ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಮೆಘಾ ಲೋಕ ಅದಾಲತ್ ಕಾರ್ಯಕ್ರಮವನ್ನು ಆಗಸ್ಟ್ 14ರಂದು ಉಡುಪಿಯ ಎಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ಸೀನಿಯರ್ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ
ರಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಯಾವತ್ತೂ ಯಾರಿಗೂ ನನ್ನನ್ನು ಅಭ್ಯರ್ಥಿ ಮಾಡಿ ಎಂದು ಹೇಳಿಲ್ಲ. ಈಗ ಅದನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಜನರ ಸಮಸ್ಯೆ ಆಲಿಸಿ ನ್ಯಾಯ ಒದಗಿಸೋಣ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೊರೋನಾ ಕಾಲದಲ್ಲಿ ಜೀವ ಇದ್ದರೆ ಜೀವನ ಎಂದು ಹೇಳಿದರು. ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ವಿಚಾರದ ಬಗ್ಗೆ
ನನಗೆ ಕುಮಾರಸ್ವಾಮಿ ಸುದ್ದಿನೂ ಬೇಡ… ಸುಮಲತಾ ಅವರ ಸುದ್ದಿನೂ ಬೇಡ. ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ವಿಚಾರದಲ್ಲಿ ಮುಖ್ಯಮಂತ್ರಿಗಳು ಸ್ಟಾಲಿನ್‌ಗೆ ಪತ್ರ ಬರೆದಿರುವುದು ಸರಿಯಲ್ಲ. ಮೊದಲು ಟೆಂಡರ್ ಕರೆದು ಮೇಕೆದಾಟು ಡ್ಯಾಮ್ ಕಟ್ಟುವ ಕೆಲಸ ಮಾಡಿ. ಡ್ಯಾಮ್ ವಿಚಾರದಲ್ಲಿ ಏರುಪೇರು ಇದ್ದರೆ
ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಕ್ಲಬ್ಬಿನ ಒಳಾಂಗಣದಲ್ಲಿ ಆಯೋಜಿಸಿದ ಈ ಸಂತಾಪ ಸಭೆಯಲ್ಲಿ ಪ್ರೊಫೆಸರ್ ಕೆ ನಾರಾಯಣನ್, ಜಿ ಬಾಲಕೃಷ್ಣ ಶೆಟ್ಟಿ , ಬಿರ್ತಿ ರಾಜೇಶ್ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿಯವರು ಅಗಲಿದ ಮಹನೀಯರನ್ನು ಹಾಗೂ ಅವರ ಸೇವೆಯನ್ನು
ಉಡುಪಿ ; ಉಡುಪಿ ಜಿಲ್ಲಾ ನಾಗರಿಕ ಸಮಿತಿಯವರು, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅನಾಥ ಶವಗಳ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ದಫನ ಭೂಮಿಯಲ್ಲಿ ಕಾನೂನಿನ ಪ್ರಕ್ರಿಯೆಗಳು ನಡೆದ ಬಳಿಕ, ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ಅವರ, ಸಮಕ್ಷಮದಲ್ಲಿ ನಡೆಸಿದರು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ, ಅಪರಿಚಿತ ಮಹಿಳೆಯ ಶವ, ಮತ್ತು ನಗರದ ಸಾರ್ವಜನಿಕ ಸ್ಥಳದಲ್ಲಿ ಮೃತಪಟ್ಟಿರುವ ಅಪರಿಚಿತ
ಕಾಪು: ಉಡುಪಿ ಜಿಲ್ಲೆಯ ಹಾವಂಜೆ ಗ್ರಾಮದ ಕಿಲಿಂಜೆ ವಾರ್ಡ್‌ನಲ್ಲಿ ಕೊರೊನ ಬಂದು ಸೀಲ್ ಡೌನ್ ಅದ ಕುಟುಂಬಗಳಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ರೇಷನ್ ಕಿಟ್ ವಿತರಿಸಲಾಯಿತು. ಜಿಲ್ಲಾದ್ಯಂತ ಈ ವರೆಗೆ 54೦೦ ಕಿಟ್‌ಗಳನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಮಾತನಾಡಿ, ಈ ಸಮಯದಲ್ಲಿ ಕೊರೊನ ಪೀಡಿತರಿಗೆ ಫುಡ್ ಕಿಟ್ ನೀಡಿದ ಮಲಬಾರ್ ಗೋಲ್ಡ್ ಸಂಸ್ಥೆಯ ಸಾಮಾಜಿಕ ಕಳಕಳಿ ಹಾಗೂ ಬಡವರಿಗೆ ನೀಡುವ ಸೌಲಭ್ಯಗಳಿಗೆ
ಫಲವತ್ತಾದ ಕೃಷಿ ಭೂಮಿಗಳನ್ನು ಹಡಿಲು ಬಿಡುವುದು ರಾಷ್ಟ್ರಕ್ಕೆ ಮಾಡುವ ದ್ರೋಹ. ಭೂಮಿ ತಾಯಿಯನ್ನು ಹಸನಾಗಿಸಿದರೆ ಆ ತಾಯಿ ನಮಗೆ ಚಿನ್ನದಂತಹ ಬೆಳೆಯನ್ನು ನೀಡುತ್ತಾಳೆ. ಹಡಿಲು ಭೂಮಿಯನ್ನು ಕೃಷಿ ಮಾಡುವಂತಹ ಈ ಪುಣ್ಯದ ಕಾರ್ಯವನ್ನು ಉಡುಪಿಯಲ್ಲಿ ಹಮ್ಮಿಕೊಂಡು ರಾಷ್ಟ್ರಕ್ಕೆ ಮಾದರಿಯಾಗಿದ್ದೀರಿ ಎಂದು ಕೃಷಿ ಸಚಿವರಾದ ಶ್ರೀ ಬಿ. ಸಿ. ಪಾಟೀಲ್ ಹೇಳಿದರು. ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಡೆಕಾರ್ ಗ್ರಾಮ ಪಂಚಾಯತ್
ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರಕಾರದ ಲಾಕ್ ಡೌನ್ ಘೋಷಿಸಿದ್ದರಿಂದ ಜನ ಸಾಮಾನ್ಯರು ಕೆಲಸ ಕಾರ್ಯಗಳಿಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಗ್ಯಾಸ್, ಪೆಟ್ರೋಲ್, ಡಿಸೇಲ್, ವಿದ್ಯುತ್ ಹಾಗೂ ನಿತ್ಯ ಉಪಯೋಗಿ ವಸ್ತುಗಳ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು ಜೆ.ಡಿ.ಎಸ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಯವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ನೀಡಲಾಯಿತು. ಈ
ಅಡುಗೆಗೆ ಬಳಸುವ ಸಿಲಿಂಡರ್ ಸ್ಪೋಟಗೊಂಡ ಘಟನೆ ಮಣಿಪಾಲದ ಸೋನಿಯಾ ಕ್ಲಿನಿಕ್ ಬಳಿ ನಡೆದಿದೆ. ಮನೆಗೆ ಬಳಸುವ ಸಿಲಿಂಡರ್‌ನಲ್ಲಿ ಅಡುಗೆ ಅನಿಲ ಸೋರುತ್ತಿರುವುದು ಮನೆಯವರ ಗಮನಕ್ಕೆ ಬಂದಿದ್ದು, ಅದನ್ನು ತಡೆಯುವ ಪ್ರಯತ್ನ ಮಾಡಿದರೂ ಸಫಲವಾಗದೇ ಸಿಲಿಂಡರ್ ಸ್ಪೋಟಗೊಂಡಿದೆ. ಅದೃಷ್ಟವಶತ್ ಮನೆಯವರು ಹೊರ ಓಡಿದ್ದು ಅಡುಗೆ ಮನೆಯ ಮೇಲ್ಚಾವಣೆಗಳು ಸ್ಪೋಟದ ರಭಸಕ್ಕೆ ಹಾರಿ ಹೋಗಿವೆ. ಅಡುಗೆ ಕೋಣೆಯೊಳಗಡೆಯೂ ಹಾನಿ ಉಂಟಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ತಂಡ ತಕ್ಷಣ ತಲುಪಿ
ಕೊವಿಡ್ ಲಾಕ್ ಡೌನ್ ನಿಂದ ಖಾಸಗಿ ಬಸ್ ಉದ್ಯಮ ಸಂಕಷ್ಟದಲ್ಲಿದೆ.ಸರಕಾರ ಡಿಸೇಲ್ ದರ ಏರಿಕೆಯನುಸಾರ ದರ ಪರಿಷ್ಕರಿಸಿ ಒಂದಷ್ಟು ತೆರಿಗೆ ವಿನಾಯಿತಿಗಳನ್ನು ಮಾಡಿದ್ರೆ ಖಾಸಗಿ ಬಸ್ಸುಗಳು ಸುಗಮ ಸಂಚಾರ ಮಾಡಲು ಅನುಕೂಲವಾಗುವುದು ಎಂದು ಉಡುಪಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಗ್ರಹಿಸಿದ್ದಾರೆ. ಕಳೆದ ವರುಷ ಕೆ ಎಸ್ ಅರ್ ಟಿಸಿ ದರ ಕಡಿತ ಹಾಗೂ ವಿದ್ಯಾರ್ಥಿಗಳಿಗೆ ವಿನಾಯಿತಿ ಮಾಡಿರುವ ಕಾರಣಗಳನ್ನು ನೀಡಿದ ಹಿನ್ನಲೆಯಲ್ಲಿ, ಸರಕಾರ ಸುಮಾರು


















