ಪುತ್ತೂರು: ನಮ್ಮದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ ಉಂಟಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ದೇಶದಲ್ಲಿ ನಾವು ಪರಸ್ಪರ ಒಗ್ಗಟ್ಟಿನಿಂದ
ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್(20ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶ್ರೀಜಿಸ್ರವರು ರಾಮಕುಂಜ
ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನವೆಂಬರ್ 25 ಮತ್ತು 26ರಂದು ನಡೆಯಲಿರುವ ಕಂಬಳ ಕ್ರೀಡೆಗಾಗಿ ಕೋಣಗಳನ್ನು ಅದ್ದೂರಿ ಮೆರವಣಿಗೆ ಮೂಲಕ ಕರೆದೊಯ್ಯುವ ಕಾರ್ಯಕ್ರಮ ಉಪ್ಪಿನಂಗಡಿಯಿಂದ ಇಂದು ಆರಂಭಗೊಂಡಿದೆ. ಉಪ್ಪಿನಂಗಡಿಯ ಜೂನಿಯರ್ ಕಾಲೇಜು ಮೈದಾನದಿಂದ ನಿರ್ಗಮನ ಕಾರ್ಯಕ್ರಮ ನಡೆಯಿತು. ಸುಮಾರು 150 ಜೋಡಿ ಕೋಣಗಳನ್ನು ಕರಾವಳಿಯ ನಾನಾ ಭಾಗಗಳಿಂದ ಉಪ್ಪಿನಂಗಡಿಗೆ ಕರೆತಂದು ಇಲ್ಲಿಂದ ಲಾರಿಗಳಲ್ಲಿ ಬೆಂಗಳೂರಿಗೆ ಕೊಂಡೊಯ್ಯಲಾಯಿತು. ಪ್ರತೀ ಜೋಡಿ ಕೋಣಕ್ಕೆ ಒಂದು ಲಾರಿಯನ್ನು
ನೆಲ್ಯಾಡಿ: ಪಶ್ಚಿಮ ಘಟ್ಟದ ತಪ್ಪಲುನಲ್ಲಿರುವ ಉಪ್ಪಿನಂಗಡಿ ವಲಯ ವ್ಯಾಪ್ತಿಯಲ್ಲಿ ಬರುವ ಶಿರಾಡಿ, ಶಿಬಾಜೆ ಮೊದಲಾದ ಪ್ರದೇಶದಲ್ಲಿರುವ ರಕ್ಷಿತಾರಣ್ಯದಲ್ಲಿ ರಾಜಾರೋಷವಾಗಿ ಅರಣ್ಯ ಸಂಪತ್ತು ಕಳ್ಳರ ಪಾಲಾಗುತ್ತಿದ್ದು, ಉತ್ತಮ ಜಾತಿಯ ಬೃಹತ್ ಮರಗಳ ಮಾರಣ ಹೋಮ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ವ್ಯಕ್ತವಾಗಿದೆ. ಶಿರಾಡಿ ರಕ್ಷಿತಾರಣ್ಯದ ಶಿಬಾಜೆ ಸೆಕ್ಷನ್ ವ್ಯಾಪ್ತಿಯಲ್ಲಿರುವ ನೀರಾನದಿಂದ ಕುರುಂಬು, ಅರಂಪಾದೆ ಭೂತಮಜಲುನಿಂದ ಮೇಲಿನ ಕುರುಂಜ ತನಕ, ಪೆರ್ಲದ
ಉಪ್ಪಿನಂಗಡಿ : ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಚಲಾಯಿಸುತಿದ್ದ ಬೈಕ್ ಅಪಘಾತಗೊಂಡು ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಜೂ.22 ರಂದು ನಡೆದಿದೆ. ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆಯ ಎಚ್ಎಮ್ ಆಡಿಟೋರಿಯಂ ಸಮೀಪ ಅಪಘಾತ ಸಂಭವಿಸಿದೆ. ಪುತ್ತೂರಿನ ನೆಹರುನಗರ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಬೆಳ್ತಂಗಡಿಯ ಉಳಿ ಗ್ರಾಮದ ನಿತಿನ್ ಬೆಳಗ್ಗೆ ಕಾಲೇಜು ಬರುವಾಗ ಬೈಕ್ ಪಾದಚಾರಿ ಇಳಂತಿಲದ ಪೆರ್ನಾಂಡೀಸ್ (64 ವ.) ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ
ಪುತ್ತೂರು ತಾಲೂಕಿನ ಉಪ್ಪಿನಂಗಡಿ ಟಯರ್ ರಿಸೋಲ್ ಸಂಸ್ಥೆಯೊಂದರಲ್ಲಿ ಏರ್ ಕಂಪ್ರೈಸರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿಯಲ್ಲಿ ಮಧ್ಯಾಹ್ನದ ವೇಳೆಗೆ ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ
ಉಪ್ಪಿನಂಗಡಿ: ಓವರ್‍ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್‍ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಟ್ರಾಕ್ಟರ್‍ನ ಹಿಂಬದಿಯ ಟ್ರಾಲಿ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ್ದು, ಘಟನೆಯಿಂದ ಅದೃಷ್ಟವಶಾತ್ ಟ್ರಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ನೆಲ್ಯಾಡಿ ಕಡೆಯಿಂದ ಬಿ.ಸಿ.ರೋಡು ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿಯು ಅದೇ ಮಾರ್ಗವಾಗಿ
ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ.ರಾಮಣ್ಣ ಪೂಜಾರಿ ಎಂಬವರು ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ
ಉಪ್ಪಿನಂಗಡಿ: ಬುಲೆಟ್ ಟ್ಯಾಂಕರ್‌ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬೈಪಾಸ್‌ನಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಅದ್ವೀತ್ (16) ಮೃತಪಟ್ಟ ಬಾಲಕ. ಅಂಗನವಾಡಿಯಲ್ಲಿ ಟೀಚರ್ ಆಗಿರುವ ಬಾಲಕನ ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಅವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ತನ್ನ ತಾಯಿಯ ಜೊತೆ ತೆರಳುತ್ತಿದ್ದ ವೇಳೆ
ಉಪ್ಪಿನಂಗಡಿ: ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದ ಗದಗ ಮೂಲದ ಕಾರ್ಮಿಕ ಕುಟುಂಬದ ಬಾಲಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ, ಮೀನಾಕ್ಷಿ ದಂಪತಿ ಮಕ್ಕಳಾದ ನಿಂಗರಾಜು (16), ಸತೀಶ್ (14) ಮೃತಪಟ್ಟವರು. ನಿಂಗರಾಜು ಗದಗ ಮುರಾರ್ಜಿ ದೇಸಾಯಿ ವಸತಿ ಶಾಲೆ ಹತ್ತನೇ ತರಗತಿ ವಿದ್ಯಾರ್ಥಿ. ಸತೀಶ 8 ನೇ ತರಗತಿಯಲ್ಲಿ ಕಲಿಯುತ್ತಿದ್ದ. ವಿದ್ಯಾರ್ಥಿಗಳು