ಅರಕಲಗೂಡು ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರು ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿದರು.  ಉದ್ಘಾಟನೆಯ ನಂತರ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿದ ಸಚಿವರು ಕಾರ್ಯವೈಖರಿಯ ಬಗ್ಗೆ ಸಂಪೂರ್ಣ ವರದಿ ಪಡೆದ ಸಚಿವರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯವನ್ನು ಒದಗಿಸುವ ಭರವಸೆ ನೀಡಿದರು.                        
        
              ಶ್ರೀನಿವಾಸ ಹೋಟೆಲ್ ಮ್ಯಾನೇಜ್ಮೆಂಟ್ ಕಾಲೇಜು ಯುವ ಪೀಳಿಗೆಗೆ, ಬದಲಾಗುತ್ತಿರುವ ಮತ್ತು ಸವಾಲಿನ ಹೋಟೆಲ್ ಉದ್ಯಮದಲ್ಲಿ ಕೆಲಸ ಮಾಡಲು ಸಾಕಷ್ಟು ಸ್ಪರ್ಧಾತ್ಮಕವಾಗುವಂತೆ ಜ್ಞಾನ ಮತ್ತು ಕೌಶಲ್ಯಗಳನ್ನು ನೀಡುತ್ತಿದೆ. ಎ. ಶ್ಯಾಮರಾವ್ ಫೌಂಡೇಶನ್ ಅಡಿಯಲ್ಲಿ 1988ರಲ್ಲಿ ಸ್ಥಾಪನೆಗೊಂಡ ಈ ಕಾಲೇಜನ್ನು 2017ರಲ್ಲಿ ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ವಿಲೀನಗೊಳಿಸಲಾಯಿತು, ಇದು ವಿದ್ಯಾರ್ಥಿಗಳಿಗೆ ಮತ್ತು ವಿಶಿಷ್ಟ ಪಠ್ಯಕ್ರಮಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ನಮ್ಮ                         
        
              ಹಾಸನ ಜಿಲ್ಲೆಯ ಸಕಲೇಶಪುರದ ಕಿರುಹುಣಸೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ರಾಜಣ್ಣ(59) ಎಂಬವರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದಲ್ಲೇ ಹೆಚ್ಚು ಸಾವು- ನೋವುಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಚಲನ ವಲನಗಳ ಬಗ್ಗೆ ಮಾಹಿತಿ ನೀಡದ ಅರಣ್ಯ ಇಲಾಖೆ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.                            
        
              ಬಂಟ್ವಾಳ: ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಗಿದ್ದು, ಇಲಾಖೆ ವ್ಯಾಪ್ತಿಗೆ ಬರದೆ ಸಂಕಷ್ಟದಲ್ಲಿರುವ ಕ್ಷೇತ್ರಗಳ ಸಿಬ್ಬಂದಿಗೂ ಕಿಟ್ ಕೊಡುವುದಕ್ಕೆ ಚಿಂತನೆ ನಡೆಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದರು.  ಮುಜರಾಯಿ ಇಲಾಖೆಯ ಎ ಗ್ರೇಡ್ ಕ್ಷೇತ್ರವಾದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಿಂದ ತಾಲೂಕಿನ 26 ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ                         
        
              ದುಬೈ : ಹಲವಾರು ವರ್ಷಗಳಿಂದ ಯು.ಎ.ಇ ಯಾದ್ಯಂತ ಸಾಮಾಜಿಕ ರಂಗದಲ್ಲಿ ಸೇವೆಗೈಯುತ್ತಿರುವ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ವತಿಯಿಂದ ಮರುಭೂಮಿ ಮಣ್ಣಿನ ಲತೀಫಾ ಆಸ್ಪತ್ರೆ ದುಬೈಯಲ್ಲಿ,ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವು ಬಹಳ ಅಚ್ಚುಕಟ್ಟಾಗಿ ನೆರವೇರಿತು. ಕಾರ್ಯಕ್ರಮದ ನೇತೃತ್ವ ವಹಿಸಿದ ಅನಿವಾಸಿ ಕನ್ನಡಿಗರ ಒಕ್ಕೂಟ ಯು.ಎ.ಇ. ಇದರ ಶಾಫಿ ಬಜ್ಪೆ ಯವರು ಪ್ರಾಸ್ತವಿಕವಾಗಿ ಮಾತನಾಡಿ, ಪ್ರತಿಯೊಬ್ಬ ರಕ್ತದಾನಿ ಇನ್ನೊಬ್ಬರ ಜೀವ ರಕ್ಷಕರಾಗಿರುತ್ತಾರೆ.                         
        
              ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಕುಂದಾಪುರ ಪರಿಸರದಲ್ಲಿ ಪ್ರತಿದಿನ ಸುಮಾರು 200 ಕ್ಕಿಂತಲೂ ಹೆಚ್ಚು ಕೊವೀಡ್ ವಾರಿಯರ್ಸ್, ನಿರ್ಗತಿಕರು ಹಾಗೂ ಭಿಕ್ಷುಕರಿಗೆ ಊಟವನ್ನು ನೀಡುತಿದ್ದು ಇವರ ಈ ಕಾರ್ಯಕ್ಕೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕೂಡ ಹಲವು ದಿನಗಳ ಪ್ರಾಯೋಜಕತ್ವವನ್ನು ನೀಡಿದೆ.  ಕಳೆದ ಬಾರಿಯೂ ಕೂಡ ಲಾಕ ಡೌನ್ ಸಂದರ್ಭದಲ್ಲಿ ಸುಮಾರು 40ಕ್ಕಿಂತ ಹೆಚ್ಚು ದಿನಗಳಲ್ಲಿಯೂ ಊಟವನ್ನು ನೀಡಿ                         
        
















