Home Posts tagged #v4news (Page 3)

ಬೆಳ್ತಂಗಡಿ : ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯ

ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ವಾಣಿಜ್ಯ ಸಂಕೀರ್ಣದಲ್ಲಿರುವ ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯವಾದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಬೆಳ್ತಂಗಡಿ KSRTC ಬಸ್ ನಿಲ್ದಾಣದ ಬಳಿ ಇರುವ ವಾರ್ತಾ ಭವನ ಕಟ್ಟಡದ ಕೆಳ ಭಾಗ ಕಳೆದ ಒಂದು ವಾರದಿಂದ ಕುಸಿಯುತ್ತಿರುವ ಬಗ್ಗೆ ಪಟ್ಟಣ ಪಂಚಾಯತ್ ಗೆ ಮೌಖಿಕ ಮಾಹಿತಿ ನೀಡಲಾಗಿತ್ತು. ಆದರೆ ಪಟ್ಟಣ

ಭಾರತೀಯ ಸನಾತನ ಪರಂಪರೆ ಅಮೂಲ್ಯವಾದದ್ದು : ಅಮೃತ ವೈಭವದಲ್ಲಿ ಸಂಪೂಜ್ಯ ಸ್ವಾಮೀ ಪೂರ್ಣಾಮೃತಾನಂದ ಪುರಿ

ಮಂಗಳೂರು: ನಗರದ ಮಾತಾ ಅಮೃತಾನಂದಮಯಿ ಮಠದಲ್ಲಿ “ಅಮೃತ ವೈಭವ” ಕಾರ್ಯಕ್ರಮ ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು.ಅಮೃತಪುರಿಯಿಂದ ಆಗಮಿಸಿದ ಮಾತಾ ಅಮೃತಾನಂದಮಯಿ ದೇವಿಯವರ ಹಿರಿಯ ಶಿಷ್ಯ, ಟ್ರಸ್ಟೀ ಹಾಗೂ ವಿಶ್ವವಿಖ್ಯಾತ ಮಾತಾ ಅಮೃತಾನಂದಮಯಿ ಮಠದ ಪ್ರಧಾನ ಕಾರ್ಯದರ್ಶಿ ಸಂಪೂಜ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿಯವರಿಂದ,ಪೂಜನೀಯ ಸ್ವಾಮಿನಿ ಮಂಗಳಾಮೃತ ಪ್ರಾಣರವರ ದಿವ್ಯ ಉಪಸ್ಥಿತಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವೈಭವ ಪೂರ್ಣವಾಗಿ

ಬೀಚ್ ಕ್ಲೀನ್ ನಿಂಗ್ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಆಯಾಮಗಳಲ್ಲಿ ಒಂದಾದ ಸ್ಟೂಡೆಂಟ್ಸ್ ಫಾರ್ ಡೆವೆಲಪ್ ಮೆಂಟ್ (SFD) ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಬೀಚ್ ಕ್ಲೀನ್ ನಿಂಗ್ ಕಾರ್ಯಕ್ರಮ ಮಂಗಳೂರಿನ ತಣ್ಣಿರ್ ಬಾವಿ ಬೀಚ್ ನಲ್ಲಿ 01/01/2023 ಆದಿತ್ಯವಾರ ದಂದು ನಡೆಯಿತು. ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು .ಕಾರ್ಯಕ್ರಮದಲ್ಲಿ SFD ಮಂಗಳೂರು ವಿಭಾಗ ಸಂಚಾಲಕರಾದ ನಿಶಾನ್ ಆಳ್ವ ಕಾವೂರು, ಎಬಿವಿಪಿ ಮಂಗಳೂರು ತಾಲೂಕು

ಜಲೀಲ್ ಹತ್ಯೆ ಖಂಡಿಸಿ ಕರ್ನಾಟಕ ಮುಸ್ಲಿಂ ಜಮಾಅತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮನವಿ : ನಾಳೆ ಧರಣಿ

ಕರಾವಳಿ ಜಿಲ್ಲೆಯಲ್ಲಿ ಮತ್ತೆ ಅಶಾಂತಿ ಸೃಷ್ಟಿಸುವ ದುರುದ್ದೇಶದಿಂದ ಕೃಷ್ಣಾಪುರದ ಜಲೀಲ್ ಎಂಬ ಅಮಾಯಕನನ್ನು ಹತ್ಯೆ ಮಾಡಿದ ಆರೋಪಗಳನ್ನು ಶೀಘ್ರದಲ್ಲೇ ಬಂಧಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಅವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಮುಸ್ಲಿಂ ಜಮಾಅತ್ ಮುಖಂಡರು ಮನವಿ ಸಲ್ಲಿಸಿದರು. ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಗಳನ್ನ ಮಟ್ಟ ಹಾಕಬೇಕು. ಜೊತೆಗೆ ಕೃಷ್ಣಾಪುರದ ಜಲೀಲ್ ಎಂಬ ಅಮಾಯಕನನ್ನು

ಮೂಡುಬಿದರೆಯಲ್ಲಿ ಎಳ್ಳಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ

ಮೂಡುಬಿದಿರೆ: ಎಳ್ಳಮವಾಸ್ಯೆಯ ಪ್ರಯುಕ್ತ ಹನ್ನೆರಡು ಕವಲಿನಲ್ಲಿ ಸಾವಿರಾರು ಭಕ್ತರು ತೀರ್ಥಸ್ಥಾನ ಮಾಡಿದರು. ಮೂಡುಬಿದಿರೆಯಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ತಾಕೊಡೆಯ ಬಳಿಯ ಹನ್ನೆರಡು ಕವಲಿನಲ್ಲಿ ಭಕ್ತರು ತೀರ್ಥಸ್ನಾನ ಮಾಡಿ ನಂತರ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಹಣ್ಣುಕಾಯಿ ಮಾಡಿ, ಪೂಜೆ ಸಲ್ಲಿಸಿ ತದ ನಂತರ ನದಿಯ ನಡುವಿನಲ್ಲಿರುವ ಪಂಚ ಮಹಾಲಿಂಗೇಶ್ವರ ದೇವಾಲಯಕ್ಕೆ ಪೂಜೆಗೈದು ನದಿಯಲ್ಲಿ ದಾನ ಬಿಟ್ಟು ದೇವರ ಕೃಪೆಗೆ ಪಾತ್ರರಾಗುತ್ತಾರೆ. ಈ

ಕಡಬದಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ಶುಭಾರಂಭ

ಪಂಜ ರಸ್ತೆಯ ಕಡಬದ ಯೋಗಕ್ಷೇಮ ಸಂಕೀರ್ಣ ಸಿ.ಎ ಬ್ಯಾಂಕ್ ಬಿಲ್ಡಿಂಗ್‍ನಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ( ಗೋಲ್ಡ್ ಅಂಡ್ ಸಿಲ್ವರ್ ) ಶುಭಾರಂಭಗೊಂಡಿತು. ಸಂಸ್ಥೆಯನ್ನು ಉದ್ಘಾಟಿಸಿ, ದೀಪ ಬೆಳಗಿಸಿದ ಕಡಬದ ಶಾಸ್ತ್ರಿ ಕ್ಲಿನಿಕ್ ವೈದ್ಯರಾದ ಡಾ. ಸಿಎ ಶಾಸ್ತ್ರಿ ಯವರು ದೇವರ ಕೃಪೆಯಿಂದ ಸಂಸ್ಥೆ ಇನ್ನಷ್ಟು ಅಭಿವೃದ್ಧಿಗೊಳ್ಳಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಮಾಲಕ ರಮೇಶ್ ಪಾದರೆ ಎಲ್ಲರ ಸಹಕಾರ ಕೋರಿದರು. ಸಂಸ್ಥೆಯ ಮಾಲಕರ ಧರ್ಮಪತ್ನಿಯಾದ ಶ್ರುತಿ ಟಿ

ನೀರಿನಲ್ಲಿ ಬಂಡಿ ಉತ್ಸವ ನೆರವೇರುವುದರೊಂದಿಗೆ ಕುಕ್ಕೆ ಜಾತ್ರೆ ಸಂಪನ್ನ

ಬೇರೆಲ್ಲೂ ಕಾಣದ ವಿಶಿಷ್ಠ ಉತ್ಸವ : ಇಳಿದ ಕೊಪ್ಪರಿಗೆ: ಮಹಾಸಂಪ್ರೋಕ್ಷಣೆ : ಯಶಸ್ವಿಯನೀರಾಟ : ಚಿಣ್ಣರ ಸಂಭ್ರಮ ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವವವು ಸೋಮವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊoಡಿತು. ಮುಂಜಾನೆ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು ವೈದಿಕ ವಿದಾನ ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ

ವಕೀಲರ ಮನೆ ಪ್ರವೇಶ ಮಾಡಿ ಮನೆಯಿಂದ ಎಳೆದುಕೊಂಡು ಹೋಗಿ  ದೌರ್ಜನ್ಯ ಆರೋಪ: ಮಂಗಳೂರು ವಕೀಲರ ಸಂಘ ಖಂಡನೆ

ದಿನಾಂಕ 3.12.2022 ರಂದು ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೋಲೀಸರು ನಡೆಸಿದ ದೌರ್ಜನ್ಯವನ್ನು ಮಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಗಿದೆ. ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂದಕಾಜ್ಞೆ ಇದ್ದೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲರ ಮೇಲೆ F. I.R ದಾಖಲಿಸಿ ರಾತೋರಾತ್ರಿ ವಕೀಲರ ಮನೆ

ಸುರತ್ಕಲ್ ಅಕ್ರಮ ಟೋಲ್ ಬಂದ್ : ಹೋರಾಟಗಾರರ ವಿಜಯೋತ್ಸವ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಕಳೆದ 35 ದಿನಗಳಿಂದ ನಡೆಯುತ್ತಿದ್ದ ಆಹೋರಾತ್ರಿ ಹೋರಾಟವು ಬುಧವಾರ ರಾತ್ರಿ ಮುಕ್ತಾಯಗೊಂಡಿದ್ದು, ಹೋರಾಟ ಯಶಸ್ವಿಯಾದ ಹಿನ್ನೆಲೆಯಲ್ಲಿ ಹೋರಾಟ ಸಮಿತಿಯ ನಾಯಕರು ಹಾಗೂ ಕಾರ್ಯಕರ್ತರು ಗುರುವಾರದಂದು ಸುರತ್ಕಲ್ ಧರಣಿ ವೇದಿಕೆಯಲ್ಲಿ ವಿಜಯೋತ್ಸವ ಆಚರಿಸಿದರು. ಸಾಮೂಹಿಕ ಹೋರಾಟದ ಫಲವಾಗಿ ಸುರತ್ಕಲ್ ಅಕ್ರಮ ಟೋಲ್ ಮುಚ್ಚುವಂತಾಯಿತು, ದೇಶದಲ್ಲಿ ಇರುವ ಎಲ್ಲಾ ಅಕ್ರಮ ಟೋಲ್ ಗಳ ಮುಚ್ಚುಗಡೆಗೆ ಈ ಹೋರಾಟ