ಪದವಿ ಪೂರೈಸುವುದು ಅಥವಾ ಕಂಠಪಾಠ ಮಾಡಿ ರ‍್ಯಾಂಕ್, ಪದಕ ಪಡೆಯುವುದು ಶಿಕ್ಷಣ ಅಲ್ಲ. ಬದುಕಿನಲ್ಲಿ ಎದುರಾಗುವ ಸವಾಲು ಹಾಗೂ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಹೇಳಿದರು.ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕ ಇಲ್ಲಿ ಶನಿವಾರ ಪ್ರೇರಣಾ ದಿವಸ
ಮೂಡುಬಿದಿರೆ: ಮಣಿಪುರ ರಾಜ್ಯದಲ್ಲಿ ಹಲವಾರು ದಿನಗಳಿಂದ ಹಿಂಸಾಚಾರ, ಅತ್ಯಾಚಾರ, ಅನಾಚಾರಗಳು ನಡೆಯುತ್ತಿದ್ದು, ಇದು ಸರಕಾರದ ಹೆಸರನ್ನು ಕೆಡಿಸಲು ವಿಪಕ್ಷಗಳು ಮಾಡಿರುವ ಪ್ರಾಯೋಜಿತ ಕಾರ್ಯಕ್ರಮವಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದರು. ಅವರು ಮಣಿಪುರ ಘಟನೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಮಣಿಪುರ ರಾಜ್ಯದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ, ಮಾದಕ ವಸ್ತುಗಳನ್ನು ಬೆಳೆಸುತ್ತಿದ್ದಾರೆ ಇದನ್ನು ಸರಕಾರ
ಟಿಕೆಟ್ ಘೋಷಣೆಗೆ ಕ್ಷಣ ಗಣನೆ ನಡೆಯುತ್ತಿರುವ ಹೊತ್ತಲ್ಲಿ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 40 ಕ್ಕೂ ಹೆಚ್ಚು ಮಾಧ್ಯಮಗಳಲ್ಲಿ ಯಾವುದೇ ಆಕ್ಷೇಪಕಾರಿ ಸುದ್ದಿ ಪ್ರಕಟಿಸಸಂತೆ ಉಮನಾಥ ಕೋಟ್ಯಾನ್ ಅವರು ಮಂಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ತಡೆಯಾಜ್ಞೆ
ಮೂಡುಬಿದಿರೆ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4 ರ ರೂ 10 ಕೋಟಿ ಮೊತ್ತದ ಯೋಜನೆಯಲ್ಲಿ 4.46 ಕೋಟಿ ಮೊತ್ತದ 6 ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಹಾಗೂ ಪುರಸಭಾ ನಿಧಿ 2022-23ರಲ್ಲಿ ರೂ 1.36 ಕೋಟಿ ಮೊತ್ತದ 27 ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಮಂಗಳವಾರ ಒಂಟಿಕಟ್ಟೆಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಅವರು ಪುರಸಭಾ ವ್ಯಾಪ್ತಿಗೆ ಬಹುದೊಡ್ಡ ಮೊತ್ತದ ಅನುದಾನದೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ
ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾ.ಪಂ.ವ್ಯಾಪ್ತಿಯಲ್ಲಿ 2.10 ಕೋ.ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ 1.94 ಕೋಟಿ ವೆಚ್ಚದ ಜಲಜೀವನ್ ಮಿಷನ್ ಯೋಜನೆಯ ಒಟ್ಟು 4.04 ಕೋ.ವೆಚ್ಚದ ಕಾಮಗಾರಿಗಳಿಗೆ ಶಾಸಕ ಉಮಾನಾಥ ಎ.ಕೋಟ್ಯಾನ್ ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು. ನಂತರ ನೀರುಡೆ ಚಚ್ 9 ಬಳಿಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೋಟ್ಯಾನ್ ಅವರು ಕಲ್ಲಮುಂಡ್ಕೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಲ್ಲಿ ಆಗದ ಅಭಿವೃದ್ಧಿ
ಮೂಡುಬಿದಿರೆ: ಅನ್ನ, ಬಟ್ಟೆ, ಉಳಿಯಲೊಂದು ಸೂರು ಇದು ಪ್ರತಿಯೊಬ್ಬರ ಅಪೇಕ್ಷೆ ಈ ಕನಿಷ್ಠ ವ್ಯವಸ್ಥೆ ಈಡೇರಿಸುವ ಬದ್ಧತೆಯಿಂದ ಇಂದು ರಾಜ್ಯ ಹಾಗೂ ಕೇಂದ್ರ ಸರಕಾರ ದಿಟ್ಟ ಹೆಜ್ಜೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.ಅವರು ಮೂಡುಬಿದಿರೆ ಕನ್ನಡ ಭವನದಲ್ಲಿ ಸ್ವ ನಿಧಿ ಪರಿಚಯ ಬೋರ್ಡ್ ಹಾಗೂ ಪ್ರಧಾನ ಮಂತ್ರಿಯವರ ಶುಭಾಷಯ ಪತ್ರವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು. ಕೇಂದ್ರ ವಸತಿ ಮತ್ತು
ಮೂಡುಬಿದಿರೆ: ಒಂಟಿಕಟ್ಟೆಯಲ್ಲಿರುವ ಕಡಲಕೆರೆಗೆ ವಿವಿಧ ಜಾತಿಯ 25,000 ಮೀನಿನ ಮರಿಗಳನ್ನು ಸಮರ್ಪಿಸಲಾಯಿತು.ಶಾಸಕ ಉಮಾನಾಥ ಕೋಟ್ಯಾನ್ ಮೀನಿನ ಮರಿಗಳನ್ನು ಸಮರ್ಪಿಸಿ, ದೋಣಿ ವಿಹಾರಕ್ಕೆ ಚಾಲನೆ ನೀಡಿದರು. ಶಾಸಕ ಉಮಾನಾಥ ಕೋಟ್ಯಾನ್ ಅವರು ಮಾತನಾಡಿ ಪ್ರವಾಸಿಗರನ್ನು ಸೆಳೆಯುವ ಕಡಲಕೆರೆಯನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಗೊಳಿಸುವ ಯೋಜನೆಯಿದ್ದು ಈಗಾಗಲೇ ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು. ಅರಣ್ಯ ಇಲಾಖೆಯ ಕುಂದಾಪುರ
ಮೂಡುಬಿದಿರೆ : ಭಾರತೀಯ ಜನತಾಪಾರ್ಟಿ ಯುವಮೋರ್ಚಾ ಮೂಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ದರೆಗುಡ್ಡೆಯ ಸಿರಿಸಂಪದ ಫಾರ್ಮ್ನಲ್ಲಿ ಜು.3ರಂದು ಕೆಸರ್‍ಡೊಂಜಿ ಕಮಲದಿನ ಎಂಬ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮಂಡಲಾಧ್ಯಕ್ಷ ಸುನಿಲ್ ಆಳ್ವ ತಿಳಿಸಿದರು. ಬಿಜೆಪಿ ಕಛೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಪಕ್ಷ ಸಂಘಟನೆ, ಬಲವರ್ಧನೆ ಹಾಗೂ ಕಾರ್ಯಕರ್ತರಲ್ಲಿ ಬಾಂಧವ್ಯ ವೃದ್ಧಿಸುವ
ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾ.ಪಂ ವ್ಯಾಪ್ತಿಯ ಕಂಚಿಬೈಲು ಅರ್ಬಿ ಫಾಲ್ಸ್ ಬಳಿಯಲ್ಲಿ ಶೆಡ್ಡ್ ಒಂದಕ್ಕೆ ಸಿಡಿಲು ಬಡಿದ ಪರಿಣಾಮವಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದುರ್ಘಟನೆ ನಿನ್ನೆ ನಡೆದಿದ್ದು, ಈ ದುರ್ಘಟನೆಯಲ್ಲಿ ಸಿಡಿಲಿಗೆ ಬಲಿಯಾದಪುತ್ತಿಗೆಯ ನಿವಾಸಿಗಳಾದ ಯಶವಂತ (22) ಮತ್ತು ಮಣಿ ಪ್ರಸಾದ್ (22) ಮನೆಗೆ ಬಿಜೆಪಿ ರಾಜ್ಯಾದ್ಯಕ್ಷರು ಹಾಗೂ ಮಾನ್ಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್
ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ರಾಷ್ಟ್ರಾಭಿಮಾನ ಮತ್ತು ಹಿಂದುತ್ವವನ್ನು ಎತ್ತಿ ಹಿಡುವ ಪಕ್ಷವಾಗಿದೆ. ಶಾಸಕ ಉಮಾನಾಥ ಕೋಟ್ಯಾನ್ ಅವರು ಕೂಡಾ ಇದರ ಕಾರ್ಯಕರ್ತರಿಂದಲೇ ಆಯ್ಕೆಯಾಗಿ ಬಂದು ಅಭಿವೃದ್ಧಿಯ ಜೊತೆಗೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಅವರ ಜನಪ್ರಿಯತೆಯನ್ನು ಸಹಿಸದ ರಾಜಕೀಯ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ-ಸುದ್ದಿ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿರುವುದನ್ನು ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲವು
























