ಪ. ಜಾತಿ ಮತ್ತು ಪ.ಪಂಗಡದವರ 2011ರ ಜನಗಣತಿ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿವೃತ್ತಿ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸಲು ಒತ್ತಾಯಿಸಿ ಮುಖ್ಯಮಂತ್ರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವರ ಮುಖಾಂತರ ಬಿಎಸ್ಪಿ ದ.ಕ ಜಿಲ್ಲಾ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಕಾಂತಪ್ಪ
Aishwarya Magdum student from Institute of Aviation studies, Srinivas University has been crowned as Miss Karnataka 2022 and also won the subtitle as Miss Super model. AishwaryaMagdum won the title of Miss Karnataka 2022 and also as Miss Super model at the grand finale of NB Group Mr, Ms, and Teen Karnataka 2022.The event was […]
ಕಳೆದ ಜು.6 ರಂದು ಕಾಪು ಠಾಣಾ ವ್ಯಾಪ್ತಿಯ ಮಣಿಪುರ ದೆಂದುರುಕಟ್ಟೆ ಅಲೆವೂರು ರಸ್ತೆಯ ಸೇತುವೆಯ ಬಳಿ ಹೊಳೆಗೆ ಹಾರಿರುವ ಶಂಕೆಯಿರುವ ಯುವಕ 28 ವರ್ಷದ ಪುನಿತ್ ಈವರೆಗೂ ಪತ್ತೆಯಾಗಿಲ್ಲ. ಮಂಗಳವಾರ ಬೆಳಿಗ್ಗಿನಿಂದಲೇ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ, ಪ್ರವೀಣ್ ಕುರ್ಕಾಲು, ಅಶೋಕ್ ದೆಂದೂರು ಕಟ್ಟೆ ಮತ್ತು ಉಡುಪಿ ಜಿಲ್ಲಾ ಅಗ್ನಿ ಶಾಮಕ ದಳದ ಸಿಬ್ಬಂದಿ ಸೇತುವೆಯಿಂದ ಸುಮಾರು 8 ಕಿಲೋ ಮೀಟರ್ ದೂರದ ವರಗೆ ಹುಡುಕಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ.
ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಹೇಳಿದ್ದಾರೆ. ಆದಷ್ಟು ಶೀಘ್ರದಲ್ಲೇ ರಾಜ್ಯ
ಬಂಟ್ವಾಳ: ಬಾರಿ ಮಳೆಯಿಂದ ತಾಲೂಕಿನ ಅರಳ, ಕಾವಳಪಡೂರು, ಕಾಡಬೆಟ್ಟು, ಮೂಡನಡುಗೋಡು, ಕಾವಳಮೂಡೂರು, ಪಂಜಿಕಲ್ಲು, ಗೂಡಿನ ಬಳಿಯಲ್ಲಿ ಭೂ ಕುಸಿತ ಉಂಟಾಗಿ ಮನೆ, ರಸ್ತೆಗಳಿಗೆ ವ್ಯಾಪಕ ಹಾನಿ ಉಂಟಾಗಿರುವ ಹಿನ್ನಲೆಯಲ್ಲಿ ಮಾಜಿ ಸಚಿವರಾದ ಬಿ ರಮಾನಾಥ ರೈ ಯವರು ಭೇಟಿ ನೀಡಿ ಪರಿಶೀಲಿಸಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವ ನೀಡಿದರು. ಈ ಸಂದರ್ಭ ಹಾನೀಗೀಡಾದ ಮನೆಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮನವಿ ಮಾಡಿಕೊಂಡರು. ಈ ಸಂದರ್ಭ
ಬಂಟ್ವಾಳ: ನಿರಂತರವಾಗಿ ಸುರಿಯುತ್ತಿರುವ ವ್ಯಾಪಕ ಮಳೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿಯ ಟಿಪ್ಪು ರಸ್ತೆ ಎಂಬಲ್ಲಿ ಗುಡ್ಡ ಕುಸಿದು ಇಲ್ಲಿನ ಮನೆಗಳ ಜನರು ತೀವ್ರ ಅಪಾಯವನ್ನು ಎದುರಿಸುತ್ತಿದ್ದಾರೆ. ವರ್ಷದ ಹಿಂದೆಯೇ ಗುಡ್ಡ ಸ್ವಲ್ಪ ಮಟ್ಟಿಗೆ ಕುಸಿದಿತ್ತು. ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಗುಡ್ಡ ಮತ್ತಷ್ಟು ಕುಸಿದಿದೆ. ಇದರಿಂದ ಟಿಪ್ಪು ರಸ್ತೆ ಸಂಪೂರ್ಣ ಹಾನಿಗೊಂಡಿದ್ದು ಸಂಪರ್ಕ ಕಡಿತಗೊಂಡಿದೆ.ಗುಡ್ಡ ಕುಸಿದ ಭಾಗ ಮಳೆಯಿಂದ
ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗಿದ್ದು ಎಲ್ಲೆಡೆ ಕಡಲ್ಕೊರೆತ ತೀವ್ರಗೊಂಡಿದೆ. ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ ರೂಪಿಸಲಿದೆ. ಸಾರ್ವಜನಿಕ ಆಸ್ತಿ ರಕ್ಷಣೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ
ಬೈತಡ್ಕ ಕಾರು ಹೊಳೆಗೆ – ಎರಡನೇ ಮೃತದೇಹವೂ ಪತ್ತೆ. ಪುತ್ತೂರು : ಕಾಣಿಯೂರು ಹೊಳೆಯಲ್ಲಿ ಒಂದು ಮೃತದೇಹ ಇಂದು ( ಜು 12 ರಂದು ) ಬೆಳಿಗ್ಗೆ ಪತ್ತೆಯಾಗಿದ್ದರೆ , ಅದರ ಅರ್ಧ ಗಂಟೆಯ ಬಳಿಕ ಎರಡನೇ ಮೃತದೇಹವೂ ಪತ್ತೆಯಾಗಿದೆ. ಇಂದು ಬೆಳಿಗ್ಗೆ 8 ಗಂಟೆ ಸಮೀಪ ಬೈತಡ್ಕ ಸೇತುವೆಯಿಂದ 400 ಮೀಟರ್ ದೂರದ ಮರಕ್ಕಡ ಜೇಡರಕೇರಿ ಮಂಜಯ್ಯ ಆಚಾರ್ಯರ ಮನೆಯ ಬಳಿ ಹೊಳೆಯಲ್ಲಿ ಒಂದು ಮೃತದೇಹ ಪತ್ತೆಯಾಗಿತ್ತು, ಇದೀಗ ಅದರಿಂದ 50 ಮೀಟರ್ ಹಿಂದೆಯೇ ಎರಡನೇ […]
ಕೂಳೂರು ಸೇತುವೆಯಲ್ಲಿ ಹೊಂಡಗುಂಡಿಸಂಚರಿಸುವುದೇ ವಾಹನ ಸವಾರರಿಗೆ ಸವಾಲು ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನ ಸೇತುವೆಯಲ್ಲಿ ಬೃಹತ್ ಗಾತ್ರದ ಹೊಂಡಗಳು ಉಂಟಾಗಿದ್ದು, ವಾಹನಗಳು ಸರಾಗವಾಗಿ ಚಲಿಸಲು ಸಾಧ್ಯವಾಗದೆ ಕೆಲವು ದಿನಗಳಿಂದ ವಾಹನ ದಟ್ಟನೆ ಸಾಮಾನ್ಯವಾಗಿಬಿಟ್ಟಿದೆ.ಸೇತುವೆ ಮೇಲೆ ಹೊಂಡಗಳು ಎದ್ದಿರುವ ಕಾರಣ ವಾಹನಗಳು ನಿಧಾನವಾಗಿ ಚಲಿಸುತ್ತಿದ್ದು, ಬೆಳಗ್ಗೆ ಮತ್ತು ಸಂಜೆ ಕಿಲೋಮೀಟರ್ ಗಟ್ಟಲೆ ವಾಹನಗಳ ಸಾಲು ಕಾಣಲಾರಂಬಿಸಿದೆ. ಮಳೆ ಬರುವಾಗ ಸೇತುವೆಯಲ್ಲಿ ನೀರು
ಬೈಂದೂರು ವಿಧಾನಸಭಾ ಕ್ಷೇತ್ರದ, ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೂರಕುಂದ ಸಮೀಪದ ಕಲ್ಮಕ್ಕಿಯಲ್ಲಿ ಕಳೆದ 2-3ದಿನಗಳಿಂದ ಸುರಿದ ಭಾರಿ ಮಳೆಗೆ ರಸ್ತೆಗೇ ಅಳವಡಿಸಿದ್ದ ಮೋರಿ ಕುಸಿದು ಸಂಪರ್ಕ ರಸ್ತೆ ಹೊಳೆಯ ಪಾಲಾಗಿದೆ. ಹಲವಾರು ಮನೆಗೆ ಸಂಪರ್ಕವೇ ಇಲ್ಲದಂತಾಗಿದೆ. ಶಾಸಕರಾದ ಸುಕುಮಾರ ಶೆಟ್ಟಿ ಯವರು ಸ್ಥಳಕ್ಕೆ ಆಗಮಿಸಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಪಟ್ಟಣ ಪಂಚಾಯತ್ ಇಂಜಿನಿಯರ್ ಲ್ಲಿ ಎಸ್ಟಿಮೇಟ್ ಮಾಡಲು ಆದೇಶ ಮಾಡಿದರು.ತಕ್ಷಣಕ್ಕೆ ತುರ್ತು ಅಗತ್ಯ ಕ್ರಮ




























