ತೊಕ್ಕೊಟ್ಟು ಜಂಕ್ಷನ್‍ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆಗೈದಿದ್ದು, ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ
ಉಳ್ಳಾಲ: ರಾ.ಹೆ66 ರ ಕೋಟೆಕಾರು ಬಳಿಯಿಂದ ಪಿಕಪ್ ವಾಹನ ಕಳವು ನಡೆಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಆತನಿಂದ ಕಳವು ನಡೆಸಿದ ಪಿಕಪ್ ವಾಹನ ವಶಪಡಿಸಿಕೊಳ್ಳಲಾಗಿದೆ. ಕೇರಳ ಮೇಲ್ಪರಂಬ ಮಾಂಗಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ. ಜ.3 ರಂದು ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು.ಈ ಕುರಿತು ಮಾಲೀಕ ಮಹಮ್ಮದ್ ಶರೀಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಉಳ್ಳಾಲ: ಕರ್ನಾಟಕ ವಿಧಾನಸಭಾ ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದಿಂದ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆವರೆಗೆ ಸಿಆರ್ ಪಿಎಫ್ , ಉಳ್ಳಾಲ ಪೊಲೀಸ್ ಠಾಣೆ, ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಹಾಗೂ ಕೆಎಸ್ ಆರ್ ಪಿ ಅಸೈಗೋಳಿ ನೇತೃತ್ವದಲ್ಲಿ ಪಥಸಂಚಲನ ನಡೆಯಿತು. ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್ , ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್, ಮಂಗಳೂರು ದಕ್ಷಿಣ
ಉಳ್ಳಾಲ : ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಗೆ ಅಳವಡಿಸಲಾಗಿದ್ದ ಗೇಟುಗಳನ್ನು ಡಿವೈಎಫ್ಐ ಕಾರ್ಯಕರ್ತರು ಸಾರ್ವಜನಿಕರ ಸಹಕಾರದಲ್ಲಿ ಕಿತ್ತೆಸೆದು ಸಂಚಾರ ಮುಕ್ತಗೊಳಿಸಿದ್ದಾರೆ. ನಾಲ್ಕು ತಿಂಗಳ ಹಿಂದೆಯೇ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಏಪ್ರಿಲ್ ಒಂದರಿಂದ ದ್ವಿಚಕ್ರ, ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಲಾಗಿತ್ತು. ಸಣ್ಣ ನೀರಾವರಿ ಇಲಾಖೆ ಆದೇಶ ಸಿಗದೇ
ಉಳ್ಳಾಲ: ಕರ್ಕಷ ಹಾರ್ನ್ ಬಳಸುತ್ತಿದ್ದ ವಾಹನಗಳನ್ನು ತಡೆದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಮೂರು ದಿನಗಳಲ್ಲಿ ಒಟ್ಟು 130 ವಾಹನಗಳ ಹಾರ್ನ್ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಠಾಣಾಧಿಕಾರಿ ರಮೇಶ್ ಹಾನಾಪುರ ನೇತೃತ್ವದ ಪೊಲೀಸರ ತಂಡ ತಲಪಾಡಿಯಲ್ಲಿ ತಪಾಸಣೆ ನಡೆಸಿ ಕ್ರಮಕೈಗೊಂಡಿದ್ದಾರೆ. ಟ್ರಕ್ ಗಳಲ್ಲಿ ಕಾನೂನು ಉಲ್ಲಂಘಿಸಿ ಕರ್ಕಶವಾದ ಹಾರ್ನ್ ಬಳಕೆ ಮಾಡುತ್ತಿರುವ ಕುರಿತು ಸಾರ್ವಜನಿಕ ವಲಯದಿಂದ ದೂರುಗಳು ಬಂದ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ.
ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ಮೇಲೆ ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿಯಿಂದ ಪೈಪುಗಳು ಕೆಳಗೆ ರಸ್ತೆಗೆ ಉರುಳಿ ಸಂಭಾವ್ಯ ಅನಾಹುತ ತಪ್ಪಿದೆ.ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ ದಾಸ್ತಾನು ಇಡಲು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ತೊಕ್ಕೊಟ್ಟು ಫ್ಲೈಓವರ್ ಮೇಲೆ ಲಾರಿ ತೆರಳುವ ಸಂದರ್ಭ , ಪೈಪ್ ಗಳನ್ನು ಕಟ್ಟಲಾಗಿದ್ದ ವಸ್ತು ತುಂಡಾಗಿ ಲಾರಿಯಿಂದ ಪೈಪುಗಳು ರಸ್ತೆಗೆ ಉರಳಿದೆ.
ಉಳ್ಳಾಲ : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿಯಾದ ನೇಬಿಸ (ದಿವಂಗತ ಅಬ್ದುಲ್ ಖಾದರ್) ರ ಮನೆಯಲ್ಲಿ ಇಂದು ಮುಸ್ಸಂಜೆ 6.50ರ ವೇಳೆ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ರಭಸಕ್ಕೆ ಮನೆಯು ಸಂಪೂರ್ಣವಾಗಿ ಕರಕಲವಾಗಿದ್ದು, ಯಾವುದೇ ಪ್ರಾಣ ಹಾನಿ ನೋವು ಸಂಭವಿಸಿರುವುದಿಲ್ಲ. ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್’ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಯಾರಿಗೂ ಪ್ರಾಣ ಹಾನಿಯಾಗಿರುವುದಿಲ್ಲ, ಆದರೆ ಮನೆಯು ಸಂಪೂರ್ಣವಾಗಿ
ಉಳ್ಳಾಲ: ಬೆಂದೂರ್‍ವೆಲ್ ಖಾಸಗಿ ಬಸ್ ಚಾಲಕನ ಧಾವಂತಕ್ಕೆ ಬಲಿಯಾದ ತೊಕ್ಕೊಟ್ಟು ಸೇವಂತಿಗುಡ್ಡೆ ನಿವಾಸಿ ದಿ.ಆಂಟೋನಿ ಮೊಂತೇರೊ ಪತ್ನಿ ಐರೀನ್ (72) ಕೆಲ ವರ್ಷಗಳ ಹಿಂದೆ ಅಂಗನವಾಡಿ ಸಹಾಯಕಿಯಾಗಿ ನಿವೃತ್ತಿ ಹೊಂದಿದ್ದರು. ಎಂದಿನಂತೆ ಪ್ರತಿ ಗುರುವಾರ ಬಿಕರ್ನಕಟ್ಟೆ ಚರ್ಚಿನ ಪೂಜೆಗೆಂದು ತೆರಳಿದವರು ಇಂದು ವಾಪಸ್ಸಾಗಲಿಲ್ಲ ಅನ್ನುವ ನೋವನ್ನು ಮನೆಮಂದಿ ವ್ಯಕ್ತಪಡಿಸಿದ್ದಾರೆ. ಸೇವಂತಿಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ
ಉಳ್ಳಾಲ: ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಇಂದು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಮಾ.28ರ ನಸುಕಿನ ಜಾವ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿ ಒಳರಸ್ತೆಯಲ್ಲಿ ನಿಲ್ಲಿಸಿದ್ದ ರಾಜೇಶ್ ಎಂಬವರಿಗೆ ಸೇರಿದ ಬೈಕನ್ನು ಕಳ್ಳರು ಕಳವು ನಡೆಸಿದ್ದರು. ಕೃತ್ಯ
ಯುವಕ,ಯುವತಿಯನ್ನ ಅಡ್ಡಗಟ್ಟಿ ಸುಲಿಗೆ;ಉಳ್ಳಾಲ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ,ಬೈಕ್,ಐಫೋನ್ ಎಗರಿಸಿದವರ ಬಂಧನ.ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ಬೈಕಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡ ಕಟ್ಟಿ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದ ಜಿಯೋ ಪೆಟ್ರೋಲ್ ಪಂಪ್ ಬಳಿ ಕಳೆದ ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯುವಕ




























