ಸ್ಯಾಕ್ಸೋಫೋನ್ ಚಕ್ರವರ್ತಿ, ಪದ್ಮಶ್ರೀ ಪುರಸ್ಕøತ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನದ ಅಂಗವಾಗಿ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಡಾ.ಕದ್ರಿ ಗೋಪಾಲನಾಥ್‍ರವರ ಸಮಾಧಿಯ ಜಾಗದಲ್ಲಿ ‘ಕದ್ರಿ ಸಂಗೀತ ಸೌರಭ-2021’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಣಿಕಾಂತ್ ಕದ್ರಿ ಹೇಳಿದರು. ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ನನ್ನ
ಇತಿಹಾಸ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಾರ್ಷಿಕ ದೀಪೋತ್ಸವ ಸಹಸ್ರಾರು ಭಕ್ತಾದಿಗಳ ಕೂಡುವಿಕೆಯಿಂದ ಬಹಳ ಅದ್ಧೂರಿಯಾಗಿ ನಡೆದು ಸಮಾಪನ ಗೊಂಡಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆದ ಈ ದೀಪೋತ್ಸವದಲ್ಲಿ ಗ್ರಾಮ ಹಾಗೂ ಸ್ಥಳೀಯ ಗ್ರಾಮಗಳಿಂದ ಸಾವಿರಾರು ಭಕ್ತಾಧಿಗಳು ಆಗಮಿಸಿ ಸ್ವಯಂ ಪ್ರೇರಿತರಾಗಿ ಎಣ್ಣೆದೀಪ ಉರಿಸುವ ಮೂಲಕ ದೀಪೋತ್ಸವದಲ್ಲಿ ತಮ್ಮ ಅಳಿಲ ಸೇವೆ ಪೂರೈಸಿದ್ದಾರೆ. ಈ ಸಂದರ್ಭ
ಸಂಪೂರ್ಣ ಹದಗೆಟ್ಟಿರುವ ಕಾನಾ-ಕುಳಾಯಿ ರೈಲ್ವೇ ಮೇಲ್ಸೇತುವೆ ಅವ್ಯವಸ್ಥೆ ವಿರೋಧಿಸಿ ಕೂಡಲೇ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್‍ಐ ಕಾನ-ಕುಳಾಯಿ ಘಟಕದ ವತಿಯಿಂದ ಕುಳಾಯಿಗುಡ್ಡೆ ರೈಲ್ವೇ ಬ್ರಿಡ್ಜ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‍ಐ ಮುಖಂಡ ಮುನೀರ್ ಕಾಟಿಪಳ್ಳ ಅವರು, ರಸ್ತೆ ಕಾಮಗಾರಿಯಾದ ಪ್ರತೀ ವರ್ಷಕೂಡ ಮೊದಲ ಮಳೆಗೆ ರಸ್ತೆ ಗುಂಡಿ ಬಿದ್ದು, ಸಂಚರಿಸಲು ಆಗದ ಪರಿಸ್ಥಿತಿ ಬಂದೊದಗಿದೆ. ಇದಕ್ಕೆ ಅವೈಜ್ಞಾನಿಕ ಕಾಮಗಾರಿ
ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೆ ತಲವಾರು ದಾಳಿ ನಡೆದಿದೆ. ಹಳೆಯ ಕೊಲೆಯ ವೈಷಮ್ಯಕ್ಕೆ ಯುವಕನೋರ್ವನ ಕೊಲೆ ಯತ್ನ ನಿನ್ನೆ ರಾತ್ರಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೌಡಿಗಳ ತಂಡದ ಗ್ಯಾಂಗ್ ವಾರ್ ನಲ್ಲಿ ಶ್ರವಣ್ ಎಂಬ ಯುವಕನ ಮೇಲೆ 8 ಜನರ ತಂಡವೊಂದು ಮಾರಣಾಂತಿಕ ದಾಳಿ ನಡೆಸಿದೆ. ಶ್ರವಣ್ ಗಂಭೀರವಾಗಿ ಗಾಯಗೊಂಡಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. 2020ರಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಇಂದ್ರಜಿತ್
ನಗರದ ನಂತೂರು ಪದವು ಬಳಿ ಬೈಕ್ ಸವಾರನನ್ನು ತಡೆದು ನಿಲ್ಲಿಸಿ ಚಿನ್ನದ ಸರವನ್ನು ಸುಲಿಗೆಗೈದ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ನ 29 ರ ಸೋಮವಾರ ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಅಗ್ರಹಾರದ ಪ್ರಸ್ತುತ ಬೆಂಗಳೂರಿನ ನಿವಾಸಿ ಅಭಿಷೇಕ್ ಯಾನೆ ಗೊಂಬೆ ಯಾನೆ ಅನಾಮಿಕ (27) ಬಂಧಿತ ಆರೋಪಿಯಾಗಿದ್ದಾನೆ. ಗಣೇಶ್ ಶೆಟ್ಟಿ ಎಂಬವರು ಎರಡು ತಿಂಗಳ ಹಿಂದೆ ತನ್ನ ಬೈಕ್‌ನಲ್ಲಿ ನಂತೂರು ಪದವಿನಿಂದ ಬಿಎಸ್‌ಎನ್‌ಎಲ್ ಎಕ್ಸೇಂಜ್ ಬಳಿಯ ರಸ್ತೆಯಲ್ಲಿ ತೆರಳುತ್ತಿದ್ದಾಗ ಹಠಾತ್
ಭಾರತೀಯ ಸೇನೆಯಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿಯಾದ ಬಳಿಕ ಮಂಗಳೂರು ಘಟಕದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಪುತ್ತೂರಿನ ಪೆರ್ಲಂಪಾಡಿಯ ಹರಿಪ್ರಸಾದ್ ಕೆ. ಅವರು ನೇಮಕಗೊಂಡಿದ್ದಾರೆ. ಹರಿಪ್ರಸಾದ್ ಕೆ. ಅವರು ಭಾರತೀಯ ಸೇನೆಯಲ್ಲಿ ಸರಿ ಸುಮಾರು 17 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದು, ತಮ್ಮ ಸೇವಾ ಅವಧಿಯಲ್ಲಿ ದೇಶದ ಪಂಜಾಬ್, ಅಸ್ಸಾಂ, ಜಮ್ಮು ಕಾಶ್ಮೀರ, ರಾಜಸ್ತಾನ, ವಡೋದರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸೇವೆಯನ್ನು
ರಾಜ್ಯ ಮಹಿಳಾ ಕಾಂಗ್ರೆಸ್ ಗೆ ಹೊಸದಾಗಿ 17 ಮಂದಿ ಪದಾಧಿಕಾರಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಸೇರ್ಪಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಮಹಿಳೆಯರು ಸ್ಥಾನ ಪಡೆದಿದ್ದಾರೆ. ಚಂದ್ರಕಲಾ ದೀಪಕ್ ರಾವ್ ಮತ್ತು ಮಲ್ಲಿಕಾ ಪಕ್ಕಳ ಹಾಗೂ ಸಾಯಿರಾ ಜುಬೇರ್ ಅವರು ಅವರು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಜೇಶ್ವರ: ಹೊಸ ವ್ಯೆರಸ್ ಪ್ರಬೇಧ ಓಮಿಕ್ರಾಮ್ ಭೀತಿಯ ನಡುವೆ ಕರ್ನಾಟಕ ಬಿಗು ನಿಯಂತ್ರಣ ಹೇರಿದ್ದು, ಅಂತರ್ ರಾಜ್ಯ ಗಡಿಗಳಲ್ಲಿ ಕಠಿಣ ತಪಾಸಣೆ ಬಿಗಿಗೊಳಿಸಿದೆ. ಕರ್ನಾಟಕ ಸರ್ಕಾರ ತುಸು ಹೆಚ್ಚೇ ಕಾಳಜಿ ವಹಿಸತೊಡಗಿದ್ದು, ಗಲಿಬಿಲಿಗೊಳಗಾದಂತೆ ಕಂಡುಬಂದಿದೆ. ಜೊತೆಗೆ ದಕ್ಷಿಣ ಕನ್ನಡ ಸಹಿತ ಅಂತರ್ ರಾಜ್ಯ ಗಡಿಗಳಲ್ಲಿ ನಿಗಾ ವಹಿಸಲು ಸೂಚಿಸಲಾಗಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತೆ ತಲಪಾಡಿ ಗಡಿಯಲ್ಲಿ ಕೇರಳದ ಕಡೆಯಿಂದ ಆಗಮಿಸುವ ವಾಹನ ಸಂಚಾರಕ್ಕೆ
ತುಳು ಕನ್ನಡ ರಂಗಭೂಮಿಯ ಹಿರಿಯ ರಂಗಕಲಾವಿದ , ಶ್ರೀ ನಂದಿಕೇಶ್ವರ ನಾಟಕ ಸಂಘದ ರೂವಾರಿ ದಿ. ಪಿ.ಬಿ ರೈ ಯವರ ಧರ್ಮ ಪತ್ನಿ, ನಾಟಕ ಕಲಾವಿದೆ ಶ್ರೀಮತಿ ಬೇಬಿ ಯಾನೆ ಸುಮಿತ್ರ ರೈ (76 )ಇಂದು ಮಂಜೇಶ್ವರ ಸಮೀಪದ ಕುಂಜತ್ತೂರಿನ ತಮ್ಮ ಸ್ವ ಗೃಹದಲ್ಲಿ ನಿಧನ ಹೊಂದಿದರು. ದಿವಂಗತರು ಖ್ಯಾತ ಗುಬ್ಬಿ ವೀರಣ್ಣ ನಾಟಕ ಕಂಪನಿ, ಬಸವರಾಜ ಬಡಿಗೇರ ಮತ್ತು ತಮ್ಮ ಪತಿಯವರು ಕಟ್ಟಿ ಬೆಳೆಸಿದ ಶ್ರೀ ನಂದಿಕೇಶ್ವರ ನಾಟಕ ಸಂಘದಲ್ಲಿ ರಂಗನಟಿಯಾಗಿ, ಹಾಗೂ ಹಲವಾರು ಚಲನಚಿತ್ರಗಳಲ್ಲಿ […]
ಕಡಬ : ಆಲ್ಟೋ ಕಾರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಹೋದ ಘಟನೆ ಬುಧವಾರ ಸಂಜೆ ವೇಳೆ ಬಳ್ಪ ಸಮೀಪ ಸಂಭವಿಸಿದೆ. ಪಂಜ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಳ್ಪ ಎಂಬಲ್ಲಿಯ ಪಾದೆ ಬಳಿ ಘಟನೆ ಸಂಭವಿಸಿದೆ. ಪಂಜದ ಕೃಷ್ಣನಗರ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಿಂದ ಇಳಿದು ನೋಡಬೇಕು ಎನ್ನವ ಕ್ಷಣ ಮಾತ್ರದಲ್ಲಿ
























