Home Posts tagged ullala (Page 2)

ನಾಪತ್ತೆಯಾದ ವಿವಾಹಿತನ ಮೃತದೇಹ ಪತ್ತೆ

ಉಳ್ಳಾಲ: ಕಳೆದ ಸೋಮವಾರದಿಂದ ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್(30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಠೆ , ಕಲಶಾಭಿಷೇಕದ

ತೊಕ್ಕೊಟ್ಟು: ಐಸ್ ಕ್ರೀಮ್ ಪಾರ್ಲರ್ ವೈಟರ್ ಆತ್ಮಹತ್ಯೆ

ಉಳ್ಳಾಲ: ಐಸ್ ಕ್ರೀಮ್ ಪಾರ್ಲರ್ ಒಂದರ ವೈಟರ್ ಆಗಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಎಂಬಾತ ಪಿಲಾರ್ ನ ಗೋಡೌನ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಡೌನ್ ನ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಿಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದರು. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾರೆ. ಕಳೆದ ಏಳು ವರುಷದಿಂದ ತೊಕ್ಕೊಟ್ಟುವಿನ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ

ಉಳ್ಳಾಲ: ಸಮುದ್ರದಲ್ಲಿ ಕಲ್ಲುಬಂಡೆಗೆ ಬಡಿದು ಮುಳುಗಿದ ಮೀನುಗಾರಿಕಾ ದೋಣಿ, ಐವರು ಮೀನುಗಾರರ ರಕ್ಷಣೆ

ಉಳ್ಳಾಲ: ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್‍ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗಿದ್ದು, ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್‍ನ ಮೀನುಗಾರರು ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಮುಳುಗಡೆಯಾಗಿರುವ ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಬೋಟ್‍ಗೆ ಹಾನಿಯಾಗಿದೆ. ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ ಅವರಿಗೆ ಸೇರಿದ`ನವಾಮಿ –

ಉಳ್ಳಾಲ: ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ- ಎಸಿಪಿ ಧನ್ಯ ನಾಯಕ್ ಟೀಮ್ ದಿಢೀರ್ ದಾಳಿ,ಆರೋಪಿ ಪೊಲೀಸರ ವಶಕ್ಕೆ

ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಪುರದ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು ಆರೋಪಿ ಸಮೇತ ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್ ಗಳನ್ನ ವಶಪಡಿಸಿದ್ದಲ್ಲದೆ,ಅಕ್ರಮವಾಗಿ ಮಾರಾಟ ನಡೆಸುತ್ತಿದ್ದ ಲೀಟರ್ ಗಟ್ಟಲೆ ಪೆಟ್ರೋಲನ್ನೂ ವಶಪಡಿಸಿಕೊಂಡಿದೆ.ಉಳ್ಳಾಲ ಕೋಟೆಪುರದ ಬರಕ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲೇ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ

ಉಳ್ಳಾಲ: ಅವಿವಾಹಿತ ಆತ್ಮಹತ್ಯೆ

ಉಳ್ಳಾಲ: ಅವಿವಾಹಿತ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ಬೆಳಕಿಗೆ ಬಂದಿದೆ.ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ (32) ಆತ್ಮಹತ್ಯೆ ನಡೆಸಿಕೊಂಡವರು. ಕೋಟೆಕಾರು ಬೀರಿಯಲ್ಲಿರುವ ಈಕಾಟ್೯ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ನಾಗರಾಜ್ ನಿನ್ನೆ ಕೆಲಸಕ್ಕೆ ತೆರಳಿ ರಾತ್ರಿ ಕೋಣೆಯಲ್ಲಿ ಮಲಗಿದವರು ಕೃತ್ಯ ಎಸಗಿದ್ದಾರೆ. ಇವರ ಸಹೋದರಿಯ ಪ್ರಸವ ಹಿನ್ನೆಲೆಯಲ್ಲಿ ತಾಯಿ ಆಕೆಯ ಮಂಗಳೂರಿನ

ಉಳ್ಳಾಲ: ಹರಕೆಯ ಕೋಲ ನೀಡಿದ ‘ಕೊರಗಜ್ಜ’ ಚಿತ್ರ ತಂಡ

ಉಳ್ಳಾಲ: ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳಕ್ಕೆ ಕ್ಷೇತ್ರಕ್ಕೆ ‘ಕೊರಗಜ್ಜ ’ ಚಿತ್ರ ತಂಡ ಚಿತ್ರ ಯಶಸ್ಸಿಗೆ ತಾವು ನೀಡಿದ ಹರಕೆಯ ಕೋಲದಲ್ಲಿ ಭಾಗವಹಿಸಿತು. ಈ ಸಂದರ್ಭ ಹಿರಿಯ ಸ್ಯಾಂಡಲ್ ವುಡ್ ನಟಿಯರಾದ ಶೃತಿ ಮತ್ತು ಭವ್ಯ ಕೂಡಾ ಭಾಗಿಯಾಗಿ ಅಜ್ಜನ ಕೋಲ ವೀಕ್ಷಿಸಿದರು. ನಟಿ ಭವ್ಯ ಮಾತನಾಡಿ, ಕಳೆದ ಹುಟ್ಟುಹಬ್ಬದ ಸಂದರ್ಭದಲ್ಲೂ ಕ್ಷೇತ್ರಕ್ಕೆ ಭೇಟಿ ನೀಡಿರುವೆ. ಈ ಬಾರಿಯೂ ದೈವ ಇಚ್ಛೆಯಂತೆ ಅದೇ ದಿನ ಭೇಟಿ ನೀಡಿದ್ದೇನೆ. ಕೊರಗಜ್ಜನ

ಉಳ್ಳಾಲ: ಮಾಜಿ ಪ್ರಿಯತಮೆಯ ಕೊಲೆಯತ್ನ: ಆರೋಪಿಗೆ 18 ವರ್ಷ ಸಜೆ, 2 ಲಕ್ಷ ರೂ ದಂಡ

ಉಳ್ಳಾಲ: ಮಾಜಿ ಪ್ರೇಯಸಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2 ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ 1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ ರೂ. 2 ಲಕ್ಷ ರೂ ನೀಡುವಂತೆ ಆದೇಶ ನೀಡಿದೆ.2019ರ ಜೂ.28 ರಂದು ದೇರಳಕಟ್ಟೆಯ ಬಗಂಬಿಲ ರಸ್ತೆಯಲ್ಲಿನ ಶಾಂತಿಧಾಮ ಬಳಿ ಆರೋಪಿ ಸುಶಾಂತ್ ಯಾನೆ ಶಾನ್ (31) ಕಾಲೇಜಿನಿಂದ ಬರುತ್ತಿದ್ದ ಸಂತ್ರಸ್ತೆಯನ್ನು ಹಿಂಬಾಲಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬಂದಿದ್ದ. ಶಾಂತಿಧಾಮ ಬಳಿ ಅಡ್ಡಗಟ್ಟಿ

ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ನುಡಿನಮನ

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ) ವತಿಯಿಂದ ಇತ್ತೀಚೆಗೆ ನಿಧನರಾದ ಪ್ರೊ.ಅಮೃತ ಸೋಮೇಶ್ವರರವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ಹಾಗೂ ಸಮಿತಿಯ ಸ್ವಾಗತಾಧ್ಯಕ್ಷ ಕೆ.ಜಯರಾಮ ಶೆಟ್ಟಿ ಮಾತನಾಡಿ, ಅಮೃತರು ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದರು. ಸಾಹಿತ್ಯ ಲೋಕದ ದಿಗ್ಗಜರೂ, ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಹಾಗೂ ಸಮಿತಿಯ ಗೌರವ ಸಲಹೆಗಾರರಾಗಿದ್ದು ಸಮಿತಿಗೆ ಮಾರ್ಗದರ್ಶಕರಾಗಿದ್ದರು ಎಂದು ಹೇಳಿದರು. ಸಮಿತಿಯ ಅಧ್ಯಕ್ಷರಾದ ದಿನಕರ

ಕೊಣಾಜೆ: ಜ.13 ರಂದು ನರಿಂಗಾನ ಕಂಬಳೋತ್ಸವ-2024 ಉದ್ಘಾಟನೆ

ಕೊಣಾಜೆ: ಮಂಗಳೂರು ವಿಧಾನ ಸಭಾ ಕ್ಷೇತ್ರ, ಉಳ್ಳಾಲ ತಾಲೂಕಿನ ಇತಿಹಾಸದಲ್ಲಿ ಮೊದಲ ಸರಕಾರಿ ಕಂಬಳವಾಗಿ ಗುರುತಿಸಿಕೊಂಡಿರುವ ನರಿಂಗಾನ ಕಂಬಳವು ಈ ಬಾರಿ ಎರಡನೇ ವರ್ಷದ ನರಿಂಗಾನ ಕಂಬಳೋತ್ಸವ ನರಿಂಗಾನ ಗ್ರಾಮದ ಮೋರ್ಲ ಬೋಳದ ಲವ-ಕುಶ ಜೋಡುಕರೆಯಲ್ಲಿ ಜ. 13ರಂದು ಬೆಳಗ್ಗೆ 10.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಹೇಳಿದರು. ನರಿಂಗಾನ ಕಂಬಳವು ಎಲ್ಲಾ ಜಾತಿ, ಧರ್ಮ, ವರ್ಗಗಳ ಜನರು ಸೇರಿಕೊಂಡು ಮಾಡುವ ಒಂದು ಸಾರ್ವಜನಿಕ

ಉಳ್ಳಾಲ : ಸೋಮೇಶ್ವರ ಪುರಸಭೆ ಚುನಾವಣೆ-ನೂತನ ಸದಸ್ಯರಿಗೆ ಅಭಿನಂದನೆ

ಸೋಮೇಶ್ವರ ಪುರಸಭೆಯಾಗಿ ಮೇಲ್ದರ್ಜೆಗೊಂಡ ಬಳಿಕ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಪ್ರಚಂಡ ಬಹುಮತದಿಂದ ವಿಜಯಿಗೊಳಿಸಿದ ಮತದಾರ ಬಂಧುಗಳಿಗೆ, ಕಾರ್ಯಕರ್ತರಿಗೆ ಹಾಗೂ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಹಿರಿಯರಾದ ಸೀತಾರಾಮ ಬಂಗೇರಾ ರವರು ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ತಿನ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ