Home Posts tagged #ullala (Page 7)

Ullala – ಯುವಕ ಮಂಡಲ ಇರಾ ; ವನಮಹೋತ್ಸವ ಹಾಗು ಆಟಿದಕೂಟ ಕಾರ್ಯಕ್ರಮ

ಯುವಕ ಮಂಡಲ ಇರಾ ಇದರ ಸುವರ್ಣ ಮಹೋತ್ಸವದ ಅಂಗವಾಗಿ ವನಮಹೋತ್ಸವ ಹಾಗು ಆಟಿದಕೂಟ ಇರಾ ಬಂಟರ ಭವನದಲ್ಲಿ ನಡೆಯಿತು. ವನಮಹೋತ್ಸವ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಮಾಧವ ಉಳ್ಳಾಲ ಅವರ ಮಾರ್ಗದರ್ಶನದಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಜಯರಾಮ್ ಪೂಜಾರಿ ಹಾಗು ಗಣೇಶ್ ಕೊಟ್ಟಾರಿ ಗಿಡ ನಡುವ ಮೂಲಕ ಉದ್ಘಾಟಿಸಿದರು. ನಂತರ ಆಟಿದಕೂಟ ಕಾರ್ಯಕ್ರಮ ಉದ್ಘಾಟಿಸಿದ

ಉಳ್ಳಾಲ ; ನಿಷೇಧಿತ ಎಂಡಿಎಂಎ ಮಾರಾಟ – ರಿಕ್ಷಾ ಚಾಲಕ ಸೆರೆ

ಉಳ್ಳಾಲ : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ನನ್ನು ಬಂಧಿಸಲಾಗಿದೆ. ಬಂಧಿತನಿಂದ 12 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ ವಸ್ತುವನ್ನು ಮಾರಾಟ ಮಾಡಲು ಉಪಯೋಗಿಸಿದ ಆಟೋರಿಕ್ಷವನ್ನು ವಶಕ್ಕೆ ಪಡೆದು ವಶಕ್ಕೆ ಪಡೆದು ಕಾನೂನು ಕ್ರಮ

ತೊಕ್ಕೊಟ್ಟಿನಲ್ಲಿ ಸರಣಿ ಕಳವು ಪ್ರಕರಣ

ತೊಕ್ಕೊಟ್ಟು ಒಳಪೇಟೆಯಲ್ಲಿರುವ ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ನಡೆದಿದ್ದು, ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಹರಿಶ್ಚಂದ್ರ ಶೆಟ್ಟಿ ಎಂಬವರಿಗೆ ಸೇರಿದ ಲಕ್ಷ್ಮೀ ಕ್ಯಾಂಟೀನ್ , ಹ್ಯಾರೀಸ್ ಎಂಬವರಿಗೆ ಸೇರಿದ ಸಿಲ್ವರ್ ಸ್ಟಾರ್ ಎಂಟರ್‍ಪ್ರೈಸ್ ಸ್ಟೀಲ್ ಸಾಮಗ್ರಿಗಳ ಮಾರಾಟ ಮಳಿಗೆ ಹಾಗೂ ಮೋಹನ್ ಎಂಬವರಿಗೆ ಸೇರಿದ ಎಸ್ ಎಸ್ ಕಮ್ಯುನಿಕೇಷನ್ಸ್ ಮೊಬೈಲ್

ಸ್ಪೀಕರ್ ಕ್ಷೇತ್ರದಲ್ಲಿ ಜನರ ಸಂಕಷ್ಟ ಕೇಳುವವರು ಇಲ್ಲ ; ಮನವಿ ಕೊಡಲು ಹೋದರೆ ಅಧಿಕಾರಿಗಳೇ ನಾಪತ್ತೆ

ಸ್ಪೀಕರ್ ಕ್ಷೇತ್ರವಾದ ಉಳ್ಳಾಲದ ನಗರ ಸಭೆ ಕಚೇರಿಗೆ ಹೋದರೆ ಜನರ ಸಂಕಷ್ಟ ಕೇಳುವವರೇ ಇಲ್ಲ.ಕನಿಷ್ಠ ಮನವಿ ಸ್ವೀಕರಿಸಲು ಅಲ್ಲಿನ ಅಧಿಕಾರಿಗಳೇ ನಾಪತ್ತೆಯಾಗಿದ್ದಾರೆ. ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಆಟೋರಿಕ್ಷಾ ಪಾರ್ಕ್ ಕಳೆದ ಹಲವಾರು ದಶಕಗಳಿಂದ ಕಾರ್ಯಾಚರಿಸುತ್ತಿದ್ದು,ಸದ್ಯಕ್ಕೆ ಈ ಪಾರ್ಕ್ ತೀರಾ ಅವ್ಯವಸ್ಥೆಗಳಿಂದ ಕೂಡಿದೆ. ರಿಕ್ಷಾ ಪಾರ್ಕ್ ಬಳಿಯಲ್ಲೇ ಕಳೆದ ಒಂದು ತಿಂಗಳಿನಿಂದ ಡ್ರೈನೇಜ್ ತ್ಯಾಜ್ಯ ಹರಿದಾಡುತ್ತಿದ್ದು ದುರ್ನಾತದಿಂದ ಅಲ್ಲಿ ನಿಲ್ಲಲು

ಉಳ್ಳಾಲ: ನಿವೃತ್ತ ಯೋಧನಿಂದ ಮಹಿಳಾ ಪೇದೆಗೆ ಕಿರುಕುಳ

ಉಳ್ಳಾಲ: ಮಹಿಳಾ ಪೊಲೀಸ್ ಪೇದೆಗೆ ನಿವೃತ್ತ ಯೋಧನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕುಂಪಲದ ಬಗಂಬಿಲ ಎಂಬಲ್ಲಿ ನಡೆದಿದೆ. ಕೊಲ್ಯ ಕನೀರುತೋಟ ನಿವಾಸಿ, ಸದ್ಯ ಕುಂಪಲ ಅಮೃತನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುವ ಪ್ರಶಾಂತ್ (45) ಕಿರುಕುಳ ನೀಡಿದಾತ. ಠಾಣೆಯೊಂದರ ಮಹಿಳಾ ಪೇದೆ ಸ್ಕೂಟರಿನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭ ಅಡ್ಡಗಟ್ಟಿದ ನಿವೃತ್ತ ಯೋಧ ಪ್ರಶಾಂತ್, ಆಕೆ ಮೈಮೇಲೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ತಕ್ಷಣ ಬೊಬ್ಬಿಟ್ಟಾಗ

ನರಿಂಗಾನ ಗ್ರಾ.ಪಂ.ನ ದ್ವಿತೀಯ ಹಂತದ ಗ್ರಾಮಸಭೆ

ನರಿಂಗಾನ ಗ್ರಾಮದಲ್ಲಿ ರೈತರು ಹಿಂದಿನಿಂದಲೂ ಹೈನುಗಾರಿಕೆ ಬಗ್ಗೆ ಒಲವು ಹೊಂದಿದ್ದು ಅತಿ ಹೆಚ್ಚು ದನಗಳನ್ನು ಸಾಕುತ್ತಿದ್ದಾರೆ. ಆದರೆ ಗೋವುಗಳಿಗೆ ಆರೋಗ್ಯದಲ್ಲಿ ಏರುಪೇರಾದಾಗ ಸ್ವತಃ ದನದ ಮಾಲೀಕರೇ ಪಶು ವೈದ್ಯರ ಬಳಿಗೆ ಹೋದರೂ ಚಿಕಿತ್ಸೆಗೆ ಬರುತ್ತಿಲ್ಲ. ವೈದ್ಯರು ಈ ರೀತಿ ವರ್ತಿಸಿದರೆ ಹೈನುಗಾರಿಕೆ ಹೇಗೆ ಅಭಿವೃದ್ಧಿ ಸಾಧ್ಯ ಎಂದು ನರಿಂಗಾನ ಗ್ರಾಮಸ್ಥರೊಬ್ಬರು ನರಿಂಗಾನಗ್ರಾಮ ಪಂಚಾಯ್ ಸಭಾಭವನದಲ್ಲಿ ನಡೆದ ದ್ವಿತೀಹ ಹಂತದ ಗ್ರಾಮಸಭೆಯಲ್ಲಿ ವೈದ್ಯರನ್ನು

ತಲಪಾಡಿ, ಅಪ್ರಾಪ್ತೆಗೆ ಕಿರುಕುಳ : ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ

ಉಳ್ಳಾಲ: ಅಪ್ರಾಪ್ತೆ ಮೇಲೆ ಕಿರುಕುಳ ನೀಡಿರುವ ಘಟನೆ ತಲಪಾಡಿ ರಿಕ್ಷಾ ಸ್ಟ್ಯಾಂಡ್ ಬಳಿ ಇಂದು ಸಂಜೆ ವೇಳೆ ನಡೆದಿದ್ದು, ಆರೋಪಿ ಮುಡಿಪು ದರ್ಖಾಸು ಸೈಟ್ ನಿವಾಸಿ ಮುವಾದ್ (35) ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.ಆರೋಪಿ ಮುವಾದ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಗಾಂಜಾ ಸಹಿತ ಇತರೆ ಎರಡು ಪ್ರಕರಣಗಳಿದ್ದು, ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಇಂದು ಸಂಜೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಶಾಲೆಯಿಂದ

ಮುಡಿಪು : ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ

ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್ನಿನಲ್ಲಿ ತಿರುಗುವ ಸಂದರ್ಭ , ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ

ಮುನ್ನೂರು ಗ್ರಾ.ಪಂ ಸದಸ್ಯ ಭುಜಂಗ ರೈ ನಿಧನ

ಉಳ್ಳಾಲ: ಸಿಪಿಎಂ ನೇತಾರ, ಮುನ್ನೂರು ಗ್ರಾ.ಪಂ. ಸದಸ್ಯ ಕುತ್ತಾರು ಮದಕ ನಿವಾಸಿ ಭುಜಂಗ ರೈ (74) ಇವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೂಲತ: ಕಾಸರಗೋಡು ನಿವಾಸಿಯಾಗಿರುವ ಇವರು ಕುತ್ತಾರು ಮದಕಕ್ಕೆ 30 ವರ್ಷಗಳ ಹಿಂದೆ ಬಂದಿದ್ದರು. ರಿಕ್ಷಾ ಚಾಲಕರಾಗಿ ವೃತ್ತಿ ನಿರ್ವಹಿಸುತ್ತಿದ್ದವರು. ಸಿಪಿಎಂ ಪಕ್ಷದ ಚಟುವಟಿಕೆಗಳು ಹಾಗೂ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದರು. ಯಕ್ಷಗಾನ ಕಲಾವಿದರೂ ಆಗಿದ್ದ ಇವರು ಆಂಗ್ಲ ಭಾಷೆಯಲ್ಲಿ

ಕುಂಪಲ : ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ

ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವತಿಯಿಂದ ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ ನಡೆಯಿತು. ಉದ್ಯಮಿ ಕಂಪಾರ್ಟ್ ಇನ್ ಮಾಲಕ ಚಂದ್ರಹಾಸ ಶೆಟ್ಟಿ ಕಾರ್ಯಕ್ರಮಕ್ಕೆ ದೀಪಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಜೀವನವನ್ನು ರೂಪಿಸಲು ನಮಗೆ ಸಂಸ್ಕಾರ ಬಹಳ ಮುಖ್ಯ, ಇದನ್ನು ಅರಿತಾಗ ಮಾತ್ರ ನಮ್ಮ ಜೀವನ ಸುಂದರವಾಗುತ್ತದೆ, ಈ ನಿಟ್ಟಿನಲ್ಲಿ ರಂಗ ರುಕ್ಮಿಣಿ ಕಾರ್ಯಕ್ರಮ ಶ್ಲಾಘನೀಯ. ಹೊಸ ಬಾಳಿನಲ್ಲಿ ಸದಾ ಕಾಲ ನಗುವಿನೊಂದಿಗೆ ಬದುಕಿ ಎಂದು ಹಾರೈಸಿದರು.