Home Posts tagged #ullala (Page 5)

ಉಳ್ಳಾಲ: ರೋಹಿಣಿ ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನ ಬಿಡುಗಡೆ

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸಲಹಾ ಸಮಿತಿಯ ಹಿರಿಯ ಸದಸ್ಯೆ, ಮುಂಬಯಿಯ ಹೈಕೋರ್ಟ್ ನ್ಯಾಯವಾದಿ ರೋಹಿಣಿ ಜೆ.ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನವನ್ನು ಬಿಡುಗಡೆ ಹಾಗೂ ಕೃತಿಯ ಅರ್ಪಣೆ ಕಾರ್ಯಕ್ರಮ ಮಂಗಳೂರಿನ ಹೊಯಿಗೆಬೈಲ್ ರತ್ನಾ ನಿವಾಸದಲ್ಲಿ ನಡೆಯಿತು. ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯ ಸಲಹಾ ಸಮಿತಿ ಸದಸ್ಯ ನ್ಯಾಯವಾದಿ

ಉಳ್ಳಾಲ: ಡ್ರೈನೇಜ್ ನೀರಿನಲ್ಲಿ ತೊಕ್ಕೊಟ್ಟು ರಿಕ್ಷಾ ಚಾಲಕರ ಬದುಕು- ಪ್ರತಿಭಟನೆಗೆ ನಿರ್ಧಾರ

ಉಳ್ಳಾಲ: ಉಳ್ಳಾಲ ತಾಲೂಕಿನಲ್ಲೇ ಅತಿ ಹೆಚ್ಚು ರಿಕ್ಷಾ ಚಾಲಕರಿರುವ ತೊಕ್ಕೊಟ್ಟು ರಿಕ್ಷಾ ಚಾಲಕರು ಕಳೆದ ಎರಡೂವರೆ ತಿಂಗಳಿನಿಂದ ಸಂಡಾಸು ನೀರಿನ ಮೇಲೆಯೇ ನಿಂತು ದುಡಿಯುವ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಕಟ್ಟಡದ ಮಾಲೀಕರು ತ್ಯಾಜ್ಯ ನೀರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದೆ ಸಮಸ್ಯೆ ನಿರ್ಮಾಣವಾಗಿದೆ. ದಿನದಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು, ವೃದ್ಧರು ಸೇರಿದಂತೆ ಲಕ್ಷದಷ್ಟು ಮಂದಿ ನಡೆದುಕೊಂಡು ಹೋಗುವ ರಸ್ತೆಯಲ್ಲೇ ತ್ಯಾಜ್ಯ ನೀರು ಹರಿದಾಡಿದರೂ

ಉಳ್ಳಾಲ: ಸೆ.29ಕ್ಕೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ-2023

ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.29ರಂದು ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿ ವೈ ನಾಯಕ್ ಅವರು ಹೇಳಿದರು. ಉಳ್ಳಾಲ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲ್ಲೂಕು ಪಂಚಾಯತ್ ಉಳ್ಳಾಲ , ಉಳ್ಳಾಲ

ಇರಾದಲ್ಲಿ ವಿ4 ನ್ಯೂಸ್ ಕಾಮಿಡಿ ಪ್ರೀಮಿಯರ್ ಲೀಗ್‍ಗೆ ಅದ್ಧೂರಿ ಚಾಲನೆ-ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಭಾಗಿತ್ವದೊಂದಿಗೆ ಅರ್ಥಪೂರ್ಣ ಸಮಾರಂಭ

ಕರಾವಳಿಯ ಪ್ರತಿಷ್ಠಿತ ಸುದ್ದಿ ವಾಹಿನಿ ವಿ4 ನ್ಯೂಸ್ ಮತ್ತು ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಯೋಗದಲ್ಲಿ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ವಿ4 ನ್ಯೂಸ್‍ನ ಕಾಮಿಡಿ ಪ್ರೀಮಿಯರ್ ಲೀಗ್‍ಗೆ ಅದ್ಧೂರಿ ಚಾಲನೆ ದೊರೆಯಿತು. ಸಭಾ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಬ್ಯಾಂಕ್‍ನ ಪ್ರಬಂಧಕರಾದ ಶಿವಪ್ರಸಾದ್ ರೈ ಶಿಬರೂರು

ತೊಕ್ಕೊಟ್ಟು : ಸ್ಕೂಟರ್ ನಿಂದ ಬಿದ್ದು ಮಹಿಳೆ ಸಾವು

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು‌ ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ‌ ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ‌ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್ ನಲ್ಲಿ

ಸೆ.24ರಂದು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್-4

ಉಳ್ಳಾಲ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಯೋಗದಲ್ಲಿ ಸನ್ ಪ್ರೀಮಿಯಮ್ ರಿಫೈಂಡ್ ಸನ್ ಫ್ಲವರ್ ಆಯಿಲ್ ಪ್ರೆಸೆಂಟ್ಸ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಪ್ರದರ್ಶನವು ಸೆ.24ರಂದು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಒಟ್ಟು 12 ತಂಡಗಳು ಕಾಮಿಡಿ ಪ್ರದರ್ಶನ ನೀಡಲಿದೆ. ಎಸ್ಸೆನ್ ಕುಡ್ಲ ಕುಸಾಲ್, ಕ್ಲಿಂಗ್ ಕೃಷ್ಣ ಕೆಪೆ ಜೈಮಾತಾ,

ಮಂಗಳೂರು ವಿವಿ ಕ್ಯಾಂಪಸ್‍ನಲ್ಲಿ ಬಿಗಿ ಬಂದೋಬಸ್ತ್‍ನಲ್ಲಿ ಗಣೇಶೋತ್ಸವ ಆಚರಣೆ

ಮಂಗಳೂರು ವಿಶ್ವವಿದ್ಯಾನಿಲಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗಣೇಶೋತ್ಸವಕ್ಕೆ ಕೇಳಿಬಂದ ಅಪಸ್ವರಗಳ ನಡುವೆಯೂ ಅದೇ ಸ್ಥಳದಲ್ಲಿ ಉಪಕುಲಪತಿಗಳ ಸಮಕ್ಷಮದಲ್ಲಿ ಪರಿಸರಪೂರಕ ಗಣೇಶನ ವಿಗ್ರಹವನ್ನಿಟ್ಟು ಗಣೇಶೋತ್ಸವ ಆಚರಣೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಕೊಣಾಜೆ ವಿಶ್ವವಿದ್ಯಾನಿಲಯದ ಕ್ಯಾಂಪಸ್ ಸುತ್ತ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ನಸುಕಿನ ಜಾವ ಬಂದೋಬಸ್ತ್ ನಡುವೆ ಗಣೇಶನ ವಿಗ್ರಹವನ್ನು ಮಂಗಳ ಸಭಾಂಗಣಕ್ಕೆ ತರಲಾಯಿತು. ಪರಿಸರ

ಉಳ್ಳಾಲ: ಅಸೌಖ್ಯದಲ್ಲಿರುವ ಮಗುವಿಗೆ ಧನಸಹಾಯ ಹಸ್ತಾಂತರಿಸಿದ ಧರ್ಮನಗರ ಜ್ಯೂನಿಯರ್ ಬಾಯ್ಸ್

ಉಳ್ಳಾಲ : ಉಡುಪಿಯ ರವಿ ಕಟಪಾಡಿ ಮಾದರಿಯಲ್ಲಿ ಉಳ್ಳಾಲ ಧರ್ಮನಗರ ಜ್ಯೂನಿಯರ್ ಬಾಯ್ಸ್ ನ ಯುವಕರ ತಂಡ ಎರಡರ ಮಗುವಿನ ಚಿಕಿತ್ಸೆಗೆ ವಿಭಿನ್ನ ರೀತಿಯ ವೇಷತೊಟ್ಟು ಸಂಗ್ರಹಿಸಿದ ನಗದನ್ನು ಹೆತ್ತವರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಉಳ್ಳಾಲ ತೆಂಗಿನಹಿತ್ಲು ರಾಹುಗುಳಿಗ ಬನದ ಅರ್ಚಕ ಭಾಸ್ಕರ್ ತೆಂಗಿನಹಿತ್ಲು ಅವರು ಬಂಟ್ವಾಳ ತಾಲೂಕಿನ ಮಂಕುಡೆಕೋಡಿ ನಿವಾಸಿ ಎರಡರ ಹರೆಯದ ನ್ಯೂರೋಬ್ಲಾಸ್ಟೋಮಾ (ಕ್ಯಾನ್ಸರ್) ಕಾಯಿಲೆಯಿಂದ ಬಳಲುತ್ತಿರುವ ಹೇಮಂತ್

ಉಳ್ಳಾಲ: ಎಂಡಿಎಂಎ ಸಾಗಾಟ, ಇಬ್ಬರ ಬಂಧನ

ಉಳ್ಳಾಲ: ಬೈಕಿನಲ್ಲಿ ಬಂದು ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಹಣಕ್ಕಾಗಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೋಲಿಸ್ರ ತಂಡ ಬಂಧಿಸಿದ್ದಾರೆ. ತ್ರಿಶೂರ್ ವಡಕಂಚೇರಿ ನಿವಾಸಿ ಶೇಕ್ ತನ್ಸಿರ್ (20) ಮತ್ತು ಕೋಝಿಕ್ಕೋಡ್ ಕಡಮೇರಿ ನಿವಾಸಿ ಸಾಯಿಕೃಷ್ಣ ( 19) ಬಂಧಿತರು. ಇಬ್ಬರಿಂದ 2.77 ಗ್ರಾಂ ತೂಕದ ನಿಷೇಧಿತ ಎಂಡಿಎಂಎ, ಎರಡು ಮೊಬೈಲ್ ಹಾಗೂ ರೂ. 50,000 ಬೆಲೆಬಾಳುವ ಎಫ್ ಝೆಡ್ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ

ಉಳ್ಳಾಲ ನಿವಾಸಿ ಬಂಟ್ವಾಳ ಪತ್ನಿ ಮನೆಯಲ್ಲಿ ನೇಣುಬಿಗಿದು ಸಾವು

ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಆತ್ಮಹತ್ಯೆಗೈದ ಘಟನೆ ನಡೆದಿದೆ. ರವೀಂದ್ರ ಅವರು ನಿನ್ನೆ‌ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮದ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನು ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಪತ್ನಿಯ ಮನೆ ವಾಪಸ್ಸಾಗಿದ್ದರು. ಸಂಜೆ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ಗಾಬರಿಗೊಂಡ