ಡಿಸಿ ಮನ್ನಾ ಜಾಗಗಳು ಇತರರ ಪಾಲಾಗುತ್ತಿದೆ. ಆದರೆ ಎಸ್. ಸಿ, ಎಸ್. ಟಿ ಸಮುದಾಯದ ಜನರು ಡಿಸಿ ಮನ್ನಾ ಜಾಗದಲ್ಲಿ ಬಿಡಾರ ಹೂಡಿದರೆ ಕೂಡಲೇ ಅಲ್ಲಿಂದ ಎತ್ತಂಗಡಿ ಮಾಡಲು ಇಲಾಖೆಯಿಂದ ಅಧಿಕಾರಿಗಳು ಬರುತ್ತಾರೆ. ಇನ್ನು ಮುಂದೆ ಡಿಸಿ ಮನ್ನಾ ಜಮೀನಿನಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಜನರು ಸಣ್ಣ ಗುಡಿಸಲು ಮಾಡಿ ಮನೆ ಮಾಡಿಕೊಂಡಿದ್ದಾರೆ. ಅವರನ್ನು ಅಲ್ಲಿಂದ ಓಡಿಸದೇ
ಮಂಗಳೂರಿನ ಬಂದರಿನಲ್ಲಿರುವ ಟೆಂಪೋ ಚಾಲಕ ಮತ್ತು ಮಾಲಕರ ಸಂಘದ ಉದ್ಘಾಟನಾ ಕಾರ್ಯಕ್ರಮವು ನಗರದ ಪೋಲಿಸ್ ಲೈನ್‍ನ ನಾಸಿಕ್ ಬಿ. ಎಚ್ ಬಂಗೇರ ಸಭಾ ಭವನದಲ್ಲಿ ನಡೆಯಿತು. ಸಂಘದ ಲೋಗೋ ಅನವರಣಗೊಳಿಸಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತಾಡಿದ ಮಂಗಳೂರು ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪ್ಪಾಡಿ ಅವರು.ಸರ್ಕಾರದ ವತಿಯಿಂದ ಇತರ ಚಾಲಕರಿಗೆ ಹಾಗೂ ಕಾರ್ಮಿಕರಿಗೆ ಸಿಗುವಂತಹ ಸೌಲಭ್ಯಗಳು ಟೆಂಪೋ ಚಾಲಕರಿಗೆ ಸಿಗಬೇಕು ಟೆಂಪೋ ಚಾಲಕರನ್ನು ಯಾಕೆ ಕಡೆಗಣಿಸಲಾಗುವುದು
ವಿಟ್ಲ: ಖಾಸಗಿ ಬಸ್ಸೊಂದು ಗುಡ್ಡಕ್ಕೆ ಹತ್ತಿದ ಘಟನೆ ವಿಟ್ಲ -ಮಂಗಳೂರು ರಸ್ತೆಯ ಕೆಲಿಂಜದ ಮಾಜೋನಿ ಎಂಬಲ್ಲಿ ನಡೆದಿದೆ. ವಿಟ್ಲದಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್ ಗುಡ್ಡಕ್ಕೆ ಹತ್ತಿದೆ. ಘಟನೆಯಿಂದ ಚಂದಳಿಕೆಯ ಬಾಲಕಿಗೆ ಕಾಲಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಕೆಲ ಪ್ರಯಾಣಿಕರಿಗೆ ಸಣ್ಣ -ಪುಟ್ಟ ಗಾಯಾವಾಗಿದೆ. ಸ್ಥಳಕ್ಕೆ ವಿಟ್ಲ ಪೋಲೀಸರು ಭೇಟಿ ನೀಡಿದ್ದಾರೆ
ಉಡುಪಿ: ನಿವೃತ್ತ ಪ್ರಾಂಶುಪಾಲ ಜಾನಪದ ವಿದ್ವಾಂಸ ಡಾ. ಗಣನಾಥ ಎಕ್ಕಾರು ಅವರಿಗೆ ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಇವರ ವತಿಯಿಂದ ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಜಯಪುರದ ಮುದ್ದೇಬಿಹಾಳದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಸಚಿವ ಸಿ.ಎಸ್. ನಾಡಗೌಡ ಅಪ್ಪಾಜಿಯವರು ಪ್ರಶಸ್ತಿ ಪ್ರದಾನ ಮಾಡಿದರು. ಕಾಲಜ್ಞಾನ ಮಠದ ಶ್ರೀ ಅಪ್ಪಯ್ಯ
ಔರಾ 2023 – ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಇಂಜಿನಿಯರಿಂಗ್ ಬ್ಯಾಚ್ 2022ರ ಫ್ರೆಶರ್ಸ್ ಡೇ ಅನ್ನು ಫೆಬ್ರವರಿ 7, 2023 ರಂದು ಆಚರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಮತ್ತು ಗ್ಲೋಬಲ್ ಆರ್‌ಎಂಜಿ ಮುಖ್ಯಸ್ಥರಾದ ಶ್ರೀ ಚಕ್ರವರ್ತಿ ಇ.ಎಸ್. ಹಾಗೂ ಗೌರವ ಅತಿಥಿಗಳಾಗಿ ಶ್ರೀ ಎನ್. ಶಶಿಕುಮಾರ್ IPS, DIGP ಮತ್ತು ಪೊಲೀಸ್ ಆಯುಕ್ತರು, ಮಂಗಳೂರು ಇವರುಗಳು ಭಾಗವಹಿಸಿದರು.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನೀರೆ ಗುಡ್ಡೆಯಂಗಡಿ ಬಳಿಯಲ್ಲಿ ಮಂಗಳವಾರ ನಡೆದಿದೆ. ಪ್ರಯಾಣಿಕರು ಪುತ್ತೂರು ಮೂಲದವರೆಂದು ತಿಳಿದು ಬಂದಿದೆ.ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಣಿಪಾಲ, 30ನೇ ಜನವರಿ 2023: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ , ಅಂಗ ಸಂಸ್ಥೆಯಾಗಿರುವ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗವು 28 ಜನವರಿ 2023 ರಂದು ಶನಿವಾರ ಲೈವ್ (ನೇರ ಪ್ರಸಾರದ) ಎಂಡೋಸ್ಕೋಪಿ ಕಾರ್ಯಾಗಾರ ಮತ್ತು 29 ಜನವರಿ 2023 ಭಾನುವಾರ ಲೈವ್ (ನೇರ ಪ್ರಸಾರದ) ಬಂಜೆತನ ಅಲ್ಟ್ರಾಸೌಂಡ್ ಕುರಿತು ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಿತ್ತು. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡಾ
ವಿಟ್ಲ: ಪಡ್ನೂರು ಗ್ರಾಮದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದ ಶೆಟರ್ ಅನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿಯಲು ಪ್ರಯತ್ನಿಸಿ ರಾತ್ರಿ ಕಳವು ಮಾಡಲು ಪ್ರಯತ್ನಿಸಿದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಟಿ.ಕೆ ಅಬ್ದುಲ್ (37) ಎಂದು. ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರಾದ ನಾಗರಾಜ ಹೆಚ್ .ಇ. ರವರ ಮಾರ್ಗದರ್ಶನದಂತೆ, ವಿಟ್ಲ ಪೊಲೀಸ್ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ
ಮೂಡುಬಿದಿರೆ: ಗಣರಾಜ್ಯೋತ್ಸವ ಹಾಗೂ ಪ್ರಧಾನಿ ಜೊತೆಗಿನ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲು ಮೂಡುಬಿದಿರೆಯ ಹತ್ತನೇ ತರಗತಿ ವಿದ್ಯಾರ್ಥಿ ಪ್ರಹ್ಲಾದ ಮೂರ್ತಿ ಕಡಂದಲೆ ಆಯ್ಕೆಯಾಗಿದ್ದಾರೆ.ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಬಳಿಕ ಜನವರಿ 27ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.ಈತ ಕಡಂದಲೆಯ ಸ್ಕಂದ ಪ್ರಸಾದ್ ಭಟ್-
ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಕೊಡಮಾಡುವ ಅಖಿಲ ಭಾರತ ಮಟ್ಟದ ಸಮಾಜ ಸೇವಾ ಪ್ರಶಸ್ತಿ ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ 2022 ಪುರುಷ ಮತ್ತು ಮಹಿಳಾ ಈ ಎರಡು ವಿಭಾಗಗಳಲ್ಲಿ ಪ್ರಕಟವಾಗಿವೆ.ಸಾರ್ವಜನಿಕ ಕ್ಷೇತ್ರದಲ್ಲಿ ವಿಶೇಷ ಸೇವೆಗೈಯುವ ಕೊಂಕಣಿ ಭಾಷಿಕರನ್ನು ಗುರುತಿಸಿ ಗೌರವಿಸುವ ಈ ಪುರಸ್ಕಾರವನ್ನು 2014ರಲ್ಲಿ ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಬಸ್ತಿ ವಾಮನ ಶೆಣೈಯವರ 80ನೇ ಜನ್ಮದಿನದಂದು ದಾನಿ ಟಿ.ವಿ. ಮೋಹನದಾಸ ಪೈ



























