ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದ ಉಳ್ಳಾಲ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ
ಉಳ್ಳಾಲ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ. ಬಿಜೆಪಿ ಕಾರ್ಯಕರ್ತ, ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಬೈಕಲ್ಲಿ ಬಂದ ಮೂವರು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಸ್ನೇಹಿತ ಮಂಜುನಾಥ್ ಜೊತಗೆ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಪವಾಡಸದೃಶವಾಗಿ ತಲವಾರು ದಾಳಿ ಕೈಗೆ ಮಾತ್ರ
ಉಳ್ಳಾಲ: ಮನೆಗೆ ನುಗ್ಗಿದ ಕಳ್ಳರು ಲಕ್ಷ ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ. ವಿದೇಶದಲ್ಲಿ ವಾಸವಿರುವ ಸುಜಾತಾ ಎಂಬವರ ಮನೆಯಲ್ಲಿ ಕಳವು ನಡೆದಿದೆ.ಲಕ್ಷ ಬೆಲೆಬಾಳುವ ಮೂರು ಕಂಚಿನ ದೀಪಗಳನ್ನು ಕಳ್ಳರು ಕಳವು ನಡೆಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದಿರುವ ಬಗ್ಗೆ ತಿಳಿದು ಕಳ್ಳರು ಕೃತ್ಯ ಎಸಗಿದ್ದಾರೆ. ಹಿಂಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು ಸೊತ್ತುಗಳಿಗಾಗಿ ಹುಡುಕಾಡಿ ಬಳಿಕ ಏನೂ
ದೇರಳಕಟ್ಟೆ: ಅಸ್ಸಾಂ ಗೋಲಿಬಾರ್ ದೌರ್ಜನ್ಯ ಗ್ರಾಮಸ್ಥರ ಹತ್ಯೆ ಖಂಡಿಸಿ ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ದೇರಳಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು. ಡಿವೈ ಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಪ್ರತಿಭಟನೆ ಉದೇಶಿಸಿ ಮಾತನಾಡಿ ಅಸ್ಸಾಂ ದರಾಂಗ್ ಜಿಲ್ಲೆಯಲ್ಲಿ ಅಮಾನುಷವಾಗಿ ಪೆÇಲೀಸರು ನಾಗರಿಕನನ್ನು ಹತ್ಯೆ ನಡೆಸಿರುವುದು ಮಾನವ ಕುಲ ತಲೆತಗ್ಗಿಸಬೇಕಾದ ವಿಚಾರ. ಜನರ ಮನವೊಲಿಸದೆ ಭೂಮಿಯನ್ನು ಬಿಟ್ಟುಕೊಡಲು ಒತ್ತಡ ಹಾಕಿ ಕಸಿಯುವ ಪ್ರಯತ್ನ ನಡೆದಿದೆ ಎಂದು
ಉಳ್ಳಾಲ : ಕಾರಿನಡಿಗೆ ಬಿದ್ದ ಬಾಲಕನೋರ್ವ ಪವಾಡಸದೃಶವಾಗಿ ಪಾರಾದ ಘಟನೆ ಬಂಟ್ವಾಳದ ಇರಾ ಬಳಿ ನಡೆದಿದೆ. ಘಟನೆ ಕುರಿತ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಾನಂದ್ ಎಂಬವರ ಪುತ್ರ ಮನೋಜ್ (12) ಗಾಯಾಳು ಬಾಲಕ. ಆಟವಾಡಲೆಂದು ಮನೆಯಿಂದ ಹೊರ ಓಡಿಬಂದ ಬಾಲಕ ರಸ್ತೆ ದಾಟುವಾಗ ಕಾರು ಆತನ ಮೇಲೆ ಹರಿದಿದೆ. ಕಾರಿನಡಿಗೆ ಬಾಲಕ ಬಿದ್ದು ಎಡಕಾಲು ಮುರಿತಕ್ಕೊಳಗಾಗಿದ್ದು, ಪ್ರಾಣಾಪಾಯದಿಂದ ಪವಾಡಸದೃಶವಾಗಿ ಪಾರಾಗಿದ್ದಾರೆ
ಶೈಕ್ಷಣಿಕ ಮತ್ತು ಮೆಡಿಕಲ್ ಹಬ್ ಎಂದೇ ಗುರುತಿಸಲ್ಪಟ್ಟಿರುವ ಕುತ್ತಾರ್-ದೇರಳಕಟ್ಟೆ ಪರಿಸರದ ಪ್ರಮುಖ ರಸ್ತೆಯ ಬದಿ ಅಂದರೆ ಮದನಿ ನಗರದ ಮೂರನೆ ಅಡ್ಡರಸ್ತೆಯ ಬಳಿ ರಾಶಿ ಹಾಕಲಾಗಿದ್ದ ತ್ಯಾಜ್ಯ ವಸ್ತುವನ್ನು ಮುನ್ನೂರು ಗ್ರಾಮದ 5ನೆ ವಾರ್ಡಿನ ಸದಸ್ಯೆ ರೆಹನಾ ಭಾನು ತಡರಾತ್ರಿಯವರೆಗೂ ಸ್ವತಃ ನಿಂತು ತೆರವುಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಕಳೆದೊಂದು ವಾರದಿಂದ ತ್ಯಾಜ್ಯ ವಸ್ತುಗಳು ರಾಶಿ ಬೀಳುತ್ತಿತ್ತು. ಇದರಿಂದ ಪರಿಸರ ಗಬ್ಬೆದ್ದು ನಾರುತ್ತಿತ್ತಲ್ಲದೆ
ಉಳ್ಳಾಲ: ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ನಡೆದಿದೆ. ವಿಚಾರ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿ ತೋಟದ ಮಾಲೀಕನೇ ಕೋಣವನ್ನು ಬೇರೆಯವರ ಮೂಲಕ ಹತ್ಯೆ ನಡೆಸಿರುವುದಾಗಿ ಆರೋಪಿಸಿದ್ದಾರೆ.ಬಲ್ಯ ಎಂಬಲ್ಲಿರುವ ಜಯರಾಮ ಶೆಟ್ಟಿ ಎಂಬವರ ತೋಟದ ಬಳಿ ಕೃತ್ಯ ನಡೆದಿದೆ. ಕೋಣದ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಕಡಿದ ಸ್ಥಿತಿಯಲ್ಲಿದ್ದು,
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದಡಿ ಇತ್ತೀಚಿಗೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ ಮನೆಗೆ ಮುತ್ತಿಗೆ ಹಾಕಿದ್ದು ಮುತ್ತಿಗೆ ಹಾಕಿದವರನ್ನು ಉಳ್ಳಾಲ ಪೊಲೀಸರು ಬಂದಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಜಿಲ್ಲಾ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಇಂದು ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುಲ್ ರೆಹ್ಮಾನ್ ಬಾಷಾ ಅವರ ಮನೆಗೆ
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್‌ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು
ಉಳ್ಳಾಲ: ಕಾರು ಚಾಲಕನ ಅವಾಂತರದಿಂದ ರಿಕ್ಷಾ ಸಹಿತ ಕಾರೊಂದು ಜಖಂಗೊಂಡು ಸರಣಿ ಅಪಘಾತ ನಡೆದು, ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಕುತ್ತಾರು ಮದನಿನಗರ ಸಮೀಪ ತಡರಾತ್ರಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಹೋಂಡ ಸಿವಿಕ್ ಕಾರೊಂದು ಧಾವಿಸಿ ಎದುರಿನಿಂದ ಬರುತ್ತಿದ್ದ ರಿಕ್ಷಾಗೆ ಢಿಕ್ಕಿ ಹೊಡೆದು ಬಳಿಕ ವೈದ್ಯ ವಿದ್ಯಾರ್ಥಿಗಳಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಚಾಲಕ ಬದ್ಯಾರು ನಿವಾಸಿ

















