Home Posts tagged #v4news karnataka (Page 162)

13ರಿಂದ ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜಾರೋಣಕ್ಕೆ ಸೂಚನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಇದೇ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ಸಂಬಂಧಿಸಿದ ಎಲ್ಲಾ ಇಲಾಖೆಗಳ ಮುಖ್ಯಸ್ಥರುಗಳಿಗೆ ನಿರ್ದೇಶನ ನೀಡಿದರು.

ಸುಬ್ರಮಣ್ಯ: ಭಾರಿ ಮಳೆಗೆ ಗುಡ್ಡ ಕುಸಿದು ಇಬ್ಬರು ಮಕ್ಕಳ ದುರ್ಮರಣ

ಸುಬ್ರಹ್ಮಣ್ಯದ ಪರ್ವತಮುಖಿಯಲ್ಲಿ ಭಾರಿ‌ಮಳೆಗೆ ಮನೆ ಮೇಲೆ ಗುಡ್ಡಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ದಾರುಣ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ‌ ನಡೆದಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಕುಮಾರದಾರ ಪರ್ವತಮುಖಿ ಪ್ರದೇಶದಲ್ಲಿ ಸೋಮವಾರ ರಾತ್ರಿ ಸುಮಾರು 7 ಗಂಟೆಗೆ ಭಾರಿ ಮಳೆಗೆ ಮನೆ ಮೇಲೆ ಗುಡ್ಡಕುಸಿದು ಮನೆ ಸಂಪೂರ್ಣ ಮಣ್ಣಿನಡಿ ಬಿದ್ದಿದ್ದು ಇದರಲ್ಲಿ ಕುಸುಮಧಾರ ಮತ್ತು ರೂಪಾಶ್ರೀ ದಂಪತಿಗಳ ಇಬ್ಬರು ಹೆಣ್ಣು ಮಕ್ಕಳಾದ ಐದನೇ ತರಗತಿ ವಿದ್ಯಾಭ್ಯಾಸ

ಕುಕ್ಕೆ ಸುಬ್ರಹ್ಮಣ್ಯ ಭಾರಿ ಮಳೆ ಹಿನ್ನೆಲೆ : ಕ್ಷೇತ್ರ ದರ್ಶನಕ್ಕೆ ನಿರ್ಬಂಧ

ದ.ಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅದರಲ್ಲೂ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು,ಹರಿಹರ,ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಭಾಗದಲ್ಲಿ ಮುಂಜಾಗ್ರತ ಕ್ರಮವಹಿಸಲು ಎಸ್ ಡಿಆರ್ ಎಪ್ ಹಾಗೂ ಎನ್ ಡಿಆರ್ ಎಪ್ ತಂಡವನ್ನು ಆ ಭಾಗಕ್ಕೆ ಈಗಾಗಲೆ ಕಳುಹಿಸಿಕೊಡಲಾಗುತ್ತಿದೆ.ಸಂಬಂಧಿಸಿದ ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.ನೆರೆ ಸಂದರ್ಭ ಸಾರ್ವಜನಿಕರು ಸಹಕರಿಸಿ, ಸುರಕ್ಷತೆ ಕಡೆ ಹೆಚ್ಚಿನ

ನಳಿನ್‍ಗೆ ತಡೆ ನಿಜವಾದ ಕಾರ್ಯಕರ್ತರಿಂದ ಅಲ್ಲ : ಜಗದೀಶ ಶೇಣವ

ಇತ್ತೀಚೆಗೆ ಬೆಳ್ಳಾರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಕಾರನ್ನು ತಡೆದು ದಿಗ್ಬಂಧನ ಹಾಕುವ ಕೆಲಸ ಆಕಾಂಕ್ಷಿಗಳು, ಅತೃಪ್ತರಿಂದ ಆಗಿದೆಯೇ ಹೊರತು ಬಿಜೆಪಿಯ ನಿಜವಾದ ಕಾರ್ಯಕರ್ತರಿಂದ ಅಲ್ಲ ಎಂದು ದ.ಕ ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ ಶೇಣವ ಹೇಳಿದ್ದಾರೆ.ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹತ್ಯೆಯಾದ ಪ್ರವೀಣ್ ನೆಟ್ಟಾರ್ ಮನೆಗೆ ತೆರಳುವಾಗ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಸೇರಿದಂತೆ ಇತರೆ ಶಾಸಕರಿದ್ದರೂ ಕೇವಲ

ರಾಜ್ಯದ ಮುಖ್ಯಮಂತ್ರಿಯಿಂದ ಪಕ್ಷಪಾತ ಧೋರಣೆ :ಜೆಡಿಎಸ್ ಆರೋಪ

ಪುತ್ತೂರು:ಜಿಲ್ಲೆಯಲ್ಲಿ ಮೂರು ಹತ್ಯೆಗಳಾಗಿದ್ದು, ಈ ಮೂವರ ಮನೆಗೆ ತೆರಳಿ ಸಾಂತ್ವನ ಹೇಳಬೇಕಾಗಿದ್ದ, ಪರಿಹಾರ ನೀಡಬೇಕಾಗಿದ್ದ ರಾಜ್ಯದ ಮುಖ್ಯಮಂತ್ರಿಗಳ ಪಕ್ಷಪಾತ ಧೋರಣೆಯನ್ನು ಜೆಡಿಎಸ್ ಪಕ್ಷ ಖಂಡಿಸುತ್ತದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿರುವಾಗಲೇ ಸುರತ್ಕಲ್‍ನಲ್ಲಿ ಫಾಝಲ್ ಹತ್ಯೆಯಾಗಿದೆ. ಅಲ್ಲದೆ ಬೆಳ್ಳಾರೆಯಲ್ಲಿ ಮೃತ ಪ್ರವೀಣ್

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಗೆ ಅಖಿಲ ಭಾರತೀಯ ಸಂತ ಸಮಿತಿಯಿಂದ ಖಂಡನೆ

ಇತ್ತೀಚಿನ ದಿನಗಳಲ್ಲಿ ಹಿಂದೂ ಯುವಕರ ಹತ್ಯೆಗಳು ಪದೇ ಪದೇ ನಡೆಯುತ್ತಿದೆ. ಹಿಂದೂ ಯುವಕರನ್ನೇ ಗಮನದಲ್ಲಿಟ್ಟು ಹತ್ಯೆ ಮಾಡುತ್ತಿರುವುದು ಗಂಭೀರವಾದ ವಿಷಯ. ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿರುವುದಕ್ಕೆ ಅಖಿಲ ಭಾರತೀಯ ಸಂತ ಸಮಿತಿ ಖಂಡನೆ ವ್ಯಕ್ತಪಡಿಸಿದೆ. ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸ್ವಾಮಿ ಓಂ ಶ್ರೀ ವಿದ್ಯಾನಂದ ಸರಸ್ವತಿ ಅವರು, ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ

ಆರೋಪಿಗಳ ಪರಿಚಯ ಇರುವವರು ಇಲಾಖೆಗೆ ಸಹಕರಿಸಬೇಕು ,ಡಿಜಿಪಿ ಪ್ರವೀಣ್ ಸೂದ್ ಹೇಳಿಕೆ

ಯಾವುದೇ ಪ್ರಕರಣವಿದ್ದರೂ ಅದರ ಬಗ್ಗೆ ಕೆಲವು ನಾಗರಿಕರಿಗೆ ಮಾಹಿತಿ ಇರುತ್ತದೆ. ಅಂಥವರು ಮುಂದೆ ಬಂದು ಪೆÇಲೀಸರಿಗೆ ಮಾಹಿತಿ ನೀಡಿದರೆ ಪ್ರಕರಣ ಬೇಧಿಸಲು ಸುಲಭವಾಗುತ್ತದೆ. ಮಾಹಿತಿ ನೀಡದಿದ್ದಲ್ಲಿ ಅವರೂ ಇದರಲ್ಲಿ ಭಾಗಿದಾರರೆಂದು ನಾವು ತಿಳಿಯಬೇಕಾಗುತ್ತದೆ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದರು. ಮಂಗಳೂರಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರಷ್ಟೇ ನಾಗರಿಕರ ಜವಾಬ್ದಾರಿಯೂ ಇದೆ. ಆದ್ದರಿಂದ

ರಸ್ತೆ ಬದಿಯ ಹುಲ್ಲು, ಮರದ ಗೆಲ್ಲು ತೆರವು : ಯುವಕೇಸರಿ ಅಬೀರಿ ಸ್ವಚ್ಛತಾ ಶ್ರಮದಾನ

ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು ಚಂದಳಿಕೆ ಸಂಘಟನೆಯ ವತಿಯಿಂದ ಶ್ರಮದಾನ ನಡೆಯಿತು. ಅತಿಕಾರಬೈಲುವಿನಿಂದ ಚಂದಳಿಕೆ ಜಂಕ್ಷನ್ ವರೆಗೆ ಸುಮಾರು 2 ಕಿಲೋ ಮೀಟರ್ ದೂರದ ರಸ್ತೆಯ ಬದಿಯ ಹುಲ್ಲು ಮತ್ತು ಮರದ ಗೆಲ್ಲುಗಳನ್ನು ತೆರವುಗೊಳಿಸುವ ಸ್ವಚ್ಚತಾ ಶ್ರಮದಾನ ನಡೆಯಿತು. ಯುವಕೇಸರಿಯ 40 ಕಿಂತಲೂ ಹೆಚ್ಚು ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು. ವಿವಿಧ ಗ್ರಾಮ ಪಂಚಾಯತ್ ಸದಸ್ಯರು ಈ ಕಾರ್ಯಕ್ಕೆ ಸಾಥ್ ನೀಡಿದರು. ಈ ಸಂಧರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ನ

ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಭತ್ತ ನಾಟಿ

ಬಂಟ್ವಾಳ: ದ.ಕ.ಜಿ.ಪಂ., ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಥಳೀಯರ ಸಹಕಾರದೊಂದಿಗೆ ಚೆಂಡಿನ ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಎಂಒ4 ಭದ್ರಾ ತಳಿಯನ್ನು ಬಿತ್ತನೆ ಮಾಡಲಾಗಿದೆ. ಯುವಕರು ಭತ್ತದ ಬೇಸಾಯದಲ್ಲಿ ತೊಡಗಲು

ಸ್ವಾಮೀಜಿಗಳಿಂದ ಅನಾಗರಿಕ ವರ್ತನೆ ಸರಿಯಲ್ಲ, ಹೆಚ್.ಡಿ. ಕುಮಾರಸ್ವಾಮಿ ಆರೋಪ

ಹತ್ಯೆ ಮಾಡಿದವರ ತಲೆ ಕಡಿಯುತ್ತೇವೆ ಎಂಬ ಹೇಳಿ ನೀಡಿರುವ ಕಾಳಿ ಸ್ವಾಮಿ ವರ್ತನೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಅವರು ಪುತ್ತೂರು ನೆಹರೂನಗರದ ಮಾಸ್ಟರ್ ಪ್ಲಾನರಿಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮಂದೊಂದಿಗೆ ಮಾತನಾಡಿದರು. ಇಂತಹ ಹೇಳಿಕೆ ನೀಡುವುದು ಸ್ವಾಮೀಜಿಗಳ ಲಕ್ಷಣವಲ್ಲ. ಸ್ವಾಮೀಜಿಗಳು ಅನಾಗರಿಕರಂತೆ ವರ್ತಿಸುತ್ತಿದ್ದಾರೆ. ಸಮಾಜದ ಕಲುಷಿತ ವಾತಾವರಣಕ್ಕೆ ಕಾರಣಕರ್ತರಾಗಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯಲ್ಲಿ