ಉಳ್ಳಾಲ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು ರಾಜ್ಯದಲ್ಲಿ ಪ್ರಬಲ ಪರ್ಯಾಯ ಶಕ್ತಿಯಾಗಿ ಮೂಡಿಬರುವ ಮೂಲಕ ಮುಂದಿನ ವಿಧಾನಸಭೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಹೇಳಿದರು. ಸೋಶಿಯಲ್
ಉಳ್ಳಾಲ: ಸಂಚಾರಿ ಠಾಣಾ ಎಎಸ್ ಐ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ ನಡೆಸಿದ್ರು.ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೆಪ್ಪು ಸಂಚಾರಿ ಠಾಣೆಯ ಎಎಸ್ ಐ ಆಲ್ಬರ್ಟ್ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು
ಉಳ್ಳಾಲದ ಅಬ್ಬಕ್ಕ ಸರ್ಕಲ್ ನಲ್ಲಿ ಲಿಟಲ್ ಹಾರ್ಟ್ ಕಿಂಡರ್ ಗಾರ್ಟನ್ ಸಂಸ್ಥೆಯ ಮಾಲಕಿ ಹಾಗೂ ಶಿಕ್ಷಕಿ ಹರಿಣಾಕ್ಷಿ ಎಂಬವರ ( 50)ಮೃತದೇಹ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ ನಾಪತ್ತೆಯಾಗಿದ್ದ ಹರಿಣಾಕ್ಷಿ ಅವರನ್ನು ಇಬ್ಬರು ಪುತ್ರರು ಮನೆ ಸಮೀಪವಿಡೀ ಹುಡುಕಾಡಿ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಳ್ಳಾಲ ಪೊಲೀಸರು ಹುಡುಕಾಟ ನಡೆಸಿದಾಗ ಮಧ್ಯಾಹ್ನ ವೇಳೆ
ಉಳ್ಳಾಲ: ಅಪರಿಚಿತ ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66 ರ ಜೆಪ್ಪಿನಮೊಗರು ಬಳಿ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹೊರಜಿಲ್ಲೆಯ ಕಾರ್ಮಿಕರಾಗಿದ್ದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೆದ್ದಾರಿ ಬಳಿಯ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದಾಗ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ
ಮಳೆಯಿಂದ ಹಾನಿಯಾದ ಪಜೀರು ಪಾನೇಲ ಎಂಬಲ್ಲಿ ಮಿಂಗಲ್ ವೇಗಸ್ ಎಂಬುವರ ಮನೆಯ ವೀಕ್ಷಣೆಗೆ ತೆರಳಿದ್ದ ಸಂದರ್ಭ ಶಾಸಕರು, ವಾರ್ಡಿನ ಸದಸ್ಯರೊಬ್ಬರ ರಿಕ್ಷಾವನ್ನು ಚಲಾಯಿಸಿ ಮನೆಯನ್ನು ವೀಕ್ಷಿಸಿದ್ದಾರೆ. ಇವರ ಜೊತೆಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಪ್ರಶಾಂತ್ ಕಾಜವ, ಯೂಸುಫ್ ಪಾನೇಲ, ರೊನಾಲ್ಡ್ ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದರು.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಗ್ರಾಮದ ಮುಳ್ಳುಗುಡ್ಡೆ ಎಂಬಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತ ಕಿಶೋರ್ ಯಾನೆ ಕಿಚ್ಚು ಎಂಬಾತ ಇಂದು ತನ್ನ ಮೇಲೆ ಮೂರು ಜನ ವ್ಯಕ್ತಿಗಳು ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ವದಂತಿ ಹಬ್ಬಿಸಿ ಈ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತು ಆತಂಕ ಸೃಷ್ಟಿಸಲು ಕಾರಣನಾಗಿದ್ದು ಈತ ವದಂತಿ ಹರಡಿರುವುದರ ಹಿಂದೆ ನಿಗೂಢ ಉದ್ದೇಶಗಳು ಇರುವ ಸಾಧ್ಯತೆಗಳಿದ್ದು ಇದರ ಹಿಂದೆ ಈತನಿಗೆ ಕೆಲವರು ಪ್ರೇರೇಪಣೆ ನೀಡಿ ಪ್ರದೇಶದಲ್ಲಿ
ಉಳ್ಳಾಲ: ಮಲತಂದೆಯೋರ್ವ 9 ರ ಹರೆಯದ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊರಜಿಲ್ಲೆಯಿಂದ ಬಂದ ಕುಟುಂಬ ಪಾವೂರಿನಲ್ಲಿ ನೆಲೆಸತ್ತು. ಮಹಿಳೆಯ ಪತಿ ಸಾವನ್ನಪ್ಪಿದ ಬಳಿಕ ಅಶ್ವಥ್ ಜತಗೆ ಸಂತ್ರಸ್ತ ಬಾಲಕಿಯ ತಾಯಿ ಸಂಸಾರ ನಡೆಸುತ್ತಿದ್ದರು. ಆಕೆ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾದ
ನದಿಗೆ ಅಡ್ಡಲಾಗಿ ಕಟ್ಟುವ ಸೇತುವೆಯೊಂದು ಹೇಗೆ ಊರೊಂದರ ಚಿತ್ರಣವನ್ನೇ ಬದಲಿಸುತ್ತದೆನ್ನುವುದನ್ನು ನಮಗೆ ಅನೇಕ ಬಾರಿ ಊಹಿಸಲೂ ಸಾಧ್ಯವಾಗುವುದಿಲ್ಲ.ಆ ಬದಲಾವಣೆಯಲ್ಲಿ ನಾವೂ ಬದಲಾಗಿ ಬಿಡುತ್ತೇವೆ. ಇಂತಹ ಬದಲಾವಣೆಗಳಾಗುತ್ತವೆ ಎಂದು ತಿಳಿದು ನಾವು ಥ್ರಿಲ್ ಆಗುತ್ತೇವೆ. ಆದರೆ ಬದಲಾವಣೆಗಳು ಘಟಿಸಿ ಊರಿನ ಚಿತ್ರಣ ಬದಲಾದ ಬಳಿಕ ನಮ್ಮೂರು ಹೀಗಿತ್ತು ಎನ್ನುವುದನ್ನು ನಾವು ಬಲು ಬೇಗ ಮರೆತುಬಿಡುತ್ತೇವೆ.ಹಿಂದಿನ ಚಿತ್ರಣಗಳು ಕಾಲಗರ್ಭದಲ್ಲಿ ಅಡಗುತ್ತಿದ್ದಂತೆಯೇ ನಮ್ಮ
ಉಳ್ಳಾಲ: ರೈಲ್ವೇ ಇಲಾಖೆ ಗೋಡೌನ್ನಲ್ಲಿರಿಸಲಾದ ಲಕ್ಷಾಂತರ ಬೆಲೆಬಾಳುವ ವಿದ್ಯುತ್ ತಂತಿ ಕಳವು ನಡೆಸಿ ಪರಾರಿಯಾಗುತ್ತಿದ್ದ ಟೆಂಪೋವಾಹನ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಉರುಳಿಬಿದ್ದು ಇಬ್ಬರು ಮಹಿಳೆಯರು ಹಾಗೂ ಓರ್ವ ಯುವಕ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದಲ್ಲಿದ್ದ ಟೆಂಪೋ ಚಾಲಕನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ತಮಿಳುನಾಡು ಮೂಲದವರಾದ
ಉಳ್ಳಾಲ ನಗರಕ್ಕೆ ಪ್ರವೇಶಿಸುವ ಹೆಬ್ಬಾಗಿಲಾಗಿರುವ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಳ್ಳಲಿರುವ 110 ಅಡಿ ಎತ್ತರದ ಧ್ವಜಸ್ತಂಭ ಏರಿಸುವ ಕಾರ್ಯ ಪೂರ್ಣಗೊಂಡಿದ್ದು ಶೀಘ್ರದಲ್ಲಿ ಉದ್ಘಾಟನೆ ನಡೆಯಲಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಉಳ್ಳಾಲ ಓವರ್ ಬ್ರಿಡ್ಜ್ ಬಳಿ ಮಂಗಳವಾರ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಳ್ಳಾಲದ ಜನತೆಯ ಗೌರವದ ಸಂಕೇತವಾಗಿ ಈ ಧ್ವಜ ಸ್ತಂಭ ನಿರ್ಮಾಣವಾಗಿದೆ. ಅದರ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದ್ದು