ಪುತ್ತೂರು: 10 ಜನಕ್ಕೂ ಹೆಚ್ಚಿರುವ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳನ್ನು ಅ.28ರಂದು ಬೆಳಿಗ್ಗೆ ಗಂಟೆ 11ಕ್ಕೆ ಏಕಕಾಲಕ್ಕೆ
ಕಲ್ಕೂರ ಪ್ರತಿಷ್ಟಾನವು ವರ್ಷಂಪ್ರತಿಯಂತೆ ಅಕ್ಟೋಬರ್ 1೦ರಂದು ಕಡಲತೀರದ ಭಾರ್ಗವರೆಂದೇ ಪ್ರಸಿದ್ಧರಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬವನ್ನು ಆಚರಿಸಲಿದ್ದೇವೆ. ಕೊಡಿಯಾಲ್ ಗುತ್ತುವಿನ ಪತ್ತುಮುಡಿ ಸಭಾ ಭವನದಲ್ಲಿ ಕಾರ್ಯಕ್ರಮ ಜರುಗಲಿದ್ದು, ಈ ವರ್ಷದ ಕಾರಂತ ಪ್ರಶಸ್ತಿಯನ್ನು ಖ್ಯಾತ ವಾರಪತ್ರಿಕೆ ತರಂಗದ ವ್ಯವಸ್ಥಾಪಕ ಸಂಪಾದಕರಾದ ಡಾ. ಸಂಧ್ಯಾ ಎಸ್. ಪೈ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ
ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಎನ್ಐಎ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಅಪ್ಘಾನಿಸ್ತಾನದಲ್ಲಿ
ಬಿಲ್ಲವ ಸಮಾಜದ ಕಣ್ಮಣಿ ಬಹುಭಾಷಾ ನಟ ಲೆಜೆಂಡ್ ದಾದ ಸಾಹೇಬ್ ಪಾಲ್ಕೆ ಪ್ರಶಸ್ತಿ-2021ಕ್ಕೆ ಭಾಜನರಾದ ಸುಮನ್ ತಲ್ವಾರ್ ಅವರನ್ನು ಇಂದು ಬಿಲ್ಲವರ ಅಸೋಸಿಯೇಷನ್ ಮುಂಬಯಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಹರೀಶ್. ಜಿ ಅಮೀನ್, ಜೊತೆ ಕಾರ್ಯದರ್ಶಿ ಹರೀಶ್.ಜಿ.ಸಾಲ್ಯಾನ್, ಅಂದೇರಿ ಸ್ಥಳೀಯ ಕಚೇರಿಯ ಕಾರ್ಯದರ್ಶಿ ಹರೀಶ್ ಶಾಂತಿ, ನಿಲೇಶ್ ಪೂಜಾರಿ ಪಲಿಮಾರ್ ಉಪಸ್ಥಿತರಿದ್ದರು.
ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಸ್ ಇದರ ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ‘ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆ: ಸವಾಲುಗಳು ಮತ್ತು ಅವಕಾಶಗಳು’ ಎಂಬ ವಿಷಯದ ಕುರಿತು ಆನ್ಲೈನ್ ವೇದಿಕೆಯ ಮೂಲಕ ವರ್ಚುವಲ್ ಸಮ್ಮೇಳನ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಶೆರಾಟನ್ ಗ್ರ್ಯಾಂಡ್ ಬೆಂಗಳೂರು- ಮ್ಯಾರಿಯಟ್ ಇಂಟರ್ನ್ಯಾಷನಲ್ ನ
ಸರಕಾರದ ಆದೇಶದಂತೆ ದಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುವ ಕುರಿತಾಗಿ ಪೋಲಿಸರಿಗೆ ಮುಂಜಾಗ್ರತಾ ನಿಯಮಗಳ ಕುರಿತಾಗಿ ಪಣಂಬೂರು ಉಪವಿಭಾಗ ಮಟ್ಟದ ಪೋಲೀಸರಿಗೆ ಮಾಹಿತಿ ಕಾರ್ಯಕ್ರಮವು ಬೈಕಂಪಾಡಿ ಎಪಿ ಎಮ್ ಸಿ ಸಂಕೀರ್ಣ ಕಟ್ಟಡದ ಬಳಿ ಜರುಗಿತು. ಪಣಂಬೂರು ಸಹಾಯಕ ಪೋಲೀಸ್ ಆಯುಕ್ತ ಎಸ್ ಮಹೇಶ್ ಕುಮಾರ್ ಅವರು ಮಾತನಾಡಿ, ಸರಕಾರದ ಹಾಗೂ ದಕ ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಶುಕ್ರವಾರ ಸಂಜೆ ೭ ರಿಂದ ಕಟ್ಟುನಿಟ್ಟಿನ ಕ್ರಮ ಪಾಲಿಸಲು ಆದೇಶ
ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ ) ಉಡುಪಿ ಜಿಲ್ಲೆಯ ಸರ್ವ ಸದಸ್ಯರುಗಳು ಸೇರಿ ಕೋಟ ಶ್ರೀನಿವಾಸ ಪೂಜಾರಿ ಧಾರ್ಮಿಕ ದತ್ತಿ ಇಲಾಖೆ ಸಚಿವರಿಗೆ ಭೇಟಿ ಮಾಡಿ ಮನವಿ ಕೊಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಗೌರವ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ದೈವ ಚಾಕ್ರಿ ವರ್ಗದವರ ಸಮಸ್ಯೆಗಳನ್ನು ಹೇಳಿದರು. ಈಗಾಗಲೇ ಸರ್ಕಾರದ ಮೂರು ಬಾರಿಯ ಕೋವಿಡ್ ಪ್ಯಾಕೇಜಿನಲ್ಲಿ ಸರ್ಕಾರ ನಮ್ಮ ಕರಾವಳಿಯ ದೈವಾರಾಧನೆ ಕ್ಷೇತ್ರದಲ್ಲಿ ದುಡಿಯುವವರಿಗೆ ಈ ಲಾಕ್ ಡೌನ್ ತುತ್ತು
ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ಜೆಸಿಐ ಬಂಟ್ವಾಳದ ವತಿಯಿಂದ ಮಾರ್ನಬೈಲಿನಲ್ಲಿರುವ ಆರೋಗ್ಯ ಉಪಕೇಂದ್ರದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ತಾಲೂಕು ಪಂಚಾಯತಿ ಸದಸ್ಯ ಸಂಜೀವ ಪೂಜಾರಿ ಬೊಳ್ಳಾಯಿ ಹಾಗೂ ಉದ್ಯಮಿ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ ಮಾತನಾಡಿ ಜೆಸಿ ಸಂಸ್ಥೆಯ ಮೂಲಕ ವಿಶ್ವದಾದ್ಯಂತ ವನ ಮಹೋತ್ಸವ ಕಾರ್ಯಕ್ರಮವನ್ನು ನಡೆಸಿ
ಬೆಳಗಾವಿ: ಸಚಿವ ಶ್ರೀಮಂತ ಪಾಟೀಲ ಫೌಂಡೇಶನ ವತಿಯಿಂದ ಕೊರೊನಾ ವಾರಿಯರ್ಸ್ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಅಥಣಿ ಸುಗರ್ಸ್ ಕಾರ್ಖಾನೆ ಆವರಣದಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ ವಿತರಿಸಲಾಯಿತು. ಸಚಿವರ ಆಪ್ತ ಕಾರ್ಯದರ್ಶಿಯಾದ ಸಚಿನ್ ದೇಸಾಯಿ ಅವರು ಮಾತನಾಡಿ,ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ಸ್ಯಾನಿಟೈಜರ್
ಮೂಡುಬಿದಿರೆ: ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿಯಾನವನ್ನು ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು. ಮೊದಲ ಹಂತದ ವ್ಯಾಕ್ಸಿನೇಶನ್ ಡ್ರೈವ್ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ನಡೆಯಿತು. ಲಸಿಕೆ ಅಭಿಯಾನದ ಭಾಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಿಬ್ಬಂದಿ ವರ್ಗ ಹಾಗೂ ಅವರ ಕುಟುಂಬವರ್ಗದವರು ಸೇರಿ 500 ಜನರಿಗೆ ಕೋವಿಶೀಲ್ಡ್ ಲಸಿಕೆ ವಿತರಿಸಲಾಯಿತು. ನಾಲ್ಕು ಹಂತಗಳಲ್ಲಿ


















