ಉಳ್ಳಾಲ: ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ನೇಮಕ ಕಾಂಗ್ರೆಸ್-ಬಿಜೆಪಿ ಮೈತ್ರಿಯಿಂದ ಮಾಡಲಾಗಿದೆ . ಈ ಕುರಿತ ವರದಿಯನ್ನು ನಗರಸಭೆ ಅಧ್ಯಕ್ಷರು ಜಿಲ್ಲಾಧಿಕಾರಿಗೆ ನೀಡಿದ್ದಾರೆ ಅನ್ನುವ ನಗರಸಭೆ ಸದಸ್ಯರೊಬ್ಬರ ಆರೋಪ ಎರಡು ಪಕ್ಷಗಳ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಗಿ ಅಧ್ಯಕ್ಷರು ರಾಷ್ಟ್ರಗೀತೆಯನ್ನು ಹಾಡದೇ ಅರ್ಧದಲ್ಲೇ ಸಭೆಯಿಂದ ಹೊರನಡೆದ ಘಟನೆ ಇಂದು
ಉಳ್ಳಾಲ: ಕೊರಗಜ್ಜನ ಕುರಿತಾದ ಬಹು ಬಾಷಾ ಚಿತ್ರ “ಕರಿ ಹೈದ ಕರಿಯಜ್ಜ” ದ ಯಶಸ್ಸಿಗೆ ಕಲ್ಲಾಪು ಬುರ್ದುಗೋಳಿಯ ಕೊರಗಜ್ಜ-ಗುಳಿಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿದ ನಟಿಯರಾದ ಭವ್ಯ ,ಶೃತಿ ಮತ್ತು ಚಿತ್ರ ತಂಡವು ಗುಳಿಗನಿಗೆ ಹರಕೆಯ ಹುಂಜವನ್ನ ಸಮರ್ಪಿಸಿದ್ದಾರೆ. ತ್ರಿವಿಕ್ರಮ ಸಪಲ್ಯ ಅವರು 5 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ” ಕರಿ ಹೈದ ಕರಿಯಜ್ಜ” ಚಿತ್ರದ ಚಿತ್ರೀಕರಣದ ಆರಂಭದಲ್ಲೇ ನಿರ್ದೇಶಕರಾದ ಸುಧೀರ್ ರಾಜ್ ಉರ್ವ
ಉಳ್ಳಾಲ: ದೇರಳಕಟ್ಟೆ ಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೇಷನ್ ಆಂಕಾಲಜಿ ಕ್ಯಾನ್ಸರ್ ವಿಭಾಗದ ತಜ್ಞ ವೈದ್ಯರಾದ ಗುರುಪುರ ಪರಾರಿ ದೋಟ ಕೊಳಕೆಬೈಲು ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿರುವ ಡಾ. ಜಯರಾಮ ಶೆಟ್ಟಿ(53) ಹೈದಯಾಘಾತದಿಂದ ಜ.,11ರಂದು ಬುಧವಾರ ನಿಧನ ಹೊಂದಿದರು. ಮಂಗಳೂರಿನ ಕೆ.ಎಂಸಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕೋತ್ತರ ಉನ್ನತ ಶಿಕ್ಷಣ ಪಡೆದ ಬಳಿಕ ಸುಮಾರು ಒಂದು ದಶಕಗಳಿಗಿಂತ ಹೆಚ್ಚು ಕಾಲ
ಉಳ್ಳಾಲ: ಬೈಕಿನಲ್ಲಿ ಗೋಣಿಚೀಲದಲ್ಲಿ ರೂ.40,000 ಮೌಲ್ಯದ ಗಾಂಜಾ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿ ತಚ್ಚಣಿ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಮಂಜೇಶ್ವರ ಸುಂಕದಕಟ್ಟೆಯ ಮೊಹಮ್ಮದ್ ರಾಝಿಕ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಅಸ್ಗರ್ ತಲೆಮರೆಸಿಕೊಂಡಿದ್ದಾನೆ. ಇಬ್ಬರು ತಲಪಾಡಿ ಗ್ರಾಮದ ತಚ್ಚಣಿ ಎಂಬಲ್ಲಿ ಗಾಂಜಾ ಮಾರಾಟ ಮಾಡಲು ಬಂದಿದ್ದರು.
ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಸಂಭವಿಸಿದೆ. ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ (20) ಗಾಯಾಳು. ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವ ಸಂದರ್ಭ ಬೈಕ್ ಡಿವೈಡರಿಗೆ ಬಡಿದಿದ್ದು, ಪರಿಣಾಮ ಭೂಷಣ್ ಇನ್ನೊಂದು ರಸ್ತೆಗೆ ಎಸೆಯಲ್ಪಟ್ಟಿದ್ದರು. ತಲೆಗೆ
ಉಳ್ಳಾಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ ಆಗಿದ್ದು, ಕೋಮುವಾದ ಹುಟ್ಟೋದು ಇಲ್ಲಿಂದ, ಇದು ಕೊಮುವಾದದ ಲ್ಯಾಬೋರೇಟರಿ, ಬಿಜೆಪಿ ಬಂಡವಾಡಳವೇ ಇದು ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಅವರು ಹರೇಕಳ ಕಡವಿನಬಳಿಯ ಯು.ಟಿ ಫರೀದ್ ವೇದಿಕೆಯಲ್ಲಿ ಜರಗಿದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಧಿಕಾರಕ್ಕೆ
ಉಳ್ಳಾಲ: ಬಸ್ ನಲ್ಲಿ ಕಳೆದುಹೋದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಮಾಲೀಕರ ಸಹಕಾರದೊಂದಿಗೆ ಪೆÇಲೀಸರಿಗೆ ವಾಪಸ್ಸು ಮಾಡಿ ಪ್ರಾಮಾಣಿಕತೆ ಮೆರೆದÀ ಘಟನೆ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ನಡೆದಿದೆ. ಜ.1 ರಂದು ಮಂಗಳೂರಿನಿಂದ ಉಳ್ಳಾಲ ಕಡೆಗೆ ಶಾಲಿಮಾರ್ 44ಸಿ ಬಸ್ಸಿನಲ್ಲಿ ಬಿಸಿರೋಡ್ ಮೂಲದ ಮಹಿಳೆ ತಸ್ಲಿಮಾ ಪ್ರಯಾಣಿಸುತ್ತಿರುವಾಗ 18 ಗ್ರಾಂ ತೂಕದ ಚಿನ್ನದ ಬಳೆಯನ್ನು ಕಳೆದುಕೊಂಡಿದ್ದರು.ಉಳ್ಳಾಲದ ತಾಜ್ ಮಹಲ್ ಸಭಾಂಗಣದಲ್ಲಿ ಮದುವೆ ಸಮಾರಂಭಕ್ಕೆ
ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಿಂದ ಜ್ವರ ,ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದನಂತೆ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ ,ಕುಟುಂಬ
ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದನು. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಕಾರು ಚಾಲಕನ
ಉಳ್ಳಾಲ: ವಿದೇಶಿ ವಿದ್ಯಾರ್ಥಿ ಗಳಿದ್ದ ಸ್ಕೂಟರ್‍ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೆÇಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಅಹಮ್ಮದ್ ಮುಬಾರಿಷ್ ಶುಕ್ರವಾರ ಸಂಜೆ ಕಾರಿನಲ್ಲಿ ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ