ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು ಮಗುವನ್ನು ಕರುಣಿಸಿದ ಪ್ರಕರಣದ ಆರೋಪಿ ಆರ್‌ಎಸ್‌ಎಸ್ ಮುಖಂಡ ನಾರಾಯಣ ರೈ ಬಂಧನಕ್ಕೆ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯಿಸಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಮನ್ವಯ ಸಮಿತಿಯ ಮುಖಂಡ ಅಶೋಕ್
ಸುರತ್ಕಲ್: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಚಿತ್ರಾಪುರ ಮಠದ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ನಡೆಸುವ ಸಂಕಲ್ಪದಂತೆ ನಿಧಿ ಸಂಚಯನ ಕಾರ್ಯಕ್ರಮವು ಜರಗಿತು. ಪೇಜಾವರ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ ಭರತ್ ಶೆಟ್ಟಿ ವೈ ಅವರು ನಿಧಿ ಸಂಚಯನಕ್ಕೆ ಮುಷ್ಠಿ ಕಾಣಿಕೆ ಸಮರ್ಪಿಸುವ ಮೂಲಕ ಶುಭಾರಂಭಗೊಳಿಸಿದರು. ಈ ಸಂದರ್ಭ
ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ. ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ ಸಿಬಂದಿಗಳಾದ ಜೂನಿಯರ್ ಲೈನ್ ಮ್ಯಾನ್ ವಿತೇಶ್ ಮತ್ತು ಸಿಬ್ಬಂದಿ ಸತೀಶ್ ಹಿರೆಬಂಡಾಡಿ ಹಲ್ಲೆಗೊಳಗಾದವರು. ಹಲ್ಲೆ ಕೃತ್ಯದ ಬಗ್ಗೆ ಮೆಸ್ಕಾಂ ಕಚೇರಿಗಳು ಮಾಹಿತಿ ನೀಡಿದ್ದು ಅಲ್ಲಿಗೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಸ್ತೆ ಬದಿಯಲ್ಲಿ ಸಿಕ್ಕಿದ್ದ ಪರ್ಸ್‌ನ್ನು ಪೊಲೀಸರಿಗೆ ಒಪ್ಪಿಸಿ, ತನ್ಮೂಲಕ ಸೊತ್ತಿನ ಮಾಲಕರಿಗೆ ತಲುಪಿಸಿ ಇಲ್ಲಿನ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಇಂತಹ ಪ್ರಾಮಾಣಿಕತೆಗೆ ಮಂಗಳೂರು ಮತ್ತೊಮ್ಮೆ ಸಾಕ್ಷಿಯಾಗಿದೆ. ಆಟೊರಿಕ್ಷಾ ಚಾಲಕ ಮುಹಮ್ಮದ್ ಹನೀಫ್ ಎಂಬವರೇ ಪರ್ಸ್‌ನ್ನು ಮರಳಿಸಿದವರು ಮುಹಮ್ಮದ್ ಹನೀಫ್ ಸುಮಾರು 15 ವರ್ಷಗಳಿಂದ ನಗರದಲ್ಲಿ ಆಟೊ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎಂದಿನಂತೆ ತನ್ನ ಕಾಯಕದಲ್ಲಿ ನಿರತನಾಗಿದ್ದ ಹನೀಫ್, ಶುಕ್ರವಾರ
ನಗರದ ಪಂಪ್‌ವೆಲ್ ಬಳಿ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪ್‌ವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೈಸನ್, ಕಾರ್ತಿಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ ಮಹೋತ್ಸವ’ ಶುಕ್ರವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಗಣಪತಿ, ನವದುರ್ಗೆಯರು, ಆದಿಶಕ್ತಿ ಸಹಿತ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನೆರವೇರಿತು. ಶುಕ್ರವಾರ ಬೆಳಗ್ಗೆ ವಾಗೀಶ್ವರಿ ದುರ್ಗಾ ಹೋಮ, ಮಧ್ಯಾಹ್ನ ಶಿವಪೂಜೆ, ಪುಷ್ಪಾಲಂಕಾರ ಮಹಾ ಪೂಜೆ ನೆರವೇರಿತು. ರಾತ್ರಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ನಡೆದು
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಮಂಗಳೂರು ದಸರಾ ಶೋಭಾಯಾತ್ರಗೆ ಬಳ್ಳಾಲ್‍ಭಾಗ್ ಫ್ರೆಂಡ್ಸ್ ವತಿಯಿಂದ 14ನೇ ವರ್ಷದ ಊದು ಇಡುವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಬಳ್ಳಾಲ್‍ಭಾಗ್ ಫ್ರೆಂಡ್ಸ್‍ನ ಉಪಾಧ್ಯಕ್ಷರಾದ ರಕ್ಷಿತ್ ಕೊಟ್ಟಾರಿ ನೇತೃತದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ದಸರಾ ಕಾರ್ಯಕ್ರಮದಲ್ಲಿ 14ನೇ ವರ್ಷದ ಹುಲಿಕುಣಿತಕ್ಕೆ ಚಾಲನೆ ನೀಡಿದ್ದೇವೆ. ಹುಲಿ ಕೋವಿಡ್ ನಿಯಮಾನುಸಾರ ನಡೆಯಲಿದೆ ಎಂದು
ಮಂಗಳೂರು : ನಗರದ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಮಗುವನ್ನು ಅದಲು ಬದಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು ಡಿಸ್ಚಾರ್ಜ್ ವೇಳೆ ಆಸ್ಪತ್ರೆ ಸಿಬ್ಬಂದಿ ಗಂಡು ಮಗು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸೆಪ್ಟಂಬರ್ ೨೮ ರಂದು ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿ ಅಂಬ್ರೀನ್ ಅವರಿಗೆ ಮಂಗಳೂರಿನ ಲೇಡಿಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆ ಆಗಿತ್ತು. ಆಸ್ಪತ್ರೆಯಲ್ಲಿ ಇದ್ದಷ್ಟು ದಿನ
ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ ಬಳಸಿ ಉತ್ತಮ ಇಳುವರಿ ಪಡೆಯುವ ಮೂಲಕ ಪುತ್ತೂರು ತಾಲೂಕಿನ ಇಂಜಿನಿಯರಿಂಗ್ ಪದವೀಧರ ಕೃಷಿಕರೊಬ್ಬರ ಪ್ರಯೋಗ ಯಶಸ್ವಿಯಾಗಿದೆ. ಭೂಮಿಯನ್ನು ರಾಸಾಯನಿಕ ಮುಕ್ತವಾಗಿಸುವಲ್ಲಿ ಪರಿಣಾಮಕಾರಿ ಪ್ರಯೋಗಗಳು ಅಲ್ಲಲ್ಲಿ ರೈತರಿಂದಲೇ ನಡೆಯುತ್ತಿದ್ದು, ಪುತ್ತೂರಿನ ಮುಂಡೂರು ಗ್ರಾಮದ ಹಿಂದಾರು ನಿವಾಸಿ ಜಯಗುರು ಆಚಾರ್ ಸೆಗಣಿ ಹುಡಿ ಗೊಬ್ಬರದ ಮೂಲಕ ಸಾವಯವ ಕೃಷಿಗೆ ಹೊಸ ರೂಪ ನೀಡಿದ್ದಾರೆ. ರಾಸಾಯನಿಕ ಗೊಬ್ಬರಕ್ಕೆ ಗುಡ್‍ಬೈ ಹೇಳಿ
ನವರಾತ್ರಿ ಬಂತೆಂದರೆ ಸಾಕು ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ದೇವಿ ಆರಾಧನೆಗಳು ನಡೆದರೆ, ಇನ್ನೊಂಡೆ ವಿವಿಧ ವೇಶಧಾರಿಗಳು ಮನೆ ಮನೆಗೆ ಆಗಮಿಸುವ ಮೂಲಕ ಜನರ ಮನತಣಿಸುತ್ತಾರೆ. ಹುಲಿವೇಷ, ಪುರುಷವೇಷ, ಸ್ತ್ರೀವೇಷ ಹೀಗೆ ಹಲವು ತರಹದ ವೇಷಗಳನ್ನು ನವರಾತ್ರಿಯ ಒಂಬತ್ತು ದಿನಗಳಲ್ಲಿ ನೋಡಬಹುದು. ಇಂಥಹುದೇ ಒಂದು ವೇಷದ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವ್ಯಕ್ತಿಯೊಬ್ಬರು ಕಳೆದ ಹದಿಮೂರು ವರ್ಷಗಳಿಂದ ಗಮನಸೆಳೆಯುತ್ತಿದ್ದಾರೆ. ವಿಶೇಷವಾದ ಪ್ರೇತದ ವೇಷದ ಮೂಲಕ



















