An event was conducted to celebrate Paediatric Bone Marrow Transplantation facility and press meet by Kasturba Medical College and Hospital, Manipal today under division of Paediatric haematology and Oncology of Manipal Comprehensive Cancer care Centre. Dr Sharath Kumar Rao, Dean, Kasturba
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಯಶಸ್ಸನ್ನು ಆಚರಿಸುವ ಕಾರ್ಯಕ್ರಮ ಮತ್ತು ಪತ್ರೀಕಾಘೋಷ್ಠಿಯನ್ನು ಇಂದು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶರತ್ ಕುಮಾರ್ ರಾವ್ ಅವರು ಮಕ್ಕಳ ಅಸ್ಥಿಮಜ್ಜೆ ಕಸಿ ಕ್ಲಿನಿಕ್ ನ ಮಾಹಿತಿ
ಕಾರ್ಕಳದ ಮಿಯಾರು ಗ್ರಾಮದಲ್ಲಿ ಜಾನ್ ಸಿಎನ್ ಎಸ್‍ಎಲ್ ಆಯಿಲ್ ಮತ್ತು ಶೆಲ್ ಘಟಕ ಪ್ರಾರಂಭಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಶೇಕ್ ಶಬ್ಬೀರ್ ಅವರು, ಕೈಗಾರಿಕಾ ಪ್ರದೇಶ ಸ್ಥಾಪಿಸಲು ಯೋಗ್ಯವಲ್ಲದ ಸ್ಥಳ ಇದಾಗಿದೆ. ಕೈಗಾರಿಕೆ ಪ್ರಾಂಗಾಣಕ್ಕೆ ಹೊಂದಿಕೊಂಡು ಸುಮಾರು 450 ಹೆಚ್ಚು ಬಡ ಕುಟುಂಬಗಳ ಗುಡಿಸಲುಗಳಿವೆ. ಕೂಗಳತೆಯ ದೂರದಲ್ಲಿ ಮುರಾಜಿ ದೇಸಾಯಿ ವಸತಿ
ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಆಗಸ್ಟ್ 2 ರಿಂದ ಆಗಸ್ಟ್ 9 ರವರೆಗೆ, 122 ನೇ ಭಜನಾ ಸಪ್ತಾಹ ಮಹೋತ್ಸವವು, ನಾಗರ ಪಂಚಮಿಯಂದು ಶುಭಾರಂಭಗೊಂಡು, ದ್ವಾದಶಿ ಪರ್ಯಂತ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ಊರ ಪರವೂರ ಭಜನಾ ಮಂಡಳಿಗಳಿಂದ ಅಹೋರಾತ್ರಿ 7 ದಿನಗಳ ಕಾಲ, ನಿರಂತರ ಭಜನೆ ಈ ಮಹೋತ್ಸವದಲ್ಲಿ ನಡೆಯಲಿದೆ. ಈ ಪ್ರಯುಕ್ತ ನಡೆದ ದೀಪ ಸ್ಥಾಪನಾ ಕಾರ್ಯಕ್ರಮ ವೈಭವದಿಂದ ನೆರವೇರಿತು. ಈ ಶುಭ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು,
ಉಳ್ಳಾಲದಲ್ಲಿ ಯುವಕ ಮೇಲೆ ಹಲ್ಲೆಗೆ ಯತ್ನ ಆಗಿದೆ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಪೊಲೀಸ್ ಕಮೀಷನರ್ ಶಶಿಕುಮಾರ್.ಎನ್. ಸ್ಪಷ್ಟನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಹಾಗೂ ಸುರತ್ಕಲ್‍ನಲ್ಲಿ ನಡೆದಿರುವ ಹತ್ಯೆ ಹಿನ್ನೆಲೆಯಲ್ಲಿ ಜಿಲ್ಲೆ ಇದೀಗ ಸೂಕ್ಷ್ಮ ಪ್ರದೇಶವಾಗಿ ಮಾರ್ಪಡಿಟ್ಟಿದೆ. ನಗರ ಹಾಗೂ ಜಿಲ್ಲೆಯಲ್ಲಿ ಮತ್ತೆ ಇಂತಹ ಕೃತ್ಯಗಳು ನಡೆದಂತೆ ಮುಂಜಾಗೃತ ಕ್ರಮವಹಿಸಲಾಗಿದೆ ಅಂತಾ ಹೇಳಿದರು.
ಕರ್ನಾಟಕ ರಾಜ್ಯ ಸಂಘ ದಕ್ಷಿಣಕನ್ನಡ ಜಿಲ್ಲಾ ಯುವ ರೈತ ಘಟಕದ ವತಿಯಿಂದ ಕೊಕ್ಕಡ ಹೋಬಳಿ, ಕಣಿಯೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯ ಕಾನೂನು ಬಾಹಿರ ಚಟುವಟಿಕೆಯನ್ನು ಖಂಡಿಸಿ ನ್ಯಾಯಬದ್ಧವಾಗಿ ಕಾರ್ಯ ನಿರ್ವಹಿಸಲು ಬುದ್ಧಿವಾದ ಹೇಳಲಾಯಿತು. ಕಣಿಯೂರು ಗ್ರಾಮ, ಕೊಕ್ಕಡ ಹೋಬಳಿಯಲ್ಲಿ ರೈತ ಸಂಘದ ಯುವ ರೈತ ಘಟಕ ಮತ್ತು ಗ್ರಾಮಸ್ಥರು ಸಹ ರೈತರಿಗೆ ಆಗಿರುವ ಅನ್ಯಾಯದ ಕುರಿತು ಗ್ರಾಮ ಲೆಕ್ಕಾಧಿಕಾರಿಯನ್ನು ಪ್ರಶ್ನಿಸಲು ದನಿಗೂಡಿಸಿದರು. ಚರ್ಚಿಸುವ ಸಮಯದಲ್ಲಿ ಕೆಲವು
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ಜಲಸ್ಫೋಟದಿಂದ ಹಾನಿಯಾದ ಪ್ರದೇಶದಲ್ಲಿ ಪರಿಹಾರ ಕಾರ್ಯಾಚರಣೆ ಯಲ್ಲಿ SKSSF ವಿಖಾಯ ಕಾರ್ಯಕರ್ತರು ತೊಡಗಿದ್ದಾರೆ. ನೀರಿನಿಂದ ಮುಳುಗಿದ್ದ ಮನೆಗಳ ಸ್ವಚ್ಚತೆ, ಕರೆಂಟ್ ಲೈನ್ ದುರಸ್ತಿ , ರಾಷ್ಟ್ರೀಯ ಹೆದ್ದಾರಿಗೆ ಬಿದ್ದಿರುವ ಮರಗಳ ತೆರವು, ಇನ್ನಿತರ ಪರಿಹಾರ ಕಾರ್ಯಗಳನ್ನು ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಜಿ.ಕೆ ಹಮೀದ್, ಪಿ.ಡಿ.ಓ ಸರಿತಾ ಡಿಸೋಜ, ಗ್ರಾ. ಪಂ. ಸದಸ್ಯರಾದ ಎಸ್.ಕೆ ಹನೀಫ಼್,
ಸಂಪಾಜೆ, ಕಲ್ಲುಗುಂಡಿ ಮತ್ತು ಕೊಯನಾಡು ಭಾಗದಲ್ಲಿ ನಿರಂತರ ಎರಡನೇ ದಿನವೂ ರಾತ್ರಿ ವೇಳೆ ಮಹಾಮಳೆ ಮುಂದುವರಿದಿತ್ತು. ರಾತ್ರಿ ಸುರಿದ ಧಾರಾಕಾರ ಮಳೆಗೆ ಪಯಸ್ವಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡು ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು. ನದಿಪಾತ್ರದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ರಾತ್ರೋರಾತ್ರಿ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಕೊಯನಾಡಿನಲ್ಲಿ ಕೂಡ ನಿರಂತರ ಮಳೆಯಿಂದ
ಭಾರೀ ಮಳೆಯಿಂದ ಹರಿಹರ ಪಲ್ಲತ್ತಡ್ಕದಲ್ಲಿ ರಾಶಿ ಬಿದ್ದ ಮರದ ದಿಮ್ಮಿಗಳನ್ನು ತೆರವು ಮಾಡುತ್ತಿದ್ದ ಕ್ರೇನ್ ಆಪರೇಟರ್ ಓರ್ವರು ಹೊಳೆಯ ಪಕ್ಕದಲ್ಲಿ ನಿಂತಿದ್ದ ವೇಳೆ ನೀರಿಗೆ ಬಿದ್ದಿದ್ದು, ಈ ವೇಳೆ ಯುವಕನೋರ್ವ ನದಿಗೆ ಹಾರಿ ಅವರನ್ನು ರಕ್ಷಿಸಿದ ಘಟನೆ ನಡೆದಿದೆ. ಪಂಜ ಸಮೀಪದ ಪಡ್ಪಿನಂಗಡಿ ನಿವಾಸಿ ಶರೀಫ್ ಎಂಬವರ ಕ್ರೇನ್ ಹಾಗೂ ಸ್ಥಳೀಯ ನಿವಾಸಿಯೋರ್ವರ ಜೆಸಿಬಿ ವಾಹನಗಳನ್ನು ತರಿಸಲಾಗಿತ್ತು. ಕಾರ್ಯಾಚರಣೆಯ ವೇಳೆ ಆಪರೇಟರ್ ಶರೀಫ್ ಕ್ರೇನ್ ನಿಂದ ಇಳಿದು ಹೊಳೆ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸರಕಾರಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಮತ್ತು ಸಖಿ ಒನ್ ಸ್ಟಾಪ್ ಸೆಂಟರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂತ್ರಸ್ತ ಪರಿಹಾರ ಕಾರ್ಯಕ್ರಮ ಮತ್ತು ಕಾನೂನು ಅರಿವು ಕಾರ್ಯಾಗಾರ ಸರಕಾರಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ




























