ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಟ್ಟಲು ಬಡಿದು ವಿನೂತನ ರೀತಿಯಲ್ಲಿ ಪ್ರತಿಭಟಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಪುತ್ತೂರು ನವತೇಜ ಟ್ರಸ್ಟ್, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 6ನೇ “ಹಲಸು ಮತ್ತು ಹಣ್ಣುಗಳ ಮೇಳ-2023” ಜೂ.17 ಹಾಗೂ 18 ರಂದು ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇಳದಲ್ಲಿ ಸುಮಾರು 30ಕ್ಕೂ ಅಧಿಕ ಮಿಕ್ಕಿ ಹಲಸಿನ ಉತ್ಪನ್ನಗಳ ಪ್ರದರ್ಶನ
ಮಹಿಳಾ ಕ್ರೀಡಾಪಟುಗಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆಯನ್ನು ಖಂಡಿಸಿ,BJP ಸಂಸದ ಬ್ರಿಜ್ ಭೂಷಣ್ ಸಿಂಗ್ ಮತ್ತು BJP ಹರ್ಯಾಣ ಮಂತ್ರಿ ಸಂದೀಪ್ ಸಿಂಗ್ ವಿರುದ್ಧ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ದೆಹಲಿಯಲ್ಲಿ ನಡೆಯುತ್ತಿರುವ ಮಹಿಳಾ ಕ್ರೀಡಾಪಟುಗಳ ನ್ಯಾಯಯುತ ಹೋರಾಟವನ್ನು ಬೆಂಬಲಿಸಿ ದೇಶದ ರೈತ
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಕುರಿತು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಕಿಡಿಕಾರಿದರು. ಅವರು ವಿ4 ನ್ಯೂಸ್ ನೊಂದಿಗೆ ಮಾತನಾಡಿ, ಬಜರಂಗದಳ ಸಂಘಟನೆಯ ಮುಖಾಂತರ ಅಕ್ರಮ ದನ ಸಾಗಾಟ ಹಾಗೂ ಲವ್ ಜಿಹಾದ್ ವಿರುದ್ಧ ಹೋರಾಟ ಮಾಡಲಾಗುತ್ತಿದೆ. . ಇಂತಹ ಸಂಘಟನೆಯನ್ನು ನಿಷೇಧಕ್ಕೆ ಮುಂದಾಗುತ್ತಿರುವ ಸರಿಯಲ್ಲ.ಇದು ಕಾಂಗ್ರೆಸ್ ಅವನತಿ ಹೋಗುತ್ತದೆ ಎಂಬುದಕ್ಕೆ ಇದುವೇ ಸಾಕ್ಷಿಯಾಗಿದೆ ಎಂದು ಅವರು
ರಾಜ್ಯದ ಜನತೆ ನೀಡಿದ ಜನಾದೇಶಕ್ಕೆ ವಿರುದ್ಧವಾಗಿ ಅಕ್ರಮ ಸರಕಾರ ರಚಿಸಿ ಜನತೆಯ ಬದುಕನ್ನು ಮೂರಾಬಟ್ಟೆಯನ್ನಾಗಿಸಿ ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ.40% ಕಮಿಷನ್ ಸರಕಾರವೆಂದು ತನ್ನವರಿಂದಲೇ ಕರೆಸಿಕೊಂಡ BJP,ನಾಡಿನ ಸೌಹಾರ್ದತೆಯನ್ನು ನಾಶ ಮಾಡಿದೆ.ಇಂತಹ BJP,ಸರಕಾರ ನಡೆಸುವುದು ಬಿಡಿ ವಿರೋಧ ಪಕ್ಷದ ಸ್ಥಾನದಲ್ಲೂ ಕೂರಲು ನಾಲಾಯಕ್ಕು ಎಂದು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಸ್ಥಾಪಕಾಧ್ಯಕ್ಷರಾದ ಜಿ ಎನ್ ನಾಗರಾಜ್ ರವರು ಖಾರವಾಗಿ ಪ್ರತಿಕ್ರಿಯೆ ನೀಡಿದರು.
ಬಂಟ್ವಾಳದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ವಿಎನ್‍ಆರ್ ಗೋಲ್ಡ್‍ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗೆ ಅತೀ ಕಡಿಮೆ ದರದಲ್ಲಿ ಚಿನ್ನಾಭರಣಗಳನ್ನು ಖರೀದಿ ಮಾಡುವ ಅವಕಾಶವಿದೆ. ಗ್ರಾಹಕರು ಎಪ್ರಿಲ್ 22ರಂದು ವಿಎನ್‍ಆರ್ ಮಳಿಗೆಗೆ ಭೇಟಿ ನೀಡಿ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಬಹುದು. ಅಕ್ಷಯ ತೃತೀಯದಂದು ಚಿನ್ನ ಖರೀದಿ ಮಾಡುವುದು ಅದೃಷ್ಟ ಹಾಗೂ ಸಮೃದ್ಧಿಯ ಸಂಕೇತ ಎಂದೇ ಭಾವಿಸಲಾಗಿದೆ. ಯಾಕೆಂದ್ರೆ ಈ ದಿನವನ್ನು ಮಂಗಳಕರ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆಯಾಯಿತು. ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ ದರ್ಬೆ ವೃತ್ತ ಹಾಗೂ ಬೊಳುವಾರಿನ ಸುಬ್ರಹ್ಮಣ್ಯ ನಗರದಲ್ಲಿ ಸೇರಿ ಏಕಕಾಲದಲ್ಲಿ ಚಾಲನೆ ನೀಡಲಾಯಿತು. ದರ್ಬೆ ವೃತ್ತದಲ್ಲಿ ಶ್ರಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿಜಿ ತೆಂಗಿನಕಾಯಿ
ಮೂಡುಬಿದಿರೆ: ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್,
ಗುಂಡ್ಯ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ಎ.2ರ ಬೆಳಗ್ಗೆ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(ವ.50) ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿಯು ಮೂಲತಃ ಕೇರಳದವನಾಗಿದ್ದು, ಕಳೆದ 15 ವರ್ಷದಿಂದ
ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಾಶನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ. ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ ಸ್ವಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಸೋಮವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಕಿ ಈ ಅವಘಡ ಸಂಭವಿಸಿದೆ. ಈ ವೇಳೆ ದಾಸ್ತಾನು ಕೇಂದ್ರದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಲಾರಿ ಸಹಿತ ಎರಡು ವಾಹನಗಳು ಬೆಂಕಿಗೆ ಆಹುತಿಯಾಗಿವೆ ಎಂದು