Home Posts tagged #ullala (Page 13)

ಮೇ 27. ಉಳ್ಳಾಲ ಕಪ್-2023 – ವಾಲಿಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಅಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗಲಿರುಳು ವಾಲಿಬಾಲ್ ಪಂದ್ಯಾಟ ಜಿಲ್ಲಾ ಚಾಂಪಿಯನ್ ಶಿಪ್ ಉಳ್ಳಾಲ ಕಪ್-2023 ಮೇ 27ರಂದು ಮುಡಿಪುವಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಈ ಬಗ್ಗೆ ಮಂಗಳೂರಿನ

ಜೂಜಾಟಗಾರರ ಜತೆ ಶಾಮೀಲು ಆರೋಪ – ಉಳ್ಳಾಲ ಠಾಣೆ ಎಸ್.ಬಿ ಅಮಾನತು

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ

ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು-ಶಾಸಕ ಖಾದರ್ ಆದೇಶ

ಉಳ್ಳಾಲ: ಮಳೆಗಾಲದಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಧಿಕಾರಿಗಳು ತಕ್ಷಣದಿಂದ ಕ್ರಮಕೈಗೊಳ್ಳಬೇಕು, ಉಳ್ಳಾಲ ನಗರಸಭೆಯಾದ್ಯಂತ 8 ಟ್ಯಾಂಕರ್ಗಳ ಮೂಲಕ ಸರಬರಾಜು ಆಗುತ್ತಿರುವ ಕುಡಿಯುವ ನೀರು ಸಮರ್ಪಕವಾಗಿ ಎಲ್ಲರ ಉಪಯೋಗಕ್ಕೆ ಬರಬೇಕು. ಕಡಲ್ಕೊರೆತದಿಂದ ಹಾನಿಗೊಳಗಾದ ಮುಕ್ಕಚ್ಚೇರಿ ಸೀಗ್ರೌಂಡ್ ಮತ್ತು ಉಚ್ಚಿಲ ಸೋಮೇಶ್ವರದಲ್ಲಿ ಅನುದಾನ ಮಂಜೂರುಗೊಳಿಸಿದ ತಕ್ಷಣ ಕಾಮಗಾರಿ ಆರಂಭಿಸಿ ಮುಗಿಸಬೇಕು ಎಂದು ಶಾಸಕ ಯು.ಟಿ ಖಾದರ್ ಅಧಿಕಾರಿಗಳಿಗೆ ಆದೇಶ

ಉತ್ತಮ ಸಮಾಜ, ಸಾಮರಸ್ಯಕ್ಕಾಗಿ ಕಾಂಗ್ರೆಸ್‍ಗೆ ಮತ ಕೊಟ್ಟಿದ್ದಾರೆ: ಖಾದರ್

ಸತ್ಯ- ಅಸತ್ಯ, ಪ್ರಚಾರ-ಅಪಪ್ರಚಾರದ ಬಗ್ಗೆ ರಾಜ್ಯದಲ್ಲಿ ಚುನಾವಣೆ ಆಗಿತ್ತು. ರಾಜ್ಯದ ಜನತೆ ಸತ್ಯಕ್ಕೆ ಜಯ ಕೊಟ್ಟಿದ್ದಾರೆ. ಜನರು ಬೆಲೆಯೇರಿಕೆ, ದ್ವೇಷ ಭಾವನೆಯಿಂದ ಕಂಗೆಟ್ಟು ನಿರಾಶರಾಗಿದ್ದರು. ಉತ್ತಮ ಸಮಾಜ, ಸಾಮರಸ್ಯಕ್ಕಾಗಿ ಕಾಂಗ್ರೆಸಿಗೆ ಮತ ಕೊಟ್ಟಿದ್ದಾರೆ. ಕರಾವಳಿಯಲ್ಲಿ ಜನರ ವಿಶ್ವಾಸಗಳಿಸಬೇಕಾಗಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಡಿದರು. ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದ ವ್ಯತ್ಯಾಸವನ್ನು

ಸರ್ವರಿಗೂ ನ್ಯಾಯ ಕೊಟ್ಟು ಗ್ಯಾರಂಟಿ ಕಾರ್ಡ್ ಶೀಘ್ರದಲ್ಲಿ ಅನುಷ್ಠಾನಕ್ಕೆ : ಯು.ಟಿ ಖಾದರ್

ಉಳ್ಳಾಲ: ಸಮಾಜವನ್ನು ಒಗ್ಗಟ್ಟು ಮಾಡುವ ಮೂಲಕ ಬಿಕ್ಕಟ್ಟು ಮಾಡಲು ಬಿಡದೆ ಮುಂದಿನ ಸರಕಾರ ಕಾರ್ಯಾಚರಿಸಲಿದ್ದು, ಸರ್ವ ಧರ್ಮದವರನ್ನು ಪ್ರೀತಿಸಿಕೊಂಡು ಸರ್ವರಿಗೂ ನ್ಯಾಯ ಕೊಟ್ಟು ಗ್ಯಾರಂಟಿ ಕಾರ್ಡ್ ಅತಿಶೀಘ್ರದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ತೊಕ್ಕೊಟ್ಟುವಿನಿಂದ ಉಳ್ಳಾಲಕ್ಕೆ ಬೈಕ್ ರ್‍ಯಾಲಿ ಮತ್ತು ರೋಡ್ ಷೋನಲ್ಲಿ ಭಾಗವಹಿಸಿ ತೊಕ್ಕೊಟ್ಟು ಕೊರಗಜ್ಜನ ಕಟ್ಟೆ ಮತ್ತು ಉಳ್ಳಾಲ ಸೈಯದ್ ಮದನಿ ದರ್ಗಾ ಭೇಟಿ ನೀಡಿ

ಕುಂಪಲದ ಪ್ರೇಕ್ಷಾ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ

ಉಳ್ಳಾಲ: ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಕುತ್ತಾರು,ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20)ಆತ್ಮ ಹತ್ಯೆಗೈದ ಯುವಕ.ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ನಿನ್ನೆ

ಉಳ್ಳಾಲ : ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಾವು

ಉಳ್ಳಾಲ: ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ.ಮಂಗಳೂರಲ್ಲಿ ಬಿಕಾಂ ಕಲಿಯುತ್ತಿರುವ ಮೂಲತ: ಬಾಗಲಕೋಟೆ ಜಿಲ್ಲೆಯ,ಬಾದಾಮಿ ತಾಲೂಕು ತೆಗ್ಗಿ ಗ್ರಾಮದ ನಿವಾಸಿ ಕಾವೇರಿ(20)ಮೃತ ಪಟ್ಟ ಯುವತಿ.ಕಾವೇರಿ ನಿನ್ನೆ ಹುಟ್ಟು ಹಬ್ಬ ಆಚರಿಸಿದ್ದು ಇಂದು ತನ್ನ ಬಾಲ್ಯ ಸ್ನೇಹಿತೆ ಕಾವೇರಿಯೊಂದಿಗೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದಳು. ಸ್ನೇಹಿತೆಯರಿಬ್ಬರು ಸಮುದ್ರ

ತಲಪಾಡಿ : ಜುಗಾರಿ ಅಡ್ಡೆಗೆ ದಾಳಿ, 10 ಮಂದಿ ಬಂಧನ

ಉಳ್ಳಾಲ: ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು 10 ಮಂದಿಯನ್ನು ಬಂಧಿಸಿ ವಾಹನಗಳನ್ನು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಡೆದಿದೆ. ಬಂಧಿತ ರನ್ನು, ಮಂಜೇಶ್ವರ ನಿವಾಸಿ ಅಶ್ವತ್, ಸುಂಕದಕಟ್ಟೆ ನಿವಾಸಿ ಅಕ್ಬರ್, ಬೀರಿ ನಿವಾಸಿ ಅಬ್ಬಾಸ್, ಮಾಡೂರು ನಿವಾಸಿ ಅಮೀನ್, ಮಾರಿಪಳ್ಳ ನಿವಾಸಿ ಶಂಶೀರ್, ಅಡ್ಯಾರ್ ನಿವಾಸಿ ಅಶ್ವಿತ್, ಇಸ್ಮಾಯಿಲ್, ಬಜಾಲ್ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ ಬಂಧಿತರಿಂದ ಎಂಟು

ಕಲ್ಲಾಪು ಗ್ಲೋಬಲ್ ಮಾರ್ಕೆಟ್’ನಲ್ಲಿ ಬಿರುಸಿನ ಮತಭೇಟೆ ನಡೆಸಿದ ರಿಯಾಝ್ ಫರಂಗಿಪೇಟೆ

ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ಇಂದು ಭೇಟಿ ನೀಡಿದ ಎಸ್.ಡಿ. ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ಬಿರುಸಿನ ಮತಯಾಚನೆ ನಡೆಸಿ, ಗಮನ ಸೆಳೆದರು. ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಗೆ ದಿನಾಂಕ ಮೇ 1ಕ್ಕೆ ಬೆಳಗ್ಗೆ 7 ಗಂಟೆಗೆ ಭೇಟಿ ನೀಡಿದ ಎಸ್.ಡಿ.ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ವ್ಯಾಪಾರಸ್ಥರು ಮತ್ತು ಕಾರ್ಮಿಕರ ಬೆಂಬಲಯಾಚಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಮುಖಂಡರಾದ ಅಥಾವುಲ್ಲಾ ಜೋಕಟ್ಟೆ, ನವಾಝ್ ಉಳ್ಳಾಲ, ಶಹೀದ್ ಕಿನ್ಯಾ,