ಸುಬ್ರಹ್ಮಣ್ಯದಲ್ಲಿ ದುರಂತ ಸಂಭವಿಸಿ ಮೃತಪಟ್ಟ ಮಕ್ಕಳ ಮನೆಗೆ ಉಸ್ತುವಾರಿ ಸಚಿವ ಸುನಿಲ್ ರವರು ಇಂದು ಭೇಟಿ ನೀಡಿದರು.ಮನೆಗಾಗಿ 95 ಸಾವಿರ ನೀಡಿದ್ದೇವೆ. ಇನ್ನು ಮನೆ ಕಟ್ಟುವುದಿದ್ರೆ 4 ಲಕ್ಷ ಕೊಡಲಾಗುವುದು, ಅಂಗಡಿಗಳಿಗೆ ನೀರು ನುಗ್ಗಿ ಹಾನಿ ಯಾಗಿದ್ರೆ ಹಣ ಕೊಡುವ ಪ್ರಾವಿಶನ್ ಇಲ್ಲ, ಆದ್ರೂ ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ವಿಶೇಷ ಪ್ಯಾಕೇಜ್ ಘೋಷಣೆ ನೀಡಿ
ಉಪ್ಪಿನಂಗಡಿ : ಅ 2 : ಕಾರು ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಮಂಗಳವಾರ ( ಅ .2) ಸಂಜೆ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಡಬ ತಾಲೂಕಿನ ರಾಮಕುಂಜ ನಿವಾಸಿಗಳಾದ ಉಪನ್ಯಾಸಕ ಗೋವಿಂದರಾಜ್ ಶರ್ಮಾ(32) ಮತ್ತು ಓಂಕಾರ್ ಪ್ರಸಾದ್ (30) ಗಾಯಗೊಂಡವರು . ಅಪಘಾತವೂ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಕಾರು ಹಾಸನ ಜಿಲ್ಲೆಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಹೇರಲಾಗಿರುವ ರಾತ್ರಿ ನಿರ್ಬಂಧವನ್ನು ಇನ್ನೂ ಎರಡು ದಿನಗಳವರೆಗೆ ಮುಂದುವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯ ಕೋರಿಕೆಯಂತೆ ನಿರ್ಬಂಧವನ್ನು ಆ.5ರ ಬೆಳಗ್ಗೆ 6 ಗಂಟೆವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ.
ನಿನ್ನೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾತ್ರಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಸುಬ್ರಹ್ಮಣ್ಯ ಸಮೀಪದ ಪರ್ವತಮಿಖಿ ಘಟನಾ ಸ್ಥಳಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿದರು. ಅಧಿಕಾರಿಗಳು, ಸ್ಥಳೀಯಾಡಳಿತ ಅಧಿಕಾರಿಗಕಳಿಂದ ಮಾಹಿತಿ ಪಡೆದರು. ಪುತ್ತೂರು ಎಸಿ ಗಿರೀಶ್ ನಂದನ್, ತಹಶೀಲ್ದಾರ್ ಅನಂತಶಂಕರ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ,
ಕಾಪು ಸಮೀಪದ ಮಜೂರಿನ ಗೋವರ್ಧನ ಭಟ್ ಅವರು ಜೀವಂತ ನಾಗರ ಹಾವಿಗೆ ತನು ಎರೆದು,ಆರತಿ ಬೆಳಗಿಸಿ ಮಂಗಳವಾರ ನಾಗರಪಂಚಮಿ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಪ್ರತೀ ವರ್ಷ ನಾಗರ ಪಂಚಮಿಯಂದು ತನ್ನ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವುಗಳಿಗೆ ತನು ಎರೆಯುವ ಗೋವರ್ಧನ ಭಟ್ ಅವರು ಈ ಬಾರಿ ಒಂದು ಹಾವಿಗೆ ಮನೆಯವರ ಜೊತೆಗೂಡಿ ತನು ಎರೆದು, ಪೂಜೆ ಮಾಡಿ, ನಾಗರ ಪಂಚಮಿ ಆಚರಿಸಿದರು. ಕಾಪು ಪರಿಸದಲ್ಲಿ ಅಪಾಯಕ್ಕೆ ಸಿಲುಕಿ ಗಾಯಗೊಳ್ಳುವ ನಾಗರ ಹಾವುಗಳನ್ನು ಮನೆಗೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಎರಡು ದಿನದ ಬಳಿಕ ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಪ್ರಕರಣದಲ್ಲಿ ನಗರ ಪೆÇಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ಉಡುಪಿ ಉದ್ಯಾವರ ಸಮೀಪ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ಜುಲೈ 28ರಂದು
ನಿನ್ನೆ ಸುರಿದ ಭಾರೀ ಮಳೆಗೆ ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಹರಿಯುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ನೀರು ದೇವಾಲಯದ ಒಳಂಗಾಣಕ್ಕೆ ಆವರಿಸಿತ್ತು. ನೀರಿನೊಂದಿಗೆ ಮಣ್ಣು ಹರಿದು ಬಂದು ದೇವಸ್ಥಾನದ ಒಳಾಂಗಣ ಮತ್ತು ಪರಿಸರ ಕೆಸರುಮಯವಾಗಿದೆ. ನೀರಿನಲ್ಲಿ ತೇಲಿಕೊಂಡು ಬಂದ ದೊಡ್ಡ ಗಾತ್ರದ ಮರದ ದಿಮ್ಮಿ ಹೊರಾಂಗಣದ ಕಾಂಪೌಂಡ್ ಬಳಿ ನಿಂತಿದೆ. ಕಾಂಪೌಂಡ್ ಕುಸಿದುಬಿದ್ದು ಅಪಾರ ನಷ್ಟ ಉಂಟಾಗಿರುವುದಾಗಿ ತಿಳಿದುಬಂದಿದೆ.
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಆ.2 ರಂದು ಬಂಧಿಸಿದ್ದಾರೆ. ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ(32ವ) ಮತ್ತು ಹಾರಿಸ್(42ವ) ರವರು ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳಾದ ಶಫೀಕ್ ಮತ್ತು ಜಾಕೀರ್ ಅವರನ್ನು ಜು.28 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಪೆÇಲೀಸರು ಆರೋಪಿಗಳ ಹೆಚ್ಚಿನ ವಿಚಾರಣೆಗೆ ಪೊಲೀಸ್
ಸುರತ್ಕಲ್‍ನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಪಣಂಬೂರು ಎಸಿಪಿ ಅವರ ಕಚೇರಿಯಿಂದ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಪ್ರಕರಣದ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆಯ ವೇಳೆ ಆರೋಪಿಗಳು ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಮಾಹಿತಿ ನಿಡಿದರು. ಘಟನೆಗೆ ಸಂಬಂಧಿಸಿದಂತೆ
ಎರಡು ದಿನಗಳಿಂದ ಭಾರಿ ಮಳೆ ಹಿನ್ನೆಲೆ ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡದ ಅಂಚಿನಲ್ಲಿರುವ ಶಿರೂರು ಬೈಂದೂರು ಕಳುಹಿತ್ಲು ಕಲ್ಮಕ್ಕಿಯ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ ಯಾವುದೇ ಸಂಪರ್ಕವಿಲ್ಲದೆ ಜನ ಕಂಗೆಟ್ಟಿದ್ದಾರೆ ಭಾರೀ ಮಳೆಯಿಂದಾದ್ದು ರಾತ್ರಿ ಹಲವಾರು ಮನೆಗಳಿಗೆ ನೀರು ನುಗ್ಗಿದೆ ,ರಾಜ್ಯ ಹೆದ್ದಾರಿ ಸಂಪೂರ್ಣ , ಕೆಲವು ಶಾಲೆಯ ಎದುರುಗಡೆ ಮುಳುಗಡೆಯಾಗಿದೆ ಯಾವುದೇ ವಾಹನ ಸಂಚಾರ ಇಲ್ಲದೆ ಸ್ಥಗಿತಗೊಂಡಿದೆ. ಹಲವಾರು ಮನೆಗಳು ರಸ್ತೆ ಸಂಪರ್ಕವನ್ನೇ



























