Home Posts tagged #Ulala

ಉಳ್ಳಾಲ: ಮಸೀದಿಗೆ ನುಗ್ಗಿ ಕಾಣಿಕೆ ಡಬ್ಬಿ ಒಡೆದು ನಗದು ಕಳವು

ಮಸೀದಿಗೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ.ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾನ ಬದ್ರಿಯಾ ಜುಮಾ ಮಸೀದಿ ಯಲ್ಲಿ ಘಟನೆ ನಡೆದಿದೆ. ಮಸೀದಿ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಪಿಕ್ಕಾಸು ಬಳಸಿ ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿದ್ದಾರೆ. ಮಸೀದಿ ವಠಾರದಲ್ಲಿ ಅಳವಡಿಸಿದ್ದ ಆರು

ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಸಂಘಟನೆ ಉದ್ಘಾಟನೆ

ಉಳ್ಳಾಲ: ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಇದರ ಉದ್ಘಾಟನಾ ಸಮಾರಂಭ ಮುನ್ನೂರು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು. ರಾಣಿಪುರ ಮೇರಿ ಚರ್ಚ್‌ನ ಧರ್ಮಗುರು ಜಯಪ್ರಕಾಶ್ ಡಿಸೋಜ ದೀಪ ಬೆಳಗಿಸಿ ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಸಂಸ್ಥೆಗೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ಸೇವೆಯ ಮೂಲಕ ಸಮಾಜದ ಅಭ್ಯುದಯಕ್ಕೆ ಒಂದು ಸಂಘಟನೆ. ಸೇವೆಯ ಆರಂಭದದಿಂದಲೇ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮಾಜದ ಅವಕಾಶಗಳನ್ನು ಪೂರೈಸಲು ಸಂಘಟನೆ ಶ್ರಮಿಸಲಿ ಎಂದು

ಒಮಾನ್‌: ಕಡಲಲ್ಲಿ ಮುಳುಗಿ ಮೃತಪಟ್ಟ ಉಳ್ಳಾಲದ ಯುವಕರು

ಎರಡು ವರ್ಷದ ಹಿಂದೆ ಉಳ್ಳಾಲದಿಂದ ಒಮಾನ್‌ ದೇಶಕ್ಕೆ ಉದ್ಯೋಗಕ್ಕಾಗಿ ತೆರಳಿದ್ದ ಇಬ್ಬರು ಯುವಕರು ಅಲ್ಲಿನ ಕಡಲಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಉಳ್ಳಾಲದ ರಿಜ್ವಾನ್ ಅಲೇಕಳ (25), ಉಳ್ಳಾಲ ಕೋಡಿ ನಿವಾಸಿ ಜಹೀರ್ (25) ಮೃತಪಟ್ಟವರು. ಒಮಾನ್‌ನಲ್ಲಿ ಫಿಶ್ ಮಿಲ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಯುವಕರು ದುಕ್ಕುಂ ಎಂಬ ಕಡಲ ತೀರಕ್ಕೆ ಶುಕ್ರವಾರ ಸಂಜೆ ವಿಹಾರಕ್ಕೆ ತೆರಳಿದ್ದರು. ರಿಜ್ವಾನ್ ಕಡಲಿನ ಅಲೆಯಲ್ಲಿ ಸಿಲುಕಿದ್ದು ಮುಳುಗುತ್ತಿದ್ದಾಗ ಜಹೀರ್

ಭಾರತ್ ಸ್ಕೌಟ್ ಆಂಡ್ ಗೈಡ್ಸ್ ತಂಡದಿಂದ ಸೇವಾ ಕಾರ್ಯ: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ನೈತಿಕ ಸ್ಥೈರ್ಯ

ಕೋರೋನಾ ಭೀತಿಯ ನಡುವೆಯೂ ಮತ್ತೆ ಎಸೆಸೆಲ್ಸಿ ಪರೀಕ್ಷೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಯಶಸ್ವಿನ ಹಿಂದೆ ಶಿಕ್ಷಣ ಇಲಾಖೆ ಜೊತೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದೆ. ಈ ಪೈಕಿ ಪ್ರಮುಖ ಪಾತ್ರ ವಹಿಸಿ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಕಾರಣವಾದವರ ಪೈಕಿ ಈ ತಂಡದ ಪ್ರಯತ್ನ ಕೂಡಾ ಪ್ರಶಂಸಾರ್ಹ. ಅಷ್ಟಕ್ಕೂ ಆ ತಂಡ ಯಾವುದು? ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅವರು ಮಾಡಿದ ಸೇವೆ ಏನು? ಬನ್ನಿ ನೋಡೋಣ ನೀಲಿ ಬಣ್ಣದ ಸಮವಸ್ತ್ರ, ತಲೆಗೊಂದು ಟೋಪಿ

ಉಳ್ಳಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ದೇಶದಾದ್ಯಂತ ಇಂದು ಮುಸ್ಲಿಮರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿನ ಉಳ್ಲಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನಿರ್ವಹಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಹಸ್ತಲಾಘವ, ಆಲಿಂಗನ ಇಲ್ಲದೇ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಕೋವಿಡ್ ಹಿನ್ನೆಲೆ ತಲಪಾಡಿ ಗಡಿಭಾಗದಲ್ಲಿ ತೀವ್ರಗೊಂಡ ತಪಾಸಣೆ

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರು ಪ್ರವೇಶಿಸುವ ಎಲ್ಲರ ನೆಗೆಟಿವ್ ವರದಿ ಕಡ್ಡಾಯ ಮಾಡುತ್ತಿದ್ದು, ಸ್ಥಳದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು ತಲಪಾಡಿ ಗಡಿಭಾಗದಲ್ಲೂ ಕಟ್ಟು ನಿಟ್ಟಿನ ಕ್ರಮ ಕೊಂಡಿದ್ದಾರೆ. ಮಂಗಳೂರು ಕಮಿಷನರೇಟ್ ಒಳಪಡುವ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ

ಉಳ್ಳಾಲ ಮತ್ತು ಸೋಮೇಶ್ವರ ಸಮುದ್ರದಲ್ಲಿ ಹೆಚ್ಚಾದ ಅಬ್ಬರ: ಅಪಾರ ಹಾನಿ

ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಒಳರಸ್ತೆ ಸಮುದ್ರದ ಅಲೆಗಳ ಪಾಲಾದರೆ, ಉಳ್ಳಾಲ ಮತ್ತು ಸುತ್ತಮುತ್ತಲಿ ವ್ಯಾಪ್ತಿಯಲ್ಲಿ ಕಂಪೌಂಡ್ ಕುಸಿತ ಸೇರಿದಂತೆ ಸಣ್ಣಪುಟ್ಟ ಅವಘಡಗಳು ಸಂಭವಿಸಿದೆ. ಸೋಮೇಶ್ವರ ಬೀಚ್ ರಸ್ತೆ ಬಟ್ಟಪ್ಪಾಡಿ ಬಳಿ ಹಾನಿಗೀಡಾಗಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಉಚ್ಚಿಲದಲ್ಲಿ ತಗ್ಗು ಪ್ರದೇಶ ಜಲಾವೃತಗೊಂಡಿದ್ದು

ಕೊಲ್ಯದಲ್ಲಿ ಎರಡು ಮನೆಗಳಿಂದ ಕಳವಿಗೆ ಯತ್ನ

ಉಳ್ಳಾಲ: ಎರಡು ಮನೆಗಳಿಗೆ ಬಾಗಿಲು ಮುರಿದು ನುಗ್ಗಿದ ಕಳ್ಳರ ತಂಡ, ಮನೆಯೊಳಗಿದ್ದ ಸೊತ್ತುಗಳನ್ನು ಹಾನಿಗೈದು ಒಂದು ಮನೆಯಿಂದ ವಾಚ್ ಕಳವುಗೈದು ಪರಾರಿಯಾಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಮೂಕಾಂಬಿಕಾ ದೇವಸ್ಥಾನ ಬಳಿ ವೇಳೆ ನಡೆದಿದೆ. ವಿದೇಶದಲ್ಲಿ ನೆಲೆಸಿರುವ ಸುರೇಶ್ ಎಂಬವರಿಗೆ ಸೇರಿದ ಮನೆಯ ಬಾಗಿಲು ಒಡೆದು ಒಳನುಗ್ಗಿರುವ ಕಳ್ಳರು ಕಪಾಟು ಪುಡಿಗೈದು, ಮನೆಯೊಳಗಿನ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿಗೈದು ಹಣ ಹಾಗೂ ಒಡವೆಗಾಗಿ ಹುಡುಕಾಡಿ ಏನೂ ಸಿಗದೇ