Home Posts tagged #v4news (Page 9)

ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಸುಬ್ರಮಣ್ಯ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು.ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕೆ‌.ಎಲ್.ರಾಹುಲ್, ಮಹಾಪೂಜೆಯಲ್ಲಿ ಭಾಗಿಯಾಗಲಿದ್ದಾರೆ.

“ಅಹಿಂಸಾ ಎನಿಮಲ್ ಕೇರ್” ಟ್ರಿಸ್ಟ್ ಮೂಲಕ ಬೀದಿ ನಾಯಿಗಳ ಆರೈಕೆ

ನಿಯತ್ತಿಗೆ ಮತ್ತೊಂದು ಹೆಸರು ನಾಯಿ.. ಇಷ್ಟೊಂದು ನಿಷ್ಠಾವಂತ ಪ್ರಾಣಿಯನ್ನು ಪ್ರೀತಿಸುವವರು ವಿರಳ.. ಈ ಶ್ವಾನಗಳಿಗೆ ಮನುಷ್ಯನಿಗಿರುವಂಥಹ ಸ್ವಾರ್ಥ, ಮತ್ಸರ, ಆಸೆ, ಆಕಾಂಕ್ಷೆಗಳಿಲ್ಲ, ಅದಕ್ಕೆ ಹೊಟ್ಟೆಗೆ ತಿನ್ನಲು ಹಿಟ್ಟು ಬಿಟ್ಟರೆ ಯಾವುದೇ ಆಸ್ತಿ, ಅಂತಸ್ತು ಬೇಡ… ಒಂದೊಮ್ಮೆ ತಪ್ಪಿಯಾದರೂ ಅದಕ್ಕೆ ಆಹಾರ ನೀಡಿದ್ದೀರಿ ಎಂದಾದರೆ ನಿಮ್ಮನ್ನು ಅದು ಅದರ ಜೀವನ ಪರಿಯಂತ ಮರೆಯೋಲ್ಲ.. ಇಂಥಹ ವಿಶ್ವಾಸ ಭರಿತ ಪ್ರಾಣಿಯನ್ನು ಸಾಕಿ ಸಲಹುತ್ತಿರುವ ಅಪರೂಪದ

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಸಚಿವ ಬೈರತಿ ಬಸವರಾಜ್ ಭೇಟಿ

ಸುಬ್ರಹ್ಮಣ್ಯ, ನ.20: ಒಂಬತ್ತು ಸಾವಿರ ಕೋಟಿ ರೂಪಾಯಿಗಳನ್ನು ನಮ್ಮ ಸರಕಾರ ಅಭಿವೃದ್ಧಿಗೆ ಇರಿಸಿದೆ. ಸರಕಾರದ ಸಂಕಲ್ಪ ದಾಹಮುಕ್ತ ಕರ್ನಾಟಕ ಮಾಡಬೇಕೆಂಬುದು. ಮುಂದಿನ ಎರಡು ಮೂರು ತಿಂಗಳಲ್ಲಿ ಅದನ್ನು ಕಾರ್ಯಗತ ಗೊಳಿಸಲು ಪ್ರಯತ್ನಿಸಲಾಗುವುದು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು. ಅವರು ರವಿವಾರ ರಾತ್ರಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು. ನಗರಾಭಿವೃದ್ಧಿ ಇಲಾಖೆ ವತಿಯಿಂದ

ಬೈಂದೂರು : ಗಜ್ಞಾರ ಎನ್ ಕ್ಲೇವ್ ನೂತನ ಕಟ್ಟಡ ಉದ್ಘಾಟನೆ

ಬೈಂದೂರು: ಪ್ರಮೋದ್ ಶಿಪ್ಲಾ ಪೂಜಾರಿ ಅವರು ಗಜ್ಞಾರ ಮನೆತನದ ಹೆಸರಿನಲ್ಲಿ ಗಜ್ಞಾರ ಎನ್ ಕ್ಲೇವ್ ಎಂಬ ನೂತನ ಖಾಸಗಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಬೈಂದೂರಿನಲ್ಲಿ ನಡೆಯಿತು. ಕಟ್ಟಡದ ಉದ್ಘಾಟನೆ ಬೈಂದೂರು ಕ್ಷೇತ್ರದ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ನೆರವೇರಿಸಿದರು. ಬಳಿಕ ಮಾತನಾಡಿ ಕಂಬದಕೋಣೆ ಹಾಗೂ ಕೆರ್ಗಾಲು ಗ್ರಾಮವನ್ನು ದೇಶ ವಿದೇಶಗಳಿಗೆ ಪರಿಚಯಿಸಿದ ದಿವಂಗತ ಆರ್.ಕೆ ಸಂಜುರಾಯರನ್ನು ನೆನಪಿಸಿ ಈ ಕಟ್ಟಡದಿಂದ ಬರುವಂತ ಆದಾಯವನ್ನು ಸ್ವಲ್ಪ ಮಟ್ಟಿಗೆ ನಮ್ಮ

ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ: ಸಿಎಂ ಬೊಮ್ಮಾಯಿ

ಮಂಗಳೂರು, ನ.19: ಬಂಡವಾಳ ಹೂಡಿಕೆದಾರರ ಸಮಾವೇಶದಿಂದ  ನವೀಕರಿಸಬಹುದಾದ ಇಂಧನ,  ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ಬಂಡವಾಳದ ನಿರೀಕ್ಷೆ ಇದೆ. ದೊಡ್ಡ ಪ್ರಮಾಣದ ಹೂಡಿಕೆ ಕರಾವಳಿಯಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಹಸಿರು ಯೋಜನೆಉತ್ಪಾದನೆಗೆ

ಭಾರತದ ಯುವ ಶಕ್ತಿಗೆ ಮಣಿಪಾಲ ಗ್ರೂಪ್ ಸಂಸ್ಥೆಯ ಕೊಡುಗೆ ಅಪಾರ : ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿ ಜಿಲ್ಲೆಗೆ ಪ್ರವಾಸವನ್ನು ಕೈಗೊಂಡು ಇಂದು ಶುಕ್ರವಾರದಂದು ಉಡುಪಿಗೆ ಆಗಮಿಸಿದ್ದು, ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಣಿಪಾಲದ ಮಾಹೆ ಸಂಸ್ಥೆ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೇವೆಯನ್ನು ಶ್ಲಾಘಿಸುತ್ತಾ, ತಮ್ಮ ವಿದ್ಯಾರ್ಥಿ ದಿನಗಳನ್ನು ನೆನಪಿಸಿಕೊಂಡರು. ಮಾಹೆ ಸಂಸ್ಥೆ ಶೈಕ್ಷಣಿಕ ಹಾಗೂ ಸಂಶೋಧನೆ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ

ಅನಾಥ ವೃದ್ಧರಿಗೆ ಆಶ್ರಯ ನೀಡೋರಿಲ್ಲ : ಜಿಲ್ಲಾಧಿಕಾರಿಗಳಿಗೆ ಮೊರೆ ಹೋದ ಸಾಮಾಜಿಕ ಕಾರ್ಯಕರ್ತರು

ಉಡುಪಿ: ಕೋಟ ಠಾಣಾ ವ್ಯಾಪ್ತಿಯಲ್ಲಿ 20 ದಿನಗಳ ಹಿಂದೆ ಕಾಲಿಗೆ ಗಾಯವಾಗಿ, ಅನಾರೋಗ್ಯ ಪೀಡಿತರಾಗಿ ಅನಾಥ ಸ್ಥಿತಿಯಲ್ಲಿದ್ದ ಹಿರಿಯ ವೃದ್ಧರನ್ನು ವಿಶು ಶೆಟ್ಟಿ ಅವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಯ ಬಳಿಕ ಗುಣಮುಖರಾಗಿರುವ ಅವರನ್ನು ಎಲ್ಲಿಗೆ ಸೇರಿಸೋದು ಎಂಬ ಧರ್ಮ ಸಂಕಟ ಸಾಮಾಜಿಕ ಕಾರ್ಯಕರ್ತರನ್ನು ಕಾಡುತ್ತಿದೆ ! ವೃದ್ಧರನ್ನು ಆಸ್ಪತ್ರೆಗೆ ದಾಖಲಿಸಿದ ವಿಶು ಶೆಟ್ಟಿ ಅವರಿಗೆ ವೃದ್ಧರನ್ನು ಕರೆದುಕೊಂಡು ಹೋಗುವಂತೆ ಜಿಲ್ಲಾಸ್ಪತ್ರೆಯಿಂದ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ‘ನನ್ನ ನಾಡು ನನ್ನ ಹಾಡು’ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕರಾವಳಿಯ ವಿವಿಧ ಭಾಗಗಳಲ್ಲಿ ಅತ್ಯುತ್ತಮವಾಗಿ ನಡೆದಿದೆ. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೋಟಿ ಕಂಠ ಗಾಯನ ‘ನನ್ನ ನಾಡು ನನ್ನ ಹಾಡು’ ಕಾರ್ಯಕ್ರಮ ಜರುಗಿತ್ತು. ಉಡುಪಿ ಅಪರ ಜಿಲ್ಲಾಧಿಕಾರಿಯಾದ ವೀಣಾ ಬಿ ಎಸ್,

ವರಾಹ ರೂಪಂ ಹಾಡಿಗೆ ತಡೆಯಾಜ್ಞೆ

ಬೆಂಗಳೂರು: ಕಾಂತಾರ ಸಿನಿಮಾ ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ಸೌಂಡ್ ಮಾಡುತ್ತಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡು ವಿವಾದ ಆಗಿತ್ತು. ಇದೀಗ ಈ ಹಾಡು ಬಳಸದಂತೆ ಕೋಯಿಕ್ಕೋಡ್ ಕೋರ್ಟ್ ಸೂಚನೆ ನೀಡಿರೋದು ಚಿತ್ರತಂಡಕ್ಕೆ ಬಿಗ್ ಶಾಕ್ ಕೊಟ್ಟಿದೆ. ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪವನ್ನು

ಬಂಟ್ವಾಳದ ದಡ್ಡಲಕಾಡು ಶಾಲೆಯಲ್ಲಿ ಕೋಟಿಕಂಠ ಗಾಯನ

ಬಂಟ್ವಾಳ: ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲಕಾಡು ಇಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಅಂಚನ್, ಪ್ರೌಢ ವಿಭಾಗದ ಅಧ್ಯಕ್ಷ ಪುರುಷೋತ್ತಮ್ ಅಂಚನ್ ಪ್ರಾಥಮಿಕ ವಿಭಾಗದ ಎಸ್ ಡಿ ಎಂ ಸಿ ಉಪಾಧ್ಯಕ್ಷ ಬಾಲಕೃಷ್ಣ, ಎಸ್ ಡಿ ಎಂ ಸಿ ಸದಸ್ಯರಾದ ರಾಮಚಂದ್ರ, ರಾಜೇಶ್ ನೆಕ್ಕರೆ,ಮನ್ಮಥರಾಜ್ ಜೈನ್, ಪ್ರವೀಣ್ ಗೌಡ,ಸರಸ್ವತಿ, ಹರ್ಷಿತ, ಹರಿಣಾಕ್ಷಿ, ಮೌರಿಸ್ ಡಿಸೋಜ, ಮುಖ್ಯ