ಬೆಳಪು ಅಂಬೇಡ್ಕರ್ ಭವನದ ಬಳಿ ಸ್ಥಳೀಯರಲ್ಲಿ ಭಯ ಹುಟ್ಟಿಸಿದ ಬೃಹತ್ ಹೆಬ್ಬಾವನ್ನೂ ಶಿವಾನಂದ ಪೂಜಾರಿ ಹಾಗೂ ಪ್ರಶಾಂತ್ ಪೂಜಾರಿ ನೇತೃತ್ವದ ತಂಡ ಸೆರೆ ಹಿಡಿದು, ರಕ್ಷಿಸಿದ್ದಾರೆ.ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಬಳಿಕ ಅರಣ್ಯ ಇಲಾಖೆಯ ಸಿಬಂದಿಗಳ ಸುಪರ್ದಿಗೆ ಒಪ್ಪಿಸಲಾಗಿದೆ.
ಉಳ್ಳಾಲ: ಬ್ರೇಕ್ ಫೇಲ್ ಗೊಳಗಾದ ಬಸ್ಸು ಝೈಲೋ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸಂಭವಿಸಿದೆ. ಬಸ್ಸು ಚಾಲಕನ ಸಮಯ ಸಾಧನೆಯಿಂದ 21 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಬದುಕುಳಿದಿದ್ದಾರೆ.ಝೈಲೋ ಕಾರಿನಲ್ಲಿದ್ದ ಮಾಲೀಕ ಮುಡಿಪು ನಿವಾಸಿ ಮೊಹಮ್ಮದ್ ಮತ್ತು ಸಂಬಂಧಿ ಪ್ರಯಾಣಿಕ ಅಪಾಯವಿಲ್ಲದೆ ಪಾರಾಗಿದ್ದಾರೆ. ಕಾರು ಒಂದು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಂಗಳೂರಿನಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು
ಪುತ್ತೂರು: ಇನ್ನು ಮುಂದೆ ಬರುವ ದಿನಗಳಲ್ಲಿ ಹಬ್ಬಗಳ ವಾತಾವರಣ ಸಂದರ್ಭ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜನರಿಗೆ ಜಾಗೃತಿ ಮತ್ತು ಧೈರ್ಯ ತುಂಬುವ ನಿಟ್ಟಿನಲ್ಲಿ ಪುತ್ತೂರಿನ ನೂತನ ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್ ಅವರು ಪುತ್ತೂರು ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ ನಡೆಸಿದರು. ಪುತ್ತೂರು ದರ್ಬೆಯಿಂದ ಆರಂಭವಾದ ಪೊಲೀಸ್ ಪಥ ಸಂಚಲನ ಬೊಳುವಾರಿನಲ್ಲಿ ಸಮಾಪನಗೊಂಡಿತ್ತು. ಪುತ್ತೂರು ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್
ಬಂಟ್ವಾಳ: ಅಕ್ರಮ ಚಟುವಟಿಕೆಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದಿಂದ ಆ.30ರಂದು ಮಾಣಿ ಸಮೀಪದ ನೇರಳಕಟ್ಟೆಯ ಜನಪ್ರಿಯಾ ಗಾರ್ಡನ್ ಹಾಲ್ ನಲ್ಲಿ ಉಲಮಾ ಉಮರಾ ಕಾನ್ಪರೆನ್ಸ್ ಆಯೋಜಿಸಲಾಗಿದೆ ಎಂದು ಕೆ.ಐ.ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ ಹೇಳಿದರು. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪೂರ್ವಾಹ್ನ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಕಾರ್ಯಕ್ರಮ ನಡೆಯಲಿದ್ದು
ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನದ ಸಹಯೋಗದೊಂದಿಗೆ ಕೇಂದ್ರ ಸರಕಾರದ ಎನ್.ಆರ್.ಎಲ್.ಎಂ. ಯೋಜನೆಯ ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ವೀಕ್ಷಿಸುವ ಕಾರ್ಯಕ್ರಮವು ದೇಶದ 12 ಅಧಿಕೃತ ವೀಕ್ಷಣಾ ಕೇಂದ್ರಗಳಲ್ಲಿ ಒಂದಾದ ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯ ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು, ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ
ಕಾರ್ಕಳ: ಯಕ್ಷಗಾನವೆಂಬುದು ಕರಾವಳಿಯ ಮಣ್ಣಿನ ಕಲೆಯಾಗಿದೆ ಈ ಕಲೆಯು ಸ್ವರ್ಗವನ್ನ ಭೂಮಿಯಲ್ಲಿ ಭಾಸವಾಗುವಂತೆ ಸ್ಪರ್ಶವಿಲ್ಲದೆ ನಿಭಾಯಿಸುವಂತೆ ಮಾಡುತ್ತದೆ ಕಲಾವಿದನ ಬದುಕಿಗೆ ಕಲಾ ಸಂಘಟಕರು ಕಲಾ ಕಲಾಭಿಮಾನಿಗಳು ಜೀವ ತುಂಬುವವರು ಆಗಿರುತ್ತಾರೆ. ಎಂದು ಕಟೀಲ್‍ನ ಹರಿನಾರಾಯಣ ಅಸ್ರಣ್ಣರು ಹೇಳಿದರು. ಅವರು ನಾರಾವಿಯ ಧರ್ಮ ಶ್ರೀ ಸಭಾಭವನದ ಬಲಿಪ ಪ್ರಸಾದ ಭಟ್ ವೇದಿಕೆಯಲ್ಲಿ ಜರುಗಿದ ಯಕ್ಷ ತೀರ್ಥ ಸಂಭ್ರಮ 2022ರ ಕಾರ್ಯಕ್ರಮವನ್ನು ಉದ್ಘಾಟಿಸಿ, ಉದ್ದೇಶಿಸಿ
ಕೊಂಕಣಿ ಭಾಶಾ ಮಂಡಲ್ ಕರ್ನಾಟಕ ಇದರ ಆಶ್ರಯದಲ್ಲಿ ಕೊಂಕಣಿಯನ್ನು ಸಂವಿಧಾನದ ಎಂಟನೆಯ ಪರಿಚ್ಛೇದದ ಅಡಿಯಲ್ಲಿ ಸೇರಿಸಿದ ಮೂವತ್ತು ವರ್ಷದ ಸಂಭ್ರಮಾಚರಣೆಯು ನಗರದ ಡೊನ್ ಬೊಸ್ಕೊಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟನೆ ಮಾಡಿದ ಸಿಎ ಎಸ್ ಎಸ್ ನಾಯಕ್ ಅವರು ಮಾತನಾಡುತ್ತಾ, ತಾಯಿಯ ಮಾತಿನ ಮಹತ್ವವು ಜೀವನದಲ್ಲಿ ಯಾವುದೇ ದಿನ ಕಡಿಮೆ ಆಗದು.ಹಾಗೆನೇ ಮಾತೃ ಭಾಷೆಯ ಮಹತ್ವ ಕೂಡಾ ಆಗಿದೆ. ಇತರ ಯಾವುದೇ ಭಾಷೆಗಳು ವ್ಯಾವಹಾರಿಕವಾಗಿ ಕಲಿತರೂ ಮಾತೃಭಾಷೆಯ ಜಾಗವು ನಮ್ಮ
ದಿನಾಂಕ 28-08-2022 ರ ಅದಿತ್ಯವಾರ ಬೆಳಗ್ಗೆ 10-30ಗಂಟೆಗೆ ಪುತ್ತೂರಿನ ಸೈನಿಕಭವನದಲ್ಲಿ ಒಂದು ದಿನದ ಪೂರ್ಣ ಜಿಲ್ಲಾ ಕಾರ್ಯಕಾರಿಣಿಯನ್ನು ಜಿಲ್ಲಾಧ್ಯಕ್ಷರಾದ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಸಮಸ್ಯೆಗಳನ್ನು ಎದುರಿಸಲು ಅನುಸರಿಸಬೇಕಾದ ಕ್ರಮಗಳು ಹಾಗೂ ಕಾರ್ಯಯೋಜನೆಗಳ ಕುರಿತು ಸಲಹೆ ಸೂಚನೆಗಳನ್ನು ನೀಡಿದರು. ಕಾರ್ಯಕಾರಿಣಿಯಲ್ಲಿ ಜಿಲ್ಲಾ ಉಪಾಧ್ಯಕ್ಷರುಗಳಾದ ದಿವಾಕರ ಪೈ
ತುಳು ಭಾಷೆಯ ಮೇಲೆ ಪ್ರೀತಿ ಇಟ್ಟು ಸಿನಿಮಾ ಮಾಡುತ್ತಿದ್ದೇವೆ. ಆದರೆ ಲಾಕ್‍ಡೌನ್ ಸಂದರ್ಭದಲ್ಲಿ ಬೊಳ್ಳಿ ಮೂವಿಸ್ ಬ್ಯಾನರ್ ಅಡಿಯಲ್ಲಿ ಅಬತರ ಸಿನಿಮಾವನ್ನು ಕಷ್ಟಪಟ್ಟು ಚಿತ್ರೀಕರಣ ಮಾಡಿದ್ದೇವೆ. ಇದೀಗ ಸಾಮಾಜಿಕ ಜಾಲತಾಣದ ಮೂಲಕ ಕೆಲವೊಬ್ಬರು ಬ್ಯಾಡ್ ಕಮೆಂಟ್‍ಗಳನ್ನು ಹಾಕಿ ಸಿನಿಮಾ ನೋಡದ ಹಾಗೆ ಮಾಡುತ್ತಿರುವುದು ಬೇಸರದ ಸಂಗತಿ ಎಂದು ನಟ ,ನಿರ್ದೇಶಕ ಅರ್ಜುನ್ ಕಾಪಿಕಾಡ್ ಹೇಳಿದರು.ಕಳೆದ ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಕಲಾವಿದರು
ಎಲ್ಲೆಲ್ಲೋ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಿದ್ದತೆಗಳು ಆಗುತ್ತಿದಂತೆ, ಅಮಲು ಪದಾರ್ಥ ಸೇವಿಸುವವರಿಗೆ ಹಾಗೂ ಸಂಘಟಕರಿಗೆ ಪೊಲೀಸ್ ಎಚ್ಚರಿಕೆ ನೀಡಿದ್ದು, ಯಾವುದೇ ಸಂದರ್ಭದಲ್ಲಿ ಅಮಲು ಪದಾರ್ಥ ಸೇವಿಸಿ ಕಾರ್ಯಕ್ರಮಕ್ಕೆ ಭಾಗವಹಿಸುವಂತಿಲ್ಲ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ನೀಡಿದ್ದಾರೆ. ಗಣೇಶೋತ್ಸವ ಹಿನ್ನಲೆಯಲ್ಲಿ ಪಡುಬಿದ್ರಿ ಠಾಣೆಯಲ್ಲಿ ಕರೆದ ಸರ್ವದರ್ಮಿಯರ ಸಭೆಯಲ್ಲಿ




























