Home Posts tagged #ujire (Page 2)

ಭಾರತದ ದೇಶೀ ಜ್ಞಾನದ ದಾಖಲೀಕರಣ ಅಗತ್ಯ: ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ

ಉಜಿರೆ, ಮಾ.31: ಭಾರತದ ದೇಶೀಯ ಜ್ಞಾನ- ಸಾಂಪ್ರದಾಯಿಕ ಜ್ಞಾನದ ದಾಖಲೀಕರಣವಾಗಿ, ಅದು ಒಪ್ಪಿತಗೊಂಡು ಸದುದ್ದೇಶಕ್ಕೆ ಸರಿಯಾದ ರೀತಿಯಲ್ಲಿ ಬಳಸಲ್ಪಡಬೇಕಿದೆ. ದೇಶೀಯ ತಾಂತ್ರಿಕ ಜ್ಞಾನ ಕೂಡ ದಾಖಲೀಕರಣಗೊಂಡು ದೇಶದ ಉನ್ನತ ಶಿಕ್ಷಣದ ಪಠ್ಯಕ್ರಮದಲ್ಲಿ ಸಂಯೋಜಿಸಲ್ಪಡುವ ಅಗತ್ಯವಿದೆ. ಇದು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020ರ ಮೂಲಕ ಸಾಧಿತವಾಗುತ್ತಿದೆ ಎಂದು

ಉಜಿರೆ ಎಸ್.ಡಿ.ಎಂ.ಗೆ ಬೆಸ್ಟ್ ಜರ್ನಲಿಸಂ ಡಿಪಾರ್ಟ್‍ಮೆಂಟ್
ಅವಾರ್ಡ್

ಉಜಿರೆ, : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗವನ್ನು ಬೆಂಗಳೂರಿನ ದಿ ನ್ಯೂ ಇಂಡಿಯನ್ ಟೈಮ್ಸ್ಸಂ ಸ್ಥೆಯು ಕರ್ನಾಟಕದ ಅತ್ಯುತ್ತಮ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಎಂದು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾರ್ಚ್ 6ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವರ್ಣರಂಜಿತ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಜಿರೆಯ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ

ಎಸ್ ಡಿ ಎಂ ಕಾಲೇಜಿನ ಎನ್ ಸಿ ಸಿ ನೌಕಾ ವಿಭಾಗದ ಆರು ಕೆಡೆಟ್ ಗಳಿಗೆ ಬಂಗಾರದ ಪದಕ 

ದೆಹಲಿಯಲ್ಲಿ ನಡೆದ 2023 ರ ಗಣರಾಜ್ಯೋತ್ಸವ ಪರೇಡ್ ನಲ್ಲಿ  ಉಜಿರೆ ಎಸ್ ಡಿ ಎಮ್ ಕಾಲೇಜಿನ ನೌಕಾ ವಿಭಾಗದ 6 ಕೆಡೆಟ್ ಗಳು ಶಿಪ್ ಮೊಡೆಲಿಂಗ್ ವಿಭಾಗದಲ್ಲಿ ಬಂಗಾರದ ಪದಕವನ್ನು ಗಳಿಸಿ ಸಂಸ್ಥೆಗೆ ಗೌರವವನ್ನು ತಂದಿದ್ದಾರೆ. ಪಿಓ ಕೆಡೆಟ್  ಶ್ರೀರಾಮ ಮರಾಠೆ  ಮತ್ತು ಪಿಓ ಕೆಡೆಟ್ ಅನನ್ಯಾ ಕೆ.ಪಿ ಇವರು ಪವರ್ ಮಾಡೆಲ್ ವಿಭಾಗದಲ್ಲಿ ಬಂಗಾರದ ಪದಕವನ್ನು ಸಂಪಾದಿಸಿದ್ದಾರೆ. ಇಡೀ ದೇಶದ 17 ಡೈರೆಕ್ಟರೇಟ್ ನವರು ಸಿದ್ಧಪಡಿಸಿ ಪರೀಕ್ಷೆಗೊಳಪಡಿಸಿದ ಈ ಸ್ಪರ್ಧೆಗಳಲ್ಲಿ ಇವರು

ಕನ್ನಡ ಸಾಹಿತ್ಯ ಸಮ್ಮೇಳನ : ಕನ್ನಡ ತಾಯಿಗೆ ಸ್ವರಾಭಿಷೇಕಗೈದ ‘ಸುಮಧುರ ಗೀತೆಗಳ ಗಾಯನ’

ಉಜಿರೆ, ಫೆ 6: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ರವಿವಾರ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಂತಿಮ ಘಟ್ಟದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಸುಮಧುರ ಗೀತೆಗಳ ಗಾಯನದ ಮೂಲಕ ಸ್ವರಾಭಿಷೇಕವೇ ನಡೆಯಿತು. ಆ ಮೂಲಕ ಮೂರು ದಿನಗಳ ಅಕ್ಷರ ಜಾತ್ರೆ ಪೂರ್ಣ ಮುಕ್ತಾಯ ಕಂಡಿತು. “ಹುಟ್ಟಿದರೆ ಕನ್ನಡ ನಾಡಲ್ಲೇ ಹುಟ್ಟಬೇಕು..” “ಕರುನಾಡ ತಾಯಿ ಸದಾ ಚಿನ್ಮಯಿ..” ಮುಂತಾದ ಗೀತೆಗಳ ಮೂಲಕ ಸ

ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ನಡೆಯಬೇಕು: ಡಾ. ಜಗದೀಶ್ ಬಾಳ

ಉಜಿರೆ, : ಮುಂದಿನ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿದ ಅಭಿವೃದ್ಧಿ ಮಾತ್ರ ಸುಸ್ಥಿರ ಅಭಿವೃದ್ಧಿ ಎಂದು ಪರಿಗಣಿಸಲ್ಪಡುತ್ತದೆ. ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ನಡೆಯಬೇಕು ಎಂದು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ್ ಬಾಳ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ

ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನ

ಉಜಿರೆ, ಫೆ.5: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರದ ಕಾರ್ಯಕ್ರಮಗಳು ಮುಂಜಾನೆ ಉದಯರಾಗದೊಂದಿಗೆ ಪ್ರಾರಂಭಗೊಂಡವು.  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಆಕಾಶವಾಣಿ ‘ಎ’ ಗ್ರೇಡ್ ಕಲಾವಿದ ಡಿ.ಬಿ. ಪ್ರಕಾಶ ದೇವಾಡಿಗ ಅವರು ಸ್ಯಾಕ್ಸೋಫೋನ್ ವಾದನದ ಮೂಲಕ ಭಕ್ತಿಭಾವದ

ಸಮ್ಮೇಳನಕ್ಕೆ ಮೆರಗು ನೀಡಿದ ‘ಕಲಾವೈಭವ’

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿಗಳು ‘ಕಲಾವೈಭವ’ ನೃತ್ಯದ ಮೂಲಕ ಕಲಾರಾಧಕರನ್ನು ರಂಜಿಸಿದರು. ಕಲಾಕೇಂದ್ರದ ಒಟ್ಟು 200 ಮಂದಿ ವಿದ್ಯಾರ್ಥಿಗಳು ತಂಡೋಪತಂಡವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಕೇರಳ ಶೈಲಿಯ ಮೋಹಿನಿಯಾಟ್ಟಂ, ಶಿವತಾಂಡವ ನೃತ್ಯ, ಗುಜರಾತಿನ ಗರ್ಬಾ ದಾಂಡ್ಯ, ಕಥಕ್ ಹೀಗೆ ವಿವಿಧ ರೀತಿಯ

ಸಾಹಿತ್ಯ ಸಮ್ಮೇಳನದಲ್ಲಿ ಮನತಣಿಸಿದ ತಾಳಮದ್ದಳೆ

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಇದರ ವತಿಯಿಂದ ತಾಳಮದ್ದಳೆ ನಡೆಯಿತು. ಭಾಸ್ಕರ ಬಾರ್ಯ ಅವರು ನಿರ್ದೇಶಿಸಿರುವ ‘ಯಕ್ಷಭ್ರಾತೃ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು. ಇವರು ಕಳೆದ 17 ವರ್ಷಗಳಿಂದ ತಾಳಮದ್ದಳೆ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಈ ತಂಡವು ಮಹಿಳೆಯರ ಭಾಗವತಿಕೆಯಿಂದಲೇ ಪ್ರಸಿದ್ಧಿ

ಸಾಹಿತ್ಯ ಸಂಭ್ರಮದಲ್ಲಿ ರಸಮಂಜರಿ ಕಾರ್ಯಕ್ರಮ

ಉಜಿರೆ, ಫೆ: ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಗೀತಲಹರಿ’ ಸಂಗೀತ ಕಾರ್ಯಕ್ರಮವನ್ನು ಗಾಯಕಿ ಅನಸೂಯ ದೇವಸ್ಥಳಿ ಅವರು ನಡೆಸಿಕೊಟ್ಟರು. “ಮನವನ್ನು ತಣಿಸುವ ಮೋಹನಸೂತ್ರ”, “ಅವಳಿಲ್ಲಿಗೆ ಬಂದಾಗ”, “ಮಣ್ಣಿನಲಿ ಮಾಡಿರಲಿ ತನುವಿನಲಿ ನೀ ಕುಳಿತು”, “ಬಾರೋ ವಸಂತ”, “ಶೂದಷಚೈತ್ರದ ಸುಂದರಿ ನೀನು” ಹಾಡುಗಳಿಗೆ ಪ್ರೇಕ್ಷಕರು ಚಪ್ಪಾಳೆಯ ಸುರಿಮಳೆಗೈದರು. ತಬಲಾದಲ್ಲಿ ಗೌರವ್

ಸಾಹಿತ್ಯ ಸಮ್ಮೇಳನದಲ್ಲಿ ಮನಸೆಳೆದ ನೃತ್ಯೋತ್ಸವ

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಇಪ್ಪತ್ತೈದನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ದಿನ ಶುಕ್ರವಾರದಂದು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರ ತಂಡ ನೃತ್ಯ ರೂಪಕದ ಮೂಲಕ ಕಲಾ ಆರಾಧಕರನ್ನು ಮೂಕವಿಸ್ಮಿತರನ್ನಾಗಿಸಿತು. ವಿದುಷಿ ಶಾಲಿನಿ ಆತ್ಮಭೂಷಣ ನಿರ್ದೇಶನದಲ್ಲಿ ಹತ್ತೊಂಬತ್ತು ಮಂದಿ ಕಲಾವಿದರು ತಂಡ ತಂಡವಾಗಿ ‘ನೃತ್ಯೋsಹಂ’ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ಪ್ರಸ್ತುತಪಡಿಸಿದರು.   ಸರ್ವ ದೇವರ ಸಂತೃಪ್ತಿಗೆಂದು ಪುಷ್ಪಾಂಜಲಿ