ಸುರತ್ಕಲ್ ನಲ್ಲಿ ಸಂಘಪರಿವಾರ ಬೆಂಬಲಿತ ದುಷ್ಕರ್ಮಿಗಳಿಂದ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ಫಾಝಿಲ್ ಮನೆಗೆ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಭೇಟಿ ಕೊಟ್ಟು ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊಲೆಗಡುಕರಿಗೆ ತಕ್ಕ ಶಿಕ್ಷೆ ಆಗಬೇಕು. ಇದಕ್ಕೆ ಬೇಕಾದ ಕಾನೂನು ಹೋರಾಟದಲ್ಲಿ ಪಕ್ಷ ಫಾಝಿಲ್
ಮಣಿಪಾಲದ ಪೈ ಕುಟುಂಬದ ಹಿರಿಯರಾದ ತೋನ್ಸೆ ಮೋಹನದಾಸ್ ಪೈ (89) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಡಾ. ಟಿಎಂಎ ಪೈ ಪ್ರತಿಷ್ಠಾನ, ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟಿ, ಸಿಂಡಿಕೇಟ್ ಬ್ಯಾಂಕಿನ ಪೂರ್ವ ರೂಪ ಐಸಿಡಿಎಸ್ ಲಿ., ಮಣಿಪಾಲ್ ಮೀಡಿಯ ನೆಟ್‍ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಹಲವು ಸಂಸ್ಥೆಗಳ ಬೆಳವಣಿಗೆಗೆ
ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ವೊಂದರಲ್ಲಿ ಅಡುಗೆ ಅನಿಲದಿಂದಾಗಿ ಸಂಭವಿಸಬಹುದಾದ ಭಾರಿ ಬೆಂಕಿ ದುರಂತವೊಂದು ಪೊಲೀಸ್ ಮತ್ತು ಗೃಹರಕ್ಷಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ತಪ್ಪಿದ ಘಟನೆ ಆ.1 ರ ನಸುಕಿನ ಜಾವ ನಡೆದಿದೆ. ಯೋಗೀಶ್ ರೈ ಮಾಲಕತ್ವದ ಜ್ಯೂಸ್ ಸೆಂಟರ್ ನೊಳಗೆ 3 ಗಂಟೆ ರಾತ್ರಿ ಸುಮಾರಿಗೆ ಬೆಂಕಿಯ ಜ್ವಾಲೆ ಅಂಗಡಿಯ ಸೊತ್ತುಗಳಿಗೆ ಹತ್ತಿ ಕೊಂಡಿತ್ತು. ಇದೇ ವೇಳೆ ರಾತ್ರಿ ಬಸ್ ನಿಲ್ಧಾಣದ ಪಾಯಿಂಟ್
ಹಳೆ ವಿದ್ಯಾರ್ಥಿ ಸಂಘ, ಕರಂಬಾರು(ರಿ)ಮತ್ತು ಶಾಲಾಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಆಟೀಡೊಂಜಿ ದಿನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ ಸಭಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟನೆ ಯನ್ನು ಜಗನಾಥ್ ಸಾಲ್ಯಾನ್, (ಅಧ್ಯಕ್ಷರು, ಮಾರಿಯಮ್ಮ ಕೋಟೆ ಬಬ್ಬು ಸ್ವಾಮಿ ದೈವಸ್ಥಾನ ಕರಂಬಾರು, ಸಂಪನ್ಮೂಲ ವ್ಯಕ್ತಿ ಯಾಗಿ ತುಳು ಅಕಾಡೆಮಿ ಮಾಜಿ ಸದಸ್ಯರಾದ ನರೇಶ್ ಕುಮಾರ್ ಸಸಿಹಿತ್ಲು, ಮುಖ್ಯ ಅತಿಥಿ ಯಾಗಿ
ಮಂಗಳೂರು: ಇತ್ತೀಚೆಗೆ ಸುರತ್ಕಲ್ ಪೇಟೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಯುವಕ ಫಾಝಿಲ್ ರವರ ಮನೆಗೆ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆಯವರ ನೇತೃತ್ವದ ನಿಯೋಗವು ಭೇಟಿ ನೀಡಿ ಫಾಝಿಲ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ದೈರ್ಯ ತುಂಬಲಾಯಿತು, ಕುಟುಂಬದೊಂದಿಗೆ ಪಕ್ಷವು ಸದಾ ಇರಲಿದೆ ಯಾವುದೇ ಕಾರಣಕ್ಕೂ ಆತ್ಮವಿಶ್ವಾಸ, ದೈರ್ಯ ಕಳೆದುಕೊಳ್ಳದೇ ಕಾನೂನಿನ ಮೇಲೆ ನಂಬಿಕೆ ಇಟ್ಟು ಕಾನೂನು ಹೋರಾಟ ಮಾಡಿ ಕೊಲೆಗಟುಕರಿಗೆ
ಪುತ್ತೂರು ಗೆಜ್ಜೆ ಗಿರಿಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ನಂದನ್ ಬಿತ್ತಿಲ್ ನಲ್ಲಿ ಭಾನುವಾರದಂದು ಬೆಳಿಗ್ಗೆ ಬಿಲ್ಲವ ಸಮುದಾಯದ ಯುವ ಉದ್ಯಮಿ ಹಾಗೂ ಗೆಜ್ಜೆಗಿರಿ ನಂದನ್ ಬಿತ್ತಿಲಿನ ಪ್ರಸಾದ ತಯಾರಿಕ ಘಟಕದ ಸಂಚಾಲಕರಾಗಿ ಕಳೆದೆರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಪ್ರವೀಣ್ ನೆಟ್ಟಾರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತುಈ ಸಂದರ್ಭದಲ್ಲಿ ವಿಖ್ಯಾತಾನಂದ ಸ್ವಾಮೀಜಿ ಮಾತನಾಡಿ ಪ್ರವೀಣ ರವರ ಕೆಲಸ-ಕಾರ್ಯಗಳ ಬಗ್ಗೆ ಗುಣಗಾನ
ಪುತ್ತೂರು :ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರವೀಣ್ ತಂದೆ, ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿ ಸಹಾಯಧನದ ಚೆಕ್ ವಿತರಿಸಿದರು. ಕುಮಾರಸ್ವಾಮಿ ಅವರು ಮನೆಯವರಿಗೆ 5 ಲಕ್ಷ ರೂ ಚೆಕ್ ವಿತರಿಸಿದರು.ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಎಂ.ಎಲ್.ಸಿ ಬಿ.ಎಂ ಫಾರೂಕ್, ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಪುತ್ತೂರು ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ,
ರಾತ್ರಿ ನಿರ್ಬಂಧ 2 ದಿನ ಮುಂದುವರಿಕೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆ.1ಮತ್ತು 2ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಲು ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಕಾರಣದಿಂದ ಆ.3ರ ಬೆಳಗ್ಗೆ 6 ರ ವರೆಗೆ ನಿರ್ಬಂಧ ಮುಂದುವರಿಯಲಿದೆ
ಇಂಗ್ಲೆಂಡ್‍ನ ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ಕುಂದಾಪುರದ ವೇಟ್‍ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪುರುಷರ 61 ಕೆ.ಜಿ. ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ 269 ಕೆಜಿ ಭಾರ ಎತ್ತುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದು ಎರಡನೇ ಬಾರಿ ಭಾರತಕ್ಕೆ ಪದಕ
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ವೇಟ್‌ಲಿಫ್ಟರ್ ಮೀರಾಬಾಯಿ ಸಾಯಿಕೋಮ್ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ತಂದಿದ್ದಾರೆ

























