ವಿಟ್ಲ: ಜಲ್ಲಿ ಸಾಗಾಟ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಟಿಪ್ಪರ್ ಚಾಲಕನಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಯಿಂದಾಗಿ ಅಲ್ಪ ಹೊತ್ತು ರಸ್ತೆ ಸಂಚಾರ ವ್ಯತ್ಯಯವಾಗಿದೆ. ಟಿಪ್ಪರ್ ಪಲ್ಟಿಯಾಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲೆಲ್ಲಾ
ಉಳ್ಳಾಲ ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಉಳ್ಳಾಲ ನಗರಸಭೆಯಲ್ಲಿ ಕಾಮಗಾರಿ, ಲೈಸೆನ್ಸ್ , ಡೋರ್ ನಂಬರ್, ತೆರಿಗೆ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆಯುತ್ತಿದ್ದು ಇಲ್ಲಿನ ಆಡಳಿತ ಪಕ್ಷ ಮತ್ತು ಅಧಿಕಾರಿಗಳು ಬೇಕಾಬಿಟ್ಟಿ ಆಡಳಿತ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರದಲ್ಲಿ ಬಹಳಷ್ಟು ಚರ್ಚೆಗಳು ನಡೆಯುತ್ತಿದೆ. ಅನುದಾನ ಬಿಡುಗಡೆ ಸಂದರ್ದಲ್ಲೂ ತಾರತಮ್ಯ ನೀತಿಯನ್ನು ಆಡಳಿತ ಮಂಡಳಿ ಅನುಸರಿಸುತ್ತಿದೆ .
ಕಾರ್ಕಳದ ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯಾಣಿಕರಿಗಾಗಿ ಶುದ್ಧ ಕುಡಿಯುವ ನೀರಿಗಾಗಿ ಸುಮಾರು ಒಂದು ಲಕ್ಷ ರೂಪಾಯಿಯ ವೆಚ್ಚದಲ್ಲಿ ನೀರಿನ ಘಟಕ ಅಳವಡಿಸಲಾಗಿತ್ತು. ಉದ್ಘಾಟನೆಗೊಂಡ ಒಂದೇ ತಿಂಗಳ ಅವಧಿಯಲ್ಲಿ ನೀರಿನ ಘಟಕ ಕೆಟ್ಟು ಹೋಗಿ ಅದನ್ನು ದುರಸ್ತಿ ಮಾಡುವ ಗೋಜಿಗೆ ಪುರಸಭೆಯಾಗಲಿ, ಸಂಬಂಧಪಟ್ಟ ಇಲಾಖೆ ತಲೆಕೆಡಿಸಿಕೊಂಡಿಲ್ಲ ಈ ಬಗ್ಗೆ ಸೆಪ್ಟಂಬರ್ 16ರಂದು ವಿ4 ನ್ಯೂಸ್‍ನಲ್ಲಿ
ಮಂಗಳೂರು,:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹಲವು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ತೀವ್ರ ಹದಗೆಟ್ಟಿದ್ದು,ವಾಹನ ಸವಾರರಿಗೆ ಸಂಚರಿಸಲು ಅಯೋಗ್ಯವಾಗಿದೆ ಹಾಗಾಗಿ ಹತ್ತು ದಿನಗಳ ಒಳಗಾಗಿ ದುರಸ್ತಿ ಕಾರ್ಯ ಆರಂಬಿಸಬೇಕು ಇಲ್ಲದಿದ್ದಲ್ಲಿ ಪಕ್ಷದ ನೇತೃತ್ವದಲ್ಲಿ ಸಾರ್ವಜನಿಕರ ಸಹಭಾಗಿತ್ವ ದೊಂದಿಗೆ ಹೆದ್ದಾರಿ ಬಂದ್ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಎಸ್‌ಡಿಪಿಐ ದ.ಕ ಜಿಲ್ಲಾ ಪ್ರದಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಪತ್ರಿಕಾ
ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ನೇತೃತ್ವದಲ್ಲಿ ಉಳ್ಳಾಲ, ದೇರಳಕಟ್ಟೆ, ಮುಡಿಪು ಭಾಗದ ಬಸ್ಸು ಚಾಲಕ, ನಿರ್ವಾಹಕರ ನಿಯೋಗ ದ.ಕ. ಬಸ್ಸು ಮಾಲಕರ ಸಂಘದ ಕಚೇರಿಗೆ ಭೇಟಿ ನೀಡಿ ಮಾಲಕರ ಸಂಘದ ಮುಖಂಡರೊಂದಿಗೆ ಮಾತುಕತೆ ನಡೆಸಿತು. ಇತ್ತೀಚೆಗೆ ಬಸ್ಸಿನಿಂದ ಆಕಸ್ಮಿಕವಾಗಿ ಪಿ ಯು ವಿದ್ಯಾರ್ಥಿ ಜಾರಿ ಬಿದ್ದು ಮೃತ ಪಟ್ಟ ಘಟನೆಯಲ್ಲಿ ಚಾಲಕ, ನಿರ್ವಾಹಕರ ಮೇಲೆ ಸೆಕ್ಷನ್ 304 ಹಾಕಿ ಜೈಲಿಗೆ ಕಳುಹಿಸಿದ ಪ್ರಕರಣದ ಕುರಿತು ಹಾಗೂ ಪೊಲೀಸರಿಂದ ಚಾಲಕ, ನಿರ್ವಾಹಕರಿಗೆ
“ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ಸಮಿತಿ ಸಭೆಯು ಸುರತ್ಕಲ್ ನ ಸ್ನೇಹ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಟೋಲ್ ಗೇಟ್ ತೆರವು ದಿನಾಂಕ ಪ್ರಕಟಿಸಲು ಒತ್ತಾಯಿಸಿ ಇತ್ತೀಚೆಗೆ ನಡೆದ ಸಾಮೂಹಿಕ ಧರಣಿ ಹಾಗೂ ಟೋಲ್ ತೆರವು ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಸರಕಾರ ಸದನದಲ್ಲಿ ಪ್ರಕಟಿಸಿದ ಹೇಳಿಕೆಗಳ ಕುರಿತು ಸಭೆಯು ಚರ್ಚಿಸಿತು. ಸಾಮೂಹಿಕ ಧರಣಿಯ ಯಶಸ್ಸಿಗೆ ಕಾರಣಕರ್ತರಾದ ಸಮಾನ ಮನಸ್ಕ ಸಂಘಟನೆಗಳು ಹಾಗೂ ಜನತೆಗೆ
ಬೆಂಗಳೂರು, ಸೆ, 21; ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪ್ರತಿ ವರ್ಷ 2000 ಸಾವಿರ ಕೋಟಿ ರೂಗಿಂತ ಹೆಚ್ಚು ಹಣ ಖರ್ಚು ಮಾಡಲು ಅನುಮೋದನೆ ನೀಡಿದ್ದು, ಇದರಿಂದ ಭಾರೀ ಸೋರಿಕೆ, ಕಮೀಷನ್ ವ್ಯವಹಾರ ಹೆಚ್ಚಾಗಲು ಕಾರಣವಾಗಿದೆ. ಮಂಡಳಿಯನ್ನು ದಿವಾಳಿ ಅಂಚಿಗೆ ಕೊಂಡೊಯ್ಯುವ ಪ್ರಯತ್ನವನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ ಸಂಘ ಕಟ್ಟಡ ಕಾರ್ಮಿಕ ಮಂಡಳಿ ಎದುರು ಬೃಹತ್ ಪ್ರತಿಭಟನೆ ನಡೆಸಿತು. ಫ್ರೀಡಂ
ಆರ್ಥಿಕ ಸ್ವಾವಲಂಬನೆ ಸಾಧಿಸಲು ಸ್ವ ಉದ್ಯೋಗವನ್ನು ಸೂಕ್ತವಾದ ಮಾಹಿತಿ ಯೊಂದಿಗೆ ಮಾಡುವುದರಿಂದ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೋಟಗಾರಿಕಾ ಇಲಾಖೆ, ಮೀನುಗಾರಿಕಾ ಇಲಾಖೆ ಮತ್ತು ಪಶು ಸಂಗೋಪನಾ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಹಮ್ಮಿಕೊಂಡಿದ್ದ ಸ್ವ ಉದ್ಯೋಗ ಮಾಹಿತಿ ಶಿಬಿರವನ್ನು ನಗರದ ಬೆಂದೂರ್
ಸುಳ್ಯ ತಾಲೂಕಿನ ಜಯನಗರ ಮಿಲಿಟರಿ ಜಾಗಕ್ಕೆ ಸಂಬಂಧಿಸಿದ ಸರಕಾರಿ ಜಾಗವನ್ನು ಅತಿಕ್ರಮಣಕ್ಕೆ ಸ್ಥಳೀಯರೊಬ್ಬರು ಯತ್ನಿಸಿದ್ದು, ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರವುದನ್ನು ಖಂಡಿಸಿ, ಜಾಗ ಅತಿಕ್ರಮಣಕ್ಕೆ ಮುಂದಾದವರ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ತಿಳಿಸಿದ್ದಾರೆ.ನೀ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಜಯನಗರದ ಸರಕಾರಿ ಶಾಲೆಯ ಸಮೀಪ ಗೋಪಾಲ್ ನಾಯಕ್ ಎಂಬವರಿಗೆ
ಬಹರೈನ್ ನ ಸಾವಿರಾರು ಕನ್ನಡಿಗರ ಕನಸಿನ ಕೂಸಾದ “ಕನ್ನಡ ಭವನ “ದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು ಸೆಪ್ಟೆಂಬರ್ 23 ರಂದು ವಿದ್ಯುಕ್ತವಾಗಿ ಉದ್ಘಾಟನೆಗೊಳ್ಳಲಿದೆ. ದ್ವೀಪದ ಹೃದಯ ಭಾಗವಾದ ಮನಾಮಾದಲ್ಲಿ ಕನ್ನಡ ಸಂಘ ಬಹರೈನ್ ನೂತನವಾಗಿ ನಿರ್ಮಿಸಿರುವ ” ಕನ್ನಡ ಭವನ”ವನ್ನು ನ್ನು ಕರ್ನಾಟಕ ಘನ ಸರಕಾರದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ ಲೋಕಾರ್ಪಣೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಿಂದ