೂಜೆ ಹಾಗೂ ಶ್ರದ್ದಾಂಜಲಿಯನ್ನು ಸಲ್ಲಿಸಲಾಯಿತು. ಅಗಲಿದ ಅಸ್ಕರ್ ಫೆರ್ನಾಂಡೀಸ್‌ರ ಮೃತ ದೇಹವನ್ನು ಸಕಲ ಗೌರವಗಳೊಂದಿಗೆ ಉಡುಪಿಗೆ ಚರ್ಚ್‌ಗೆ ವಿಶೇಷ ವಾಹನದಲ್ಲಿ ತರಲಾಗಿತ್ತು. ಈ ಸಂಧರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್, ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ, ಶಾಸಕ ಯುಟಿ ಖಾದರ್ ಐವನ್ ಡಿಸೋಜಾ, ಜೆ ಅರ್
ಉಡುಪಿ: ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಮಂಗಳೂರಿನ ಎನಾಪೋಯ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರ ಇಂದು ಬೆಳಗ್ಗೆ 9:15 ಕ್ಕೆ ಉಡುಪಿ ಶೋಕ ಮಾತಾ ದೇವಾಲಯಕ್ಕೆ ಆಗಮಿಸಲಿದೆ ಎಂದು ಉಡುಪಿ ಧರ್ಮ ಪ್ರಾಂತ್ಯದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಕುಟುಂಬದ ಇಚ್ಛೆಯಂತೆ ಬೆಳಿಗ್ಗೆ 9:30 ಕ್ಕೆ ಪ್ರಾರ್ಥನಾ ವಿಧಿಗಳನ್ನು
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿನ್ನೆ ಸೋಮವಾರ ಮಧ್ಯಾಹ್ನ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಶವಾಗಾರದಿಂದ ಉಡುಪಿಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ. ಪಾರ್ಥಿವ ಶರೀರಕ್ಕೆ ಭಾರತದ ಧ್ವಜ ಹೊದಿಸಿ ಮಂಗಳೂರು ಪೊಲೀಸರು ಗೌರವ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಯು.ಟಿ.ಖಾದರ್, ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಆಸ್ಕರ್ ಪತ್ನಿ ಬ್ಲಾಸಂ,
ಉಡುಪಿ ಜಿಲ್ಲೆಯ ಕಾರ್ಕಾಳ ತಾಲೂಕಿನ ಕಕ್ಕುಂದೂರು ಗ್ರಾಮದಲ್ಲಿರುವ ಪ್ರಗತಿ ಕ್ರೈಸ್ತ ಪ್ರಾರ್ಥನಾಲಯದಲ್ಲಿ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ, ಬಿಜೆಪಿ ಬೆಂಬಲಿತ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಾರ್ಥನೆಯ ಸಮಯದಲ್ಲಿ ಸುಮಾರು 25 ಜನರು ಬಂದು ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು

















