ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ. ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ ಸಿಬಂದಿಗಳಾದ ಜೂನಿಯರ್ ಲೈನ್ ಮ್ಯಾನ್ ವಿತೇಶ್ ಮತ್ತು ಸಿಬ್ಬಂದಿ ಸತೀಶ್ ಹಿರೆಬಂಡಾಡಿ ಹಲ್ಲೆಗೊಳಗಾದವರು. ಹಲ್ಲೆ ಕೃತ್ಯದ ಬಗ್ಗೆ ಮೆಸ್ಕಾಂ ಕಚೇರಿಗಳು
ಉಪ್ಪಿನಂಗಡಿ: ಅತೀ ವೇಗದಿಂದ ಬಸ್ ನಿಲ್ದಾಣದೊಳಗೆ ಬಂದ ಕೆಎಸ್ಸಾರ್ಟಿಸಿ ಬಸ್‌ನಡಿಗೆ ಸಿಲುಕಿ ತಾಯಿ ಹಾಗೂ ಆಕೆಯ ಒಂದು ವರ್ಷದ ಪುತ್ರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಆಕೆಯ ಒಂದು ವರ್ಷದ ಪುತ್ರ ಶಾಹೀಲ್ ಮೃತಪಟ್ಟ ದುರ್ದೈವಿಗಳು. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಎಸ್‌ಆರ್ಟಿಸಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನೆಲ್ಯಾಡಿ ಬಳಿಯ ಪೆರಿಯಶಾಂತಿಯ ಲಾವತ್ತಡ್ಕ ಸಮೀಪದ ಅಡ್ಡಜಾಲು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಪರಾರಿಯಾದ ಕೆಎಸ್‌ಆರ್‌ಟಿಸಿ ಬಸ್ಸನ್ನು ಬೆನ್ನಟ್ಟಿ ಹೋದ ಪೊಲೀಸರು ಗುಂಡ್ಯ ಸಮೀಪ ವಶಕ್ಕೆ ಪಡೆದಿದ್ದಾರೆ. ಗುಂಡ್ಯದಿಂದ ನೆಲ್ಯಾಡಿ ಕಡೆಗೆ ತೆರಳುತಿದ್ದ ದ್ವಿಚಕ್ರ