Home Posts tagged #ujire (Page 3)

ಸಾಹಿತ್ಯ ಸಮ್ಮೇಳನ: ಸನ್ಮಾನ ಕಾರ್ಯಕ್ರಮ

ಉಜಿರೆ, ಫೆ.4: ಸಾಹಿತ್ಯ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿವಿಧ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಸಮ್ಮಾನಿಸುವುದರಿಂದ ಅವರ ಸಾಧನೆಗೆ ಇನ್ನಷ್ಟು ಸ್ಫೂರ್ತಿ ನೀಡಿದಂತಾಗುತ್ತದೆ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ ಹೇಳಿದರು.

ಸಾಹಿತ್ಯ ಸಮ್ಮೇಳನದಲ್ಲಿ 16ಕ್ಕೂ ಅಧಿಕ ಕನ್ನಡ ಪುಸ್ತಕಗಳ ಲೋಕಾರ್ಪಣೆ

ಉಜಿರೆ, ಫೆ.4: ಸಾಹಿತ್ಯವು ಭಾಷೆ ಮತ್ತು ಅಕ್ಷರದ ಸಮ್ಮಿಶ್ರಣ. ಪತ್ರಕರ್ತರು ಮತ್ತು ಸಾಹಿತಿಗಳು ಸಮಾಜದ ಎರಡು ಕಣ್ಣುಗಳಿದ್ದಂತೆ. ಪತ್ರಕರ್ತರ ಗುರುತಿಸುವಿಕೆ ಒಂದು ದಿನಕ್ಕೆ ಮುಗಿದರೂ ಸಾಹಿತಿಗಳ ಗುರುತಿಸುವಿಕೆ ತುಂಬಾ ದಿನ ಇರುತ್ತದೆ ಎಂದು ಅಮರಸುಳ್ಯ ಅಧ್ಯಯನ ಕೇಂದ್ರ ಸುಳ್ಯದ ನಿರ್ದೇಶಕ ಡಾ. ಬಿ. ಪ್ರಭಾಕರ ಶಿಶಿಲ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ

ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ‘ನಗೆಹಬ್ಬ’

ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ಖ್ಯಾತ ಹಾಸ್ಯ ಕಲಾವಿದ ಪಟ್ಟಾಭಿರಾಮ ಸುಳ್ಯ ಅವರು ನಡೆಸಿಕೊಟ್ಟ ನಗೆಹಬ್ಬ ಕಾರ್ಯಕ್ರಮವು ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿತು. ತಮ್ಮ ಅದ್ಭುತವಾದ ಮಿಮಿಕ್ರಿ ಕಲೆಯ ಮೂಲಕ ಹಾಸ್ಯಲೋಕಕ್ಕೆ ಕರೆದೊಯ್ದರು. ದೈನಂದಿನ ಜೀವನದಲ್ಲಿ ಕೇಳಿಬರುವ ಸೈರನ್ ಸದ್ದು, ಆ್ಯಂಬುಲೆನ್ಸ್, ವಿಮಾನ

ಸಾಹಿತ್ಯ ವೇದಿಕೆಯಲ್ಲಿ ‘ಗಮಕ’ ವೈಭವ

ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ಗಮಕ ವಾಚನ ನಡೆಯಿತು. ಮಂಗಳೂರಿನಲ್ಲಿ ಗಮಕಕ್ಕೆ ಹೆಚ್ಚು ಮನ್ನಣೆ ನೀಡಿದ ಯಜ್ಞೇಶ್‌ ಎಸ್. ಸುರತ್ಕಲ್‌ ಅವರು ಗಮಕ ವಾಚನ ನಡೆಸಿದರು. ‘ಆದಿನಾಥನ ಪೂರ್ವವೃತ್ತಾಂತ’ದಿಂದ ಪ್ರಾರಂಭಗೊಂಡು ದುರ್ಯೋಧನ

ರಾಜ್ಯದಲ್ಲಿ ಕನ್ನಡಕ್ಕೆ ಪ್ರಭುತ್ವ ದೊರಕಬೇಕು : ಹೇಮಾವತಿ ವೀ. ಹೆಗ್ಗಡೆ

ರಾಜ್ಯದಲ್ಲಿ ಕನ್ನಡ ಭಾಷೆಗೆ ಪ್ರಭುತ್ವ ದೊರಕಬೇಕು. ಇತರ ಭಾಷೆಗಳು ಕನ್ನಡದ ಮೇಲೆ ಸವಾರಿ ಮಾಡಬಾರದು. ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ ನಾಡು, ನುಡಿ ಮತ್ತು ಸಂಸ್ಕöತಿಗೆ ಕಾಯಕಲ್ಪ ನೀಡಿ ಸಂರಕ್ಷಣೆ ಮಾಡಬೇಕು ಎಂದು ಧರ್ಮಸ್ಥ¼ದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು. ಅವರು ಭಾನುವಾರ ಉಜಿರೆಯಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದದಲ್ಲಿ ಎಲ್ಲಾ ಚಟುವಟಿಕೆಗಳು ಕನ್ನಡದ ಮೂಲಕವೇ

ಎಸ್.ಡಿ.ಎಂ ಅಂಗಳದಲ್ಲಿ ಧ್ವಜಾರೋಹಣ: ಸಂಸ್ಕøತಿ ವೈವಿಧ್ಯತೆಯ ಅನಾವರಣ

ಉಜಿರೆ, ಜ 26: ಉಜಿರೆಯ ಎಸ್.ಡಿ.ಎಂ ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣವು ದೇಶದ ವೈವಿಧ್ಯತೆ, ಶಿಸ್ತುಬದ್ಧತೆ ಮತ್ತು ಸಾಂಸ್ಕøತಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸಿತು. ಗಣರಾಜ್ಯೋತ್ಸವ ದಿನದ ಅಂಗವಾಗಿ ಕಾಲೇಜಿನ ಎನ್.ಸಿ.ಸಿ ವಿಭಾಗದ ಎಲ್ಲಾ ಕೆಡೆಟ್‍ಗಳ ಶಿಸ್ತುಬದ್ಧ ಪಾಲ್ಗೊಳ್ಳುವಿಕೆ ಮುಖ್ಯ ಆಕರ್ಷಣೆಯಾಗಿತ್ತು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಧ್ವಜಾರೋಹಣವನ್ನು ನೆರವೇರಿಸಿದರು.

ಮಾನವೀಯತೆ ಮಾನವನ ಮೊದಲ ಧರ್ಮವಾಗಬೇಕು – ಯಡಪಡಿತ್ತಾಯ

ಉಜಿರೆ: ಏನನ್ನಾದರು ಸಾಧಿಸುವ ಮೊದಲು ನಾವು ಮಾನವರಾಗಬೇಕು, ಮಾನವೀಯತೆಯೇ ಮನುಷ್ಯನ ಮೊದಲ ಧರ್ಮವಾಗಬೇಕು. ಸೋತವರ ಜೊತೆಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವ ಗುಣವನ್ನು ಹೊಂದಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ | ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಪದವಿ ದಿನಗಳ ನೆನಪುಗಳನ್ನು ಮೆಲುಕು ಹಾಕಿದರು. ಶ್ರೀ. ಧ. ಮಂ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಎಸ್.ಡಿ.ಎಂ. ನೆನಪಿನಂಗಳ ಎಂಬ

ಉಜಿರೆ ಎಸ್.ಡಿ.ಎಂ ಕಾಲೇಜಿನ ವಾಣಿಜ್ಯ ವಿಭಾಗದಿಂದ ʻಉದಯೋತ್ಸವʼ

ʻತನ್ನ ಪ್ರತೀ ತರಗತಿಯಲ್ಲೂ ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವ ಪ್ರೇರಕ ಶಕ್ತಿಯಾಗಿ, ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡುವ ಮೂಲಕ ಸಾಕಷ್ಟು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಅತ್ಯುತ್ತಮ ಶಿಕ್ಷಕ ಡಾ. ಉದಯಚಂದ್ರ ಪಿ.ಎನ್ ಎಂದು ಎಸ್.ಡಿ.ಎಂ ಕಾಲೇಜಿನ ನೂತನ ಪ್ರಾಂಶುಪಾಲ ಡಾ.ಜಯಕುಮಾರ್‌ ಶೆಟ್ಟಿ ಹೇಳಿದರು.ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾಗಿದ್ದ ಡಾ.ಪಿ.ಎನ್ ಉದಯಚಂದ್ರ ಅವರ ಸೇವಾನಿವೃತ್ತಿ ಹಿನ್ನೆಲೆಯಲ್ಲಿ ವಾಣಿಜ್ಯ ವಿಭಾಗ ಪದವಿ

ಧರ್ಮಸ್ಥಳದ ಲಕ್ಷದೀಪೋತ್ಸವದ ಹತ್ತನೇ ವರ್ಷದ ಪಾದಯಾತ್ರೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಹತ್ತನೇ ವರ್ಷದ ಪಾದಯಾತ್ರೆಗೆಇಪ್ಪತೈದು ಸಾವಿರಕ್ಕೂಅಧಿಕ ಭಕ್ತರು ಪಾಲ್ಗೊಂಡಿದ್ದರು. ಶ್ರೀ ಜನಾರ್ಧನ ಸ್ವಾಮಿದೇವಾಲಯದಿಂದಆರoಭಗೊoಡ ಪಾದಯಾತ್ರೆಗೆ ದೀಪ ಬೆಳಗಿಸುವುದರ ಮೂಲಕ ದೇವಾಲಯದ ಮುಖ್ಯಸ್ಥ ಶರತ್‌ಕೃಷ್ಣ ಪಡುವೆಟ್ನಾಯ ಚಾಲನೆ ನೀಡಿದರು. ಕೊರೋನಾಕಾರಣದಿಂದ ಸರಳವಾಗಿ ನಡೆದಿದ್ದ ಪಾದಯಾತ್ರೆ ಈ ಬಾರಿ ವಿಜೃಂಭಣೆಯಿoದ ನಡೆದಿದ್ದು ಸಾಗರೋಪಾದಿಯಲ್ಲಿಜನರು ಮಂಜುನಾಥ ಸ್ವಾಮಿಯ ಸನ್ನಿಧಿಗೆ ಭಕ್ತಿ ಭಾವದೊಂದಿಗೆ

ಎಸ್.ಡಿ.ಎಂ. ಸಂಸ್ಥೆಗೆ ಸಂಪತ್ ಕುಮಾರ್ ನೈಜ ಸಂಪತ್ತು: ಡಾ. ಸತೀಶ್ಚಂದ್ರ

ವಿದ್ಯೆ, ಬುದ್ಧಿವಂತಿಕೆ ಹಾಗೂ ಹೃದಯವಂತಿಕೆ ಸಹಿತ ಉನ್ನತ ಗುಣಗಳಿರುವ ಡಾ. ಬಿ.ಪಿ. ಸಂಪತ್ ಕುಮಾರ್ ಅವರು ಎಸ್.ಡಿ.ಎಂ. ಸಂಸ್ಥೆಗೆ ನೈಜ ಸಂಪತ್ತು ಎಂದು ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ ಅವರು ಹೇಳಿದರು.ಉಜಿರೆ ಎಸ್.ಡಿ.ಎಂ. ಕಾಲೇಜಿನ ಕುಲಸಚಿವ (ಆಡಳಿತ) ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಬಿ.ಪಿ. ಸಂಪತ್ ಕುಮಾರ್ ಅವರಿಗೆ ಕಾಲೇಜಿನ ಬೋಧಕರ ಸಂಘವು ಸೇವಾನಿವೃತ್ತಿ ಹಿನ್ನೆಲೆಯಲ್ಲಿ ಸೆ.30ರಂದು ಕಾಲೇಜಿನ ಸೆಮಿನಾರ್ ಹಾಲ್