ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಪುರದ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು ಆರೋಪಿ ಸಮೇತ ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್ ಗಳನ್ನ ವಶಪಡಿಸಿದ್ದಲ್ಲದೆ,ಅಕ್ರಮವಾಗಿ ಮಾರಾಟ ನಡೆಸುತ್ತಿದ್ದ ಲೀಟರ್ ಗಟ್ಟಲೆ ಪೆಟ್ರೋಲನ್ನೂ ವಶಪಡಿಸಿಕೊಂಡಿದೆ.ಉಳ್ಳಾಲ ಕೋಟೆಪುರದ ಬರಕ
ಉಳ್ಳಾಲ: ಅವಿವಾಹಿತ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ಬೆಳಕಿಗೆ ಬಂದಿದೆ.ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ (32) ಆತ್ಮಹತ್ಯೆ ನಡೆಸಿಕೊಂಡವರು. ಕೋಟೆಕಾರು ಬೀರಿಯಲ್ಲಿರುವ ಈಕಾಟ್೯ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ನಾಗರಾಜ್ ನಿನ್ನೆ ಕೆಲಸಕ್ಕೆ ತೆರಳಿ ರಾತ್ರಿ ಕೋಣೆಯಲ್ಲಿ ಮಲಗಿದವರು ಕೃತ್ಯ ಎಸಗಿದ್ದಾರೆ. ಇವರ ಸಹೋದರಿಯ ಪ್ರಸವ ಹಿನ್ನೆಲೆಯಲ್ಲಿ ತಾಯಿ ಆಕೆಯ ಮಂಗಳೂರಿನ
ಉಳ್ಳಾಲ: ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳಕ್ಕೆ ಕ್ಷೇತ್ರಕ್ಕೆ ‘ಕೊರಗಜ್ಜ ’ ಚಿತ್ರ ತಂಡ ಚಿತ್ರ ಯಶಸ್ಸಿಗೆ ತಾವು ನೀಡಿದ ಹರಕೆಯ ಕೋಲದಲ್ಲಿ ಭಾಗವಹಿಸಿತು. ಈ ಸಂದರ್ಭ ಹಿರಿಯ ಸ್ಯಾಂಡಲ್ ವುಡ್ ನಟಿಯರಾದ ಶೃತಿ ಮತ್ತು ಭವ್ಯ ಕೂಡಾ ಭಾಗಿಯಾಗಿ ಅಜ್ಜನ ಕೋಲ ವೀಕ್ಷಿಸಿದರು. ನಟಿ ಭವ್ಯ ಮಾತನಾಡಿ, ಕಳೆದ ಹುಟ್ಟುಹಬ್ಬದ ಸಂದರ್ಭದಲ್ಲೂ ಕ್ಷೇತ್ರಕ್ಕೆ ಭೇಟಿ ನೀಡಿರುವೆ. ಈ ಬಾರಿಯೂ ದೈವ ಇಚ್ಛೆಯಂತೆ ಅದೇ ದಿನ ಭೇಟಿ ನೀಡಿದ್ದೇನೆ. ಕೊರಗಜ್ಜನ
ಉಳ್ಳಾಲ: ಮಾಜಿ ಪ್ರೇಯಸಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2 ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ 1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ ರೂ. 2 ಲಕ್ಷ ರೂ ನೀಡುವಂತೆ ಆದೇಶ ನೀಡಿದೆ.2019ರ ಜೂ.28 ರಂದು ದೇರಳಕಟ್ಟೆಯ ಬಗಂಬಿಲ ರಸ್ತೆಯಲ್ಲಿನ ಶಾಂತಿಧಾಮ ಬಳಿ ಆರೋಪಿ ಸುಶಾಂತ್ ಯಾನೆ ಶಾನ್ (31) ಕಾಲೇಜಿನಿಂದ ಬರುತ್ತಿದ್ದ ಸಂತ್ರಸ್ತೆಯನ್ನು ಹಿಂಬಾಲಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬಂದಿದ್ದ. ಶಾಂತಿಧಾಮ ಬಳಿ ಅಡ್ಡಗಟ್ಟಿ
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ) ವತಿಯಿಂದ ಇತ್ತೀಚೆಗೆ ನಿಧನರಾದ ಪ್ರೊ.ಅಮೃತ ಸೋಮೇಶ್ವರರವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ಹಾಗೂ ಸಮಿತಿಯ ಸ್ವಾಗತಾಧ್ಯಕ್ಷ ಕೆ.ಜಯರಾಮ ಶೆಟ್ಟಿ ಮಾತನಾಡಿ, ಅಮೃತರು ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದರು. ಸಾಹಿತ್ಯ ಲೋಕದ ದಿಗ್ಗಜರೂ, ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಹಾಗೂ ಸಮಿತಿಯ ಗೌರವ ಸಲಹೆಗಾರರಾಗಿದ್ದು ಸಮಿತಿಗೆ ಮಾರ್ಗದರ್ಶಕರಾಗಿದ್ದರು ಎಂದು ಹೇಳಿದರು. ಸಮಿತಿಯ ಅಧ್ಯಕ್ಷರಾದ ದಿನಕರ
ಕೊಣಾಜೆ: ಮಂಗಳೂರು ವಿಧಾನ ಸಭಾ ಕ್ಷೇತ್ರ, ಉಳ್ಳಾಲ ತಾಲೂಕಿನ ಇತಿಹಾಸದಲ್ಲಿ ಮೊದಲ ಸರಕಾರಿ ಕಂಬಳವಾಗಿ ಗುರುತಿಸಿಕೊಂಡಿರುವ ನರಿಂಗಾನ ಕಂಬಳವು ಈ ಬಾರಿ ಎರಡನೇ ವರ್ಷದ ನರಿಂಗಾನ ಕಂಬಳೋತ್ಸವ ನರಿಂಗಾನ ಗ್ರಾಮದ ಮೋರ್ಲ ಬೋಳದ ಲವ-ಕುಶ ಜೋಡುಕರೆಯಲ್ಲಿ ಜ. 13ರಂದು ಬೆಳಗ್ಗೆ 10.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಹೇಳಿದರು. ನರಿಂಗಾನ ಕಂಬಳವು ಎಲ್ಲಾ ಜಾತಿ, ಧರ್ಮ, ವರ್ಗಗಳ ಜನರು ಸೇರಿಕೊಂಡು ಮಾಡುವ ಒಂದು ಸಾರ್ವಜನಿಕ
ಸೋಮೇಶ್ವರ ಪುರಸಭೆಯಾಗಿ ಮೇಲ್ದರ್ಜೆಗೊಂಡ ಬಳಿಕ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಪ್ರಚಂಡ ಬಹುಮತದಿಂದ ವಿಜಯಿಗೊಳಿಸಿದ ಮತದಾರ ಬಂಧುಗಳಿಗೆ, ಕಾರ್ಯಕರ್ತರಿಗೆ ಹಾಗೂ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಹಿರಿಯರಾದ ಸೀತಾರಾಮ ಬಂಗೇರಾ ರವರು ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ತಿನ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ
ಉಳ್ಳಾಲ: ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲದ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿಸಿದೆ.ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳಿಗೆ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ವಿದ್ಯುತ್ ವೈರ್, ಸೇರಿದಂತೆ ಹಲವು ಸಲಕರಣೆಗಳು ಸಂಪೂರ್ಣ ಸುಟ್ಟು ನಷ್ಟ ಸಂಭವಿಸಿದೆ. ಬೆಳಗ್ಗೆ ಮನೆಮಂದಿ ಮನೆಯಲ್ಲಿದ್ದ ಸಂದರ್ಭ ಘಟನೆ ನಡೆದಿದೆ. ಕಂದಾಯ ಇಲಾಖೆಗೆ ಈ
ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರಪಾಲಾಗಿದ್ದು ಓರ್ವನ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23), ಸಲ್ಮಾನ್ (19), ಸೈಫ್ ಆಲಿ (27) ಎಂಬವರು ಉಳ್ಳಾಲ ದರ್ಗಾ ಸಂದರ್ಶನಕ್ಕೆಂದು ಬಂದವರು ಉಳ್ಳಾಲದ ಸಮುದ್ರ ತೀರಕ್ಕೆ ತೆರಳಿದ್ದಾರೆ. ಅಲ್ಲಿ ಸಮುದ್ರದ ನೀರಲ್ಲಿ ಆಟವಾಡುತ್ತಿದ್ದ ಸಂದರ್ಭ ಮೂವರು ಅಲೆಗಳ
ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಿನ ಅಭಾವ ತಪ್ಪಿಸಲು ಟ್ಯಾಂಕರ್ ಮಾನಿಟರಿಂಗ್ ಆಪ್‌ನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು. ತಾಂತ್ರಿಕ ತೊಂದರೆಗಳಾಗದಂತೆ ಪೂರ್ವಭಾವಿಯಾಗಿ ಅಧಿಕಾರಿಗಳಿಗೆ, ಪಿಡಿಓಗಳಿಗೆ ಪ್ರಾತ್ಯಕ್ಷಿಕೆ ಹಾಗೂ ತರಬೇತಿಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಹೇಳಿದರು. ದೇರಳಕಟ್ಟೆಯ ದ ಕಂಫರ್ಟ್ ಇನ್ ಸಭಾಂಗಣದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರಸಭೆ,