ಮೂಡುಬಿದಿರೆ : ಭೂ ಅಭಿವೃದ್ಧಿಗೆ ಸಂಬಂಧಿಸಿದ ಉದ್ಯಮಗಳನ್ನು ನಡೆಸುತ್ತಿರುವ ಅರ್ಥ್ ಮೂವರ್ಸ್ ಮಾಲೀಕರು ಡೀಸೆಲ್ ಬೆಲೆ ಹೆಚ್ಚಳ, ನಿರ್ವಹಣಾ ವೆಚ್ಚ, ಚಾಲಕರ ವೇತನ ಏರಿಕೆಯಿಂದ ಸಂಕಷ್ಟ ಎದುರಿಸುತ್ತಿದ್ದು ಉದ್ಯಮದ ಉಳಿವಿಗಾಗಿ ಹತ್ತು ವರ್ಷಗಳ ಬಳಿಕ ಜೆಸಿಬಿ, ಟಿಪ್ಪರ್, ಹಿಟಾಚಿ ಬಾಡಿಗೆ ದರ ಪರಿಷ್ಕರಿಸಿರುವುದಾಗಿ ಅರ್ಥ್ ಮೂವರ್ಸ್ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷ
ದ.ಕ. ಜಿಲ್ಲೆ ಪ್ರವೇಶಿಸಲು ಮುಂದಾದ ಶ್ರೀ ರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಜಿಲ್ಲೆಯ ಗಡಿಭಾಗವಾದ ಹೆಜಮಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಸುಳ್ಯದಲ್ಲಿ ಹತ್ಯೆಯಾಗಿರುವ ಪ್ರವೀಣ್ ಮನೆಗೆ ಭೇಟಿ ನೀಡುವ ಉದ್ದೇಶದಿಂದ ಮುತಾಲಿಕ್ ದ.ಕ. ಜಿಲ್ಲೆಗೆ ಆಗಮಿಸುವ ಬಗ್ಗೆ ಗುರುವಾರವೇ ಮಾಹಿತಿಯಿತ್ತು. ಅವರು ಆಗಮಿಸಿದ್ದಲ್ಲಿ ನಗರದಲ್ಲಿ ಸಾರ್ವಜನಿಕ
ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ಆ.11ರ ತನಕ 14ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.ಕಡಬ ತಾಲೂಕಿನ ಸವಣೂರಿನಲ್ಲಿ ಫಾಸ್ಟ್ಫುಡ್ ಅಂಗಡಿ ವ್ಯವಹಾರ ನಡೆಸುತ್ತಿರುವ ಮಹಮ್ಮದ್ ಝಾಕೀರ್ ಮತ್ತು ಬೆಳ್ಳಾರೆಯವನಾಗಿದು,ಸುಳ್ಯ ತಾಲೂಕಿನ ಗುತ್ತಿಗಾರಿನ ಅಡಿಕೆ ಖರೀದಿ ಅಂಗಡಿಯೊಂದರಲ್ಲಿ ಕೆಲಸಕ್ಕಿರುವ ಶಫೀಕ್ ನ್ಯಾಯಾಂಗ
ಸುರತ್ಕಲ್ ಸಮೀಪದ ತಾತ್ಕಾಲಿಕ ಮಾರುಕಟ್ಟೆಯಲ್ಲಿ ಗುರುವಾರ ರಾತ್ರಿ ಕೊಲೆಯಾದ ಮಂಗಳಪೇಟೆಯ ನಿವಾಸಿ ಫಾಝಿಲ್ ನ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಮಂಗಳಪೇಟೆ ಜುಮ್ಮಾ ಮಸೀದಿಯಲ್ಲಿ ನಡೆದಿದೆ. ಸಾವಿವಾರು ಜನರ ನಡುವ ಫಾಝಿಲ್ ಮೃತದೇಹವನ್ನು ಮೆರವಣಿಗೆಯಲ್ಲಿ ಸಾಗಿಸಿ ಅಂತ್ಯಸಂಸ್ಕಾರ ನಡೆಸಲಾಯಿತು. ಪೋಲೀಸ್ ಬಿಗಿ ಭದ್ರತೆಯಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಿತು. ಪೋಲೀಸ್ ಆಯುಕ್ತ ಎನ್ ಶಶಿಕುಮಾರ್, ಹಾಸನದ ಎಸ್ ಪಿ ಹರಿರಾಂ ಶಂಕರ್ ಭದ್ರತೆಯ ಉಸ್ತುವಾರಿ ವಹಿಸಿದ್ದರು.
ಮೂಡುಬಿದಿರೆ: ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಬಸ್‍ಗಳಲ್ಲಿ ಶೇ.50 ರಿಯಾಯಿತಿ, ನಿತ್ಯ ಪ್ರಯಾಣಿಕರಿಗೆ ಶೇ.20 ರಿಯಾಯಿತಿಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸರ್ಕಾರದಿಂದ ಯಾವುದೇ ರೀತಿಯ ಅನುದಾನ ಪಡೆಯದೆ, ಲಾಭ-ನಷ್ಟಗಳನ್ನು ನೋಡದೆ ಈ ಸೌಲಭ್ಯವನ್ನು ಚಲೋ ಬಸ್ ಕಾರ್ಡ್‍ನ ಮುಖಾಂತರ ನೀಡುತ್ತಿದ್ದು, ಇದು ಸಂಪೂರ್ಣ ಡಿಜಿಟಲ್ ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ. ಈಗಾಗಲೇ 25,000 ಅಧಿಕ ಪ್ರಯಾಣಿಕರು ಇದರ ಪ್ರಯೋಜನ
ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಗುರುವಾರ ರಾತ್ರಿ ವೇಳೆ ಅನಗತ್ಯವಾಗಿ ಸಂಚರಿಸುತ್ತಿದ್ದ 12 ಮಂದಿಯನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ನಲ್ಲಿ ಕಳೆದ ರಾತ್ರಿ ನಡೆದ ಮುಹಮ್ಮದ್ ಫಾಝಿಲ್ ಕೊಲೆಯ ಹಿನ್ನೆಲೆಯಲ್ಲಿ ಮಂಗಳೂರು ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ರಾತ್ರಿ ವೇಳೆ ಅನಗತ್ಯ ಜನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ
ನನ್ನ ಪತಿ ಆರೋಪಿಯಲ್ಲ. ಅವರನ್ನು ಮನೆಯಿಂದ ತನಿಖೆ ಇದೆ ಎಂದು ಪೆÇಲೀಸರು ಕರೆದುಕೊಂಡು ಹೋಗಿದ್ದಾರೆ. ಇದೀಗ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಶಫೀಕ್ ಪತ್ನಿ ಅನ್ಸಿಫಾ ಆರೋಪ ಮಾಡಿದ್ದಾರೆ. ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ತನಿಖೆಯು ಪ್ರಗತಿಯಲ್ಲಿದೆ. ಇಬ್ಬರು ಆರೋಪಿಗಳಾದ ಝಕೀರ್ ಮತ್ತು ಶಫೀಕ್ ಅವರ ಬಂಧನವನ್ನು ಎಡಿಜಿಪಿ ಅಲೋಕ್ ಕುಮಾರ್ ಮತ್ತು ಎಸ್ಪಿ ರಿಷಿಕೇಶ್ ಸೋನಾವಣೆ ದೃಢಪಡಿಸಿದ್ದಾರೆ. ಈ ನಡುವೆ ಶಫೀಕ್ ಬೆಳ್ಳಾರೆ ಅವರ ಪತ್ನಿ
ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೋಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯನ್ನು ಆಕ್ರೋಶಿತರು ಧ್ವಂಸಗೊಳಿಸಿದ ಘಟನೆ ನಡೆದಿದೆ. ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಮೂಲದ ಶಫೀಕ್ ಬಂಧಿತನಾಗಿದ್ದಾನೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಆಕ್ರೋಶಿತರಾದ ಕೆಲವರು ಆತ ಕೆಲಸ ನಿರ್ವಹಿಸುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಬಿಗು ಪೋಲೀಸ್
ಪ್ರವೀಣ್ ನೆಟ್ಟಾರು ಕೊಲೆಯನ್ನು ಖಂಡಿಸಿ ಆರ್ಯ ಈಡಿಗ ಮಹಾಮಂಡಲದ ರಾಷ್ಟ್ರೀಯ ಅಧ್ಯಕ್ಷ ಡಾ.ಪ್ರಣಾವನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಗುರುವಾರದಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.ಬೆಂಗಳೂರು ಕಬ್ಬನ್ ಪಾರ್ಕ್ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶ್ರೀ ಪ್ರಣಾವನಂದ ಸ್ವಾಮೀಜಿ ಅವರು , ಮೃತ ಪ್ರವೀಣ್ ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಹಾಗೂ ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು.
ಪುರಾಣ ಪ್ರಸಿದ್ದ ಪರ್ವತ ಕ್ಷೇತ್ರ ಬಂಟ್ವಾಳ ತಾಲೂಕಿನ ನರಹರಿ ಪರ್ವತದ ಮೇಲಿರುವ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಯ ಪ್ರಯುಕ್ತ ವಿಶೇಷ ತೀರ್ಥ ಸ್ನಾನ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟ ಹತ್ತಿ ದೇವಸ್ಥಾನದ ತೀರ್ಥ ಬಾವಿಗಳಾದ ಶಂಖ, ಚಕ್ರ, ಗಧಾ, ಪದ್ಮ ಕೆರೆಗಳಿಗೆ ವೀಳ್ಯ ಅಡಿಕೆಯ ಭಾಗಿನ ಬಿಟ್ಟು ತೀರ್ಥ ನೀರು ಮಿಂದು ಪುನೀತರಾದರು. ದೇವರ ದರ್ಶನ ಪಡೆದು ವಿಶೇಷ ಸೇವೆಗಳನ್ನು ಸಲ್ಲಿಸಿದರು. ಮಹಾಭಾರತ ಯುದ್ಧದ ಬಳಿಕ ಪಾಂಡವರು ತಮ್ಮ


















