ಮಂಗಳೂರು: ಮುಂಬರುವ 25 ಸ್ಥಾನಗಳಿಗೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ ನಲ್ಲಿ ಗರಿಷ್ಠ ಸಂಖ್ಯಾಬಲವನ್ನು ಹೊಂದಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಅಡ್ಯಾರ್ ಗಾರ್ಡನ್ ಸಭಾಂಗಣ ದಲ್ಲಿಂದು ಹಮ್ಮಿಕೊಂ ಡ
ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಲು ಯಶಸ್ವಿಯಾಗಿದೆ. ಶುಕ್ರವಾರ ತಡರಾತ್ರಿವರೆಗೂ ಈ ಕಾರ್ಯಾಚರಣೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ ಮಾರ್ಗದರ್ಶನದಲ್ಲಿ ನಡೆದಿದ್ದು. ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ
ಮೂಡುಬಿದಿರೆ: ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ವರದಾನವಾಗಿರುವ ಅಳಿಯೂರಿನ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಮುನ್ನೂರು ದಾಟಿದರೂ, ಕೊಠಡಿಯ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಬಿಸಿಲು, ಗಾಳಿ ಮಳೆಯನ್ನು ಲೆಕ್ಕಿಸದೆ ಅಂಗಳದಲ್ಲೇ ಕೂತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಳಿಯೂರು ದ.ಕ ಜಿ.ಪಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಈ ಪರಿಸ್ಥಿತಿ ಎದುರಾಗಿದೆ. ಶಾಲೆಯಲ್ಲಿ
ಮಂಗಳೂರಿನ ವೆಲೆನ್ಸಿಯಾದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿಯಾದ ಅನನ್ಯಾ ಸಿಂಗ್ ಅವರು ’ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಕಿರೀಟವನ್ನು ಮುಡಿಗೇರಿಸಿದ್ದಾರೆ ನವದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್‌ಟೈನ್‌ಮೆಂಟ್ ಪ್ರೊಡಕ್ಷನ್ ಆಯೋಜಿಸಿರುವ ’ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್- 2021’ಸ್ಪರ್ಧೆಯಲ್ಲಿ ಅನನ್ಯಾ ಸಿಂಗ್ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಅವರು
ಪುತ್ತೂರು ತಾಲೂಕಿನ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾರ್ಪಾಡಿ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 21 ರಂದು ಆರಂಭಗೊಂಡು ಜನವರಿ 7 ರ ತನಕ ನಿರಂತರ 48 ದಿನಗಳ ಕಾಲ (ಒಂದು ಮಂಡಲ) ಸಂಜೆ ವಿಶೇಷ ರಂಗಪೂಜೆ ನಡೆಯಲಿದೆ. ಮೂರನೇ ವರ್ಷದಲ್ಲಿ ನಡೆಯುತ್ತಿರುವ ಈ ವಿಶೇಷ ರಂಗಪೂಜೆಯು ಕಾರ್ಪಾಡಿ, ಶ್ರೀ. ಸುಬ್ರಹ್ಮಣ್ಯ ಕ್ಷೇತ್ರದ ವಿಶೇಷತೆಗಳಲ್ಲಿ ಒಂದು. ನಿರಂತರ 48 ದಿನಗಳ ಕಾಲ ನಡೆಯುವ ರಂಗಪೂಜೆಯಲ್ಲಿ ಪ್ರತೀದಿನ 12 ಕುಟುಂಬಗಳಿಗೆ ಸೇವೆ ಮಾಡಿಸಲು ಅವಕಾಶವಿದೆ.
ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ವಿದೇಶಿ ಮಿಷನರಿಗಳು ಸಲ್ಲಿಸಿದ ಸೇವೆಗಳು ಸ್ಮರಣೀಯ. ಇದಕ್ಕೆ ಪೂರಕವಾಗಿ ದೇಶೀಯ ಸಭಾ ಪಾಲಕರುಗಳು ಸಭಾ ಪ್ರಾಂತ್ಯದ ಅಭಿವೃದ್ಧಿಗಾಗಿ ಸಭಾ ಸೇವೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ. ಇಂಥವರಲ್ಲಿ ರೆ. ಜಾರ್ಜ್ ಎ. ಬೆರ್ನಾಡ್ ಕೂಡ ಒಬ್ಬರು. ಇಂಥವರನ್ನು ಸ್ಮರಿಸಿ ಇವರ ಹೆಸರಿನಲ್ಲಿ ಕರ್ನಾಟಕ ಥಿಯಲಾಜಿಕಲ್ ಕಾಲೇಜಿನ ಮುಖಾಂತರ ಗಾರ್ಡನ್ ಒಂದನ್ನು ನಿರ್ಮಾಣ ಮಾಡಿರುವುದು ಅಭಿನಂದನೀಯ ಎಂದು ಚರ್ಚ್ ಆಫ್ ಸೌತ್ ಇಂಡಿಯಾ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಾಯಿನಾಥ ಶೇಟ್ ಅವರನ್ನು ದೈವಜ್ಞ ಬ್ರಾಹ್ಮಣ ಸಮಾಜ ಕುಂದಾಪುರ ವತಿಯಿಂದ ಸನ್ಮಾನಿಸಲಾಯಿತು. ಇದೆ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಸ್ವಾತಿ ಜಿ ಶೇಟ್ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾತ್ವಿಕ್ ಕೋಟೇಶ್ವರ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜ್ಯುವೆಲ್ ಅಸೋಸಿಯೇಷನ್ ಕುಂದಾಪುರ ಇದರ ಅಧ್ಯಕ್ಷರಾದ ಸತೀಶ್ ಶೇಟ್ ನಾಡ, ಅನುಗ್ರಹ
ಪಡುಬಿದ್ರಿ ಪೊಲೀಸ್ ಠಾಣೆಯ ನೂರು ಮೀಟರ್ ಅಂತರ, ಪೇಟೆಭಾಗದ ಪೊಲೀಸ್ ವಾಹನ ತಪಾಸಣಾ ಸ್ಥಳಕ್ಕೆ ಇಪ್ಪತ್ತು ಮೀಟರ್ ಅಂತರದಲ್ಲಿರುವ ಆರು ಅಂಗಡಿಗಳಲ್ಲಿ ಕಳ್ಳರು ಕೈಚಳಕ ತೋರಿಸುವ ಮೂಲಕ ಸರಣಿ ಕಳ್ಳತನ ನಡೆಸಿದ್ದಾರೆ. ಪೊಲೀಸರಿಗೆ ಸವಾಲಾದ ಈ ಕಳ್ಳತನ ಪ್ರಕರಣ ಭೇದಿಸಲು ಪೊಲೀಸರು ಸಿಸಿ ಕ್ಯಾಮಾರಗಳ ಮೊರೆ ಹೋಗಿದ್ದಾರೆ. ಕಳ್ಳತನ ನಡೆದ ಎರಡು ಅಂಗಡಿಗಳ ಅಂಚು ತೆಗೆದು ಒಳ ನುಗ್ಗಿದರೆ, ಉಳಿದ ಹಣ್ಣು ಹಂಪಲು, ಕಬ್ಬಿನ ಜ್ಯೂಸ್, ತರಕಾರಿ, ಹೂವಿನಂಗಡಿ ಇವುಗಳಿಗೆ ಭದ್ರತೆ
ನಗರದ ಕೋಡಿಕಲ್‍ನಲ್ಲಿರುವ ನಾಗನಕಟ್ಟೆಯ ನಾಗಬಿಂಬ ಎಸೆದು ದುಷ್ಕೃತ್ಯ ಎಸೆದ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಇಂದು ಕೋಡಿಕಲ್ ಪ್ರದೇಶದಲ್ಲಿ ಸಂಪೂರ್ಣ ಬಂದ್‍ಗೆ ಕರೆ ನೀಡಿದ್ದು, ಅದರಂತೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರತವಾಗಿ ಬಂದ್ ಮಾಡಿದ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಡಿಕಲ್‍ನಲ್ಲಿ ವಿಶ್ವಹಿಂದೂಪರಿಷತ್ ಹಾಗೂ ಸ್ಥಳೀಯ ಸಾರ್ವಜನಿಕರು ಬಂದ್‍ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
ಕುಂದಾಪುರ: ಮಂಗಳೂರು ಮತ್ತು ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಗಿರಿಜಾ ಹೆಲ್ತ್ ಕೇರ್‍ನ ಮತ್ತೊಂದು ಮಳಿಗೆ ಕುಂದಾಪುರದಲ್ಲಿ ಉದ್ಘಾಟನೆಗೊಂಡಿತು. ಉಡುಪಿಯ ಗಿರಿಜಾ ಗ್ರೂಪ್ಸ್ ಆಫ್ ಕನ್ಸರ್ನ್ ವತಿಯಿಂದ ಗಿರಿಜಾ ಹೆಲ್ತ್ ಕೇರ್ ಹಾಗೂ ಸರ್ಜಿಕಲ್ಸ್ ಮೂರನೇ ಶೋರೂಮ್ ಮತ್ತು ಮೆಡಿಕೇರ್ ಪೆÇಲಿಕ್ಲಿನಿಕ್ ಕುಂದಾಪುರ ಮುಖ್ಯರಸ್ತೆಯ ಪಾರಿಜಾತ ಹೊಟೇಲಿನ ಎದುರಿನ ಅಥರ್ವ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು. ಹೆಲ್ತ್ ಕೇರ್‍ನ್ನು ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ


















