ಮಂಗಳೂರಿನ ತೆಂಕ ಎಡಪದವಿನವರಾದ ಡಾ. ದುರ್ಗಾಪ್ರಸಾದ್ ಅವರಿಗೆ ಉತ್ತಮ ವೈದ್ಯಕೀಯ ಸೇವೆಗಾಗಿ ಶ್ರೇಷ್ಟ ವೈದ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಗ್ರಾಮೀಣ ಪ್ರದೇಶಗಳಾದ ಪೆರುವಾಯಿ ಮತ್ತು ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ 18 ವರ್ಷಗಳಲ್ಲಿ ದುಡಿದು ಸಮುದಾಯ ಆರೋಗ್ಯ ಕೇಂದ್ರ ವಾಮದಪದವನ್ನು
ಮಂಗಳೂರಿನ ಯೆಯ್ಯಾಡಿಯ V4 ಡಿಜಿಟಲ್ ಇನ್ಫೋಟೆಕ್‌ನ ಸೆಕ್ಯೂರಿಟಿ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಜು(74) ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಕಳೆದ ಹಲವಾರು ವರ್ಷಗಳಿಂದ V4 ಮೀಡಿಯಾದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದರು. ಮೃತರಿಗೆ ಪತ್ನಿ ಹಾಗೂ ಮೂವರು ಮಕ್ಕಳು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ. ಮೂಲತಃ ಮಡಿಕೇರಿಯಾಗಿರುವ ಇವರು, ಮಂಗಳೂರಲ್ಲಿ ಬಂದು ನೆಲೆಸಿದ್ದರು. ಇಂದು ಮಡಿಕೇರಿಯ ಶುಂಠಿಕೊಪ್ಪದಲ್ಲಿ ಅಂತ್ಯ ಸಂಸ್ಕಾರ
ಮಂಗಳೂರಿನ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಸಿಎ ನಿತಿನ್ ಬಾಳಿಗಾ ಅವರು ಇತ್ತೀಚೆಗೆ ಐಬಿಬಿಐ ನಡೆಸಿದ ಕ್ಯಾಟಗರಿ ಫೈನಾನ್ಸಿಯಲ್ ಅಸೆಟ್ ಸೆಕ್ಯುರಿಟೀಸ್ ವಿಭಾಗದ ಮೌಲ್ಯಮಾಪಕರ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಹಣಕಾಸು ಆಸ್ತಿಗಳಿಗೆ ನೋಂದಾಯಿತ ಮೌಲ್ಯಮಾಪಕರಾಗಿ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಸಿಎ ನಿತಿನ್ ಬಾಳಿಗಾ ಅವರು ಮೂಲತಃ ಮಂಗಳೂರಿನ ಉರ್ವ ಮಾರ್ಕೇಟ್‍ನ ನಿವಾಸಿಯಾಗಿದ್ದಾರೆ.
ಉಡುಪಿ ಜಿಲ್ಲಾ ರಜತ ಮಹೋತ್ಸವ ಅರ್ಥಪೂರ್ಣವಾಗಿ ಆಚರಿಸುವ ಜೊತೆಯಲ್ಲಿ ಯುವ ಜನತೆಯನ್ನು ಸೈನ್ಯಕ್ಕೆ ಸೇರಲು ಅಗ್ನಿಪಥ್ ಯೋಜನೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಮತ್ತು ಟೀಮ್ ನೇಶನ್ ಫಸ್ಟ್ ಸಹಭಾಗಿತ್ವದಲ್ಲಿ, ಶಾಸಕರಾದ ರಘುಪತಿ ಭಟ್ ನೇತೃತ್ವದಲ್ಲಿ ಆಯೋಜಿಸಿರುವ 75 ಕೀ.ಮೀ. ಮ್ಯಾರಥಾನ್ ಓಟ “ಅಗ್ನಿಪಥ್ ದೌಡ್” ಇಂದು ಕಾರ್ಕಳ ಭುವನೆಂದ್ರ ಕಾಲೇಜಿನಿಂದ ಆರಂಭಗೊಂಡಿತು.ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಮುಂಬಯಿ, ಆ.22 : ದಿಶಾ ” ಒಂದು ಉತ್ತಮ ಕಾರ್ಯಕ್ರಮ ಬಂಟರ ಸಂಘದ ಪ್ರತಿಯೊಂದು ಕಾರ್ಯಕ್ರಮವು ಹಂತ ಹಂತವಾಗಿ ಬೆಳೆಯುತ್ತಾ ಹೋಗುತ್ತಿದೆ. ನಮ್ಮ ಹಿಂದಿನವರು ಹಾಕಿರುವ ಸದೃಢ ಅಡಿಪಾಯ ಶ್ರೇಯೋಭಿವೃದಿಗೆ ಕಾರಣವಾಗಿದೆ ಇದಕ್ಕೆ ಎಸ್. ಎಂ. ಶೆಟ್ಟಿ ಸ್ಕೂಲ್ ಉದಾಹರಣೆಯಾಗಿದೆ ಎಂದು ಬಂಟರ ಸಂಘ ಮುಂಬಯಿ ಅದ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಅವರು ತಿಳಿಸಿದರು. ಆ.21 ರಂದು ಪೊವಾಯಿ ಎಸ್.ಎಂ.ಶೆಟ್ಟಿ ಶಾಲೆಯ ಸಭಗೃಹದಲ್ಲಿ ಬಂಟರ ಸಂಘ ಮುಂಬಯಿ , ಅಂಧೇರಿ – ಬಾಂದ್ರ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೆ.2ರಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷರು ಹಾಗೂ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು, ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ವೈ ಭರತ್ ಶೆಟ್ಟಿ ಅವರೊಂದಿಗೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.ಈ ವೇಳೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೊಲೀಸ್
ಸಿನಿ ಗ್ಯಾಲಕ್ಸಿ ಅರ್ಪಿಸುವ ಮೋಗವೀರ ಗಾಟ್ ಟ್ಯಾಲೆಂಟ್ ರಿಯಾಲಿಟಿ ಶೋ ಅದ್ಧೂರಿಯಾಗಿ ನಡೆಯಲಿದ್ದು, ಈ ಕಾರ್ಯಕ್ರಮದ ಧ್ವನಿ ಸುರುಳಿ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ನಡೆಯಿತು.ಉಡುಪಿ ಮತ್ತು ದ.ಕ.ಜಿಲ್ಲಾ ಮೀನು ಮಾರಾಟಗಾರರ ಪೆಡರೆಸನ್ ಮಂಗಳೂರು ಇದರ ಜಿಲ್ಲಾ ಅಧ್ಯಕ್ಷರಾದ ಯಶಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ರಕ್ತದ ಆಪತ್ಭಾಂದವ ಸತೀಶ್ ಸಾಲ್ಯಾನ್ ರವರನ್ನು ಸನ್ಮಾನಿಸಲಾಯಿತು. ರಿಯಾಲಿಟಿ ಶೋನ ಧ್ವನಿ ಸುರುಳಿ, ಪೆÇೀಸ್ಟರ್
ಬಾಲಿವುಡ್ ಬ್ಲಾಕ್ ಬ್ಲಸ್ಟರ್ ಚಿತ್ರಗಳ ನಿರ್ಮಾಪಕ ಹಾಗೂ ಲೋಕೋಪಕಾರಿ ಅಬ್ದುಲ್ ಗಫರ್ ನಾಡಿಯಾಡ್ ವಾಲಾ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೂವರು ಪುತ್ರಿಯರು ಹಾಗೂ ಮೂವರು ಪುತ್ರರು. ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಹೀರಾಪೇರಿ ಮತ್ತು ವೆಲ್ ಕಮ್ ನಂತಹ ಹಾಸ್ಯಮಯ ಚಿತ್ರಗಳನ್ನು ನಿರ್ಮಿಸಿ ಎ.ಜಿ. ನಡಿಯಾಡ್ ವಾಲಾ ಮನೆ ಮಾತಾಗಿದ್ದರು. ಪಠಾಣ್ ಕೆ
ಸಣ್ಣ ಪುಟ್ಟ ಕೂಲಿ ಕೆಲಸ ಮಾಡುವವರಿಗೂ ಸರ್ಕಾರದ ವಿವಿಧ ಸವಲತ್ತುಗಳು ದೊರೆಯುತ್ತೆ, ಆದರೆ ಕಷ್ಟ ಪಟ್ಟು ತೆಂಗಿನ ಮರ ಹತ್ತಿ ಜೀವನ ನಡೆಸುವವರಿಗೆ ಯಾವುದೇ ಪೂರಕ ವ್ಯವಸ್ಥೆಗಳು ಇಲ್ಲ ಎಂಬ ನೆಲೆಯಲ್ಲಿ ಪ್ರಾಣೇಶ್ ಹೆಜಮಾಡಿ ನೇತ್ರತ್ವದಲ್ಲಿ ಕೇರಾ ಸುರಕ್ಷಾ ವಿಮೆ ಬಗ್ಗೆ ಮಾಹಿತಿ ಹಾಗೂ ನೋಂದಣಿ ಕಾರ್ಯಕ್ರಮ ಹೆಜಮಾಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಲಾಲಾಜಿ ಆರ್. ಮೆಂಡನ್, ಬಾರೀ ಕಷ್ಟದ ಬದುಕು ತೆಂಗಿನ ಮರ ಹತ್ತುವ ಮಂದಿಯದ್ದು,
ಶ್ರೀಗಣೇಶೋತ್ಸವದ ಪ್ರಯುಕ್ತ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಯು ನಡೆಸುವ ಚಿತ್ರಕಲೆ ಹಾಗೂ ಕರಕುಶಲ ಕಲೆಯ ಪ್ರದರ್ಶನ ಹಮ್ಮಿಕೊಂಡಿದೆ. ಆಗಸ್ಟ್ 27 ಮತ್ತು 28 ರಂದು ಬೆಳಗ್ಗೆ 10.00 ಗಂಟೆಯಿಂದ ಸಾಯಂಕಾಲ 6.00 ಗಂಟೆಯ ತನಕ ಕಾವೆರಿ ಕಾಂಪ್ಲೆಕ್ಸ್,ಕಲ್ಲಾರೆ, ಮುಖ್ಯರಸ್ತೆ, ಪುತ್ತೂರು, ಇದರಲ್ಲಿ ಗಣೇಶನ ನಾನಾ ರೀತಿ ಯ ಕರಕುಶಲ ಕಲೆ, ಕ್ಲೇ ಮೊಡೆಲಿಂಗ್ ಚಿತ್ರಕಲೆಗಳು ಇವೆ. ಇದನ್ನು ಸಂಸ್ಥೆಯ ವಿದ್ಯಾರ್ಥಿಗಳು ಮಾಡಿದ ಚಿತ್ರಕಲೆ ಹಾಗೂ ಕ್ಲೇ ಮೊಡೆಲಿಂಗ್




























