Home Posts tagged #V4 STREAM (Page 6)

ಕೋವಿಡ್ ಪ್ಯಾಕೇಜ್‌ಗೆ ಆಗ್ರಹಿಸಿ ತುಳುನಾಡ ದೈವಾರಾಧಕರ ಮನವಿ

ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ ) ಉಡುಪಿ ಜಿಲ್ಲೆಯ ಸರ್ವ ಸದಸ್ಯರುಗಳು ಸೇರಿ ಕೋಟ ಶ್ರೀನಿವಾಸ ಪೂಜಾರಿ ಧಾರ್ಮಿಕ ದತ್ತಿ ಇಲಾಖೆ ಸಚಿವರಿಗೆ ಭೇಟಿ ಮಾಡಿ ಮನವಿ ಕೊಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಗೌರವ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ದೈವ ಚಾಕ್ರಿ ವರ್ಗದವರ ಸಮಸ್ಯೆಗಳನ್ನು ಹೇಳಿದರು. ಈಗಾಗಲೇ ಸರ್ಕಾರದ ಮೂರು ಬಾರಿಯ ಕೋವಿಡ್

ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಕಾಂಗ್ರೆಸ್ ವತಿಯಿಂದ ಮಾಸ್ಕ್ ವಿತರಣೆ

ಪುತ್ತೂರು: ನಗರ ಕಾಂಗ್ರೆಸ್ ವತಿಯಿಂದ ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಎನ್95 ಮಾದರಿಯ ಮಾಸ್ಕನ್ನು ಪತ್ರಿಕಾಭವನದಲ್ಲಿ ವಿತರಿಸಲಾಯಿತು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾಸ್ಕ್‍ವಿತರಿಸಿ ಮಾತನಾಡಿ, ಕೊರೋನಾ ಸಂಕಷ್ಟ ಕಾಲದಲ್ಲಿ ಕೊರೋನಾ ವಾರಿಯರ್ಸ್ ಆಗಿ ಸಮಾಜದ ಜನರ ನಡುವೆ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಸರಕಾರ ಕೊಡುಗೆಗಳನ್ನು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಒತ್ತಾಯಿಸಿದರು. ಈ

ಲಸಿಕೆ ನೀಡಲು ಸರ್ಕಾರ ಮೀನಾಮೇಷ: ಐವನ್ ಡಿಸೋಜಾ

ಕೊರೊನಾ ಕಡಿಮೆಯಾಗುತ್ತಿದೆ ಎಂದು ಹೇಳುತ್ತಿರುವ ಸರ್ಕಾರ ಯಾಕೆ ಉಚಿತವಾಗಿ ಲಸಿಕೆ ನೀಡಲು ಮೀನಾಮೇಷ ಎಣಿಸುತ್ತಿದೆ. ಲಸಿಕೆ ಪಡೆದವರು ಯಾರೂ ಸತ್ತಿಲ್ಲ. ಲಸಿಕೆ ಸಿಗದೇ ಆದಂತಹಾ ಸಾವು ನೋವಿಗೆ ಬಿಜೆಪಿ ಸರ್ಕಾರ ನೇರ ಹೊಣೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದ್ದಾರೆ.  ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಲಸಿಕೆಯನ್ನು ಪಡೆಯದ ಕಾರಣ ನಮ್ಮವರು ಸತ್ತಿದ್ದಾರೆ ಎಂದು ಹೇಳುವ ಮಂದಿ

ಹಿಂದುಳಿದ ವರ್ಗಕ್ಕೆ ಪ್ಯಾಕೇಜ್ ಇಲ್ಲ: ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ವಿಶ್ವಾಸ್ ದಾಸ್

ಕೊರೊನಾದಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಧ್ಯಮ ವರ್ಗ, ಹಿಂದುಳಿದ ವರ್ಗದವರು ಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಅನುದಾನ ಯಾವುದಕ್ಕೂ ಸಾಕಾಗುವುದಿಲ್ಲ. ಕನಿಷ್ಠ ಹತ್ತು ಸಾವಿರ ಆದರೂ ಅನುದಾನವನ್ನು ಕಾರ್ಮಿಕರಿಗೆ, ಬಡವರಿಗೆ ನೀಡಬೇಕು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ವಿಶ್ವಾಸ್ ದಾಸ್ ಹೇಳಿದರು. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ವ್ಯಾಕ್ಸಿನ್ ಕೇಂದ್ರಗಳಲ್ಲಿ ನಿಯಮ ಉಲ್ಲಂಘನೆಯಾಗಲ್ಲ: ಉಡುಪಿ ಡಿಸಿ ಜಿ. ಜಗದೀಶ್

ಕುಂದಾಪುರ: ತಾಲೂಕಿನಲ್ಲಿರುವ ವ್ಯಾಕ್ಸಿನ್ ಕೇಂದ್ರಗಳಲ್ಲಿ ಕೆಲ ಗೊಂದಲಗಳಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು ಯಾರಿಂದಲೂ ನಿಯಮ ಉಲ್ಲಂಘನೆಯಾಗದಂತೆ ಕುಂದಾಪುರ, ಕಾರ್ಕಳ ಹಾಗೂ ಮಲ್ಪೆಯ ವ್ಯಾಕ್ಸಿನ್ ಕೇಂದ್ರಗಳಿಗೆ ನೋಡಲ್ ಅಧಿಕಾರಿ ನೇಮಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಕುಂದಾಪುರದ ಬೋರ್ಡ್ ಹೈಸ್ಕೂಲಿನಲ್ಲಿರುವ ವ್ಯಾಕ್ಸಿನ್ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಧ್ಯಮಗಳ ಜೊತೆ

ಮಂಜೇಶ್ವರ ಗ್ರಾ.ಪಂ. ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿನ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಸರಕಾರಿ ಜಿಡಬ್ಲ್ಯುಎಲ್‍ಪಿ ಶಾಲೆ ಮಂಜೇಶ್ವರದಲ್ಲಿ ನಡೆಯಿತು. ಕೋವಿಡ್ ಮಾನದಂಡಗಳನ್ನು ಪಾಲಿಸಿ ಕೊಂಡು ಮಂಜೇಶ್ವರ ಗ್ರಾಮ ಪಂಚಾಯತು ಉಪಾಧ್ಯಕ್ಷ ಮೊಹಮ್ಮದ್ ಸಿದ್ದೀಖ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಲಾ ಪರಿಸರದಲ್ಲಿ ಗಿಡ ನೀಡುವುದರೊಂದಿಗೆ ಮಂಜೇಶ್ವರ ಗ್ರಾ. ಪಂ. ಅಧ್ಯಕ್ಷೆ ಜೀನ್ ಲವೀನಾ ಮೊಂತೆರೋ ಉದ್ಘಾಟಿಸಿದರು. ಈ ಸಂದರ್ಭ

ಮನೆ ಮನೆಗೆ ದಿನಸಿ ಸಾಮಾಗ್ರಿ ವಿತರಣೆ : ಉಡುಪಿಯ ಸ್ಪೀಡ್ ಡೆವಿಲ್ಸ್ ಯುವಕರ ತಂಡದ ಕಾರ್ಯ

ಲಾಕ್ ಡೌನ್‍ನಿಂದಾಗಿ ದುಡಿಮೆ ಇಲ್ಲದೇ ಹಲವು ಕುಟುಂಬಗಳು ಸಂಕಷ್ಟದಲ್ಲಿವೆ. ಹೀಗಾಗಿ ಸಂಕಷ್ಟದ ಕುಟುಂಬಗಳ ಹಸಿವು ನೀಗಿಸುವ ಕೆಲಸವನ್ನು ಸದ್ದಿಲದೇ ಮಾಡುತ್ತಿದೆ. ಉಡುಪಿಯ ಸ್ಪೀಡ್ ಡೆವಿಲ್ಸ್ ಎನ್ನುವ ಹೆಸರಿನ ಯುವಕರು ಸಂಕಷ್ಟದಲ್ಲಿ ಕುಟುಂಬಗಳ ಮನೆ ಮನೆಗೆ ತೆರಳಿ ಹಸಿವು ನೀಗಿಸುತ್ತಿದೆ. ಇಡೀ ದೇಶವೇ ಕೊವಿಡ್ ಮಹಾಮಾರಿ ಯಿಂದ ಹಾಕಲಾಗಿರುವ ಲಾಕ್ ಡೌನ್ ಗೆ ತತ್ತರಿಸಿ ಹೋಗಿದೆ.ದುಡಿಮೆಯಿಲ್ಲದೇ ಜನ ಹಸಿವಿನಿಂದ ಸಂಕಷ್ಟದಲ್ಲಿದ್ದಾರೆ.ಒಂದೊತ್ತು ಊಟಕ್ಕೂ

ವಿಶ್ವ ಪರಿಸರ ದಿನಾಚರಣೆ ಬಂಟ್ವಾಳದಲ್ಲಿ ಜೆಸಿಐ ವತಿಯಿಂದ ವನಮಹೋತ್ಸವ

ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ಜೆಸಿಐ ಬಂಟ್ವಾಳದ ವತಿಯಿಂದ ಮಾರ್ನಬೈಲಿನಲ್ಲಿರುವ ಆರೋಗ್ಯ ಉಪಕೇಂದ್ರದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.  ತಾಲೂಕು ಪಂಚಾಯತಿ ಸದಸ್ಯ ಸಂಜೀವ ಪೂಜಾರಿ ಬೊಳ್ಳಾಯಿ ಹಾಗೂ ಉದ್ಯಮಿ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ ಮಾತನಾಡಿ ಜೆಸಿ ಸಂಸ್ಥೆಯ ಮೂಲಕ ವಿಶ್ವದಾದ್ಯಂತ ವನ ಮಹೋತ್ಸವ ಕಾರ್ಯಕ್ರಮವನ್ನು ನಡೆಸಿ

ಕೋವಿಡ್ ವಾರಿಯರ್ಸ್‍ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ : ಸಚಿವ ಶ್ರೀಮಂತ್ ಪಾಟೀಲ್

ಬೆಳಗಾವಿ: ಸಚಿವ ಶ್ರೀಮಂತ ಪಾಟೀಲ ಫೌಂಡೇಶನ ವತಿಯಿಂದ ಕೊರೊನಾ ವಾರಿಯರ್ಸ್‍ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಅಥಣಿ ಸುಗರ್ಸ್ ಕಾರ್ಖಾನೆ ಆವರಣದಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ ವಿತರಿಸಲಾಯಿತು. ಸಚಿವರ ಆಪ್ತ ಕಾರ್ಯದರ್ಶಿಯಾದ ಸಚಿನ್ ದೇಸಾಯಿ ಅವರು ಮಾತನಾಡಿ,ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ಸ್ಯಾನಿಟೈಜರ್

ಆಳ್ವಾಸ್‍ನಲ್ಲಿ ಕೋವಿಶೀಲ್ಡ್ ಲಸಿಕೆ ಅಭಿಯಾನ : ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ

ಮೂಡುಬಿದಿರೆ: ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿಯಾನವನ್ನು ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು. ಮೊದಲ ಹಂತದ ವ್ಯಾಕ್ಸಿನೇಶನ್ ಡ್ರೈವ್ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ನಡೆಯಿತು. ಲಸಿಕೆ ಅಭಿಯಾನದ ಭಾಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಿಬ್ಬಂದಿ ವರ್ಗ ಹಾಗೂ ಅವರ ಕುಟುಂಬವರ್ಗದವರು ಸೇರಿ 500 ಜನರಿಗೆ ಕೋವಿಶೀಲ್ಡ್ ಲಸಿಕೆ ವಿತರಿಸಲಾಯಿತು. ನಾಲ್ಕು ಹಂತಗಳಲ್ಲಿ