Home Posts tagged #v4news karnataka (Page 111)

ಮಂಜೇಶ್ವರ :ವಿದ್ಯಾರ್ಥಿಗಳ ರ್‍ಯಾಗಿಂಗ್ ವೀಡಿಯೋ ವೈರಲ್

ಮಂಜೇಶ್ವರ: ಪ್ಲಸ್ ಒನ್ ವಿದ್ಯಾರ್ಥಿಯನ್ನು ಪ್ಲಸ್ ಟು ವಿದ್ಯಾರ್ಥಿಗಳು ರ್‍ಯಾಗಿಂಗ್ ವಿಚಾರದ ವೀಡಿಯೊದಿದೀಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾದ ಬೆನ್ನಲ್ಲೇ ಕೇರಳದ ಶಿಕ್ಷಣ ಸಚಿವರು ಘಟನೆಯ ಬಗ್ಗೆ ವರದಿ ಕೇಳಿದ್ದಾರೆ. ಆದಷ್ಟು ಬೇಗನೆ ತನಿಖಾ ವರದಿ ನೀಡಲು ನಿರ್ದೇಶಿಸಲಾಗಿದೆ. ಕುಂಬಳೆ ಸಮೀಪದ ಅಂಗಡಿ ಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ

ಗಂಗೊಳ್ಳಿ ಜೆಟ್ಟಿ ಕುಸಿತ ಪ್ರಕರಣ – ಕಳಪೆ ಕಾಮಗಾರಿ ಕಂಡು ಬಂದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು : ಎಸ್. ಅಂಗಾರ

ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿತ ಪ್ರಕರಣ ಇಡೀ ಸರಕಾರ ಮತ್ತು ನಮಗೆ ಮಾಡಿದ ಅವಮಾನವಾಗಿದ್ದು, ಪ್ರಕರಣವನ್ನು ಖಾಸಗಿ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಿದೆ  ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ, ಉಡುಪಿ ಜಿಲ್ಲಾ ಉಸ್ತುವರಿ ಸಚಿವ ಎಸ್. ಅಂಗಾರ ಹೇಳಿದರು. ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಗುರುವಾರ ಭೇಟಿ ನೀಡಿದ ಅವರು

ಉಡುಪಿ: ಅ.1ರಂದು ವಿಶ್ವ ಹೃದಯ ದಿನದ ಪ್ರಯುಕ್ತ ಬೃಹತ್ ಜಾಥಾ

ಉಡುಪಿಯ ಆದರ್ಶ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಅಕ್ಟೋಬರ್ 1, 2022 ರ ಶನಿವಾರದಂದು ಬೆಳಿಗ್ಗೆ 09:00 ರಿಂದ ಮಧ್ಯಾಹ್ನ 12:00 ರವರೆಗೆ ಬೃಹತ್ ಜಾಥಾವನ್ನು ಆಯೋಜಿಸಲಾಗಿದೆ. ಇದರ ಉದ್ಘಾಟನಾ ಸಮಾರಂಭವು ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ನಡೆಯಲಿದ್ದು, ಈ ಜಾಥಾವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಇಂಧನ ಸಚಿವರಾದ ವಿ

ಶ್ರದ್ದಾ ಭಕ್ತಿ ಪೂರ್ವಕ ನಡೆದ ಸಾಮೂಹಿಕ ಕುಂಕುಮಾರ್ಚನೆ

ಮಂಗಳೂರು ನಗರದ ರಥಬೀದಿಯಲ್ಲಿ 100 ನೇ ವರ್ಷಾಚರಣೆ ಸಂಭ್ರಮ ಆಚರಿಸುತ್ತಿರುವ ಮಂಗಳೂರು ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ ಸಹಸ್ರ ಚಂಡಿಕಾ ಮಹಾ ಯಾಗ ಅಂಗವಾಗಿ ಸಾಮೂಹಿಕ ಕುಂಕುಮಾರ್ಚನೆ ಆಯೋಜಿಸಲಾಗಿದ್ದು ನೂರಾರು ಮಾತೃವರ್ಗ ಶ್ರದ್ದಾ ಭಕ್ತಿ ಪೂರ್ವಕ ಸಾಮೂಹಿಕ ಕುಂಕುಮಾರ್ಚನೆ ಯಲ್ಲಿ ಪಾಲ್ಗೊಂಡರು .

ತುಳು ಭಾಷೆ ತುಳಿದು ಕನ್ನಡ ಹೇರಿಕೆ ಆರೋಪಿಸಿ ಪ್ರತಿಭಟನೆ

ಮಂಗಳೂರು: ತುಳುನಾಡಿನಲ್ಲಿ ತುಳು ಭಾಷೆಯನ್ನು ತುಳಿದು ಕನ್ನಡ ಹೇರಿಕೆ ಮಾಡಲಾಗ್ತಿದೆ ಎಂದು ಆರೋಪಿಸಿ ಮಂಗಳೂರು ನಗರದ ಕ್ಲಾಕ್‌ ಟವರ್ ಬಳಿ ತುಳು ಭಾಷಾ ಸಂರಕ್ಷಣಾ ಸಮಿತಿ ಕುಡ್ಲ ಇಂದು ಪ್ರತಿಭಟನೆ ಮಾಡಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ವೇದವ್ಯಾಸ್ ಕಾಮತ್ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು. ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಚುನಾವಣಾ

ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶ ಜೆಟ್ಟಿ ಭಾಗ ಕುಸಿತ

ಆರಂಭದಿಂದಲೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಒಂದಿಲ್ಲೊಂದು ಕಾರಣಗಳಿಂದಾಗಿ ಸುದ್ದಿಯಾಗುತ್ತಲೇ ಇದ್ದ ಕುಂದಾಪುರದ ಗಂಗೊಳ್ಳಿ ಬಂದರು ಪ್ರದೇಶ ಇದೀಗ ಮತ್ತೆ ಸುದ್ದಿಯಲ್ಲಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾರ್ಯದ ವೇಳೆ ಜೆಟ್ಟಿ ಭಾಗ ಕುಸಿತಕ್ಕೊಳಗಾಗಿದೆ. 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದ್ದು, ಸ್ಥಳೀಯ ಮೀನುಗಾರರು ಆತಂಕಕ್ಕೀಡಾಗಿದ್ದಾರೆ. ಸಂಜೆ 5.30 ರ ಹೊತ್ತಿಗೆ ಘಟನೆ ನಡೆದಿದ್ದು, ನಿರಂತರವಾಗಿ

ಶ್ರೀ ಮಂಗಳಾದೇವಿ ದೇವಸ್ಥಾನ : ದಸರಾ ಕವಿ ಸಂಭ್ರಮ ಸಾಧಕರಿಗೆ ಸನ್ಮಾನ

ದಸರಾ ಸಂಭ್ರಮಾಚರಣೆಯ ಅಂಗವಾಗಿ ಆಸಕ್ತಿ ಮಂಗಳೂರು, ಕಲಾಸಕ್ತರ ಬಳಗ ಹಾಗೂ ಚುಟುಕು ಸಾಹಿತ್ಯ ಪರಿಷತ್ ಅವರು ಆಯೋಜನೆ ಮಾಡಿದಂತಹ ಕವಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಕಲಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರಮಾನಾಥ ಹೆಗ್ಡೆ ಉದ್ಘಾಟಿಸಿದರು. ಚುಟುಕು ಸಾಹಿತ್ಯ ಪರಿಷತ್‍ನ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಅಧ್ಯಕ್ಷತೆ ವಹಿಸಿದ್ದರು.

ಆಕಾಶ್ ಬೈಜೂಸ್ ಸಂಸ್ಥೆಯಿಂದ ಎನ್‍ಇಇಟಿ, ಜೆಇಇ ಕೋಚಿಂಗ್

ಶಿಕ್ಷಣದಲ್ಲಿ ಹೆಣ್ಣು ಮಗುವಿಗೂ ನ್ಯಾಯ ಸಿಗಬೇಕು ಹಾಗೂ ಸಬಲೀಕರಣಗೊಳ್ಳಬೇಕು ಎಂಬ ಕಾರಣಕ್ಕೆ ಆಕಾಶ್ ಬೈಜೂಸ್ ಎಲ್ಲರಿಗೂ ಶಿಕ್ಷಣವನ್ನು ಪ್ರಾರಂಭಿಸಿದೆ. ಎಎನ್‍ಟಿಎಚ್‍ಇ 2022ರ ಭಾಗವಾಗಿ ಸುಮಾರು 2,000 ಹಿಂದುಳಿದ ವಿದ್ಯಾರ್ಥಿನಿಯರಿಗೆ ಉಚಿತ ಎನ್‍ಇಇಟಿ ಮತ್ತು ಜೆಇಇ ಕೋಚಿಂಗ್ ಮತ್ತು ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದ್ದು, ಅದಕ್ಕಾಗಿಯೇ ರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿ ವೇತನ ಪರೀಕ್ಷೆ ನಡೆಸಲಿದೆ ಎಂದು ಆಕಾಶ್ ಬೈಜೂಸ್

ಪಡುಬಿದ್ರಿಯಲ್ಲಿ ಪುಟಾಣಿಗಳಿಗೆ ವೇಷ ಹಾಕಿ ಭಿಕ್ಷಾಟನೆ

ನವರಾತ್ರಿ ಬಂತೆಂದರೆ ಸಾಕು ಕರಾವಳಿಯಲ್ಲಿ ವೇಷಗಳದ್ದೇ ಕಾರುಬಾರು. ಆದರೆ ಪಾಲಕರು ಏನೂ ತಿಳಿಯದ ಮುಗ್ಧ ಪುಟಾಣಿಗಳ ಮುಖಕ್ಕೆ ಬಣ್ಣ ಬಳಿದು ಜರಿ ಜರಿ ಬಟ್ಟೆ ತೊಡಿಸಿ, ಭಿಕ್ಷಾಟನೆಗೆ ಬಳಕೆ ಮಾಡುವುದು ಪಡುಬಿದ್ರಿ ಪರಿಸರದಲ್ಲಿ ಕಂಡು ಬಂದಿದೆ. ಗರ್ಭಿಣಿ ಮಹಿಳೆ ತನ್ನ ಪುಟ್ಟ ಎರಡು ಮಕ್ಕಳಿಗೆ ವೇಷ ಹಾಕಿ ಭಿಕ್ಷೆ ಬೇಡಿ ಸುತ್ತಿರುವುದು ಕಂಡು ಬಂದಿದೆ. ಸ್ಥಳೀಯರೋರ್ವರು ಆ ಮಹಿಳೆಯೊಂದಿಗೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದೂ ನಡೆದಿದೆ. ಏನೂ ತಿಳಿಯದ ಮಕ್ಕಳಿಗೆ ವೇಷ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ : ಲಲಿತಾ ಪಂಚಮಿ ಆಚರಣೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನವು ನವರಾತ್ರಿ ಉತ್ಸವಕ್ಕೆ ಪ್ರಸಿದ್ಧಿ ಪಡೆದಿದೆ. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಕಟೀಲು ದೇವಳಕ್ಕೆ ಲಕ್ಷಾಂತರ ಮಂದಿ ಭಕ್ತರು ಬೇಟಿ ನೀಡುತ್ತಿದ್ದಾರೆ. ಬೇರೆ ದೇವಸ್ಥಾನಗಳಲ್ಲಿನ ನವರಾತ್ರಿ ಉತ್ಸವಕ್ಕಿಂತ ಇಲ್ಲಿನ ಆಚರಣೆ ಭಿನ್ನವಾಗಿರುತ್ತದೆ. ನವರಾತ್ರಿ ಉತ್ಸವ ಸಂದರ್ಭದಲ್ಲಿ ಹುಲಿ ವೇಷ ಮೆರವಣಿಗೆ ಬರುವುದು ಇಲ್ಲಿನ ವಿಶೇಷ. ನವರಾತ್ರಿಯ ಲಲಿತಾ ಪಂಚಮಿಯ ದಿನ ಕಟೀಲು ಗ್ರಾಮ, ಕೊಡೆತ್ತೂರು, ಮೂಲ