ಕಟಪಾಡಿ ಮಟ್ಟು ಹೊಳೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು 45ರಿಂದ 50 ವರ್ಷ ವಯಸ್ಸಿನ ಗಂಡಸಿನ ಶವ ಕಟಪಾಡಿ ಮಟ್ಟು ಹೊಳೆಯಲ್ಲಿ ತೇಲಿ ಬರುತ್ತಿದ್ದನ್ನು ಗಮನಿಸಿದ ಸ್ಥಳೀಯರು, ಬಾರೀ ಸೆಳೆತ ಹೊಂದಿದ ನೆರೆಯ ನೀರಿನಲ್ಲಿ ಸಾಹಸಮಯವಾಗಿ ತಡಕ್ಕೆ ಸೇರಿಸಿ ಕಾಪು ಪೊಲೀಸರಿಗೆ ಮಾಹಿತಿ ನೀಡಿದ್ದರು, ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಶವಾಗಾರಕ್ಕೆ
ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಖ್ಯಾತ ಹೋಟೆಲ್ ಉದ್ಯಮಿಗಳಾದ ಶ್ರೀ ಬಂಜಾರ ಪ್ರಕಾಶ್ ಶೆಟ್ಟಿಯವರು ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಮಾಡಿದರು. ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭದಲ್ಲಿ ರೂ.25 ಲಕ್ಷ ದೇಣಿಗೆ ನೀಡಿದ ಇವರಿಗೆ ನಾಡೋಜ ಡಾ. ಜಿ. ಶಂಕರ್ ರವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಶ್ರೀ ವಾಸುದೇವ ಸಾಲ್ಯಾನ್, ಉದ್ಯಮಿ ಶ್ರೀಪತಿ ಭಟ್
ಮಂಗಳೂರು: ನಾರಾಯಣಗುರುಗಳ ಅನುಯಾಯಿಗಳು ಮಾಡಿದ ಶಾಂತಿಯುತ ಹೋರಾಟಕ್ಕೆ ಮಣಿದ ಸರ್ಕಾರ ಪಠ್ಯ ಪುನರ್ ಸೇರ್ಪಡೆ ಮಾಡಲು ಆದೇಶಿಸಿದ ಹಿನ್ನೆಲೆ ಹಾಗು ಸಮಾಜದ ಪ್ರಮುಖ ಬೇಡಿಕೆಗಳಾದ ಬ್ರಹ್ಮಶ್ರೀ ನಾರಾಯಣಗುರು ನಿಗಮ (ಬಿಲ್ಲವ ನಿಗಮ) ಸ್ಥಾಪನೆ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡಬೇಕು, ಸಮಾಜದ ಏಳಿಗೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ವಿಶೇಷ ಗುರುಪೂಜೆ ಸಲ್ಲಿಸಲಾಯಿತು. ಜಾನಪದ ವಿದ್ವಾಂಸ ಬನ್ನಂಜೆ
ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಮೋಡೇಲ್ ರೆನಿ ಜಾರ್ಜ್ ಅವರು ಸದ್ಯದಲ್ಲೇ ಸಿಡ್ನಿಯಲ್ಲಿ ನಡೆಯಲಿರುವ ಮಿಸ್ ವರ್ಲ್ಡ್ ಯೂನಿವರ್ಸಲ್ ಇಂಟರ್ ನ್ಯಾಶನಲ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಹೊಸದಿಲ್ಲಿಯಲ್ಲಿಯ ನಿವಾಸಿಯಾಗಿರುವ ರೆನಿ ಜಾರ್ಜ್ ಅವರು ನರ್ಸಿಂಗ್ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು, ಇದೀಗ ಹದಿನೈದು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ವೃತ್ತಿಯಲ್ಲಿದ್ದಾರೆ. 2022ರ ಮಿಸ್ ಇಂಡಿಯಾ ವರ್ಲ್ಡ್ ಯೂನಿರ್ವಸಲ್ ಕಿರೀಟ ಗೆದ್ದಿರುವ
1837 ರ ಅಮರ ಸುಳ್ಯದ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ ಕೆದಂಬಾಡಿ ರಾಮಯ್ಯ ಗೌಡರ ಪುತ್ಥಳಿ ಆ.13 ರಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಅನಾವರಣಗೊಳ್ಳಲಿದ್ದು ಆ ಕಾರ್ಯಕ್ರಮಕ್ಕೆ ಸುಳ್ಯದಿಂದ 5 ಸಾವಿರ ಮಂದಿ ಭಾಗವಹಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಸಮಿತಿಯನ್ನು ರಚಿಸಿಕೊಂಡು, ನೆನಪಿನಲ್ಲಿಟ್ಟುಕೊಳ್ಳುವ ರೀತಿಯ ಯೋಜನೆ ರೂಪಿಸಲು ಕೂಡಾ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ
ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಲೀಗಲ್ ಫಾರಂ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಂಡರು. ನಗರದ ಮ್ಯಾಪ್ಸ್ ಕಾಲೇಜಿನ ಅಡಿಟೋರಿಯಂನಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮ್ಯಾಪ್ಸ್ ಕಾಲೇಜಿನಲ್ಲಿ ಉತ್ತಮವಾದ ಕಾರ್ಯಕ್ರಮವನ್ನು
ದೇರಳಕಟ್ಟೆ: ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನಲ್ಲಿ ಡಾ.ಎಂ.ಎಲ್. ಧಾವಲೆ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಮುಂಬಾಯಿ ಡಾ.ಎಂ.ಎಲ್. ಧವಲೇ ಮೆಮೋರಿಯಲ್ ಹೋಮಿಯೋಪಥಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಡಾ.ಬಿಪಿನ್ ಜೈನ್ ಒಂದು ದಿನದ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ವೈದ್ಯಕೀಯ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ನಮ್ಮ ದೇಶದ ಸಾಧನೆ ಮಹತ್ತರವಾದುದು. ಇಂದಿನ ಆಧುನಿಕತೆಯ ಕಾಲಘಟ್ಟದಲ್ಲಿ
ದೇರಳಕಟ್ಟೆ: ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಅಸ್ಪತ್ರೆಯ ಮಾನಸಿಕ ಚಿಕಿತ್ಸಾ ವಿಭಾಗ ಮತ್ತು ಆಳ್ವಾಸ್ ಕಾಲೇಜಿನ ಪದವಿ ಕಾಲೇಜಿನ ಸಮಾಜಕಾರ್ಯ ವಿಭಾಗದ ಆಶ್ರಯದಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಟದ ವಿರುದ್ದ ಅಂತರಾಷ್ಟ್ರೀಯ ದಿನಾಚರಣೆಯ ಮತ್ತು ಜಾಗೃತಿ ಕಾರ್ಯಕ್ರಮ ಅಸ್ಪತ್ರೆ ಗ್ಲಾಸ್ ಹೌಸ್ ನಲ್ಲಿ ನಡೆಯಿತು.ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ಪದವಿ ವಿಭಾಗದ ಮುಖ್ಯಸ್ಥ ಡಾ.ಮಧುಮಾಲ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಟದ ವಿರುದ್ದ
ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಪೇಪರ್ ಏಜೆಂಟ್ ಆಗಿಯೂ, ಜನಪ್ರತಿನಿಧಿಯೂ ಆಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ ಆರೈಕೆಗಾಗಿ ದಾನಿಗಳ ಸಹಾಯ ಯಾಚಿಸುತ್ತಿದ್ದಾರೆ. ಪ್ರತಿದಿನವೂ 150 ಕ್ಕೂ ಮಿಕ್ಕಿದ ನಾಯಿಗಳಿಗೆ ಆಹಾರ ಸೇರಿದಂತೆ ಆರೋಗ್ಯವನ್ನೂ ನೋಡಿಕೊಳ್ಳುತ್ತಿರುವ ಇವರು ದಿನವೊಂದಕ್ಕೆ ನಾಯಿಗಳಿಗಾಗಿ 1500 ರೂಪಾಯಿಗಳನ್ನು ವ್ಯಯಿಸಬೇಕಾದ
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಹಾಗೂ ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಿ.ಎ.ಎ.ರಾಘವೇಂದ್ರರಾವ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗಡೆ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಶ್ರೀನಿವಾಸ ವಿವಿ ಯ ಗೌರವಾನ್ವಿತ ಸಹ ಕುಲಾಧಿಪತಿ ಹಾಗೂ ಎ.ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷ ಡಾ.ಎ.ಶ್ರೀನಿವಾಸ್ ರಾವ್






















