Home Posts tagged #ullalal

ಎ.17ಕ್ಕೆ ಎಸ್ ಡಿಪಿಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ
ನಾಮ ಪತ್ರ ಸಲ್ಲಿಕೆ: ಅಥಾವುಲ್ಲಾ ಜೋಕಟ್ಟೆ

ಉಳ್ಳಾಲ: ಎಪ್ರಿಲ್ 17 ಸೋಮವಾರದಂದು ಮಂಗಳೂರು ವಿಧಾನಸಭಾ ಕ್ಷೇತ್ರ ಎಸ್ ಡಿಪಿಐ ಚುನಾವಣಾ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಯವರು ಸಹಸ್ರಾರು ಕಾರ್ಯಕರ್ತರೊಂದಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಎಸ್ ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಸಮಿತಿ ಸದಸ್ಯರೂ ಆದ ಅಥಾವುಲ್ಲಾ ಜೋಕಟ್ಟೆ ತಿಳಿಸಿದ್ದಾರೆ.ಸೋಮವಾರ ಬೆಳಿಗ್ಗೆ 11:00

ಉಳ್ಳಾಲದಲ್ಲಿ ಯುವಕನಿಗೆ ಚೂರಿ ಇರಿತ

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಉಳ್ಳಾಲದಲ್ಲಿ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಉಳ್ಳಾಲದಲ್ಲಿ ಗ್ಯಾಸ್ ಸ್ಟವ್‌ಗೆ ಸಂಬಂಧಿಸಿದ ಸಾಮಗ್ರಿಗಳನ್ನು ಹೊಂದಿರುವ ಅಂಗಡಿ ಮಾಲಕ ಹರೀಶ್ ಗಾಣಿಗ ಚೂರಿ ಇರಿತಕ್ಕೊಳಗಾಗಿರುವವರು. ಆರೋಪಿಯು ಈ ಹಿಂದೆ ಹರೀಶ್ ಜೊತೆ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ಗಲಾಟೆ ಮಾಡಿದ್ದನೆನ್ನಲಾಗಿದೆ. ಈ ಬಗ್ಗೆ ಹರೀಶ್ ಗಾಣಿಗ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡ ಆರೋಪಿ ಮಂಗಳವಾರ ಹರೀಶ್

ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಕ್ಷಿತಾ ಪ್ರೇಮ್

ಉಳ್ಳಾಲ: ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಅವರು ಕುತ್ತಾರು ಕೊರಗಜ್ಜ ಕಟ್ಟೆಗೆ ಮಂಗಳವಾರ ಭೇಟಿ ನೀಡಿದರು. ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಕೊರಗಜ್ಜನ ಬಳಿ ಹರಕೆ ಹೊತ್ತ ಹಿನ್ನೆಲೆಯಲ್ಲಿ ಭೇಟಿ ನೀಡಿ ಹರಕೆ ಸಲ್ಲಿಸಿದ್ದಾರೆ. ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾಗಿರುವ ನಟಿ ರಕ್ಷಿತಾ ಪ್ರೇಮ್, ಸದ್ಯ ಝೀ ಕನ್ನಡ ವಾಹಿನಿ ರಿಯಾಲಿಟಿ ಷೋನಲ್ಲಿ ಜಡ್ಜ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ರಕ್ಷಿತಾ

ಮಹಿಳಾ ಹೋಂ ಗಾರ್ಡ್ ಕರ್ತವ್ಯಕ್ಕೆ ಅಡ್ಡಿ:ಇಬ್ಬರ ಬಂಧನ

ಉಳ್ಳಾಲ: ನಾಗುರಿ ಸಂಚಾರಿ ಠಾಣೆಯ ಕರ್ತವ್ಯ ನಿರ್ವಹಿಸುತ್ತಿದ್ದ ಲೇಡಿ ಹೋಂ ಗಾರ್ಡ್‍ಗೆ ಅಶ್ಲೀಲ ಹಾಗೂ ಅವಾಚ್ಯವಾಗಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಹಳೇಕೋಟೆ ನಿವಾಸಿ ಮಹಮ್ಮದ್ ಹಾಸೀರ್ ಮತ್ತು ನಯೀಮ್ ಬಂಧಿತರು. ಇಬ್ಬರು ಕಾಲೇಜು ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಸೆ.25 ರಂದು ಉಳ್ಳಾಲದಿಂದ ಕಾಪಿಕಾಡುವಿಗೆ ರಾ.ಹೆ 66

ಕಲ್ಲಿಕೋಟೆಯಿಂದ ನೇಪಾಳಕ್ಕೆ ಬೈಕ್ ಯಾತ್ರೆ

ಉಳ್ಳಾಲ: ಡಬ್ಬದಲ್ಲಿ ಹಣವನ್ನು ಕೂಡಿಟ್ಟು, ಸಮಾಜಕ್ಕೆ ಸೌಹಾರ್ದದ ಸಂದೇಶ ಹಾಗೂ ಸಾಯುವ ಮುನ್ನ ಅನಿಸಿದ್ದನ್ನು ಸಾಧಿಸು ಅನ್ನುವ ಉದ್ದೇಶವನ್ನು ಮುಂದಿಟ್ಟು ಕೇರಳದ ಹವ್ಯಾಸಿ ಬೈಕ್ ರೈಡರ್‍ಗಳ ಒಂಭತ್ತು ಮಂದಿಯ ತಂಡ ಕಲ್ಲಿಕೋಟೆಯಿಂದ – ನೇಪಾಳ ಪ್ರವಾಸವನ್ನು ಆರಂಭಿಸಿದೆ. ಆ.27 ರಂದು ಪ್ರವಾಸವನ್ನು ಆರಂಭಿಸಿದ ತಂಡ ಇಂದು ದೇರಳಕಟ್ಟೆಯನ್ನು ತಲುಪಿದೆ. ಅಲ್ಲಿಂದ ಐದು ಬೈಕುಗಳಲ್ಲಿ ಪ್ರವಾಸ ಮುಂದುವರಿಸಿದ ತಂಡ ಇಂದು ಗೋಕರ್ಣ ತಲುಪಿ ಅಲ್ಲೇ ಉಳಿಯಲಿದೆ.

ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಉಳ್ಳಾಲ ನೇತ್ರಾವತಿ ನದಿ ಸಮೀಪದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ – ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಇಂದು ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂದು ಗುರುತಿಸಲಾಗಿದ್ದು, ಇತನ ದ್ವಿಚಕ್ರ ವಾಹನ ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ

ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ಜನತೆ

ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೆ ಆಗಮಿಸುವ ಜನರ ಮೇಲೆ ಗಡಿಭಾಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಬರುವ ಜನರಿಗೆ ನೆಗೆಟಿವ್ ವರದಿ ಕಡ್ಡಾಯ ಮಾಡಿದ್ದು, ಇಂದು ಮಂಗಳೂರಿಗೆ ಅಗಮಿಸುವ ಜನರು ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂತು. ಆರ್‌ಟಿಪಿಸಿಆರ್ ಟೆಸ್ಟ್‌ಗೆ ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಾರೆ. ಬಸ್ ಮತ್ತು