Home Posts tagged #ullala (Page 9)

ಸ್ಪೀಕರ್ ಕ್ಷೇತ್ರದಲ್ಲಿ ಜನರ ಸಂಕಷ್ಟ ಕೇಳುವವರು ಇಲ್ಲ ; ಮನವಿ ಕೊಡಲು ಹೋದರೆ ಅಧಿಕಾರಿಗಳೇ ನಾಪತ್ತೆ

ಸ್ಪೀಕರ್ ಕ್ಷೇತ್ರವಾದ ಉಳ್ಳಾಲದ ನಗರ ಸಭೆ ಕಚೇರಿಗೆ ಹೋದರೆ ಜನರ ಸಂಕಷ್ಟ ಕೇಳುವವರೇ ಇಲ್ಲ.ಕನಿಷ್ಠ ಮನವಿ ಸ್ವೀಕರಿಸಲು ಅಲ್ಲಿನ ಅಧಿಕಾರಿಗಳೇ ನಾಪತ್ತೆಯಾಗಿದ್ದಾರೆ. ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಆಟೋರಿಕ್ಷಾ ಪಾರ್ಕ್ ಕಳೆದ ಹಲವಾರು ದಶಕಗಳಿಂದ ಕಾರ್ಯಾಚರಿಸುತ್ತಿದ್ದು,ಸದ್ಯಕ್ಕೆ ಈ ಪಾರ್ಕ್ ತೀರಾ ಅವ್ಯವಸ್ಥೆಗಳಿಂದ ಕೂಡಿದೆ. ರಿಕ್ಷಾ ಪಾರ್ಕ್ ಬಳಿಯಲ್ಲೇ ಕಳೆದ

ಉಳ್ಳಾಲ: ನಿವೃತ್ತ ಯೋಧನಿಂದ ಮಹಿಳಾ ಪೇದೆಗೆ ಕಿರುಕುಳ

ಉಳ್ಳಾಲ: ಮಹಿಳಾ ಪೊಲೀಸ್ ಪೇದೆಗೆ ನಿವೃತ್ತ ಯೋಧನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕುಂಪಲದ ಬಗಂಬಿಲ ಎಂಬಲ್ಲಿ ನಡೆದಿದೆ. ಕೊಲ್ಯ ಕನೀರುತೋಟ ನಿವಾಸಿ, ಸದ್ಯ ಕುಂಪಲ ಅಮೃತನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುವ ಪ್ರಶಾಂತ್ (45) ಕಿರುಕುಳ ನೀಡಿದಾತ. ಠಾಣೆಯೊಂದರ ಮಹಿಳಾ ಪೇದೆ ಸ್ಕೂಟರಿನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭ ಅಡ್ಡಗಟ್ಟಿದ ನಿವೃತ್ತ ಯೋಧ ಪ್ರಶಾಂತ್, ಆಕೆ ಮೈಮೇಲೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ತಕ್ಷಣ ಬೊಬ್ಬಿಟ್ಟಾಗ

ನರಿಂಗಾನ ಗ್ರಾ.ಪಂ.ನ ದ್ವಿತೀಯ ಹಂತದ ಗ್ರಾಮಸಭೆ

ನರಿಂಗಾನ ಗ್ರಾಮದಲ್ಲಿ ರೈತರು ಹಿಂದಿನಿಂದಲೂ ಹೈನುಗಾರಿಕೆ ಬಗ್ಗೆ ಒಲವು ಹೊಂದಿದ್ದು ಅತಿ ಹೆಚ್ಚು ದನಗಳನ್ನು ಸಾಕುತ್ತಿದ್ದಾರೆ. ಆದರೆ ಗೋವುಗಳಿಗೆ ಆರೋಗ್ಯದಲ್ಲಿ ಏರುಪೇರಾದಾಗ ಸ್ವತಃ ದನದ ಮಾಲೀಕರೇ ಪಶು ವೈದ್ಯರ ಬಳಿಗೆ ಹೋದರೂ ಚಿಕಿತ್ಸೆಗೆ ಬರುತ್ತಿಲ್ಲ. ವೈದ್ಯರು ಈ ರೀತಿ ವರ್ತಿಸಿದರೆ ಹೈನುಗಾರಿಕೆ ಹೇಗೆ ಅಭಿವೃದ್ಧಿ ಸಾಧ್ಯ ಎಂದು ನರಿಂಗಾನ ಗ್ರಾಮಸ್ಥರೊಬ್ಬರು ನರಿಂಗಾನಗ್ರಾಮ ಪಂಚಾಯ್ ಸಭಾಭವನದಲ್ಲಿ ನಡೆದ ದ್ವಿತೀಹ ಹಂತದ ಗ್ರಾಮಸಭೆಯಲ್ಲಿ ವೈದ್ಯರನ್ನು

ತಲಪಾಡಿ, ಅಪ್ರಾಪ್ತೆಗೆ ಕಿರುಕುಳ : ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ

ಉಳ್ಳಾಲ: ಅಪ್ರಾಪ್ತೆ ಮೇಲೆ ಕಿರುಕುಳ ನೀಡಿರುವ ಘಟನೆ ತಲಪಾಡಿ ರಿಕ್ಷಾ ಸ್ಟ್ಯಾಂಡ್ ಬಳಿ ಇಂದು ಸಂಜೆ ವೇಳೆ ನಡೆದಿದ್ದು, ಆರೋಪಿ ಮುಡಿಪು ದರ್ಖಾಸು ಸೈಟ್ ನಿವಾಸಿ ಮುವಾದ್ (35) ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.ಆರೋಪಿ ಮುವಾದ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಗಾಂಜಾ ಸಹಿತ ಇತರೆ ಎರಡು ಪ್ರಕರಣಗಳಿದ್ದು, ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಇಂದು ಸಂಜೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಶಾಲೆಯಿಂದ

ಮುಡಿಪು : ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ

ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್ನಿನಲ್ಲಿ ತಿರುಗುವ ಸಂದರ್ಭ , ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ

ಮುನ್ನೂರು ಗ್ರಾ.ಪಂ ಸದಸ್ಯ ಭುಜಂಗ ರೈ ನಿಧನ

ಉಳ್ಳಾಲ: ಸಿಪಿಎಂ ನೇತಾರ, ಮುನ್ನೂರು ಗ್ರಾ.ಪಂ. ಸದಸ್ಯ ಕುತ್ತಾರು ಮದಕ ನಿವಾಸಿ ಭುಜಂಗ ರೈ (74) ಇವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೂಲತ: ಕಾಸರಗೋಡು ನಿವಾಸಿಯಾಗಿರುವ ಇವರು ಕುತ್ತಾರು ಮದಕಕ್ಕೆ 30 ವರ್ಷಗಳ ಹಿಂದೆ ಬಂದಿದ್ದರು. ರಿಕ್ಷಾ ಚಾಲಕರಾಗಿ ವೃತ್ತಿ ನಿರ್ವಹಿಸುತ್ತಿದ್ದವರು. ಸಿಪಿಎಂ ಪಕ್ಷದ ಚಟುವಟಿಕೆಗಳು ಹಾಗೂ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದರು. ಯಕ್ಷಗಾನ ಕಲಾವಿದರೂ ಆಗಿದ್ದ ಇವರು ಆಂಗ್ಲ ಭಾಷೆಯಲ್ಲಿ

ಕುಂಪಲ : ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ

ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವತಿಯಿಂದ ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ ನಡೆಯಿತು. ಉದ್ಯಮಿ ಕಂಪಾರ್ಟ್ ಇನ್ ಮಾಲಕ ಚಂದ್ರಹಾಸ ಶೆಟ್ಟಿ ಕಾರ್ಯಕ್ರಮಕ್ಕೆ ದೀಪಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಜೀವನವನ್ನು ರೂಪಿಸಲು ನಮಗೆ ಸಂಸ್ಕಾರ ಬಹಳ ಮುಖ್ಯ, ಇದನ್ನು ಅರಿತಾಗ ಮಾತ್ರ ನಮ್ಮ ಜೀವನ ಸುಂದರವಾಗುತ್ತದೆ, ಈ ನಿಟ್ಟಿನಲ್ಲಿ ರಂಗ ರುಕ್ಮಿಣಿ ಕಾರ್ಯಕ್ರಮ ಶ್ಲಾಘನೀಯ. ಹೊಸ ಬಾಳಿನಲ್ಲಿ ಸದಾ ಕಾಲ ನಗುವಿನೊಂದಿಗೆ ಬದುಕಿ ಎಂದು ಹಾರೈಸಿದರು.

ಉಳ್ಳಾಲ : ಪುಣ್ಯಕೋಟಿ ನಗರದಲ್ಲಿ ಬಾರ್ ಓಪನ್‍ಗೆ ಆಕ್ರೋಶ – ಶಾಲಾ ವಿದ್ಯಾರ್ಥಿಗಳಿಂದ ಗ್ರಾ.ಪಂ.ಗೆ ಮುತ್ತಿಗೆ

ಉಳ್ಳಾಲದ ಕೈರಂಗಳ ಪುಣ್ಯಕೋಟಿನಗರದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ತೆರವು ಆಗುವವರೆಗೂ ಪ್ರಜಾಪ್ರಭುತ್ವ ರೀತಿಯಲ್ಲಿ ಅಮರಣಾಂತ ಸತ್ಯಾಗ್ರಹದಂತಹ ಹೋರಾಟ ನಡೆಸಲು ಶಾಲಾಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜಾರಾಮ ಭಟ್ ಹೇಳಿದ್ದಾರೆ. ಬಾಳೆಪುಣಿ ಗ್ರಾ.ಪಂ ವ್ಯಾಪ್ತಿಯ ಪುಣ್ಯಕೋಟಿನಗರ ಸಮೀಪದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ವಿರೋಧಿಸಿ ಪುಣ್ಯಕೋಟಿ ನಗರ ಶಾರದಾ ವಿದ್ಯಾಗಣಪತಿ ವಿದ್ಯಾಕೇಂದ್ರದ

ಉಳ್ಳಾಲ : ಸಿಡಿಲು ಬಡಿದು ಅಂಗಡಿ ಭಸ್ಮ

ಉಳ್ಳಾಲ: ಭಾರೀ ಸಿಡಿಲು ಮಳೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿ ಲಕ್ಷಾಂತರ ನಷ್ಟ ಸಂಭವಿಸಿರುವ ಘಟನರ ರಾಣಿಪುರದಲ್ಲಿ ಸಂಭವಿಸಿದೆ.ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮುನ್ನೂರು ಗ್ರಾಮದ ರಾಣಿಪುರ ಚರ್ಚ್ ಎದುರಿನ ಪೀಟರ್ ಆಫ್ರೋಸ್ ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ. ಇಂದು ಮುಂಜಾನೆ ನಸುಕಿನ ವೇಳೆ ಸಿಡಿಲು ಬಡಿದು ಘಟನೆ ಸಂಭವಿಸಿದೆ. ಘಟನೆ ವೇಳೆ ಪೀಟರ್

ಖಾವಿಧಾರಿಗಳಿಂದ ಜಾತ್ರೆಗಾಗಿ ಕಲೆಕ್ಷನ್ : ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಉಳ್ಳಾಲ: ಜಾತ್ರೆಗೆ ಸಹಾಯಹಸ್ತ ಬೇಕು ಎಂದು ಭಿಕ್ಷಾಟನೆಯಲ್ಲಿ ತೊಡಗಿದ್ದ ಯುವಕನನ್ನು ತೊಕ್ಕೊಟ್ಟುವಿನ ಕ್ಯಾಟರಿಂಗ್ ಸಂಸ್ಥೆ ಮಾಲೀಕ ರಾಜೇಶ್ ಎಂಬವರು ಸಂಶಯದ ಮೇರೆಗೆ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ತೊಕ್ಕೊಟ್ಟು ಕಾಪಿಕಾಡು ರಾಜ್ ಕೇಟರಸ್ ಬಳಿ ಬಂದಿದ್ದ ಖಾವಿ ತೊಟ್ಟ ಯುವಕ ಜಾತ್ರೆ ನಡೆಸಲು ದಾನ ನಡೆಸಬೇಕು ಎಂದು ಮಾಲೀಕ ರಾಜೇಶ್ ಎಂಬವರಲ್ಲಿ ಕೇಳಿದ್ದನು. ಸಂಸ್ಥೆ ಮಾಲೀಕರು ರಾತ್ರಿ ವೇಳೆ ಜಾತ್ರೆಗಾಗಿ ಹಣ ಕೇಳುವುದನ್ನು ಸಂಶಯ ವ್ಯಕ್ತಪಡಿಸಿ ವಿಚಾರಣೆ