Home Posts tagged #v4news karnataka (Page 167)

ಸಂಜೀವ ಮಠಂದೂರು ಅವರನ್ನು ತರಾಟೆಗೆತ್ತಿಕೊಂಡ ಪ್ರವೀಣ್ ಪತ್ನಿ ನೂತನಾ

ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರ ಮನೆಗೆ ಜು.28ರಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದ್ದಾರೆ. ಈ ವೇಳೆ ಪ್ರವೀಣ್ ಪತ್ನಿ ನೂತನಾ ಅವರು ಶಾಸಕರನ್ನು ತರಾಟೆಗೆತ್ತಿಕೊಂಡಿದ್ದಾರೆ. `ನನ್ನ ಗಂಡನ ಕೊಲೆ ಆಗಿ ಎರಡು ದಿನ ಆಯಿತು. ಇವತ್ತು ಬರ್ತೀರಾ, ನಿಮ್ಮ ಮನೆಯ ಮಗಳಿಗೆ ಹೀಗಾದರೆ ಹೀಗೆ

ಪ್ರವೀಣ್ ನೆಟ್ಟಾರು ಕೊಲೆ : ಇಬ್ಬರ ಬಂಧನ

ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ.ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೆÇಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆ ಬಂಧಿತ ಆರೋಪಿಗಳಾಗಿದ್ದಾರೆ.

ಪುತ್ತೂರು ನಗರದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಪೊಲೀಸ್ ಪಥಸಂಚಲನ.

ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಯಾವುದೇ ಗಲಭೆ ಉಂಟಾಗದಂತೆ ಗಲಭೆಕೋರರಿಗೆ ಎಚ್ಚರಿಕೆಗೆ ನೀಡಲು ಮತ್ತು ಸಾರ್ವಜನಿಕರಿಗೆ ಶಾಂತಿ ಸುವ್ಯವಸ್ಥೆಗಾಗಿ ರಾಜ್ಯ ಮೀಸಲು ಪಡೆಯ ಸಶಸ್ತ್ರ ಪೊಲೀಸರಿಂದ ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಅವರ ಸೂಚನೆಯಂತೆ ಪುತ್ತೂರು ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಮತ್ತು ಇನ್ ಸ್ಪೆಕ್ಟರ್ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಜು. 28ರಂದು ಪುತ್ತೂರು ಪೇಟೆಯಲ್ಲಿ ಪಥ ಸಂಚಲನ ನಡೆಯಿತು.

ಪ್ರವೀಣ್ ನೆಟ್ಟಾರು ಅವರ ಹತ್ಯೆ : ಉದ್ವಗ್ನಿ ಸ್ಥಿತಿಯತ್ತ ತಿರುಗಿದ್ದ ಬೆಳ್ಳಾರೆ ಪೇಟೆ ಇಂದು ಸಹಜ ಸ್ಥಿತಿಯತ್ತ

ಸುಳ್ಯ:ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಬಳಿಕ ನಿನ್ನೆ ಬಂದ್, ಪ್ರತಿಭಟನೆ, ಲಾಠಿ ಚಾರ್ಜ್ ನಡೆದು ಉದ್ವಗ್ನಿ ಸ್ಥಿತಿಯತ್ತ ತಿರುಗಿದ್ದ ಬೆಳ್ಳಾರೆ ಪೇಟೆ ಇಂದು ಸಹಜ ಸ್ಥಿತಿಯತ್ತ ಮರಳಿದೆ. ಇಂದು ಬೆಳಿಗ್ಗಿನಿಂದ ಪೇಟೆಯು ಸಹಜ ಸ್ಥಿತಿಗೆ ಮರಳಿದ್ದು ಅಂಗಡಿ ಮುಂಗಡಿಗಳು ತೆರೆದು ಕೊಂಡಿದೆ, ವಾಹನ ಸಂಚಾರ, ಜನ ಸಂದಣಿ ಮಾಮೂಲಿಯಂತೆ ಇದೆ. ಶಾಲಾ ಕಾಲೇಜುಗಳು ತೆರೆದು ಕೊಂಡಿದೆ. ಬೆಳ್ಳಾರೆ ಪೇಟೆ ಮತ್ತು ಪರಿಸರದಲ್ಲಿ ಬಿಗು ಪೆÇಲೀಸ್ ಬಂದೋಬಸ್ತ್

ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯ ವತಿಯಿಂದ ಆಕರ್ಷಕ ಶೈಲಿಯ ವಸ್ತ್ರಗಳ ಮಾರಾಟ ಮೇಳ ಹಾಗೂ ಪ್ರದರ್ಶನ

ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆಯೋಜನೆ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯ ವತಿಯಿಂದ ವೈವಿಧ್ಯಮಯ ಹಾಗೂ ಆಕರ್ಷಕ ಶೈಲಿಯ ವಸ್ತ್ರಗಳ ಮಾರಾಟ ಮೇಳ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆರಂಭಗೊಂಡಿದ್ದು ಮೊದಲ ದಿನವೇ ಅಪಾರ ಸಂಖ್ಯೆಯಲ್ಲಿ ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಬಿ.ಸಿ.ರೋಡು ಪರಿಸರದಲ್ಲಿ ಇದೇ ಪ್ರಥಮ ಬಾರಿಗೆ ಬೃಹತ್ ಬಟ್ಟೆಗಳ ಮಾರಾಟ ಮೇಳ ಆರಂಭಗೊಂಡಿದ್ದು ಗ್ರಾಹಕರು ಖರೀದಿಸುವ ಪ್ರತಿಯೊಂದು ಬಟ್ಟೆಯ ಬೆಲೆ ಕೇವಲ 199

ಮೂಳೂರು ಹಿಂದು ರಕ್ಷಾ ವೆಲ್ ಫೇರ್ ಟ್ರಸ್ಟ್ ನ ವತಿಯಿಂದ ಹಾಲೆ ಮರದ ತೊಗಟೆಯ ಕಷಾಯ ವಿತರಣೆ

ಮೂಳೂರು ಹಿಂದು ರಕ್ಷಾ ವೆಲ್ ಫೇರ್ ಟ್ರಸ್ಟ್ ನ ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ ಹಾಲೆ ಮರದ ತೊಗಟೆಯ ಕಷಾಯವನ್ನು ಸಿದ್ಧಪಡಿಸಿ ಸಾರ್ವಜನಿಕರಿಗೆ ಮತ್ತು ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸಲಾಯಿತು.ಹಿಂದು ರಕ್ಷಾ ವೆಲ್‍ಫೇರ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಧೀರೇಶ್ ಡಿ. ಪಿ. ಮಾತನಾಡಿ, ತುಳುನಾಡ ಸಂಸ್ಕೃತಿಯಲ್ಲಿ ಆಟಿ ಅಮಾವಾಸ್ಯೆ ಆಚರಣೆಯು ಧಾರ್ಮಿಕವಾಗಿ, ವೈಜ್ಞಾನಿಕವಾಗಿ ಅತ್ಯಂತ ಮಹತ್ವವನ್ನು ಪಡೆದಿದೆ. ಆಟಿ ಅಮಾವಾಸ್ಯೆಯ ದಿನ ಹಾಲೆ ಮರದ

ಆಷಾಢ( ಆಟಿ ) ಅಮಾವಾಸ್ಯೆಯ ಹಾಲೆ ಮರದ ವೈಶಿಷ್ಟ್ಯತೆ

ಹಾಲೆ ಮರದ ಎಲೆಯು ಸಾಮಾನ್ಯವಾಗಿ ದಪ್ಪವಾಗಿದ್ದು ಒಂದು ಗೊಂಚಲಿನಲ್ಲಿ 7 ರಿಂದ 9 ಪತ್ರಗಳಿರುತ್ತವೆ. ಎಲೆಗಳ ಅಗಲ ಒಂದರಿಂದ ಎರಡು ಇಂಚು ಇದ್ದು, ಉದ್ದ 6 ರಿಂದ 12ಇಂಚು ಇರುತ್ತದೆ. ಕಡು ಹಸಿರು ವರ್ಣದಿಂದ ಕೂಡಿದ್ದು ಮುರಿದಾಗ ಹಾಲು ಹೊರಸೂಸುತ್ತದೆ.ಹಾಲೆ ಮರದ ತೊಗಟೆ ಬೂದು ವರ್ಣದಿಂದ ಕೂಡಿದ್ದು, ದೊರಗಾಗಿದ್ದು ಕಲ್ಲಿನಿಂದ ಜಜ್ಜಿ ಹಾಳೆಗಳಂತೆ ತೆಗೆಯಲು ಬರುವುದು. ಈ ಕಷಾಯವನ್ನು ಕುಡಿಯುವುದರಿಂದ ಶೀತ ವಾತಾವಾರಣವನ್ನು ತಡೆದುಕೊಳ್ಳುವ ಶಕ್ತಿ ಬರುತ್ತದೆ ಹುಳ

ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ : ಬಂಡೆಗೆ ಬಡಿದ ದೋಣಿ

ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ. ಇಂದು ಬೆಳಗ್ಗೆ ಐದು ಮಂದಿ ಮೀನುಗಾರರು, ನಾಡದೋಣಿಯಲ್ಲಿ ಕಾಪುವಿನಿಂದ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಲ್ಲಿ ದೋಣಿಯ ಇಂಜಿನ್ ತಾಂತ್ರಿಕ ದೋಷ ಉಂಟಾಗಿ, ಕಾಪು ಲೈಟ್ ಹೌಸ್ ತಲುಪುತ್ತಿದ್ದಂತೆ, ಬಂಡೆಗೆ ಬಡಿದಿದೆ. ಈ ವೇಳೆ ದೋಣಿ ಮಗುಚಿ

ಹುಟ್ಟೂರಿನಲ್ಲಿ ಪ್ರವೀಣ್ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ ನಮನ

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರವೀಣ್‌ ಪತ್ನಿ, ತಂದೆ-ತಾಯಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಂದೆಯೇ ಮಗನ ಚಿತೆಗೆ ಅಗ್ನಿ ಸ್ಪರ್ಶ ನೀಡುವ ಮೂಲಕ ಅಂತಿಮ ಸಂಸ್ಕಾರ ನಡೆಸಲಾಯಿತು.

ಪ್ರವೀಣ್ ನೆಟ್ಟಾರ್ ಹತ್ಯೆ ಬಿಜೆಪಿ ಸರಕಾರದ ದುರಾಡಳಿತದ ಫಲಶ್ರುತಿ : ಮಸೂದ್, ಪ್ರವೀಣ್ ಕುಟುಂಬಗಳಿಗೆ ತಾರತಮ್ಯ ವಿಲ್ಲದೆ ಪರಿಹಾರ ಒದಗಿಸಿ : ಡಿವೈಎಫ್ಐ ಆಗ್ರಹ

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಜೆಪಿ ಸರಕಾರದ ದುರಾಡಳಿತ ಹಾಗೂ ಮತೀಯವಾದಿ ನೀತಿಗಳೇ ನೇರ ಕಾರಣ. ಬಿಜೆಪಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪೂರ್ತಿ ಕುಸಿದಿದ್ದು, ಕೋಮುವಾದಿ ಸಂಘಟನೆಗಳು ಅಂಕೆ ಮೀರಿ ವರ್ತಿಸುತ್ತಿವೆ. ಬೆಳ್ಳಾರೆಯಲ್ಲಿ ನಡೆದಿರುವ ಮಸೂದ್ ಹಾಗೂ ಪ್ರವೀಣ್ ನೆಟ್ಟಾರ್ ಕೊಲೆಗಳು ಮತೀಯ ಸಂಘರ್ಷ ಭುಗಿಳೇಲುವ ಭೀತಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ‌ ಈಗಲಾದರು ಎಚ್ಚೆತ್ತುಕೊಂಡು ತಮ್ಮ ಪರಿವಾರವೂ ಸೇರಿದಂತೆ