Home Posts tagged #V4NEWS KARANATAKA (Page 2)

ಬಿಜಾಪುರದ ದೇವರಹಿಪ್ಪರಗಿಯಲ್ಲಿ ಅಕ್ರಮ ಮದ್ಯ ವಶ : ಅಬಕಾರಿ ಪೊಲೀಸರ ಕಾರ್ಯಾಚರಣೆ

ಬಿಜಾಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಯಲಗೋಡ ಗ್ರಾಮದಲ್ಲಿ ಅಕ್ರಮ ಮಧ್ಯವನ್ನು ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಯಲಗೋಡ ಗ್ರಾಮದಲ್ಲಿ ಬಸ್ ನಿಲ್ದಾಣ ಹತ್ತಿರ ಇರುವ ಅಂಬಿಗರ ಚೌಡಯ್ಯ ಸರ್ಕಲ್ ಹತ್ತಿರ ಪತ್ರಾಸಡಿನಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 26 ಲೀಟರ್ ಮದ್ಯವನ್ನು ವಶಪಡಿಸಿ ಕೊಳ್ಳಲಾಗಿದೆ. ಅರೋಪಿ ರಾಜು ಬಾಷಾಸಾಬ ಎಂಬಾ

ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡಲು ಚಿಂತನೆ: ಪುತ್ತೂರಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪುತ್ತೂರು: ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಎಕ್ರೆ ಹಡೀಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಪುತ್ತೂರು ವಿಧಾಸಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕು ಪಂಚಾಯತ್‍ನ ಕಿರು ಸಭಾಂಗಣದಲ್ಲಿ ಶುಕ್ರವಾರ ಕೃಷಿ ಸಂಬಂಧಿತ ಇಲಾಖೆಗಳ ತಾಲೂಕು ಮಟ್ಟದ

ಲಸಿಕೆ ವಿಚಾರದಲ್ಲಿ ಅವ್ಯವಹಾರ ನಡೆಸುವ ದೌರ್ಭಾಗ್ಯ ಬಿಜೆಪಿಗೆ ಬಂದಿಲ್ಲ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್

 ಲಸಿಕೆ ವಿಚಾರದಲ್ಲಿ ಅವ್ಯವಹಾರ ಹಾಗೂ ಭಷ್ಟ್ರಚಾರ ನಡೆಸುವ ದೌರ್ಭಾಗ್ಯ ಬಿಜೆಪಿ ಕಾರ್ಯಕರ್ತರಿಗೆ ಬಂದಿಲ್ಲ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಏನಾದರೂ ದಾಖಲೆ ಇದ್ರೆ ಬಹಿರಂಗ ಪಡಿಸಲಿ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಸವಾಲು ಹಾಕಿದ್ದಾರೆ.ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ವಿತರಣೆ ವೇಳೆ ಕಾಂಗ್ರೆಸ್ ವಾರ್ಡ್‍ನಲ್ಲಿ ಕಾಂಗ್ರೆಸ್ ನಾಯಕರು ನಿಂತಿದ್ದಾರೆ. ಅದರ ಬಗೆ ದಾಖಲೆ ಕೂಡ

ಮಂಜೇಶ್ವರದಲ್ಲಿ ಗುಜರಿ ಅಂಗಡಿಗೆ ನುಗ್ಗಿದ ಕಳ್ಳರು

ಮಂಜೇಶ್ವರ: ತೂಮಿನಾಡು ಪದವು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಗುಜರಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷ ರೂ ಬೆಲೆಬಾಳುವ ಗುಜರಿ ಸಾಮಾಗ್ರಿಗಳನ್ನು ಕೊಂಡೊಯ್ದಿದ್ದಾರೆ.  ಕಳೆದ ರಾತ್ರಿ ಕಳವು ನಡೆದಿದ್ದು, ಗುಜರಿ ಸಾಮಾಗ್ರಿಗಳನ್ನು ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿವೆ. ಅಂಗಡಿಯ ಮುಂಭಾಗದ ಗೇಟನ್ನು ಮುರಿದು ಒಳನುಗ್ಗಿದ ಕಳ್ಳರ ತಂಡ ಓಮ್ನಿ ವ್ಯಾನಿನಲ್ಲಿ ಸಾಮಾಗ್ರಿಗಳನ್ನು ಸಾಗಿಸಿದೆ. ಮೂಲತಃ ಉಳ್ಳಾಲ ನಿವಾಸಿಯೂ

ಅವೈಜ್ಞಾನಿಕ ರಸ್ತೆ ಕಾಮಗಾರಿ : ಧ್ವನಿ ಎತ್ತಿದ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ

ಬೆಂಗಳೂರು -ಮಂಗಳೂರು ಹೆದ್ದಾರಿಯಿಂದ ಮಂಗಳೂರು – ಶಿವಮೊಗ್ಗ ಹೆದ್ದಾರಿಯನ್ನು ಜೋಡಿಸುವ ರಸ್ತೆಯನ್ನು ಜೋಡಿಸುವ ಕುಲಶೇಖರ ಕಣ್ಣಗುಡ್ಡೆ ರಸ್ತೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆಯಲ್ಲದೆ, ಈ ಸಂಬಂಧ ಧ್ವನಿ ಎತ್ತಿದ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮನಪಾ ವಿಪಕ್ಷ ನಾಯಕ ವಿನಯ ರಾಜ್ ಆರೋಪಿಸಿದ್ದಾರೆ.   ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಿರಿದಾದ ಆ ರಸ್ತೆಯನ್ನು ಅಗಲೀಕರಿಸುವ ಕುರಿತಂತೆ ಹಿಂದಿನ ಶಾಸಕ

ದ.ಕ. ಜಿಲ್ಲೆಯ ಲಸಿಕಾ ಕೇಂದ್ರದಲ್ಲಿ ಅಧಿಕಾರಿಗಳನ್ನು ನೇಮಿಸಿ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕಾ ಕೇಂದ್ರಗಳಲ್ಲಿ ಬಿಜೆಪಿಯ ಕಾರ್ಯಕರ್ತರು ದರ್ಬಾರು ನಡೆಸುತ್ತಿದ್ದು, ಇದರಿಂದ ಲಸಿಕೆಗಾಗಿ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆಯನ್ನು ಸರಪಡಿಸಲು ವಿವಿಧ ಇಲಾಖೆಗಳಲ್ಲಿ ರಜೆಯಲ್ಲಿರುವ ಅಧಿಕಾರಿಗಳನ್ನು

ಅರ್ಚಕರಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ಆಹಾರ ಸಾಮಾಗ್ರಿ ವಿತರಣೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿಯಲ್ಲಿ ಧಾರ್ಮಿಕ ಪರಿಷತ್ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ತಾಲೂಕಿನ ಎಲ್ಲಾ ಅರ್ಚಕರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ದಿನ ಬಳಕೆ ಸಾಮಗ್ರಿಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರವರು ಧಾರ್ಮಿಕ ಪರಿಷತ್ ಇದರ ಬಹಳ ಮಹತ್ವಾಕಾಂಕ್ಷೆ ಯೋಜನೆ ರಾಜ್ಯದ ಎಲ್ಲಾ ಅರ್ಚಕರಿಗೆ ಈ ಕೊರೊನಾ ಸಂದರ್ಭದಲ್ಲಿ ನಾವು ಸಹಕಾರವನ್ನು ಕೊಡಬೇಕೆಂಬ ಕಳಕಳಿಯಿಂದ ಈ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಅದಕ್ಕಾಗಿ ತಾಲೂಕಿನ ಎಲ್ಲಾ

ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಬಂಟ್ವಾಳ: ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಗಿದ್ದು, ಇಲಾಖೆ ವ್ಯಾಪ್ತಿಗೆ ಬರದೆ ಸಂಕಷ್ಟದಲ್ಲಿರುವ ಕ್ಷೇತ್ರಗಳ ಸಿಬ್ಬಂದಿಗೂ ಕಿಟ್ ಕೊಡುವುದಕ್ಕೆ ಚಿಂತನೆ ನಡೆಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದರು.  ಮುಜರಾಯಿ ಇಲಾಖೆಯ ಎ ಗ್ರೇಡ್ ಕ್ಷೇತ್ರವಾದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಿಂದ ತಾಲೂಕಿನ 26 ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ